Breaking News

ಶಿವಪೂರ ಹ ಗ್ರಾಮದ ಒಂದು ಕುಟುಂಬದ ವ್ಯಕ್ತಿಗೆ ಕೊರೊನಾ ಸೋಂಕು ಬಂದಿದೆ ಎಂಬ ಸುಳ್ಳು ಸುದ್ದಿ

ಮೂಡಲಗಿ ನಗರ ಸಮೀಪದ ಶಿವಪೂರ ಹ ಗ್ರಾಮದ ಒಂದು ಕುಟುಂಬದ ವ್ಯಕ್ತಿಗೆ ಕೊರೊನಾ ಸೋಂಕು ಬಂದಿದೆ ಎಂಬ ಸುಳ್ಳು ಸುದ್ದಿ ಹರಡಿದ ನಿಮಿತ್ಯ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು ಗ್ರಾಮದ ಹಿರಿಯರು ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಗ್ರಾಮಸ್ಥರಿಗೆ ಧೈರ್ಯ ತುಂಬುವುದರ ಮುಖಾಂತರ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಹಿರಿಯರನ್ನು ಹಾಗೂ ಮಕ್ಕಳನ್ನು ಹೊರ ಬರದಂತೆ ನೋಡಿಕೊಳ್ಳಬೇಕು. ಹಾಗೂ ಗ್ರಾಮದಲ್ಲಿ ಅನಾವಶ್ಯಕವಾಗಿ ಯಾರು ಹೊರಗಡೆ ತಿರುಗಾಡುವುದು ನಮ್ಮೆಲ್ಲರಿಗೂ ಕಂಟಕವಾಗುತ್ತೆ ಗ್ರಾಮ ಮತ್ತು …

Read More »

ಪ್ರತಿ ಮನೆಗೆ ತೆರಳಿ ಕೊರೊನಾ ಪರೀಕ್ಷೆ ನಡೆಸಿ: ಬಿ.ಸಿ.ಪಾಟೀಲ್

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಥರ್ಮಲ್ ಸ್ಕ್ಯಾನರ್ ನೀಡಿ – 263 ಜನರ ಸ್ಯಾಂಪಲ್ ಪರೀಕ್ಷೆ, ಎಲ್ಲವೂ ನೆಗೆಟಿವ್ – ಜಿಲ್ಲೆಯಲ್ಲಿ ಈ ವರೆಗೆ ಯಾವುದೇ ಕೊರೊನಾ ಪ್ರಕರಣವಿಲ್ಲ ಕೊಪ್ಪಳ: ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೆ ತೆರಳಿ ಥರ್ಮಲ್ ಸ್ಕ್ಯಾನರ್ ಬಳಸಿ ಪ್ರತಿಯೊಬ್ಬರ ಆರೋಗ್ಯ ಪರೀಕ್ಷಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ …

Read More »

BIG-BREAKINGಸಾರ್ವಜನಿಕರ ಆಕ್ರೋಶಕ್ಕೆ ತಲೆಬಾಗಿದ ಸರ್ಕಾರ,ಬೈಕ್ ಸಂಚಾರ ಆದೇಶ ವಾಪಸ್,

ಬೆಂಗಳೂರು: ಏಪ್ರಿಲ್ 20ರ ನಂತರ ಬೈಕ್ ಸಂಚಾರಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ವಾಪಸ್ ತೆಗೆದುಕೊಂಡಿದೆ. ಸಾರ್ವಜನಿಕರ ಆಕ್ರೋಶಕ್ಕೆ ಸರ್ಕಾರ ಕೊನೆಗೂ ತಲೆಬಾಗಿದೆ. ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ವಿಮರ್ಶಿಸಿಕೊಂಡಿದೆ. ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ಸರ್ಕಾರ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. 1. ದ್ವಿ-ಚಕ್ರ ವಾಹನಗಳ (Two-Wheeler) ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ …

Read More »

ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ 8 ಅಡಿ ಆಳದಿಂದ ಚಿಮ್ಮಿದ ಜಲಧಾರೆ- ಪವಾಡ ಎಂದ ಭಕ್ತರು

ಮಂಗಳೂರು: ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ಆವರಣದಲ್ಲಿ ಕೇವಲ 8 ಅಡಿಯಲ್ಲಿ ನೀರು ಸಿಕ್ಕಿ ಅಚ್ಚರಿ ಘಟನೆ ನಡೆದಿದೆ. ಪುತ್ತೂರು ಮಹಾಲಿಂಗೇಶ್ವರನ ಜಾತ್ರೆ ಅಂದ್ರೆ ಜಿಲ್ಲೆಯ ದೊಡ್ಡ ಜಾತ್ರೆ. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದ ಭಕ್ತರಿಗೆ ಪ್ರವೇಶ ಇಲ್ಲದೆ ಶಾಸ್ತ್ರೋಕ್ತವಾಗಿ ಜಾತ್ರೆ ನಡೆಯುತ್ತಿದೆ. ಜಾತ್ರಾ ಸಂದರ್ಭದ ದೇಗುಲದ ಆವರಣದ ಅಯ್ಯಪ್ಪಸ್ವಾಮಿ ಗುಡಿ ಬಳಿ, ದೇವರ ಅವಭೃತ …

Read More »

ಗ್ರೀನ್ ಝೋನ್‍ನಲ್ಲಿದ್ದರೂ ರಾಯಚೂರಿನ ಬಡಾವಣೆಗಳೆಲ್ಲ ಸೀಲ್‍ಡೌನ್

ರಾಯಚೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆ ರಾಯಚೂರು ಜಿಲ್ಲೆಯಾದ್ಯಂತ ಲಾಕ್‍ಡೌನ್ ಬಿಗಿಗೊಳಿಸಲಾಗಿದೆ. ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗದಂತೆ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಒಟ್ಟು 4000 ಕಡೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ಮೂಲಕ ಅನಾವಶ್ಯಕವಾಗಿ ಜನ ಒಂದೆಡೆಯಿಂದ ಇನ್ನೊಂದೆಡೆಗೆ ತಿರುಗಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಿಗೆ ಮತ್ತು ಸರ್ಕಾರಿ ಕೆಲಸಕ್ಕೆ ಹೋಗುವವರು ಪಾಸ್ ತೋರಿಸಿದಲ್ಲಿ ಮಾತ್ರ ಬಿಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು …

Read More »

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಸಾವು

ಚಿಕ್ಕಮಗಳೂರು: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗ್ರಾಮದಲ್ಲಿ ಶನಿವಾರ ನಡೆದಿದೆ. ತಮಿಳುನಾಡು ಮೂಲದ ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ತೋಟದ ಕಾರ್ಮಿಕರು. ಮಾದಮ್ಮ ಹಾಗೂ ಜ್ಯೋತಿ ತಾಯಿ ಮಗಳಾಗಿದ್ದು, ಮಾರಿ ಸಂಬಂಧಿ ಎಂದು ತಿಳಿದು ಬಂದಿದೆ. ತಮಿಳುನಾಡಿನ ಸೇಲಂ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ 14 ಕಾರ್ಮಿಕರು ಕಳೆದ ಕೆಲ ತಿಂಗಳ …

Read More »

ಹುಬ್ಬಳ್ಳಿ ಮಂದಿಗೆ ಶುರುವಾಯ್ತು ಹೊಸ ಆತಂಕ..!

ಹುಬ್ಬಳ್ಳಿ : ಹುಬ್ಬಳ್ಳಿಯ ಮಂದಿಗೆ ಇಂದು ಆತಂಕ ಮತ್ತಷ್ಟು ಜಾಸ್ತಿಯಾಗಿದೆ. ಕಾರಣ ಹುಬ್ಬಳ್ಳಿಯ ವಿವಿಧ ಕಡೆ ರೋಗಿ ನಂಬರ್ 236 ಆಹಾರ ಧಾನ್ಯ ಕಿಟ್ ಹಂಚಿದ್ದ…! ಆತನಿಂದ ಸ್ಮಶಾನ ಕಾವಲುಗಾರನಾಗಿರೊನಿಗೋ ಸೋಂಕು ತಗುಲಿ ಇದೀಗ ರೋಗಿ ನಂಬರ್ 363. ಎಂದು ಗುರುತಿಸಲಾಗಿದೆ. ಆತನೊಂದಿಗೆ ಆಹಾರ ಧಾನ್ಯ ಹಂಚಿದ ಹಿನ್ನಲೆ ಇತನಿಗೂ ಕೊರೊನಾ ವಕ್ಕರಿಸಿದೆ. ಮಾಚ್9 27 ರಂದು ಹುಬ್ಬಳ್ಳಿಯ ಡಾಕಪ್ಪ ವೃತ್ತದಿಂದ ಕಾಳಮ್ಮನ ಅಗಸಿಯವರೆಗೆ ಆಹಾರ ದಾನ್ಯ ಹಂಚಿದ್ರು ಪುಣ್ಯಾತ್ಮರು…! …

Read More »

ಕಾರವಾರ:ಕೊರೊನಾ ಸೋಂಕಿನಿಂದ ಗುಣಮುಖ ಜಿಲ್ಲಾಡಳಿತ, ವೈದ್ಯರು ಹಾಗೂ ಪೊಲೀಸರಿಗೆ ಧನ್ಯವಾದ

ಕಾರವಾರ: ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖಗೊಂಡು ಮತ್ತೆ ಹೊಸ ಜೀವನ ಪಡೆದುಕೊಂಡ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಇಬ್ಬರು ನಿವಾಸಿಗಳು ತಮ್ಮ ಸಂತೋಷ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆಯೇ ಕಾರವಾರದ ನೌಕಾನೆಲೆಯಲ್ಲಿರುವ ಪತಂಜಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸೋಂಕಿತ ರೋಗಿ ಸಂಖ್ಯೆ 36 ಹಾಗೂ ಇಂದು ಡಿಸ್ಚಾರ್ಜ್ ಆಗಿರುವ ಸೋಂಕಿತ ರೋಗಿ ಸಂಖ್ಯೆ 98 ಮತ್ತೆ ಆರೋಗ್ಯವಂತರಾಗಿ ಮರಳಿರುವುದಕ್ಕೆ ದೇವರು, ಜಿಲ್ಲಾಡಳಿತ, ವೈದ್ಯರು ಹಾಗೂ ಪೊಲೀಸರಿಗೆ ಧನ್ಯವಾದ ಅರ್ಪಿಸಿದ್ದಾರೆ. ದೇವರ ದಯೆಯಿಂದ …

Read More »

ಈ ವೇಳೆ ವಿಪಕ್ಷ ಹೇಗಿರಬೇಕೆಂದು ರಾಹುಲ್ ಗಾಂಧಿ ತೋರಿಸಿದ್ದಾರೆ: ಶಿವಸೇನೆ

ಮುಂಬೈ: ದೇಶ ಸಂಕಷ್ಟಕ್ಕೆ ಸಿಲುಕಿರುವ ಈ ಸಮಯದಲ್ಲಿ ವಿರೋಧ ಪಕ್ಷ ಹೇಗೆ ವರ್ತಿಸಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಸಿಕೊಟ್ಟಿದ್ದಾರೆ ಎಂದು ರಾಹುಲ್ ನಡೆಯನ್ನು ಶಿವಸೇನೆ ಮೆಚ್ಚಿಕೊಂಡಿದೆ. ಈ ವಿಚಾರವಾಗಿ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ದೇಶದ ಹಿತಾಸಕ್ತಿಗಾಗಿ ರಾಹುಲ್ ಗಾಂಧಿ ಅವರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು, ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಕುಳಿತು ಚರ್ಚಿಸಬೇಕು. ರಾಹುಲ್ ಗಾಂಧಿ ಮತ್ತು ಮೋದಿ ಅವರ ರಾಜಕೀಯ ಹಿತಾಸಕ್ತಿಗಳು ಬೇರೆ ಇರಬಹುದು. …

Read More »

ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿ ವಶ…..

ಚಿಕ್ಕೋಡಿ (ಬೆಳಗಾವಿ): ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿಯನ್ನು ಹುಕ್ಕೇರಿ ತಾಲೂಕಿನ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊರೊನಾ ವೈರಸ್ ಹರಡದಂತೆ ತಡೆದಲು ಕೇಂದ್ರ ಸರ್ಕಾರವು ದೇಶಾದ್ಯಂತ ಮೇ 3ರವರೆಗೂ ಲಾಕ್‍ಡೌನ್ ಘೋಷಿಸಿದೆ. ಇದರಿಂದಾಗಿ ಮದ್ಯ ಮಾರಾಟ ಬಂದ್ ಆಗಿದ್ದು, ಎಣ್ಣೆ ಪ್ರಿಯರು ಪರದಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಕಳ್ಳಭಟ್ಟಿ ದಂಧೆಕೋರರು ಮತ್ತೆ ಹೆಡೆ ಬಿಚ್ಚುತ್ತಿದ್ದು, ದಿನದಿಂದ ದಿನಕ್ಕೆ ಕಳ್ಳಭಟ್ಟಿ ತಯಾರಿಕೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ಹುಕ್ಕೇರಿ ತಾಲೂಕಿನ ಅಬಕಾರಿ …

Read More »