Breaking News

ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ,ಒಟ್ಟೂ 41 ಜನರಿಗೆ ಸೋಂಕು

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ ಮತ್ತೆ 44 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ ಕಂಡುಬಂದಿದ್ದು, ಇವರಲ್ಲಿ ಮೂವರನ್ನು ಐಸಿಯುನಲ್ಲಿ ಇರಿಸಲಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಒಟ್ಟೂ 41 ಜನರಿಗೆ ಸೋಂಕು ತಗುಲಿದಂತಾಗಿದೆ. ಬೆಂಗಳೂರಿನಲ್ಲಿ 1 ಹೊಸ ಪ್ರಕರಣ ಪತ್ತೆಯಾಗಿದೆ., ಬೆಳಿಗ್ಗೆಯಷ್ಟೇ ರಾಜ್ಯದಲ್ಲಿ 38 ಪ್ರಕರಣ …

Read More »

ವಿದೇಶಿ ನೆಲದಲ್ಲಿ ಐಪಿಎಲ್ ಆಯೋಜಿಸುವ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಸಿಬಿ ಕೋಚ್

ಮುಂಬೈ: ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಐಪಿಎಲ್ 2020 ಟೂರ್ನಿಯನ್ನು ಬಿಸಿಸಿಐ ಅಧಿಕೃತವಾಗಿ ಮುಂದೂಡಿದೆ. ಶೆಡ್ಯೂಲ್ ಅನ್ವಯ ಮಾರ್ಚ್ 29 ರಿಂದ ಐಪಿಎಲ್ ಆರಂಭವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಏ.15ಕ್ಕೆ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಆದರೆ ದೇಶಾದ್ಯಂತ ಲಾಕ್‍ಡೌನ್ ಮೇ 3ರ ವರೆಗೂ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಮತ್ತೆ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಆದರೂ ದೇಶ ಸಹಜ ಸ್ಥಿತಿಗೆ …

Read More »

ಲಾಕ್ ಡೌನ‌ನಿಂದ ಬಾಲಕನ‌ ಚಿಕಿತ್ಸೆಗಾಗಿ ವಾಹನ‌ ಸಿಗದೆ ಕುಟುಂಬಸ್ಥರ ಪರದಾಟ. ೫ ರೂಪಾಯಿ ನಾಣ್ಯ ನುಂಗಿದ ಬಾಲಕ.

  ದೇಶಾದ್ಯಂತ ಕೊರೋನಾ ಸೋಂಕು ಹರಡುತ್ತಿರುವ ಹಿನ್ನಲೆ ಲಾಕ್ ಡೌನ.ಲಾಕ್ ಡೌನ‌ನಿಂದ ಬಾಲಕನ‌ ಚಿಕಿತ್ಸೆಗಾಗಿ ವಾಹನ‌ ಸಿಗದೆ ಕುಟುಂಬಸ್ಥರ ಪರದಾಟ.೫ ರೂಪಾಯಿ ನಾಣ್ಯ ನುಂಗಿದ ಬಾಲಕ. ಬಾಗಲಕೋಟ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೈದಾಪೂರ ಸಮೀರವಾಡಿ ಗ್ರಾಮಸಲ್ಲಿ ಘಟನೆ.ನಾಣ್ಯ ನುಂಗಿದ ಕುತಬು ಎನ್ನುವ ಬಾಲಕ. ಅಂಬ್ಯುಲೆನ್ಸ್ ಸಿಗದೇ ಕಾರಣ ಕುಟುಂಬಸ್ಥರಲ್ಲಿ ಆತಂಕ.ಗ್ರಾಮದ ಪಂಚಾಯತ ಸದಸ್ಯ ಓಸ್ವಾಲ್ ಕಾರು ತೆಗೆದುಕೊಂಡು ಬಂದು ಬಾಲಕನನ್ನು ಆಸ್ಪತ್ರೆ ರವಾನೆ ಪೋನ ಕರೆಗೆ ತಕ್ಷಣ ನೇರವಿಗೆ ಬಂದ …

Read More »

ಸಾಮೂಹಿಕ ಪ್ರಾರ್ಥನೆಗಾಗಿ ಮಸೀದಿಗೆ ತೆರಳಿದ್ದವರಿಗೆ ಬಿತ್ತು ಲಾಠಿ ಏಟು

ಹಾವೇರಿ: ಲಾಕ್‍ಡೌನ್ ನಿಯಮವನ್ನ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರಿಗೆ ಪೊಲೀಸರು ಹಾಗೂ ಅಧಿಕಾರಿಗಳು ಲಾಠಿ ರುಚಿ ತೋರಿಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಎರಡು ಮಸೀದಿಗಳಲ್ಲಿ 30ಕ್ಕೂ ಅಧಿಕ ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಹೊರಗಡೆಯಿಂದ ಮಸೀದಿಯ ಗೇಟ್ ಹಾಕಿಕೊಂಡು ಒಳಗಡೆ ಪ್ರಾರ್ಥನೆ ಮಾಡಲು ಸಜ್ಜಾಗಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸವಣೂರು ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗಣ್ಣವರ ಹಾಗೂ ಸಿಪಿಐ ಶಶಿಧರ್ …

Read More »

ಕೊರೊನಾ ಲಾಕ್‍ಡೌನ್ ಹಿನ್ನೆಲೆ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸಕ್ಕೆ ನೆಲಮಂಗಲ ಪೊಲೀಸರು

ಬೆಂಗಳೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸಕ್ಕೆ ನೆಲಮಂಗಲ ಪೊಲೀಸರು ಮುಂದಾಗಿದ್ದಾರೆ. ಕರುಣೆಯ ಗೋಡೆ ಎಂಬ ನೂತನ ಯೋಜನೆಯನ್ನು ಉದ್ಘಾಟನೆ ಮಾಡಿ ಬಡ ಜೀವಗಳಿಗೆ ನೆರವಾಗಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಬಸ್ ನಿಲ್ದಾಣದ ಬಳಿ ಕರುಣೆಯ ಗೋಡೆ ಉದ್ಘಾಟಿಸಲಾಗಿದ್ದು, ತಹಶೀಲ್ದಾರ್ ಶ್ರೀನಿವಾಸಯ್ಯ, ಡಿವೈಎಸ್‍ಪಿ ಮೋಹನ್ ಕುಮಾರ್ ಮತ್ತು ಪಿಎಸ್‍ಐ ಮಂಜುನಾಥ್‍ರಿಂದ ಯೋಜನೆಗೆ ಚಾಲನೆ ದೊರಕಿದೆ. ಈ ಕರುಣೆಯ ಗೋಡೆಯಲ್ಲಿ ಬ್ರೆಡ್, ರಸ್ಕ್, ಬಿಸ್ಕತ್, ಹಣ್ಣುಗಳು, ನೀರಿನ …

Read More »

ನಗರದ 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದ ಬೆನ್ನಲ್ಲೇ ಈಗ ಅವರ ಮಗ ಸೇರಿ ಮೂರು ಮಂದಿಗೆ ಕೊರೊನಾ ಸೋಂಕು

ಚಿಕ್ಕಬಳ್ಳಾಪುರ: ನಗರದ 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದ ಬೆನ್ನಲ್ಲೇ ಈಗ ಅವರ ಮಗ ಸೇರಿ ಮೂರು ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕ್ಕಬಳ್ಳಾಪುರ ನಗರದ 65 ವರ್ಷದ ವೃದ್ಧ ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟಿದ್ದರು. ಈಗ ಅವರ ಸಂಪರ್ಕದಲ್ಲಿದ್ದ ಅವರ ಕೊನೆಯ ಮಗ(26) ಹಾಗೂ ಮೃತರ ಜೊತೆ ಆತ್ಮೀಯವಾಗಿ ಸಂಪರ್ಕದಲ್ಲಿದ್ದ ಎದುರುಗಡೆ ಮನೆಯ 20 ಮತ್ತು 19 ವರ್ಷದ ಯುವಕರಿಗೆ ಸೋಂಕು ತಗುಲಿದೆ. ವೃದ್ಧ ಮೃತಪಟ್ಟ …

Read More »

ಮೈಸೂರಿನಲ್ಲಿ ಒಬ್ಬನಿಂದ 11 ಮಂದಿಗೆ ಸೋಂಕು – ರಾಜ್ಯದಲ್ಲಿ ಒಂದೇ ದಿನ 38 ಮಂದಿಗೆ ಕೊರೊನಾ

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವತ್ತು ಒಂದೇ ದಿನ 38 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 353ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಒಟ್ಟು 38 ಜನರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಮೈಸೂರಿನಲ್ಲೇ ಇಂದು 12 ಮಂದಿಗೆ ಕೊರೊನಾ ದೃಢವಾಗಿದೆ. ಇನ್ನೂ ಬಳ್ಳಾರಿಯಲ್ಲಿ ಒಬ್ಬ ಸೋಂಕಿತನಿಂದ ಏಳು ಮಂದಿಗೆ ಕೊರೊನಾ ಬಂದಿದೆ. ಬೆಂಗಳೂರಿನಲ್ಲಿ 9 …

Read More »

ಉಡುಪಿ:ಮಣಿಪಾಲದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

ಉಡುಪಿ: ಮಣಿಪಾಲದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಭಾಗೀರಥಿ ಎಂಬವರು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬುದ್ದಿ ಕಲಿಯದ ಜನರೇ ಎಚ್ಚರ ಎಚ್ಚರ, ಮನೆಯಿಂದ ಹೊರಗೆ ಬಂದ್ರೆ ಸಾಯ್ತಿರಾ..!

ಬೆಂಗಳೂರು,ಏ.17- ನಮ್ ಜನಕ್ಕೆ ಅದೇನಾಗಿದೆಯೋ ಏನೋ… ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಸೋಂಕಿತರು ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಸಾವನ್ನಪ್ಪುವವರ ಪ್ರಮಾಣವೂ ಹೆಚ್ಚಾಗುತ್ತಿದೆ. ಹೀಗಿದ್ದರೂ ಜನರ ಅನಗತ್ಯ ಓಡಾಟ ನಿಂತಿಲ್ಲ. ಹೀಗಿದ್ದರೂ ಲಾಕ್‍ಡೌನ್ ನಿಯಮಗಳನ್ನು ಪಾಲಿಸದೆ ಮನದಂತೆ ಓಡಾಡುತ್ತಿರುವ ಪರಿ ನೋಡಿದರೆ ಇದು ಎಲ್ಲಿಗೆ ಹೋಗಿ ಮುಟ್ಟುತ್ತದೋ ಎಂಬ ಆತಂಕ ಎದುರಾಗಿದೆ. ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿಯನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಾ.24ರಂದು 21 ದಿನಗಳ ಕಾಲ …

Read More »

ತುಮಕೂರು ಜಿಲ್ಲೆ ಜನರಿಗೆ ಬಿಗ್ ರಿಲೀಫ್.

ತುಮಕೂರು,ಏ.17- ದೇಶಾದ್ಯಂತ ಕೋರಾನಾ ಸೋಂಕು ಎಲ್ಲೆಡೆ ಅಟ್ಟಹಾಸ ದಿಂದ ಮೆರೆಯುತ್ತಿದ್ದ ರೆ ತುಮಕೂರಿನಲ್ಲಿ ಕಳೆದ 28 ದಿನಗಳ ಹಿಂದೆ ಶಿರಾದಲ್ಲಿ ವೃದ್ದನೊಬ್ಬ ಮೃತಪಟ್ಟಿದ್ದ ಈತನ ಹಿಸ್ಟರಿ ನೋಡಿ ತುಮಕೂರು ಜಿಲ್ಲಾಡಳಿತ ಬೆಚ್ತಿಬಿದ್ದಿತ್ತು . ದೆಹಲಿಯ ಜಮಾತ್ ಹೋಗಿ ಬಂದಿದ್ದು ಹಾಗೂ ಮೂರು ಜನ ಪತ್ನಿಯರು 16 ಜನ ಮಕ್ಕಳುನ್ನು ಹೊಂದಿದ್ದ ವೃದ್ದ ಮೃತಪಟ್ಟ ನಂತರ ಅವರ ಕುಟುಂಬದವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರೆ ಅದೃಷ್ಟವಶಾತ್ ಅತನ ಮಗನಿಗೆ …

Read More »