ಧಾರವಾಡ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಜೊತೆಗೆ ಪೊಲೀಸ್ ಇಲಾಖೆಯ ಸಿಬ್ಬಂದಿ ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‍ಐ ಮಹೇಂದ್ರ ನಾಯಕ್ 2.50 ಲಕ್ಷ ಮೌಲ್ಯದ ದಿನಸಿಯನ್ನು ತಮ್ಮ ಸ್ವಂತ ಹಣದಲ್ಲಿ ಠಾಣಾ ವ್ಯಾಪ್ತಿಯ ಅಸಹಾಯಕರಿಗೆ ಹಂಚಿದ್ದಾರೆ. ಮೂಲತಃ ವಿಜಯಪುರ ತಾಲೂಕಿನ ಐನಾಪುರ ತಾಂಡಾದ ನಿವಾಸಿಯಾದ ಪಿಎಸ್‍ಐ, ಬಡತನದ ಹಿನ್ನೆಲೆಯಿಂದ ಬಂದಿದ್ದರು. ಹೀಗಾಗಿ ಲಾಕ್‍ಡೌನ್ ಸಮಯದಲ್ಲಿ ಹಸಿದವರಿಗೆ, ಅಸಹಾಯಕರಿಗೆ ನಿತ್ಯ ನೆರವಾಗುತ್ತಿದ್ದಾರೆ. ತಮ್ಮ …
Read More »ಬೆಂಗಳೂರು:ಬಸ್‍ಗಳಿಂದ ಉದ್ಯೋಗಿಗಳನ್ನ ಕೆಳಗಿಳಿಸಿದ ಪೊಲೀಸರು
ಬೆಂಗಳೂರು: ಇಂದಿನಿಂದ ಕೆಲ ವಲಯಗಳಿಗೆ ಲಾಕ್‍ಡೌನ್‍ನಿಂದ ವಿನಾಯ್ತಿ ನೀಡಲಾಗಿದೆ. ಖಾಸಗಿ ಕಂಪನಿಗಳು ತಮ್ಮ ಸಿಬ್ಬಂದಿ ಕರೆ ತರಲು ಬಸ್ ವ್ಯವಸ್ಥೆ ಮಾಡಿವೆ. ಆದ್ರೆ ಬಸ್ ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಸಿಬ್ಬಂದಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ನಾಗಸಂದ್ರದ ಚೆಕ್‍ಪೋಸ್ಟ್ ಬಳಿ ಖಾಸಗಿ ವಾಹನಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದರು. ಖಾಸಗಿ ಕಂಪನಿಯ ಟಿಟಿ ವ್ಯಾನ್ ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕುಳಿತವರನ್ನು ನೋಡಿದ ಪೊಲೀಸರು ಕ್ಲಾಸ್ ತೆಗೆದುಕೊಂಡರು. ಕುರಿಗಳು ಹೋದ …
Read More »ವಾಕಿಂಗ್ ಮಾಡುತ್ತಿದ್ದವರಿಗೆ ವ್ಯಾನ್ ಹತ್ತಿ ಎಂದ ಪೊಲೀಸರು……..
ಶಿವಮೊಗ್ಗ: ವಾಕಿಂಗ್ ಹಾಗೂ ಆಟವಾಡಲು ಬಂದವರಿಗೆ ಪೊಲೀಸರು ಶಾಕ್ ಕೊಟ್ಟಿದ್ದು, ಇದ್ದಕ್ಕಿದ್ದಂತೆ ಬನ್ನಿ ವ್ಯಾನ್ ಹತ್ತಿ ಎಂದು ಕರೆದೊಯ್ದಿದ್ದಾರೆ. ನಗರದ ವಿವಿಧ ಬಡಾವಣೆಗಳಲ್ಲಿ ವಾಯುವಿಹಾರ ಮಾಡುತ್ತಿದ್ದವರನ್ನು ನಗರದ ಒಳಾಂಗಣ ಕ್ರೀಡಾಂಗಣದ ಆವರಣಕ್ಕೆ ಕರೆತಂದು ಡಿಸಿ ಶಿವಕುಮಾರ್, ಎಸ್‍ಪಿ ಶಾಂತರಾಜ್ ಪಾಠ ಮಾಡಿದ್ದಾರೆ. ಇನ್ನೂ ವಿಶೇಷವೆಂದರೆ ಇದಕ್ಕೂ ಮುನ್ನ ಟೀ, ಬಿಸ್ಕೆಟ್ ನೀಡಿ ಆರೈಕೆ ಮಾಡಿದ್ದಾರೆ. ವಿವಿಧ ಬಡಾವಣೆಗಳಿಂದ ಸುಮಾರು 300ಕ್ಕೂ ಹೆಚ್ಚು ಜನ ವಾಕಿಂಗ್‍ಗೆ ಬಂದವರಿಗೆ, ಒಂದೇ ಜಾಗದಲ್ಲಿ ಕರೆ …
Read More »ಕೋವಿಡ್-೧೯ ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಚಾಲನೆ
ಬೆಳಗಾವಿ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-೧೯ ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು. ಇಲ್ಲಿನ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್-೧೯ ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿರುತ್ತದೆ. ಸದ್ಯಕ್ಕೆ …
Read More »ಹುಬ್ಬಳ್ಳಿಯ ಒಂದೇ ಕುಟುಂಬದ 7 ಮಂದಿಗೆ ಕೊರೊನಾ ಸೋಂಕು
ಹುಬ್ಬಳ್ಳಿ: ದೆಹಲಿಗೆ ವ್ಯಾಪಾರಕ್ಕಾಗಿ ಹೋಗಿ ಬಂದಿದ್ದ ಹುಬ್ಬಳ್ಳಿಯ ಮುಲ್ಲಾ ಓಣಿಯ ನಿವಾಸಿ ರೋಗಿ ನಂಬರ್-194ರ ಸಂಪರ್ಕದಿಂದ ಇದೀಗ ಹುಬ್ಬಳ್ಳಿಯಲ್ಲಿ ಮತ್ತೆ ಎರಡು ಕೊರೊನಾ ಪಾಸಿಟಿವ್ ಬಂದಿದೆ. ಈ ಮೂಲಕ ಒಬ್ಬನಿಂದ ಒಂದೇ ಕುಟುಂಬದ ಏಳು ಜನರಿಗೆ ಸೋಂಕು ತಗುಲಿದೆ. ತಮ್ಮನಿಂದಾಗಿ ಸಹೋದರ, ಸಹೋದರಿಯರ ಮಕ್ಕಳಿಗೂ ಸೋಂಕು ತಗುಲಿದೆ. ಕೊರೊನಾ ವೈರಸ್ ಮುಲ್ಲಾ ಓಣಿಯ ಕುಟುಂಬಕ್ಕೆ ಸಂಕಷ್ಟವನ್ನು ತಂದೊಡ್ಡಿದ್ದು, ಈಗ ಒಂದೇ ಕುಟುಂಬದಲ್ಲಿಯೇ 7 ಜನರಿಗೆ ಸೋಂಕು ತಗುಲುವ ಮೂಲಕ ಕೊರೊನಾ …
Read More »ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.
ಬೆಂಗಳೂರು – ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿದೆ. ಬೆಂಗಳೂರಿನಲ್ಲಿ ಹೊಸದಾಗಿ 9 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 16 ಜನರಿಗೆ ಸೋಂಕು ಪತ್ತೆಯಾಗಿದೆ. ನಿನ್ನೆ 427 ಜನರಿಗೆ ಸೋಂಕು ತಗುಲಿತ್ತು. ಬೆಂಗಳೂರಿನಲ್ಲಿ ಬಿಹಾರ ಮೂಲದ ಕಾರ್ಮಿಕನಿಂದ 9 ಜನರಿಗೆ ಸೋಂಕು ತಗುಲಿದೆ. ವಿಜಯಪುರ, ಮಂಡ್ಯ ಹಾಗೂ ಧಾರವಾಡದ ತಲಾ ಇಬ್ಬರಿಗೆ ಹಾಗೂ ದಕ್ಷಿಣಕನ್ನಡದ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ …
Read More »ಇಂದು ಉದ್ಘಾಟನೆಯಾಗಲಿದೆ ವಾರ್ ರೂಂ
Enಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಲ್ಲಿ ಆರಂಭಿಸಲಾಗಿರುವ ಕೋವಿಡ್ -19 (ಕೊರೋನಾ) ವಾರ್ ರೂಂ ಇಂದು ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಧ್ಯಾಹ್ನ 12.30ಕ್ಕೆ ವಾರ್ ರೂಂ ಉದ್ಘಾಟಿಸುವರು. ಕೊರೋನಾಕ್ಕೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳು, ವಿವರಗಳು ಈ ವಾರ್ ರೂಂ ನಲ್ಲಿ ಲಭ್ಯವಾಗಲಿದೆ. ಇಡೀ ನಗರದ ಪರಿಸ್ಥಿತಿಯ ಮೇಲೆ ಇಲ್ಲಿಂದ ನಿಗಾ ಇಡಲಾಗುತ್ತದೆ. ಇದಕ್ಕಾಗಿ …
Read More »ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಸೈಕಲ್ ಮೇಲೆ ಹೊರಟ ಕಾರ್ಮಿಕರು
ವಿಜಯಪುರ: ಲಾಕ್‍ಡೌನ್ ನಿಂದಾಗಿ ಉತ್ತರ ಪ್ರದೇಶ ಮೂಲದ ಕಾರ್ಮಿಕರು ಸೈಕಲ್ ಗಳ ಮೇಲೆಯೇ ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ 41 ಕಾರ್ಮಿಕರು ನಾಲ್ಕು ದಿನಗಳ ಹಿಂದೆಯೇ ಪ್ರಯಾಣ ಬೆಳೆಸಿದ್ದಾರೆ. ಬುಧವಾರ ರಾತ್ರಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ತಲುಪಿದ್ದಾರೆ. ನಾಲ್ಕು ದಿನಗಳಿಂದ ಸೈಕಲ್ ಮೇಲೆ ಬಂದಿದ್ದರಿಂದ ಹೆದ್ದಾರಿಯ ಪಕ್ಕದಲ್ಲಿಯೇ ವಿಶ್ರಾಂತಿ ಪಡೆದುಕೊಂಡಿದ್ದರು. ಕಾರ್ಮಿಕರನ್ನು ಗಮನಿಸಿದ ಸ್ಥಳೀಯರು ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಲಾಕ್‍ಡೌನ್ ಆದಾಗಿನಿಂದ ಮಾಡಲು ಕೆಲಸವಿಲ್ಲ. …
Read More »ಓರ್ವ ಕೊರೊನಾ ಸೋಂಕಿತನ ಚಿಕಿತ್ಸೆಗೆ ಎಷ್ಟು ಖರ್ಚು ಆಗುತ್ತೆ? ….
ತಿರುವನಂತಪುರಂ: ಕೊರೊನಾ ರೋಗಿಗಳ ಚಿಕಿತ್ಸೆಗೆ ಎಷ್ಟು ರೂ. ಖರ್ಚಾಗಬಹುದು? ಈ ಪ್ರಶ್ನೆ ಹಲವು ಮಂದಿಗೆ ಕಾಡಿರಬಹುದು. ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು ಕೇರಳದಲ್ಲಿ ಪ್ರತಿನಿತ್ಯ ಒಬ್ಬ ಸೋಂಕಿತನಿಗೆ ಅಂದಾಜು 25 ಸಾವಿರ ರೂ. ಖರ್ಚಾಗುತ್ತದೆ. ಕೊರೊನಾ ಚಿಕಿತ್ಸೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿದ್ದರೂ ಕೆಲ ಗುಣಮಟ್ಟದ ಖಾಸಗಿ ಆಸ್ಪತೆಯಲ್ಲೂ ಚಿಕಿತ್ಸೆ ನೀಡಲಾಗುತ್ತದೆ. ಸಾಧಾರಣವಾಗಿ ಕೋವಿಡ್-19 ರೋಗಿಗೆ ಪ್ರತಿನಿತ್ಯ 20 ಸಾವಿರದಿಂದ-25 ಸಾವಿರ ರೂ. ಖರ್ಚಾಗುತ್ತದೆ ಎಂದು ತಿರುವನಂತಪುರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಯ …
Read More »ಮೂವತ್ತನೇ ದಿನದತ್ತ ಲಾಕ್‍ಡೌನ್-30 ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ?
ಬೆಂಗಳೂರು: ಲಾಕ್‍ಡೌನ್ ಆಗಿ ಇಂದಿಗೆ ಒಂದು ತಿಂಗಳಾಗಿದೆ. ಕಳೆದ ಮೂವತ್ತು ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ ಆಗುತ್ತಲೇ ಇದೆ. ಸದ್ಯ ಇಪ್ಪತ್ತು ಸಾವಿರ ಗಡಿ ದಾಟಿರುವ ಮಹಾಮಾರಿ ಲಾಕ್‍ಡೌನ್ ಮಾಡಿದಿದ್ದರೇ ದೊಡ್ಡ ಅನಾಹುತವನ್ನೇ ಸೃಷ್ಟಿಸುತ್ತಿತ್ತು. ಈ ನಡುವೆ ಕೊರೊನಾ ನಿರ್ವಹಣೆಯಲ್ಲಿ ಭಾರತ ಬೆಸ್ಟ್ ಎನಿಸಿಕೊಂಡ್ರೆ ಪ್ರಧಾನಿ ಮೋದಿ ನಂಬರ್ ಸ್ಥಾನದಲ್ಲಿ ಕೂತಿದ್ದಾರೆ. ಲಾಕ್‍ಡೌನ್ ಮೂವತ್ತು ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಮಾರ್ಚ್ 24 ರಾತ್ರಿ …
Read More »