Breaking News

ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್

ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕುರಿತು ರಾಜಕೀಯ ವಲಯದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇವು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, …

Read More »

ಮೈಸೂರಿನಲ್ಲಿ ವ್ಯಾಪಾರ ವಹಿವಾಟಿಗೆ ಮುಕ್ತ ಅವಕಾಶ- ಷರತ್ತುಗಳು ಅನ್ವಯ………..

ಮೈಸೂರು: ನಗರದಲ್ಲಿ (ಗುರುವಾರ) ಎಲ್ಲ ರೀತಿಯ ವ್ಯಾಪಾರ ವಹಿವಾಟಿಗೆ ಮುಕ್ತ ಅವಕಾಶ ನೀಡಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆಯಿಂದ ಆದೇಶ ಹೊರಡಿಸಿದೆ. 14 ದಿನದಿಂದ ಕೊರೊನಾ ಪ್ರಕರಣಗಳು ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕೊರೊನಾ ಭೀತಿ ಕಡಿಮೆಯಾದ ಹಿನ್ನೆಲೆಯಲ್ಲಿ ಪಾಲಿಕೆ ಗುರುತಿಸಿದ್ದ 91 ರಸ್ತೆಗಳ ಮೇಲಿನ ನಿರ್ಬಂಧ ತೆರವು ಮಾಡಲಾಗಿದೆ. ನಗರದ 91 ರಸ್ತೆಗಳಲ್ಲಿ ಅಗತ್ಯ ವಸ್ತುಗಳ ಮಾರಾಟ ಮಾತ್ರ ಅವಕಾಶ ನೀಡಲಾಗಿತ್ತು. ಗುರುವಾರದಿಂದ ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದ್ದು, ವ್ಯಾಪಾರಕ್ಕೆ ಮುಕ್ತ ಅವಕಾಶ …

Read More »

ಸುಂಟಿಕೊಪ್ಪ ಸುಲಿಗೆ ಪ್ರಕರಣದಲ್ಲಿ 3 ಆರೋಪಿಗಳು ಅಂದರ್- 5.2 ಲಕ್ಷ ಹಣ, ಕಾರು, ಬೈಕ್ ವಶ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಹರದೂರು ಗ್ರಾಮದ ಗುಂಡುಕುಟ್ಟಿ ಎಸ್ಟೇಟ್ ಸಮೀಪ ನಡೆಸಿದ್ದ ಸುಲಿಗೆ ಪ್ರಕರಣ ಮೂವರು ಆರೋಪಗಳನ್ನು ಬಂಧಿಸಿವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ತಿಳಿಸಿದರು. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಣಗಾಲ್ ನಿವಾಸಿ ಟಿ.ವಿ.ಹರೀಶ್ (57), ಸುಂಟಿಕೊಪ್ಪದ ವಿಜಯನಗರ ನಿವಾಸಿ ಕುಮರೇಶ್ (42) ಹಾಗೆಯೇ ಸುಲಿಗೆಯ ಮಾಸ್ಟರ್ ಮೈಂಡ್ ಇದಕ್ಕೂ ಮೊದಲು ಎಸ್ಟೇಟ್‍ನಲ್ಲಿ ರೈಟರ್ ಕೆಲಸ ಮಾಡಿಕೊಂಡಿದ್ದ …

Read More »

ರಕ್ತದಾನ ಮಾಡಿ ಮಾದರಿಯಾದ ಪಿಎಸ್‍ಐ…………

ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿರುವ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮಾಡಿದ ಹಿನ್ನೆಲೆಯಲ್ಲಿ ರಕ್ತದ ಅವಶ್ಯಕತೆ ಇತ್ತು. ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ಗುಡಗೇರಿ ಪೊಲೀಸ್ ಠಾಣೆಯ ಪಿಎಸ್‍ಐ ನವೀನ ಜಕ್ಕಲಿಯವರು ಆಸ್ಪತ್ರೆಗೆ ಭೇಟಿ ನೀಡಿ ರಕ್ತದಾನ ಮಾಡುವ ಮೂಲಕ ರೋಗಿಯೊಬ್ಬರಿಗೆ ಜೀವದಾನ ಮಾಡಿದ್ದಾರೆ. ವಿಲಿಯಂ ವರ್ಗೀಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಲಾಕ್‍ಡೌನ್ ಸಂದರ್ಭದಲ್ಲಿ …

Read More »

ಅಣ್ಣನ ಜೊತೆ ಮೀನು ಹಿಡಿಯಲು ತೆರೆಳಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಹಾವೇರಿ: ಹತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ಜಿಲ್ಲೆಯ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಬಂಧನಕ್ಕೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಒತ್ತಾಯಿಸುತ್ತಿದ್ದು, ಹಾನಗಲ್ ಪೊಲೀಸ್ ಠಾಣೆಯ ಬಳಿ ಗ್ರಾಮಸ್ಥರು ಪೊಲೀಸರನ್ನು ಆಗ್ರಹಿಸಿದ್ದಾರೆ. ಮೇ 6ರಂದು ಅಣ್ಣನ ಜೊತೆ ಮೀನು ಹಿಡಿಯಲು ತೆರೆಳಿದ್ದ ವೇಳೆ ಕಾಮುಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ನಂತರ ಆರೋಪಿ ತಲೆ ಮರೆಸಿಕೊಂಡಿದ್ದು, ಬಾಲಕಿಯ …

Read More »

ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶ……….

ಬೆಂಗಳೂರು: ವಿಭಿನ್ನ ಶೈಲಿಯ ಹೇರ್ ಸ್ಟೈಲ್ ಹಾಗೂ ಮ್ಯಾನರಿಸಂ ನಿಂದಲೇ ಗುರುತಿಸಿಕೊಂಡಿದ್ದ ಕನ್ನಡದ ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶರಾಗಿದ್ದಾರೆ. ಇಂದು ಸಂಜೆ 6.30ರ ಸಮಯದಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮೈಕಲ್ ಮಧು ವಿಧಿವಶರಾಗಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಮಂಡ್ಯದಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಮೈಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಲಿಗೆ ತೀವ್ರ ಪೆಟ್ಟು ಬಿದ್ದ ಕಾರಣದಿಂದ ನೋವಿನಲ್ಲಿ ನರಳುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಉಶ್, ಭಜರಂಗಿ, AK 47, …

Read More »

20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಬೆನ್ನಲ್ಲೇ ಷೇರು ಪೇಟೆಯಲ್ಲಿ ಸಂಚಲನ

ಮುಂಬೈ, ಮೇ 13-ಕೊರೊನಾ ವೈರಸ್ ದಾಳಿಯಿಂದ ಅಲ್ಲೋಲ-ಕಲ್ಲೋಲವಾಗಿರುವ ದೇಶದ ಆರ್ಥಿಕತೆಗೆ ಪುಷ್ಟಿ ನೀಡಲು ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಂತರ ಷೇರುಪೇಟೆಯಲ್ಲಿ ಭಾರೀ ಸಂಚಲನ ಕಂಡುಬಂದಿದೆ. ಮುಂಬೈ ಷೇರು ವಿನಿಮಯ ಕೇಂದ್ರದ ಸಂವೇದಿ ಸೂಚ್ಯಂಕ (ಸೆನ್‍ಸೆಕ್ಸ್)ದಲ್ಲಿ ಇಂದು ಬೆಳಗ್ಗೆ 1,400 ಪಾಯಿಂಟ್‍ಗಳ ಜಿಗಿತವಾಗಿದೆ. ಷೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲೇ ಭಾರೀ ಏರಿಕೆ ಗೋಚರಿಸಿದೆ. 30 ಷೇರು ಸೂಚ್ಯಂಕದಲ್ಲಿ 818.68 ಪಾಯಿಂಟ್‍ಗಳು ಅಥವಾ …

Read More »

ಮೈತ್ರಿ ಸರ್ಕಾರದ ಪತನ ಕುರಿತು ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ತುಮಕೂರು: ಮೈತ್ರಿ ಸರ್ಕಾರದ ಪತನ ಕುರಿತು ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನ ಗೂಗಡನಹಳ್ಳಿ ಕೆರೆಯ ವೀಕ್ಷಣೆ ವೇಳೆ ರಮೇಶ್ ಜಾರಕಿಹೊಳಿ ಮತ್ತು ಕೆ.ಎನ್.ರಾಜಣ್ಣ ಭೇಟಿಯಾಗಿದ್ದರು. ಈ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ನಾನೇ ಎಂದು ಸಚಿವ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕಾಗಿ ಕಾಂಗ್ರೆಸ್ ಮಾಜಿ ಶಾಸಕ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ನಮಗೆ ಬೆಂಬಲ ನೀಡಿದರು. ಸರ್ಕಾರ ಬೀಳಿಸಲು ಒಂದು ಉದ್ದೇಶವಿತ್ತು. ಹಾಗಾಗಿ …

Read More »

ಬಸ್ ಬಂದರೂ ಜನ ಬರುತ್ತಿಲ್ಲ……….

ಉಡುಪಿ: ಜಿಲ್ಲೆಯೊಳಗೆ ಇಂದಿನಿಂದ ಖಾಸಗಿ ಸರ್ಕಾರಿ ಬಸ್‍ಗಳು ಓಡಾಡುತ್ತಿವೆ. ಕುಂದಾಪುರ ರೂಟ್‍ನಲ್ಲಿ ಪ್ರತಿ ಅರ್ಧಗಂಟೆಗೊಂದು ಬಸ್, ಉಡುಪಿ-ಮಣಿಪಾಲ ನಗರದಲ್ಲಿ ನರ್ಮ್ ಬಸ್ ಸಂಚಾರ ಆರಂಭವಾಗಿದೆ. ಉಡುಪಿ ಜಿಲ್ಲೆಯನ್ನು ಕೇಂದ್ರ ಸರ್ಕಾರ ಗ್ರೀನ್ ಝೋನ್ ಎಂದು ಘೋಷಿಸಿದೆ. ನಿರ್ಬಂಧಿತ ವಿನಾಯಿತಿಗಳು ಜಿಲ್ಲೆಗೆ ಸಿಕ್ಕಿದೆ. ಹೀಗಾಗಿ ಜಿಲ್ಲೆಯ ಒಳಗೆ ಖಾಸಗಿ ಮತ್ತು ಸರ್ಕಾರಿ ಬಸ್‍ಗಳ ಓಡಾಟ ಆರಂಭಿಸಬಹುದು ಎಂದು ಜಿಲ್ಲಾಡಳಿತ ಹೇಳಿತ್ತು. ಬೆರಳೆಣಿಕೆಯ ಬಸ್‍ಗಳು ಮಾತ್ರ ಇಂದು ರಸ್ತೆಗೆ ಇಳಿದಿವೆ. ಆದರೆ ಜನ …

Read More »

ಕೇಂದ್ರದಿಂದ ಪಿಎಫ್ ಹಣ – 20 ಲಕ್ಷ ಕೋಟಿ ರೂ. ಹಂಚಿಕೆ ಹೇಗೆ?

ನವದೆಹಲಿ – ಪ್ರಧಾನಿ ನರೇಂದ್ರ ಮೋದಿ ನಿನ್ನೆ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹದಗೆಟ್ಟಿರುವ ದೇಶದ ಆರ್ಥಿಕತೆ ಅಭಿವೃದ್ಧಿಗೆ 20 ಲಕ್ಷ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದ್ದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಈ ಪ್ಯಾಕೇಜ್ ಹೇಗಿರಲಿದೆ ಎನ್ನುವ ಕುರಿತು ಸುದೀರ್ಘವಾಗಿ ವಿವರಿಸಿದರು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಈ ಪ್ಯಾಕೇಜ್ ನಿಂದ ಸಿಂಹಪಾಲು ಸಿಗಲಿದ್ದು, ಉದ್ಯೋಗಿಗಳಿಗೆ ಸಂಬಳ ನೀಡುವುದಕ್ಕೂ ನೆರವು ನೀಡಲಿದೆ. ಸಣ್ಣ ಕೈಗಾರಿಕೆಗಳು …

Read More »