ಮುಂಬೈ, ಏ.26- ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿನ ಸಾವು ಮತ್ತು ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ದಿನೇ ದಿನೇ ಶೋಚನೀಯವಾಗುತ್ತದೆ. ರಾಜ್ಯದ ವಿವಿಧೆಡೆ ಕೊರೊನಾ ಹೆಮ್ಮಾರಿಯ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಂದೇ ದಿನ ಅವಧಿಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈ ಅಪಾಯಕಾರಿಯಾಗಿ ಪರಿಣಮಿಸಿದ್ದು, ಅಲ್ಲಿ 5000ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಾಧಿತರಾಗಿದ್ದಾರೆ. ಅಲ್ಲಿ ಪ್ರತಿದಿನ ಹೊಸ ಸೋಂಕು ಪ್ರಕರಣಗಳು ದೃಢಪಡುತ್ತಲೇ ಇವೆ. ಮಹಾರಾಷ್ಟ್ರದಲ್ಲಿ …
Read More »ಅರಭಾಂವಿ ಕ್ಷೇತ್ರದಲ್ಲಿ ಎಲ್ಲ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟ್ ವಿತರಿಸಿದರು
ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ರವಿವಾರದಂದು ಗ್ರಾಮಗಳಲ್ಲಿ ಸರ್ವ ಕುಟುಂಬಗಳಿಗೆ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಧಾನ್ಯಗಳ ಕಿಟ್ಟ್ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಅರಭಾಂವಿ ವಿಧಾನ ಸಭಾ …
Read More »ಟಿಕ್‍ಟಾಕ್‍ನಲ್ಲಿ ನಾನು ನಿನ್ನನ್ನ ಬ್ಲಾಕ್ ಮಾಡ್ತೀನಿ: ಗೇಲ್…..
ನವದೆಹಲಿ: ನೀನು ತುಂಬ ಕಿರಿಕಿರಿ ಮಾಡುತ್ತೀಯಾ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಟೀಕಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಬೌಲರ್ ಆಗಿರುವ ಚಹಲ್ ಅವರು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇರುತ್ತಾರೆ. ಎಲ್ಲರನ್ನೂ ಕಾಲೆಳೆಯುವ ಕೆಲಸ ಮಾಡುತ್ತಾರೆ. ಹೀಗಾಗಿ ಗೇಲ್ ನೀನು ಸೋಶಿಯಲ್ ಮೀಡಿಯಾದಲ್ಲಿ ಕಿರಿಕಿರಿ ಮಾಡುತ್ತಿದ್ದೀಯ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ಚಹಲ್‍ಗೆ …
Read More »ಉಚಿತ ಆಹಾರ ಕಿಟ್ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಜನ
ಬೆಂಗಳೂರು: ಉಚಿತ ಆಹಾರ ಕಿಟ್ ಪಡೆಯಲು ಜನರು ಮುಗಿಬಿದ್ದಿರುವ ಘಟನೆ ಬೆಂಗಳೂರಿನ ಓಕುಳಿಪುರಂನಲ್ಲಿ ನಡೆದಿದೆ. ಓಕುಳಿಪುರಂನಲ್ಲಿ ಜೆಡಿಎಸ್ ಮುಖಂಡ ಹಿರಿಗೌಡರು ಸ್ಥಳೀಯ ನಿವಾಸಿಗಳಿಗೆ ಆಹಾರದ ಕಿಟ್ ವಿತರಣೆ ಮಾಡುತ್ತಿದ್ದರು. ಅಕ್ಕಿ, ಬೇಳೆ ಸಿಗುವ ವಿಚಾರ ತಿಳಿದು ಜನರು ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳುವುದನ್ನು ಮರೆತು ಮುಗಿಬಿದ್ದಿದ್ದರು. ದಿನಸಿ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಹಾಕಲಾಗಿತ್ತು. ಆದ್ರೆ ಈ ಒಂದು ಬಾಕ್ಸ್ ನಲ್ಲಿ ಇಬ್ಬಿಬ್ರು ನಿಂತಿರುವ ದೃಶ್ಯಗಳು ಕಂಡು …
Read More »ಕಟಿಂಗ್ ಶಾಪ್‍ಗೆ ಹೋಗಿದ್ದ ಓರ್ವನಿಂದ 6 ಮಂದಿಗೆ ತಗುಲಿದ ಕೊರೊನಾ…….
ಭೋಪಾಲ್: ಕಟಿಂಗ್ ಮಾಡಿಸಿಕೊಂಡು ಬಂದಿದ್ದ ಓರ್ವ ಸೋಂಕಿತನಿಂದ ಈಗ ಆ ಕಟಿಂಗ್ ಶಾಪ್‍ಗೆ ಹೋಗಿದ್ದ 6 ಮಂದಿಗೆ ಕೊರೊನಾ ವೈರಸ್ ಸೋಂಕು ಹರಡಿದೆ. ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಬಾರ್ಗಾಂವ್ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಇಂದೋರ್ ಹಾಸ್ಟೆಲ್‍ನಲ್ಲಿ ಇದ್ದ ಸೋಂಕಿತ ವ್ಯಕ್ತಿ ಕೆಲ ದಿನಗಳ ಹಿಂದೆ ಗ್ರಾಮಕ್ಕೆ ವಾಪಸ್ ಬಂದಿದ್ದನು. ಬಾರ್ಗಾಂವ್ ಗ್ರಾಮದಲ್ಲಿ ಕಟಿಂಗ್ ಶಾಪ್‍ಗೆ ಏಪ್ರಿಲ್ 5ರಂದು ಸೋಂಕಿತ ಭೇಟಿಕೊಟ್ಟಿದ್ದನು. ಇಲ್ಲಿ ಕ್ಷೌರಿಕನ ಬಳಿ ಕಟಿಂಗ್ ಹಾಗೂ ಶೇವಿಂಗ್ …
Read More »ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ…….
ಬೆಳಗಾವಿ, ಏ.೨೬(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ೫೦ ವರ್ಷದ ವ್ಯಕ್ತಿ(ಪಿ-೧೮೨) ಹಾಗೂ ಅವರ ಪತ್ನಿಯಾಗಿರುವ ೪೦ ವರ್ಷದ (ಪಿ-೧೯೨) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಇವರು ಏ.೩ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು …
Read More »ಲಾಕ್‌ಡೌನ್‌ನಿಂದ ಬೆಂಗಳೂರಲ್ಲಿ ಹೆಚ್ಚಾಯ್ತು ಅಂತರ್ಜಲದ ಪ್ರಮಾಣ..!
ಬೆಂಗಳೂರು, ಏ.26- ಕೊರೋನ ವೈರಾಣು ಹರಡುವುದನ್ನು ತಡೆಯಲು ರಾಜ್ಯದಲ್ಲಿ ಲಾಕ್ ಡೌನ್ ಮಾಡಿದ ಪರಿಣಾಮ ಬೆಂಗಳೂರಿನಲ್ಲಿ ಅಂತರ್ಜಲದ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಗೃಹ ಬಳಕೆ ನೀರಿನ ಪ್ರಮಾಣ ಹೆಚ್ಚಾಗಿದ್ದರೆ, ವಾಣಿಜ್ಯ ಬಳಕೆ ನೀರಿನ ಪ್ರಮಾಣ ಕಡಿಮೆಯಾಗಿರುವುದು ಕಂಡುಬಂದಿದೆ. ಬೆಂಗಳೂರಿನಲ್ಲಿ 2.1 ಮೀಟರ್ ನಿಂದ 90 ಮೀಟರ್ ವರೆಗೂ ಅಂತರ್ಜಲ ಹೆಚ್ಚಳವಾಗಿರುವುದು ಕಂಡುಬಂದಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್. ಪ್ರಕಾಶ್ ಈ ಸಂಜೆಗೆ ತಿಳಿಸಿದರು. …
Read More »ನೆಲಕ್ಕುರುಳಿದ ಬೃಹತ್ ಮರ, ಎರಡು ಕಾರುಗಳು ಜಖಂ- ತಪ್ಪಿದ ಭಾರೀ ಅನಾಹುತ……
ಬೆಂಗಳೂರು: ಕಾರ್ ಗಳ ಮೇಲೆ ಬೃಹತ್ ಮರ ಬಿದ್ದು ಒಂದು ಕಾರ್ ಸಂಪೂರ್ಣ ಜಖಂ ಆಗಿದ್ದು, ಇನ್ನೊಂದು ಭಾಗಶಃ ಜಖಂ ಆಗಿದೆ. ಸಿಲಿಕಾನ್ ಸಿಟಿಯ ಗಿರಿನಗರದಲ್ಲಿ ಘಟನೆ ನಡೆದಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆ ನೆಲ ತೇವವಾಗಿದ್ದರಿಂದ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಎರಡು ಕಾರ್ ಗಳ ಮೇಲೆ ಮರ ಬಿದ್ದಿದ್ದು, ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಎರಡು ಕಾರ್‍ಗಳ ಪೈಕಿ ಒಂದು ಕಾರು …
Read More »ಒಂದೇ ಕುಟುಂಬದ ಐವರ ಮೃತದೇಹ ಮನೆಯೊಳಗೆ ಪತ್ತೆ…………
ಲಕ್ನೋ: ಒಂದೇ ಕುಟುಂಬದ ಐವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಅವರ ಮನೆಯಲ್ಲಿಯೇ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಶೃಂಗಾರ್ ನಗರ ಕಾಲೋನಿಯಲ್ಲಿ ನಡೆದಿದ್ದು, ತಮ್ಮ ನಿವಾಸದಲ್ಲಿ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಿವೃತ್ತ ಆರೋಗ್ಯ ಕಾರ್ಯಕರ್ತ ರಾಜೇಶ್ವರ್ ಪ್ರಸಾದ್ ಪಚೌರಿ (80), ಅವರ ಸೊಸೆ ದಿವ್ಯಾ (33), ಅವರ ಇಬ್ಬರು ಮಕ್ಕಳಾದ ಲಾಲೂ (1), ಆರುಶ್ (10) …
Read More »ಊಟಕ್ಕೆ ಇಲ್ಲದಿದ್ರೂ ಪರವಾಗಿಲ್ಲ, ನನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ………
ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಕೇಂದ್ರ ಸರ್ಕಾರ ರಾಷ್ಟ್ರದಾದ್ಯಂತ ಲಾಕ್‍ಡೌನ್ ನಿಷೇಧ ಹೇರಿದೆ. ಆದರೆ ಈ ಕೊರೊನಾದಿಂದಾಗಿ ಬಡವರು, ಕೂಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಅಷ್ಟಿಷ್ಟಲ್ಲ. ಇದೀಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ ಎಂದು ಅಂಗಲಾಚುತ್ತಿದ್ದಾರೆ. ಶಿವಮೊಗ್ಗದ ಕೃಷಿನಗರದ ಚಾನಲ್ ಬಳಿ ಇರುವ ಕುಟುಂಬವೊಂದು ಲಾಕ್‍ಡೌನ್ ವೇಳೆ ಕಷ್ಟ ಅನುಭವಿಸುತ್ತಿದ್ದಾರೆ. ಗಾರೆ ಕೆಲಸ ಮಾಡಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದ ಮಂಜುನಾಥ್ ಕುಟುಂಬಕ್ಕೆ …
Read More »