Breaking News

ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖ

ನವದೆಹಲಿ: ಕೊರೊನಾ ವೈರಸ್ ಭೀತಿ ನಡುವೆ ಒಂದು ಶುಭ ಸುದ್ದಿಯೊಂದು ಲಭ್ಯವಾಗಿದ್ದು, ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಭಾರತದಲ್ಲಿಯೇ ಮೊದಲ ಪ್ರಕರಣವಾಗಿದೆ. ದೆಹಲಿಯ 49 ವರ್ಷದ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ಇದೆ ಎಂದು ಏಪ್ರಿಲ್ 4ರಂದು ದೃಢಪಟ್ಟಿತ್ತು. ರೋಗಿ ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರಿಗೆ ಉಸಿರಾಡಲು ಸಹಾಯವಾಗಲಿ ಎಂದು ವೆಂಟಿಲೇಟರ್ ಅಳವಡಿಸಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ …

Read More »

ಪೊಲೀಸರು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಮಹಾಮಾರಿ ಕೊರೊನಾ ಕುರಿತು ಜಾಗೃತಿ

ಚಿಕ್ಕಮಗಳೂರು: ಕೊರೊನಾ ಆತಂಕದಿಂದಾಗಿ ಮನೆಯಲ್ಲೇ ಇರಿ ಎಂದು ಪೊಲೀಸರು ಲಾಠಿ ಹಿಡಿದಾಯ್ತು, ಒದೆ ಕೊಟ್ಟಾಯ್ತು, ಕೇಸು ಹಾಕಾಯ್ತು, ಕೈ ಮುಗಿದಾಯ್ತು. ಜನ ಯಾವುದಕ್ಕೂ ಜಪ್ಪಯ್ಯ ಅನ್ನಲಿಲ್ಲ. ಹಾಗಾಗಿ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ವಿಭಿನ್ನವಾಗಿ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಜಾಗತಿಕ ಶಾಪವಾಗಿ ಕಾಡುತ್ತಿರುವ ಕೊರೊನಾ ಮಹಾಮಾರಿ ವಿರುದ್ಧ ಜನರಿಗೆ ಎಲ್ಲಾ ರೀತಿಯ ಮನವಿ ಮಾಡಿಕೊಂಡಿದ್ದ ಪೊಲೀಸರು ಇದೀಗ ವಿಭಿನ್ನ ಪ್ರಯತ್ನಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಬಾಳೆಹೊನ್ನೂರು ಪೊಲೀಸರು …

Read More »

ಹಾಟ್‍ಸ್ಪಾಟ್‍ಗಳ ಮಧ್ಯೆಯಿದ್ರೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿಲ್ಲ……….

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಕೇಸ್‍ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾಟ್‍ಸ್ಪಾಟ್‍ಗಳ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಆದರೆ ಹಾಟ್‍ಸ್ಪಾಟ್‍ಗಳ ಮಧ್ಯೆಯಿದ್ರೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ನಂಜನಗೂಡು, ದೆಹಲಿ ನಿಜಾಮುದ್ದೀನ್ ಪ್ರಕರಣದ ಬಳಿಕ ಚಾಮರಾಜನಗರದಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಅಲ್ಲಿಂದ ಬಂದವರ ರಿಪೋರ್ಟ್ ಸಹ ನೆಗೆಟಿವ್ ಬಂದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ನೆರೆ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಜೊತೆಗೆ ನೆರೆ …

Read More »

ಮೇ 3ರ ನಂತರ ಲಾಕ್‍ಡೌನ್ ವಿಸ್ತರಣೆ ಆಗುತ್ತಾ? – ಇಂದು ರಾಜ್ಯಗಳ ಜೊತೆ ಮೋದಿ ಸಭೆ

ನವದೆಹಲಿ/ಬೆಂಗಳೂರು: ಮೇ 3ಕ್ಕೆ ಲಾಕ್‍ಡೌನ್ ಮುಗಿಯುತ್ತದೋ? ಇಲ್ಲವೋ ಈ ಪ್ರಶ್ನೆಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 10 ಗಂಟೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಕೋವಿಡ್ ನಿಯಂತ್ರಣ ಕ್ರಮ, ಲಾಕ್‍ಡೌನ್ ವಿಸ್ತರಣೆ  ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕೊರೊನಾ ಸಂಬಂಧ ಮೋದಿಯವರು ಮೂರನೇ ಬಾರಿ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತಿದ್ದು, ಇಂದು ಸಂಜೆಯ ವೇಳೆ ಮೇ 3ರ ನಂತರ ಲಾಕ್‍ಡೌನ್ …

Read More »

ತಂದೆಯ ಪುಣ್ಯ ತಿಥಿಗಾಗಿ ಕೂಡಿಟ್ಟ ಹಣದಲ್ಲಿ ಬಡವರು, ನಿರ್ಗತಿಕರಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ವಿತರಣೆ

ಕೋಲಾರ: ತಂದೆಯ ಪುಣ್ಯ ತಿಥಿಗಾಗಿ ಕೂಡಿಟ್ಟ ಹಣದಲ್ಲಿ ಪೋಸ್ಟ್ ಮಾಸ್ಟರ್ ಕೊರೊನಾ ಲಾಕ್‍ಡೌನ್‍ನಿಂದ ಕಂಗಾಲಾಗಿರುವ ಬಡವರು, ನಿರ್ಗತಿಕರಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿ ಮಾದರಿಯಾಗಿದ್ದಾರೆ. ಕೋಲಾರ ನಗರದ ಗಲ್‍ಪೇಟೆ ನಿವಾಸಿ ಪೋಸ್ಟ್ ಮಾಸ್ಟರ್ ನಾರಾಯಣಸ್ವಾಮಿ ತನ್ನ ತಂದೆ ಬಂಗವಾದಿ ಮುನಿಸ್ವಾಮಿ ಅವರ 13ನೇ ವರ್ಷದ ಪುಣ್ಯ ತಿಥಿ ದಿನ ಆಹಾರ ಪದಾರ್ಥಗಳನ್ನ ವಿತರಣೆ ಮಾಡಿದರು. ಮೂಲತಃ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬಂಗವಾದಿ ಗ್ರಾಮದವರಾದ ಮುನಿಸ್ವಾಮಿ ಅವರು ಕಾಲಾಧೀನರಾಗಿ …

Read More »

ಮಂಗಳೂರು:ರಾತ್ರಿ ವೇಳೆ ಹೊರ ರಾಜ್ಯಗಳಿಂದ ಮೀನಿನ ಲಾರಿಗಳು ಬರುತ್ತಿದ್ದು, ಭಾರೀ ಸಂಖ್ಯೆಯಲ್ಲಿ ಜನಜಂಗುಳಿ ಏರ್ಪಡುತ್ತಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಇದೀಗ ಕೊರೊನಾ ಹಾಟ್‍ಸ್ಪಾಟ್ ಆಗಿದೆ. ಕೊರೊನಾ ಪಾಸಿಟಿವ್ ಕೇಸ್ ಕಡಿಮೆ ಆಯಿತು ಎಂದು ನಿಟ್ಟುಸಿರು ಬಿಡುವಾಗಲೇ ಮತ್ತೆ ಮತ್ತೆ ಕೊರೊನಾ ಪಾಸಿಟಿವ್ ಹೆಚ್ಚಾಗಿ ಇಬ್ಬರು ಮೃತಪಟ್ಟಿದ್ದಾರೆ. ಇದೀಗ ಜಿಲ್ಲಾಡಳಿತವೇ ಇಡೀ ಜಿಲ್ಲೆಯ ಜನರಿಗೆ ಕೊರೊನಾ ಸೋಂಕನ್ನು ಹರಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಕೊರೊನಾ ಹರಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ದಾರಿ ಮಾಡಿಕೊಟ್ಟಿರುವ ಬೆಳವಣಿಗೆ ನಡೆದಿದೆ. ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ರಾತ್ರಿ ವೇಳೆ ಹೊರ …

Read More »

ಯಾದಗಿರಿಯಲ್ಲಿ ಕಲಬುರಗಿ ಸೋಂಕಿತ ತಂದ ಫಜೀತಿ…………

ಯಾದಗಿರಿ: ಗ್ರೀನ್‍ಜೋನ್‍ನಲ್ಲಿರುವ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ. ಲಾಕ್‍ಡೌನ್ ಸಡಲಿಕೆ ಎಫೆಕ್ಟ್ ನಿಂದಾಗಿ ಯಾದಿಗಿರಿಗೆ ಬಂದು ಹೋಗಿದ್ದ ಕಲಬುರಗಿ ಸೋಂಕಿತನಿಂದ ಇದೀಗ ಜಿಲ್ಲಾಡಳಿತ ಫಜೀತಿಗೆ ಸಿಲುಕಿದೆ. ಏಪ್ರಿಲ್ 21 ರಂದು ರೋಗಿ 413 ಕಲಬುರಗಿ ವ್ಯಕ್ತಿಗೆ ಕೊರಾನಾ ದೃಢಪಟ್ಟಿದೆ. ಇತನ ಟ್ರಾವೆಲ್ ಹಿಸ್ಟರಿಯಲ್ಲಿ ಹೊರ ಬಿದ್ದರುವ ಸತ್ಯ ಯಾದಗಿರಿ ಜನರ ನಿದ್ದೆಗೆಡಿಸಿದೆ. ಪಾಸಿಟಿವ್ ಬಂದ ವ್ಯಕ್ತಿಗೆ ಯಾದಗಿರಿ ನಗರದಲ್ಲಿ ಕನ್ನಡಕದ ಅಂಗಡಿಯಿದ್ದು, ಈ ಅಂಗಡಿ ಏಪ್ರಿಲ್ 15 ರಿಂದ 22ವರೆಗೆ …

Read More »

ಅಂದು ಕ್ಯಾಮೆರಾಮ್ಯಾನ್ ಇಂದು ಬೀದಿ ಬೀದಿಯಲ್ಲಿ ಹಣ್ಣು, ತರಕಾರಿ ಮಾರೋ ವ್ಯಾಪಾರಿ

ಮಡಿಕೇರಿ: ಕೊರೊನಾ ವಿಶ್ವದಾದ್ಯಂತ ತಲ್ಲಣ ಮೂಡಿಸಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳನ್ನು ಲಾಕ್‍ಡೌನ್ ಮಾಡಲಾಗಿದೆ. ಈ ಪರಿಣಾಮ ಹಲವರ ಬದುಕು ಬೀದಿಗೆ ಬಂದಿದೆ. ವರ್ಷದಲ್ಲಿ 6 ತಿಂಗಳು ಮದುವೆ, ನಾಮಕರಣ, ಪ್ರೀವೆಡ್ಡಿಂಗ್ ಶೂಟ್ ಹೀಗೆ ಫೋಟೋ ಹಾಗೂ ವಿಡಿಯೋ ಮಾಡಿಕೊಂಡು ಜೀವನ ನಡೆಸುತ್ತಿದ್ದ ಹಲವು ಛಾಯಾಗ್ರಾಹಕರ ಕುಟುಂಬಗಳಿಗೆ ಕೊರೊನಾ ಲಾಕ್‍ಡೌನ್ ಎಫೆಕ್ಟ್ ತಟ್ಟಿದೆ. ಇದಕ್ಕೆ ಕೊಡಗು ಜಿಲ್ಲೆಯ ಛಾಯಾಗ್ರಾಹಕರು ಹೊರತಾಗಿಲ್ಲ. ಏಕಾಏಕಿ ದೇಶದಾದ್ಯಂತ ಲಾಕ್‍ಡೌನ್ ಘೊಷಿಸಿದ್ದರಿಂದ ಯಾವುದೇ ಮದುವೆ ಹಾಗೂ …

Read More »

10 ಮಂದಿಯ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ……..

ಚಿಕ್ಕಮಗಳೂರು: ಕೊರೊನಾ ಆತಂಕ ಹಾಗೂ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕೇವಲ 10 ಮಂದಿಯ ಸಮ್ಮುಖದಲ್ಲಿ ಸರಳವಾದ ಮದುವೆಯೊಂದು ನಡೆದಿದೆ. ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದ ರಂಜಿತ್ ಹಾಗೂ ಮೇಘ ಮದುವೆ ಇಂದು ಮೂಡಿಗೆರೆ ನಗರದ ರೈತ ಭವನದಲ್ಲಿ ನಿಶ್ಚಯವಾಗಿತ್ತು. ಆದರೆ ಕೊರೊನಾ ಆತಂಕದಿಂದ ದೇಶವೇ ಲಾಕ್‍ಡೌನ್ ಆಗಿದೆ. ಅಲ್ಲದೇ ಮದುವೆ, ಸಭೆ, ಸಮಾರಂಭಗಳಿಗೆ ಸರ್ಕಾರ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಜೋಡಿ ಬೈದುವಳ್ಳಿ ಗ್ರಾಮದಲ್ಲಿನ ಈಶ್ವರ …

Read More »

ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ 90 ವರ್ಷದ ವೃದ್ಧ ಸವಾಲು……….

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ 90 ವರ್ಷದ ವೃದ್ಧ ಸವಾಲು ಹಾಕಿದ್ದು, ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ಅಜ್ಜ ಎಲ್ಲ ರೀತಿಯ ಹೋರಾಟ ನಡೆಸುತ್ತಿದ್ದಾನೆ. ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಿದ್ದ ಬಿಹಾರ ಮೂಲದ ಕಾರ್ಮಿಕ ರೋಗಿ-419ರ ಸಂಪರ್ಕದಿಂದ ವೃದ್ಧನಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿತ್ತು. ಹೀಗಾಗಿ ಸದ್ಯ ಆತನನ್ನು ಪ್ರತ್ಯೇಕವಾಗಿಸಿರಿ ಚಿಕಿತ್ಸೆ ಕೊಡಲಾಗುತ್ತಿದೆ. ವೃದ್ಧನಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ವೈದ್ಯರಿಗೆ ಎಲ್ಲವೂ ಕಷ್ಟ ಕಷ್ಟವಾಗಿದೆ. ಆದರೂ ಅಜ್ಜ …

Read More »