ರಾಯಚೂರು, ಫೆಬ್ರವರಿ 05: ಪೇಂಟ್‌ನಲ್ಲಿ ಬಳಸುವ ಥಿನ್ನರ್ ಸೇವಿಸಿ ಬಾಲಕ (Child) ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಹಿರೆಕೊಟ್ನೇಕಲ್‌ನಲ್ಲಿ ನಡೆದಿದೆ. ರಮೇಶ್ ನಾಯಕ್ ಪುತ್ರ ಶಿವಾರ್ಜುನ ನಾಯಕ್(3) ಮೃತ ಬಾಲಕ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜಾತ್ರೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿದೀಗ ಸೂತಕದ ಛಾಯೆ ಆವರಿಸಿದೆ. ಗ್ರಾಮದಲ್ಲಿ ಜಾತ್ರೆ ಹಿನ್ನೆಲೆ ಮನೆಗೆ ಪೇಂಟಿಂಗ್ ಮಾಡಲಾಗುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬಾಲಕ ಶಿವಾರ್ಜುನ ಥಿನ್ನರ್ ಸೇವಿಸಿದ್ದಾನೆ. ಈ ವೇಳೆ ಶಿವಾರ್ಜುನ ಅಸ್ವಸ್ಥಗೊಂಡಿದ್ದಾನೆ. ಕೂಡಲೇ …
Read More »ಸರ್ಕಾರಿ ಕೆಲ್ಸದಾಸೆಗೆ ಗಂಡನನ್ನೇ ಕೊಂದಳಾ ಪತ್ನಿ? 4 ತಿಂಗ್ಳು ಬಳಿಕ ಸಮಾಧಿಯಿಂದ ಕಳೆಬರಹ ಹೊರಕ್ಕೆ
ಚಿತ್ರದುರ್ಗ, (ಫೆಬ್ರವರಿ 04): ವಿಚಿತ್ರ. ನಂಬುವುದಕ್ಕೆ ಕಷ್ಟ ಅನಿಸಿದರೂ ನೀವು ನಂಬಲೇಬೇಕು. ಸರ್ಕಾರಿ ಕೆಲಸದ ಆಸೆಗೆ ಪತ್ನಿಯೇ ಗಂಡನನ್ನ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ನಡೆದಿದೆ. ಈತನ ಹೆಸರು ಸುರೇಶ್. ಚಿತ್ರದುರ್ಗದ ನೆಹರು ನಗರ ನಿವಾಸಿ. ಈತನ ತಂದೆ ಸರ್ಕಾರಿ ಕೆಲಸದಲ್ಲಿದ್ದ. ತಂದೆ ಸಾವಿನ ಬಳಿಕ ಅನುಕಂಪದ ಆಧಾರದಲ್ಲಿ ಸುರೇಶ್ಗೆ ತಂದೆಯ ಕೆಲಸ ಒಲಿದು ಬಂದಿತ್ತು. ಮಗ ನನ್ನ ಚೆನ್ನಾಗಿ ನೋಡಿಕೊಳ್ಳುತ್ತಾನೆಂದು ತಾಯಿ ಆಸೆಯಿಂದ …
Read More »ಬಳ್ಳಾರಿ: ಪ್ರೀತಿಸಿದ್ದಕ್ಕೆ ಯುವಕನ ಕೊಲೆ; ಯುವತಿಯ ತಂದೆ, ಅಣ್ಣನ ಬಂಧನ
ಬಳ್ಳಾರಿ: ಮಗಳನ್ನು ಪ್ರೀತಿಸದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಪ್ರೀತಿಸುತ್ತಿದ್ದ ಯುವಕನನ್ನು ಹುಡುಗಿಯ ತಂದೆ ಹಾಗೂ ಅಣ್ಣ ಸೇರಿ ಕೊಲೆಗೈದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಇದೀಗ ಪ್ರಕರಣದ ಆರೋಪಿಗಳಾದ ಡಿ.ಮಲ್ಲಯ್ಯ (45) ಹಾಗೂ ಸುರೇಶ್ (21) ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಗೌಡ (22) ಕೊಲೆಯಾಗಿದ್ದರು. ಎಸ್ಪಿ ಡಾ.ಶೋಭಾರಾಣಿ ಮಾತನಾಡಿ, “ಜ.7ರಂದು ಹಗರಿ ಬಳಿ ನದಿಯ ದಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. …
Read More »ಬಳ್ಳಾರಿ: ಪ್ರೀತಿಸಿದ್ದಕ್ಕೆ ಯುವಕನ ಕೊಲೆ; ಯುವತಿಯ ತಂದೆ, ಅಣ್ಣನ ಬಂಧನ
ಬಳ್ಳಾರಿ: ಮಗಳನ್ನು ಪ್ರೀತಿಸದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಪ್ರೀತಿಸುತ್ತಿದ್ದ ಯುವಕನನ್ನು ಹುಡುಗಿಯ ತಂದೆ ಹಾಗೂ ಅಣ್ಣ ಸೇರಿ ಕೊಲೆಗೈದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಇದೀಗ ಪ್ರಕರಣದ ಆರೋಪಿಗಳಾದ ಡಿ.ಮಲ್ಲಯ್ಯ (45) ಹಾಗೂ ಸುರೇಶ್ (21) ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಗೌಡ (22) ಕೊಲೆಯಾಗಿದ್ದರು. ಎಸ್ಪಿ ಡಾ.ಶೋಭಾರಾಣಿ ಮಾತನಾಡಿ, “ಜ.7ರಂದು ಹಗರಿ ಬಳಿ ನದಿಯ ದಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. …
Read More »ಡಿಕೆಶಿ-ಸಿದ್ದರಾಮಯ್ಯ ಬಣಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ
ತುಮಕೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ಬಣ vs ಸಿದ್ದರಾಮಯ್ಯ ಬಣಗಳ ನಡುವಿನ ಜಟಾಪಟಿ ಜೋರಾಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಸಿದ್ದರಾಮಯ್ಯ ಬಣದ ಸಚಿವ ರಾಜಣ್ಣ, ಜಿ.ಪರಮೇಶ್ವರ್ ವಿರುದ್ದ ವಾಗ್ದಾಳಿ ನಡೆಸಿದ್ದರು. ತುಮಕೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಶ್ರೀನಿವಾಸ್ ಪತ್ನಿ ಭಾರತಿ ಅವರಿಗೆ ಅಧ್ಯಕ್ಷ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಶ್ರೀನಿವಾಸ್, ಚುನಾವಣೆ ಗೆದ್ದ ಪ್ರತಿನಿಧಿಗಳನ್ನು ಬಿಟ್ಟು ನಾಮಿನಿ ಆದವರನ್ನು …
Read More »ಹುಬ್ಬಳ್ಳಿ ಮತ್ತು ವಾರಾಣಸಿ ನಿಲ್ದಾಣಗಳ ನಡುವೆ ಮೂರು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದ್ದು, ಅದರ ಮಾಹಿತಿ ಇಲ್ಲಿದೆ.
ಹುಬ್ಬಳ್ಳಿ: ಕುಂಭಮೇಳದ ವೇಳೆ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ (ಎಸ್ಎಸ್ಎಸ್) ಮತ್ತು ಉತ್ತರ ಪ್ರದೇಶದ ವಾರಾಣಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ: ಹುಬ್ಬಳ್ಳಿ – ವಾರಾಣಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ರೈಲು (07383/84) ಸಂಚಾರ ರೈಲು ಸಂಖ್ಯೆ 07383 ಎಸ್ಎಸ್ಎಸ್ ಹುಬ್ಬಳ್ಳಿ – ವಾರಾಣಸಿ ವಿಶೇಷ …
Read More »ಮಹಾ ಕುಂಭಮೇಳಕ್ಕೆ ತೆರಳಿದ್ದ ಕೊಪ್ಪಳದ ಯುವಕ ಸಾವು
ಕೊಪ್ಪಳ: ಮಹಾ ಕುಂಭಮೇಳಕ್ಕೆ ತೆರಳಿದ್ದ ಯುವಕನೋರ್ವ ವಿದ್ಯುತ್ ತಗುಲಿ ಗೋರಖ್ಪುರ ರೈಲ್ವೆ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳವಾರ ಜರುಗಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಮೃತರು. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಬಳಿಕ ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರವೀಣ್ ಕಳೆದ 15 ದಿನದ ಹಿಂದೆಯೇ ಮಹಾ ಕುಂಭಮೇಳಕ್ಕೆ ತೆರಳಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನವನ್ನೂ ಮಾಡಿದ್ದರು. ಬಳಿಕ ರಾಮನ …
Read More »ಸರ್ವರ್ ಡೌನ್ : ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಗುತ್ತಿಲ್ಲ ಕೆಲಸ
: ಕಳೆದ 10 ದಿನಗಳಿಂದ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದರಿಂದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಯಾವುದೇ ಕೆಲಸ ಆಗದೇ ಜನರು ಪರದಾಡುತ್ತಿದ್ದಾರೆ. ಚಾಮರಾಜನಗರದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಸರ್ವರ್ ಡೌನ್ ಆಗುತ್ತಿರುವುದರಿಂದ ಯಾವ ನೋಂದಣಿ ಕಾರ್ಯವೂ ಆಗದೇ ಜನರು ನಿತ್ಯ ಅಲೆದಾಡುತ್ತಿದ್ದಾರೆ. ಯಾವುದೇ ನೋಂದಣಿ ಆಗಲಿ, ಇಸಿಯಾಗಲಿ ಸಾಧ್ಯವಾಗದೆ ಜನರು ಪರದಾಡಿದ್ದು, ಕಳೆದ 10 ದಿನಗಳಿಂದಲೂ ಈ ಸಮಸ್ಯೆ ಮುಂದುವರೆದಿದೆ. ರಾಜ್ಯಾದ್ಯಂತ ಸರ್ವರ್ ಸಮಸ್ಯೆ ತಲೆದೂರಿದ ಪರಿಣಾಮ ಈ …
Read More »ಸಿದ್ದರಾಮಯ್ಯ ನವೆಂಬರ್ ಅಂತ್ಯದ ವೇಳೆಗೆ ಅಧಿಕಾರದಿಂದ ಕೆಳಗಿಳಿಯಬಹುದು: ಅಶೋಕ್
ಸಿದ್ದರಾಮಯ್ಯ ನವೆಂಬರ್ ಅಂತ್ಯದ ವೇಳೆಗೆ ಅಧಿಕಾರದಿಂದ ಕೆಳಗಿಳಿಯಬಹುದು: ಅಶೋಕ್ ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಸೂತಕದ ಛಾಯೆ ಆವರಿಸಿದೆ. ಮೈಕ್ರೋಫೈನಾನ್ಸ್ ಹಾವಳಿಯಿಂದ ಜನರು ಸಾಲದ ಸುಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ಹಾಸನದ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ರೋಫೈನಾನ್ಸ್ ಸಂಸ್ಥೆಗಳಿಂದ ಸುಮಾರು 25ಕ್ಕೂ ಹೆಚ್ಚು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸರಿಸುಮಾರು 2,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …
Read More »ವಿಜೃಂಭಣೆಯಿಂದ ನಡೆದ ಪಂಪಾ ವಿರೂಪಾಕ್ಷೇಶ್ವರ ರಥೋತ್ಸವ
ಗಂಗಾವತಿ: ಹಿರೇಜಂತಕಲ್ನ ಐತಿಹಾಸಿಕ ಪಂಪಾ ವಿರೂಪಾಕ್ಷೇಶ್ವರನಿಗೆ ರಥಸಪ್ತಮಿ ಜಾತ್ರೆಯ ಅಂಗವಾಗಿ ಇಂದು ಸಂಜೆ ಗೋಧೂಳಿ ಸಮಯದಲ್ಲಿ ವಿಜೃಂಭಣೆಯಿಂದ ರಥೋತ್ಸವ ನಡೆಯಿತು. ದೇಗುಲದ ಆವರಣದಲ್ಲಿ ಅರ್ಚಕರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಕಾಯಿ ಒಡೆದು ರಥೋತ್ಸವಕ್ಕೆ ಸಿದ್ಧತೆ ಮಾಡಿಕೊಟ್ಟರು. ಸ್ಥಳೀಯ ಪ್ರಮುಖರು ರಥೋತ್ಸವಕ್ಕೆ ಚಾಲನೆ ನೀಡಿದರು. ದೇಗುಲದ ಆವರಣದಿಂದ ಹೊರಟ ರಥ, ಆಂಜನೇಯನ ಪಾದಗಟ್ಟೆ ತಲುಪಿ ವಾಪಸ್ ದೇಗುಲಕ್ಕೆ ಆಗಮಿಸಿತು. ನಗರ ಸೇರಿದಂತೆ ಗ್ರಾಮೀಣ ಭಾಗದಿಂದ ಆಗಮಿಸಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ, ಹರ್ಷೋದ್ಘಾರದ ಮಧ್ಯೆ …
Read More »
Laxmi News 24×7