ಶಿವಮೊಗ್ಗ: ದೇಶವೇ ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದು, ಅದೆಷ್ಟೋ ದುಡಿಯುವ ಮಂದಿ ಕೈಕಟ್ಟಿ ಮನೆಯಲ್ಲೇ ಕುಳಿತುಕೊಳ್ಳುವಂತಹ ಸ್ಥಿತಿ ಎದುರಾಗಿದೆ. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮಾತ್ರ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿ ನಡೆಸಿದ್ದಾರೆ. ಕೊರೊನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ, ದೂರ ದೂರ ನಿಂತು ಕೆಲಸ ಮಾಡುವಂತೆ ಸೂಚನೆ ಕೂಡ ನೀಡಿದ್ದು, ಜಿಲ್ಲೆಯ …
Read More »ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ- ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್”….
ಚಿಕ್ಕಮಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣ ಹಸಿ ಇರುವಾಗಲೇ ಕಾಫಿನಾಡಲ್ಲೂ ಅಂತಹದ್ದೊಂದು ಪ್ರಕರಣ ನಡೆದಿದೆ. ರಸ್ತೆ ಬದಿಯಲ್ಲಿ ಕಸದ ಆಟೋ ನಿಲ್ಲಿಸಿದ್ದರು ಎಂಬ ಕಾರಣಕ್ಕೆ ಏಕಾಏಕಿ ಮಹಿಳೆ ಹಾಗೂ ಪುರುಷ ಪೌರಕಾರ್ಮಿಕರ ಮೇಲೆ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಉಪ್ಪಳ್ಳಿಯ ಮಸೀದಿ ಸಮೀಪದ ತಮೀಮ್ ಬಂಧಿತ. ಆಟೋದಲ್ಲಿದ್ದ ಮಂಜುನಾಥ್, ಯೇಸು ಹಾಗೂ ಮಹಿಳಾ ಕಾರ್ಮಿಕರ ಮೇಲೂ ತಮೀಮ್ ಹಲ್ಲೆಗೈದಿದ್ದು, ಯೇಸು ಅವರ ಶರ್ಟ್ ಹರಿದು …
Read More »ಕೋವಿಡ್-19 ಪರಿಹಾರ ನಿಧಿಗೆ ಧಾರವಾಡ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ.
ಧಾರವಾಡ: ಕೋವಿಡ್-19 ಪರಿಹಾರ ನಿಧಿಗೆ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸವರಾಜ ನೀಲಪ್ಪ ಗಾಣಿಗೇರ ಅವರು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಿದ್ದಾರೆ. ಬಸವರಾಜ ಅವರು ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ನಿವಾಸಿಯಾಗಿದ್ದು, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಒಂದನೇ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಚೆಕ್ ಸ್ವೀಕರಿಸಿದ …
Read More »ಅಮೆರಿಕದಲ್ಲಿ ಮೈಸೂರಿನ ವೈದ್ಯೆಗೆ ವಿಶೇಷ ಗೌರವ……….
ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸೇವೆ ಸಲ್ಲಿಸಿ ಮನೆಗೆ ಮರಳಿದ ಮೈಸೂರು ಮೂಲದ ವೈದ್ಯೆ ಉಮಾ ಮಧುಸೂದನ್ ಅವರಿಗೆ ವಿಶೇಷ ಗೌರವ ಸಿಕ್ಕಿದೆ. ಓಕ್‍ಲ್ಯಾಂಡ್‍ನ ಸೌತ್ ವಿಂಡ್ಸರ್ ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತ ಡಾ.ಉಮಾ ಮಧುಸೂದನ್ ಅವರಿಗೆ ಡ್ರೈವ್ ಆಫ್ ಹಾನರ್ ಮೂಲಕ ಗೌರವ ಸಲ್ಲಿಸಿದೆ. ವೈದ್ಯ ಉಮಾ ಅವರ ಮನೆ ಎದುರು ನೂರಾರು ವಾಹನಗಳಲ್ಲಿ ಬಂದ ಜನ, ಅಂಬುಲೆನ್ಸ್ ಸಿಬ್ಬಂದಿ, ಅಗ್ನಿಶಾಮಕ ಪಡೆ, ಅಧಿಕಾರಿಗಳು ನಿಮ್ಮ ಸೇವೆ ಅನನ್ಯ …
Read More »ಶಿವಮೊಗ್ಗ/ಬೆಳಗಾವಿ:ಬಿರುಗಾಳಿ ಸಹಿತ ಭಾರೀ ಮಳೆ – ಶಿವಮೊಗ್ಗದಲ್ಲಿ ಅವಾಂತರ ಸೃಷ್ಟಿ
ಶಿವಮೊಗ್ಗ/ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇತ್ತ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಶಿವಮೊಗ್ಗದಲ್ಲಿ ಇಂದು ಸಂಜೆ ಅರ್ಧ ಗಂಟೆಗಳ ಕಾಲ ಭರ್ಜರಿ ಮಳೆಯಾಗಿದ್ದು, ಮಳೆಗೆ ಹಲವು ಅವಾಂತರ ಸಹ ಸೃಷ್ಟಿಯಾಗಿದೆ. ನಗರದ ಹಲವೆಡೆ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಮರಗಳು ಉರುಳಿ ಬಿದ್ದಿದ್ರೆ, ಕೆಲವು ಮನೆ ಮೇಲೂ ಮರಗಳು ಉರುಳಿ ಬಿದ್ದಿದೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ …
Read More »ಮಸೀದಿಯಲ್ಲಿ ಅಗಡಿಕೊಂಡಿದ್ದ ಪ್ರೊಫೆಸರ್ ಸೇರಿದಂತೆ 30 ಮಂದಿ ತಬ್ಲಿಘಿಗಳು ಅರೆಸ್ಟ್….
ಲಕ್ನೋ: ದೆಹಲಿಯಲ್ಲಿ ಕಳೆದ ತಿಂಗಳು ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿ ಮಸೀದಿಯಲ್ಲಿ ಬಚ್ಚಿಟ್ಟುಕೊಂಡಿದ್ದ ಅಲಹಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್, 16 ವಿದೇಶಿಯರನ್ನು ಸೇರಿದಂತೆ ಒಟ್ಟು 30 ಮಂದಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರೊಫೆಸರ್ ಮೊಹಮ್ಮದ್ ಶಾಹಿದ್, ಲಾಕ್‍ಡೌನ್ ಘೋಷಿಸಿದ ನಂತರವೂ ಪ್ರಯಾಗರಾಜ್‍ನ ಮಸೀದಿಯಲ್ಲಿ ತಮ್ಮ `ಅಕ್ರಮ’ ವಾಸ್ತವ್ಯವನ್ನು ಏರ್ಪಡಿಸಿದ್ದರು. ಈ ಮೂಲಕ ವಿದೇಶಿಗರಿಗೆ ಉದ್ದೇಶಪೂರ್ವಕವಾಗಿ ಸಹಾಯ ಮಾಡಿದ್ದರು. ಹೀಗಾಗಿ ಅವರನ್ನು ಪ್ರಯಾಗರಾಜ್ ಪೊಲೀಸರು …
Read More »ಪಬ್ಲಿಕ್ ಟಿವಿ ವರದಿಗಾರ ಹನುಮಂತು ನಿಧನಕ್ಕೆ ಸಿಎಂ ಸಂತಾಪ
ಬೆಂಗಳೂರು: ರಸ್ತೆ ಅಪಘಾತದಲ್ಲಿ ಇಂದು ಮೃತಪಟ್ಟ ಪಬ್ಲಿಕ್ ಟಿವಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಭಗವಂತನು ಹನುಮಂತು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಅಕಾಲಿಕ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿ, ಪಬ್ಲಿಕ್ ಟಿವಿಯ ರಾಮನಗರ …
Read More »ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವ ಕೊರೋನಾವಾರಿಯರ್ಸ್ ಗೆ ಪತ್ರ ಬರೆದು ಸನ್ಮಾನಿಸಿದ ಸತೀಶ ಜಾರಕಿಹೊಳಿ
ಬೆಳಗಾವಿ – ಶಾಸಕ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಯಮಕನಮರಡಿ ಕ್ಷೇತ್ರದಲ್ಲಿ ಕೊರೋನಾ ವಿರುದ್ದ ಹೋರಾಟದಲ್ಲಿ ಪ್ರಾಣದ ಹಂಗು ತೊರೆದು ಜನರ ರಕ್ಷಣೆಯಲ್ಲಿ ನಿರತರಾಗಿರುವ ಆರೋಗ್ಯ ಸಿಬ್ಬಂದಿ, ಪಂಚಾಯಿತಿ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರಿಗೆ, ಸ್ವಚ್ಚತಾ ಕಾರ್ಮಿಕರಿಗೆ ಮತ್ತು ಜನಪ್ರತಿನಿಧಿಗಳಿಗೆ ಖುದ್ದು ಶಾಸಕರು ಪತ್ರ ಬರೆದು ಅಭಿನಂದನೆಗಳನ್ನು ತಿಳಿಸಿದ್ದಾರೆ. ಜನರ ರಕ್ಷಣೆಗಾಗಿ ಕುಟುಂಬವನ್ನು ಬಿಟ್ಟು ನಿರತರಾಗಿರುವ ನಿಮ್ಮ ಅಮೂಲ್ಯವಾದ ಸೇವೆ ಮತ್ತು ಸಹನೆಗೆ ಬೆಲೆ ಕಟ್ಟಲಾಗದು ನಿಮ್ಮ ಶ್ರಮ ಶ್ಲಾಘನೀಯ. …
Read More »ಬೆಳಗಾವಿ –ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ…….
ಬೆಳಗಾವಿ – ಈವರೆಗೆ ಕ್ಯಾಂಪ್ ಪ್ರದೇಶ, ಪೀರನವಾಡಿ ಮತ್ತು ಯಳ್ಳೂರು ಕಂಟೈನ್ಮೆಂಟ್ ಝೋನ್ ಆಗಿದ್ದರೂ ಬೆಳಗಾವಿ ನಗರಕ್ಕೆ ಅದರ ಪರಿಣಾಮ ಅಷ್ಟಾಗಿರಲಿಲ್ಲ. ಇಂದು ಬಂದಿರುವ ವರದಿ ಪ್ರಕಾರ ಆಝಾದ್ ನಗರದ ಯುವತಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ. ಪೂರ್ವಕ್ಕೆ ಹಳೆ ಪಿಬಿ ರಸ್ತೆ, ಪಶ್ಚಿಮಕ್ಕೆ ಬಾತಖಾಂಡೆ ಗಲ್ಲಿ, ಉತ್ತರಕ್ಕೆ ಖಡೇಬಜಾರ್, ದಕ್ಷಿಣಕ್ಕೆ ರವಿವಾರ ಪೇಟೆ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಒಳಗೊಂಡ ಪ್ರದೇಶ ಇಂದು …
Read More »ಫೇಸ್‍ಬುಕ್ ಮೂಲಕ ಮದ್ಯ ಮಾರಾಟ: ಜಾಹೀರಾತಿಗೆ ಮರುಳಾದ್ರೆ ಪಂಗನಾಮ ಫಿಕ್ಸ್
ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿರುವುದು ಎಣ್ಣೆ ಪ್ರಿಯರನ್ನ ಚಡಪಡಿಸುವಂತೆ ಮಾಡಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಆನ್‍ಲೈನ್ ವಂಚನೆಗೆ ಮುಂದಾಗಿದ್ದಾರೆ. ಎಲ್ಲಿ ಹೇಳಿದ್ರೂ ಮದ್ಯವನ್ನು ಹೋಂ ಡೆಲಿವರಿ ಮಾಡುತ್ತೇವೆ ಅಂತ ಜಾಹೀರಾತು ಹಾಕಿಕೊಂಡಿದ್ದಾರೆ. ಇದನ್ನು ನಂಬಿ ಅವರ ಖಾತೆಗೆ ಹಣ ಹಾಕಿದ್ರೆ ಪಂಗನಾಮ ಗ್ಯಾರಂಟಿ. ರಾಯಚೂರಿನ ಅಮೃತ ವೈನ್‍ಶಾಪ್‍ನಿಂದ ಎಲ್ಲಾ ಬ್ರಾಂಡ್‍ನ ಮದ್ಯ ಹೋಂ ಡೆಲಿವರಿ ಇದೆ. ನಗರದ ಕೆ.ಇ.ಬಿ ಕಾಲೋನಿ, ನಿಜಲಿಂಗಪ್ಪ ಕಾಲೋನಿ …
Read More »