Breaking News

ಅಣ್ಣಾವ್ರ ಹುಟ್ಟುಹಬ್ಬಕ್ಕೂ ತಟ್ಟಿದ ಕೊರೊನಾ ಎಫೆಕ್ಟ್ –

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ನಿಂದ ಈಗಾಗಲೇ ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಡಾ.ರಾಜ್‍ಕುಮಾರ್ ಹುಟ್ಟುಹಬ್ಬಕ್ಕೂ ಕೊರೊನಾ ಎಫೆಕ್ಟ್ ತಟ್ಟಿದೆ. ಇಂದು ಡಾ.ರಾಜ್‍ಕುಮಾರ್ ಅವರಿಗೆ 92ನೇ ವರ್ಷದ ಹುಟ್ಟುಹಬ್ಬದ ದಿನ. ಆದರೆ ಕೊರೊನಾ ಲಾಕ್‍ಡೌನ್‍ನಿಂದ ಯಾವುದೇ ಅದ್ಧೂರಿ ಆಚರಣೆ ಇಲ್ಲ. ಆದ್ದರಿಂದ ಕುಟುಂಬಸ್ಥರು ಸರಳವಾಗಿ ಪೂಜೆ ಮಾಡಿ ಕಾರ್ಯ ಮಾಡಲಿದ್ದಾರೆ. ಹೀಗಾಗಿ ಇದೇ ಮೊದಲ ಬಾರಿಗೆ ಅಭಿಮಾನಿಗಳಿಲ್ಲದೆ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ನಟ …

Read More »

ಕೊರೋನಾ ವೈರಸ್ ಯಾವುದೆ ಒಂದು ಕೋಮಿಗೆ ಬರುವದಿಲ್ಲ ಎಲ್ಲ ಧರ್ಮದವರಿಗೂ ಬರುತ್ತದೆ, ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು : ಜಿಲ್ಲಾಧಿಕಾರಿ ಕೆ. ರಾಜೇಂದ್ರ

ಜಮಖಂಡಿ. ಏ. 23 : ಬಾಗಲಕೋಟೆ ಜಿಲ್ಲೆಯಲ್ಲಿ ಮೂರುದಿಂದ ಯಾವುದೆ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ, ಚಿಕಿತ್ಸೆ ಪಡೆದುಕೊಂಡ ಗುಣಮುಖರಾಗಿರುವ 6 ಜನರನ್ನು ಡಿಸ್‌ಸಾರ್ಜ್ ಮಾಡುವ ಪ್ರಕ್ರೀಯೆ ನಡೆದಿದೆ ವರದಿಗಾಗಿ ಕಾಯುತಿದ್ದೆವೆ ಎಂದು ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ ಹೇಳಿದರು. ನಗರದ ಬಾರ್ಪೆಟ್‌ಗಲ್ಲಿಯ ನಿಷೇಧಿತ ವಲಯಕ್ಕೆ ಭೆಟ್ಟಿ ನೀಡಿ ನಂತರ ಸುದ್ದಿಗಾರರ ಜೋತೆ ಮಾತನಾಡಿದರು. ಜಿಲ್ಲೆ ರೆಡ್ ಜೋನ್‌ನಲ್ಲಿರುವದರಿಂದ ಕೃಷಿ ಯೇತರ ಚಟುವಟಿಕೆ ಹೊರತು ಪಡಿಸಿ ಎಲ್ಲವನ್ನು ಬಂದ ಇಡಲಾಗುವುದು …

Read More »

ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …

Read More »

ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರಶ್ಯಾಮಸುಂದರ ಢವಳಿ ಅವರು ಇಂದು  ಮಧ್ಯಾನ್ಹ ನಿಧನ 

ಬೆಳಗಾವಿ – ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರ,ಬೆಳಗಾವಿ ಜಿಲ್ಲಾ ಔದ್ಯೋಗಿಕ ಸಹಕಾರ ಬ್ಯಾಂಕಿನ ಮಾಜಿ ನಿರ್ದೇಶಕ ಶ್ಯಾಮಸುಂದರ ಢವಳಿ ಅವರು ಇಂದು  ಮಧ್ಯಾನ್ಹ ನಿಧನ ಹೊಂದಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ಪತ್ನಿಮತ್ತು ಇಬ್ಬರು ಪುತ್ರರನ್ನು ಬಿಟ್ಟು ಅಗಲಿದ್ದಾರೆ.  ಇಂದು ಸಂಜೆ ಖಾಸಬಾಗ ರುದ್ರಭೂಮಿಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ವಡಗಾವಿ, ಖಾಸಬಾಗದ ಅನೇಕ ಗಣ್ಯರು ಪಾಲ್ಗೊಂಡಿದ್ದರು.        1982 ರ ಗೋಕಾಕ ಚಳವಳಿಯಿಂದ ಇತ್ತೀಚಿನವರೆಗಿನ ಎಲ್ಲ ಕನ್ನಡ ಪರ ಹೋರಾಟಗಳಲ್ಲಿ ಪಾಲ್ಗೊಂಡಿದ್ದ ಅವರು ಬೆಳಗಾವಿ …

Read More »

ಕೊರೊನಾ ವಿರುದ್ಧ 26 ಗಂಟೆ ಹೋರಾಡಿ ಪ್ರಾಣಬಿಟ್ಟ 6 ತಿಂಗಳ ಕಂದಮ್ಮ…

ಚಂಡೀಗಢ: ಮಹಾಮಾರಿ ಕೊರೊನಾ ವಿರುದ್ಧ 26 ಗಂಟೆಗಳ ಹೋರಾಡಿ 6 ತಿಂಗಳ ಕಂದಮ್ಮವೊಂದು ಮೃತಪಟ್ಟ ಮನಕಲಕುವ ಘಟನೆ ಇಂದು ಚಂಡೀಗಢದಲ್ಲಿ ನಡೆದಿದೆ. ಹೃದಯ ರಂಧ್ರದ ಚಿಕಿತ್ಸೆಗಾಗಿ 6 ತಿಂಗಳ ಹೆಣ್ಣು ಮಗುವನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಸೋಂಕ ತಗುಲಿರುವುದು ದೃಢಪಡುತ್ತಿದ್ದಂತೆ ಅಂದ್ರೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೋವಿಡ್-19 ವಾರ್ಡಿಗೆ ದಾಖಲಿಸಲಾಗಿತ್ತು. ರಾತ್ರಿಯಿಂದಲೇ ಮಗುವನ್ನು ವೆಂಟಿಲೇಟರ್ ಮತ್ತು ಗ್ಲೂಕೋಸ್‍ನಲ್ಲಿ ಇಡಲಾಗಿತ್ತು. ಆದರೆ ಸೋಂಕು ತೀವ್ರವಾಗಿ ಏರಿಕೆ …

Read More »

ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್, ಗುರುವಾರ ಮಾತ್ರ ಬೆಳಗಾವಿ ಜಿಲ್ಲೆಯಲ್ಲಿಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ

ಬೆಳಗಾವಿ: ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನ ಮಾಹಿತಿ ಪ್ರಕಾರ ಇಂದು ಒಂದೇ ದಿನಕ್ಕೆ 18 ಕೊರೊನಾ ಸೋಂಕು ತಗುಲಿದವರು ಪತ್ತೆಯಾಗಿದ್ದಾರೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ಮಾತ್ರ ಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ. ಇದರಿಂದ ಜಿಲ್ಲೆಯ ಜನರು ನಿಟ್ಟಿಸಿರು ಬಿಡುವಂತಾಗಿದೆ. ಹೆಚ್ಚು ಸೋಂಕಿತರು ಪತ್ತೆಯಾದ ಪಟ್ಟಿಯಲ್ಲಿ ಬೆಳಗಾವಿ ಮೂರನೇ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಒಟ್ಟು 43 ಪ್ರಕರಣಗಳು ಪತ್ತೆಯಾಗಿದೆ. ಸೋಂಕಿತರಲ್ಲಿ ಮೂವರು ಡಿಶ್ಚಾರ್ಜ್ ಆಗಿದ್ದಾರೆ. ಒಬ್ಬರ ಮೃತ ಪಟ್ಟಿದ್ದಾರೆ. ಉಳಿದ …

Read More »

ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ.

ಬೆಳಗಾವಿ: ಬಸವ ಜಯಂತಿಯ ನಿಮಿತ್ತ ಮಾನವ ಬಂಧುತ್ವ ವೇದಿಕೆ ಅಂಗ ಸಂಸ್ಥೆಯಾದ ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ. “ಬಸವ ತತ್ವಗಳಿಂದ ಅಖಂಡ ಕರ್ನಾಟಕದ ಕಲ್ಯಾಣ ಸಾಧ್ಯ” ಎಂಬ ವಿಷಯದ ಕುರಿತು 8 ನಿಮಿಷಗಳ ವಿಡಿಯೋ ಗಳನ್ನು ಆಹ್ವಾನಿಸಲಾಗಿದೆ. ಅತ್ಯುತ್ತಮ ವಿಷಯ ಮಂಡನೆ ಒಳಗೊಂಡ ವಿಡಿಯೋ ಗಳನ್ನೂ ಆಯ್ಕೆ ಮಾಡಿ ಪ್ರಥಮ, ದ್ವೀತಿಯ, ತೃತೀಯ ಮತ್ತು ಸಮಾಧಾನಕರ ಶ್ರೇಣಿಯ 5 ಬಹುಮಾನ ಗಳನ್ನು …

Read More »

ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿ: ರವಿ ಡಿ. ಚೆನ್ನಣ್ಣವರ್

ಆನೇಕಲ್: ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ತಿಳಿಸಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್.ಪಿ ರವಿ ಡಿ ಚನ್ನಣ್ಣನವರ್ ಹೇಳಿದ್ದಾರೆ. ಆನೇಕಲ್ ಪಟ್ಟಣದಲ್ಲಿ ಕರುಣೆಯ ಕುಟೀರ ಹಾಗೂ ವಾಚನಾಲಯವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಆನೇಕಲ್ ನ ಪೋಲಿಸರು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಕರುಣೆಯ ಕುಟೀರ ಹಾಗೂ ವಾಚನಾಲಯ ತೆರೆಯಲಾಗಿದೆ. ಕೊರೊನಾ …

Read More »

ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

ಇಂಫಾಲ್: ಪಿತ್ತಜನಕಾಂಗದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಭಾರತೀಯ ಬಾಕ್ಸರ್ ಡಿಂಕೊ ಸಿಂಗ್ ಅವರನ್ನು ಸ್ಪೈಸ್‍ ಜೆಟ್ ಏರ್ ಅಂಬುಲೆಂನ್ಸ್ ಮೂಲಕ ದೆಹಲಿಯ ಆಸ್ಪತ್ರೆಗೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ. ಡಿಂಕೊ ಸಿಂಗ್ ಭಾರತದ ಪರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಣಿಪುರದ ರಾಜಧಾನಿ ಇಂಫಾಲ್‍ನಲ್ಲಿ ವಾಸಿಸುತ್ತಿರುವ 41 ವರ್ಷದ ಡಿಂಕೊ ಅವರಿಗೆ ಲಾಕ್‍ಡೌನ್‍ನಿಂದಾಗಿ ವಿಕಿರಣ ಚಿಕಿತ್ಸೆ ಸಿಗುತ್ತಿಲ್ಲ. ಚಿಕಿತ್ಸೆಗಾಗಿ ಅವರನ್ನು ಸ್ಪೈಸ್ ಜೆಟ್‍ನ ಏರ್ ಅಂಬುಲೆನ್ಸ್ ಮೂಲಕ ಇಂಫಾಲ್‍ನಿಂದ …

Read More »

ಬೀದರ್:ಜಮಾತ್‍ಗೆ ಹೋಗಿ ಬಂದಿದ್ದ 3 ಮಂದಿ ಡಿಸ್ಚಾರ್ಜ್……

ಬೀದರ್: ಕಳೆದ 23 ದಿನಗಳಿಂದ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿದ 3 ಜನ ಕೊರೊನಾ ಶಂಕಿತರ ವರದಿ ನೆಗೆಟಿವ್ ಬಂದ ಹಿನ್ನೆಲೆ ಇಂದು ಮಧ್ಯಾಹ್ನ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ದೆಹಲಿ ತಬ್ಲಿಘಿ ಜಮಾತ್‍ಗೆ ಹೋಗಿ ಬಂದಿದ್ದ ದುಬಲಗುಂಡಿ ಗ್ರಾಮದ ಇಬ್ಬರು ಹಾಗೂ ಹಳ್ಳಿಖೇಡ ಬಿ ಪಟ್ಟಣದ ಒಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ, ಅಂಬುಲೆನ್ಸ್ ಮೂಲಕ ಅವರ ಊರುಗಳಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ …

Read More »