Breaking News

ಜುಬಿಲೆಂಟ್ಸ್ ಕಾರ್ಖಾನೆಗೆ ಸೋಂಕು ತಗುಲಿದ್ದು ಹೇಗೆ : ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಮೈಸೂರು (ಏಪ್ರಿಲ್ 25); ಜಿಲ್ಲೆಯ ನಂಜನಗೂಡಿನಲ್ಲಿ ಜುಬಿಲೆಂಟ್ಸ್ ಕಾರ್ಖಾನೆ ಕೊರೋನಾ ಹಾಟ್‌ಸ್ಪಾಟ್ ಆಗಿರುವ ಹಿನ್ನೆಲೆಯಲ್ಲಿ, ಕಾರ್ಖಾನೆಗೆ ಸೋಂಕು ತಗುಲಿದ್ದರ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಮೈಸೂರು ಕೋವಿಡ್-19 ವಿಶೇಷಾಧಿಕಾರಿ ಹರ್ಷಗುಪ್ತ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, ಒಂದು ವಾರದ ಒಳಗಾಗಿ ಸರ್ಕಾರಕ್ಕೆ ವರದಿ ನೀಡುವಂತೆ ಸೂಚಿಸಲಾಗಿದೆ. ಕಾರ್ಖಾನೆ ಸೋಂಕು ಎಲ್ಲಿಂದ ಬಂತು?  ಯಾರಿಂದ ಬಂತು? ಪ್ರಥಮವಾಗಿ ಯಾರಿಗೆ ಬಂತು? ಸೋಂಕು ಹರಡುವಿಕೆಗೆ ಕಾರಣವೇನು? ಕಾರ್ಖಾನೆ ಜವಬ್ದಾರಿ ಏನು? ಹೀಗೆ ಎಲ್ಲಾ ವಿಚಾರಗಳ …

Read More »

ದಂತ ಚಿಕಿತ್ಸಾಲಯ ತೆರೆಯಬಾರದು ಎಂಬ ನಿಯಮ ಗಾಳಿಗೆ ತೂರಿ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಿದ ಡಾ.ಖಾನ್

ಹಾಸನ; ದಂತ ಚಿಕಿತ್ಸಾಲಯ ತೆರೆಯಬಾರದೆಂಬ ನಿಯಮವಿದ್ದರೂ ಕ್ಲಿನಿಕ್ ತೆರೆದು ವೈದ್ಯನೋರ್ವ ಚಿಕಿತ್ಸೆ ಮಾಡುತ್ತಿದ್ದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಹಳೇ ಬಸ್ ನಿಲ್ದಾಣದ ಮುಂಭಾಗವಿರುವ ಹಾಸನ ದಂತ ಚಿಕಿತ್ಸಾಲಯದಲ್ಲಿ ಡಾ.ಖಾನ್ ಕ್ಲಿನಿಕ್ ತೆರೆದು ಬೆಳಿಗ್ಗೆಯಿಂದ ಕೆಲ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಈ ವೇಳೆ ಮಾಧ್ಯಮದವರು ಸ್ಥಳಕ್ಕೆ ತೆರಳಿದಾಗ ಕ್ಯಾಮರಾ ಕಂಡು ತಬ್ಬಿಬ್ಬಾದ ಡಾ.ಖಾನ್ ಕ್ಲಿನಿಕ್‌  ಬಾಗಿಲು ಮುಚ್ಚಲು ಮುಂದಾದರು. ಘಟನೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಅಧ್ಯಕ್ಷ …

Read More »

ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರಿಗೆ ಕುದ್ರೋಳಿ ಕ್ಷೇತ್ರದಿಂದ ಸಹಾಯ……….

ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ಬಡವರು, ನಿರ್ಗತಿಕರಿಗೆ ರಾಜ್ಯದ ಪ್ರಮುಖ ಪುಣ್ಯ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಿತ್ಯವೂ ಹಸಿವು ನೀಗಿಸುವ ಮಹತ್ವ ಕಾರ್ಯ ನಡೆಯುತ್ತಿದೆ. ಕುದ್ರೋಳಿ ಕ್ಷೇತ್ರದ ಹರಿಕಾರ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಸಲಹೆ ಹಾಗೂ ಮಾರ್ಗದರ್ಶನದಂತೆ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದೆ. ಆರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುವ ಉದ್ದೇಶ ಹೊಂದಿತ್ತಾದರೂ ನಂತರ ಅದು ವಿಸ್ತರಣೆಗೊಂಡು ಇದುವರೆಗೆ ಒಟ್ಟ …

Read More »

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿ ಇರುವುದು ಕಂಡು ಬಂದಿದೆ. ಇದೀಗ ರಾಜ್ಯದಲ್ಲಿ ಕೂಡ ಈ ಪ್ರಕ್ರಿಯೆ ಲಭ್ಯವಾದಂತಾಗಿದೆ. ಈ …

Read More »

ನಿಜವಾದ ಸಂತೋಷ ಅಂದ್ರೆ ಏನೆಂದು ತೋರಿಸಿದೆ – ಭಾವಿ ಪತ್ನಿಗೆ ಕೃಷ್ಣ ವಿಶ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮಿಲನಾ ನಾಗರಾಜ್ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೀಗಾಗಿ ನಟ ಡಾರ್ಲಿಂಗ್ ಕೃಷ್ಣ ತಮ್ಮ ಗೆಳತಿಗೆ ಸೋಶಿಯಲ್ ಮೀಡಿಯಾದ ಮೂಲಕ ವಿಶೇಷ ರೀತಿಯಲ್ಲಿ ಶುಭಾಶಯ ತಿಳಿಸಿದ್ದಾರೆ. ಕೊರೊನಾ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಮಿಲನಾ ನಾಗರಾಜ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತ ಕೃಷ್ಣ ಕೂಡ ತಮ್ಮ ಪ್ರೇಯಸಿಯನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದ ಮೂಲಕವೇ ಕೃಷ್ಣ ವಿಶ್ ಮಾಡಿದ್ದಾರೆ. ಕೃಷ್ಣ ಇನ್‍ಸ್ಟಾಗ್ರಾಂನಲ್ಲಿ ಒಂದು …

Read More »

ಲಾಕ್‍ಡೌನ್ ಎಫೆಕ್ಟ್ – 100 ಎಕ್ರೆಯಲ್ಲಿ ಕೊಳೆಯುತ್ತಿದೆ 300 ಟನ್ ಅನಾನಸ್

ಮಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಎಲ್ಲ ವರ್ಗದ ಜನ ಆತಂಕದಲ್ಲಿದ್ದಾರೆ. ದೇಶದ ಬೆನ್ನೆಲುಬು ರೈತನು ಕೂಡ ತಾನು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಕಷ್ಟ ನಷ್ಟ ಅನುಭವಿಸುವಂತಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ಕೇರಳದ ಎರ್ನಾಕುಲಂ ಮೂಲದ ಶೈಜು 100 ಎಕರೆ ಜಮೀನನ್ನು ಲೀಸ್‍ಗೆ ಪಡೆದು ಅನಾನಸ್ ಕೃಷಿ ಮಾಡಿದ್ದರು. ಶ್ರಮಕ್ಕೆ ತಕ್ಕ ಪ್ರತಿಫಲ ಭರ್ಜರಿ ಫಸಲು ಕೂಡ ಬಂದಿತ್ತು. …

Read More »

ಕಿಮ್ ಜಾಂಗ್-ಉನ್ ಆರೋಗ್ಯ ಗಂಭೀರ – ಉ.ಕೊರಿಯಾಗೆ ಬಂದಿಳಿದ ಚೀನಾ ವೈದ್ಯರು

ಬೀಜಿಂಗ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚಿಕಿತ್ಸೆ ನೀಡಲು ಚೀನಾದ ನುರಿತ ವೈದ್ಯರ ತಂಡ ಉತ್ತರ ಕೊರಿಯಾಗೆ ಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡಿವೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಅಂತರರಾಷ್ಟ್ರೀಯ ಸಂಪರ್ಕ ವಿಭಾಗದ ಹಿರಿಯ ಸದಸ್ಯರ ನೇತೃತ್ವದಲ್ಲಿ ವೈದ್ಯರ ನಿಯೋಗವು ಬೀಜಿಂಗ್‍ನಿಂದ ಪ್ಯೊಂಗ್ಯಾಂಗ್‍ಗೆ ಗುರುವಾರ ಹೋಗಿದೆ ಎನ್ನಲಾಗಿದೆ. ಕಿಮ್ ಜಾಂಗ್-ಉನ್ ಚೈನ್ ಸ್ಮೋಕರ್ ಆಗಿದ್ದು, ಅವರ ದೇಹದ ತೂಕ ಜಾಸ್ತಿಯಾಗಿದೆ. …

Read More »

ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ: ಅಖ್ತರ್‌ನನ್ನ ಕುಟುಕಿದ ಕಪಿಲ್ ದೇವ್

ನವದೆಹಲಿ: ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ ಎಂದು ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರು ಇಂಡೋ-ಪಾಕ್ ಕ್ರಿಕೆಟ್ ಬಗ್ಗೆ ನಿಲುವನ್ನು ಪುನರುಚ್ಚರಿಸಿದ್ದಾರೆ. ಇಂಡೋ-ಪಾಕ್ ನಡುವಿನ ಕ್ರಿಕೆಟ್ ಪಂದ್ಯದ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ. ಉಭಯ ದೇಶಗಳ ನಡುವಿನ ರಾಜಕೀಯ, ಗಡಿ ಸಂಬಂಧದಿಂದಾಗಿ ದ್ವಿಪಕ್ಷೀಯ ಕ್ರಿಕೆಟ್ ಆಡುವ ಯಾವುದೇ ಅವಕಾಶವಿಲ್ಲ. ಹಾಗಿದ್ದರೂ ಅಭಿಮಾನಿಗಳು ಐಸಿಸಿ ನಡೆಸುವ ಏಕದಿನ, ಟಿ20 ಎರಡೂ ಮಾದರಿಯ ವಿಶ್ವಕಪ್ ಹಾಗೂ ಏಷ್ಯಾಕಪ್ …

Read More »

ಕಾರ್ಮಿಕರ ಓಡಾಟಕ್ಕೆ ರಸ್ತೆಗೆ ಇಳಿಯಿತು 137 KSRTC ಬಸ್ಸುಗಳು

ಬೆಂಗಳೂರು: 6 ಜಿಲ್ಲೆಗಳಲ್ಲಿ ಕಾರ್ಮಿಕರ ಓಡಾಟಕ್ಕೆ ಕೆಎಸ್ಆರ್‌ಟಿಸಿಯ 137 ಬಸ್ಸುಗಳು ರಸ್ತೆಗೆ ಇಳಿದಿದೆ. 56 ಸೀಟುಗಳ ಈ ಬಸ್ಸಿನಲ್ಲಿ 21 ಕಾರ್ಮಿಕರಿಗೆ ಮಾತ್ರ ಪ್ರಯಾಣಿಸಲು ಅನುಮತಿ ಸಿಕ್ಕಿದೆ. ಕಾರ್ಮಿಕರು ಸೀಟು ಖಾಲಿ ಬಿಟ್ಟು ಕೂರಬೇಕು ಎಂದು ಷರತ್ತು ವಿಧಿಸಲಾಗಿದೆ. ಈ ಬಸ್ಸುಗಳು ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸಿಗ ಕಾರ್ಮಿಕರಿಗಾಗಿ ಮಾತ್ರ ಎಂದು ಕೆಎಸ್ಆರ್‌ಟಿಸಿ ಸ್ಪಷ್ಟಪಡಿಸಿದೆ. ಈ ಬಸ್ಸುಗಳು ಜಿಲ್ಲಾ ವ್ಯಾಪ್ತಿಯ ಒಳಗಡೆ ಮಾತ್ರ ಸಂಚರಿಸುತ್ತದೆ. ಜಿಲ್ಲಾಡಳಿತದ ಮನವಿಯ ಹಿನ್ನೆಲೆಯಲ್ಲಿ …

Read More »

ಹೊರ ಜಿಲ್ಲೆಯ ಉದ್ಯೋಗದಿಂದ ಹಿಂತಿರುಗಿದವರನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಸೂಚನೆ

ಹಾವೇರಿ: ಎ.25 (ಕರ್ನಾಟಕ ವಾರ್ತೆ): ಉದ್ಯೋಗ ನಿಮಿತ್ಯ ಹೊರ ಜಿಲ್ಲೆಗಳಲ್ಲಿ ಉಳಿದುಕೊಂಡವರು ಇದೀಗ ಮರಳಿ ತಮ್ಮ ಸ್ವಂತ ಗ್ರಾಮಕ್ಕೆ ಆಗಮಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಜಿಲ್ಲೆಗೆ ಬರುವ ಜನರನ್ನು ಕಡ್ಡಾಯವಾಗಿ ಸ್ವ್ಯಾಬ್ ಪರೀಕ್ಷೆಗೆ ಒಳಪಡಿಸಿ ಪ್ರಯೋಗಾಲಯದ ಮಾದರಿ ಬರುವತನಕ ಸರ್ಕಾರಿ ಕ್ವಾರಂಟೈನ್‍ನಲ್ಲಿ ಇರಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಎಲ್ಲ ತಹಶೀಲ್ದಾರಗಳಿಗೆ ಸೂಚನೆ ನೀಡಿದರು. ಶನಿವಾರ ಜಿಲ್ಲೆಯ ತಹಶೀಲ್ದಾರಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಸರ್ಕಾರದ ಸೂಚನೆಯಂತೆ ರಾಜ್ಯದ ವಲಸೆ ಕಾರ್ಮಿಕರನ್ನು …

Read More »