Breaking News

ಕೊರೊನಾ ಬಂದಿದೆ ಎಂದಿದ್ದಕ್ಕೆ ಗುಂಡು ಹಾರಿಸಿದ ಗೆಳೆಯ

ಲಕ್ನೋ:ಗೆಳೆಯರು ಆಟವಾಡುತ್ತಿದ್ದಾಗ ಕೆಮ್ಮಿದ್ದಕ್ಕೆ ಕೊರೊನಾ ಬಂದಿದೆ ಅಂತ ಕೀಟಲೆ ಮಾಡಿದ್ದ ಸ್ನೇಹಿತನೊಬ್ಬನ ಮೇಲೆ ಗೆಳೆಯನೇ ಗುಂಡು ಹಾರಿಸಿದ್ದಾನೆ. ಆಟವಾಡುವಾಗ ಸುರೇಶ್ ಎಂಬಾತ ಹಲವು ಸಲ ಕೆಮ್ಮಿದ್ದಾನೆ. ಆಗ ಸ್ನೇಹಿತ ಪ್ರತೀಕ್ ಕೆಮ್ಮುತ್ತಿದ್ದ ಗೆಳೆಯನಿಗೆ ಕೊರೊನಾ ಬಂದಿದೆ ಅಂತ ಜೋಕ್ ಮಾಡಿದ್ದಾನೆ. ಇದರಿಂದ ರೋಸಿಹೋದ ಸುರೇಶ್ ತನ್ನಲ್ಲಿದ್ದ ಪಿಸ್ತೂಲ್ ನಿಂದ ಪ್ರತೀಕ್ ಮೇಲೆ ಗುಂಡು ಹಾರಿಸಿದ್ದಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರತೀಕ್ ಚಿಕಿತ್ಸೆಗೆ ದಾಖಲಾಗಿದ್ದರೆ, ಆರೋಪಿ …

Read More »

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ : ಬೆಚ್ಚಿ ಬಿದ್ದ ರೈತರು

ಕಬ್ಬು ಕಟಾವು ಮಾಡುವಾಗ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳನ್ನು ನೋಡಿರೋ ರೈತರು ಬೆಚ್ಚಿ ಬಿದ್ದಿದ್ದಾರೆ.   ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡುಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿವೆ. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು, ಈ ಗ್ರಾಮದ ರೈತರ ಆತಂಕಕ್ಕೆ …

Read More »

ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.

ನವದೆಹಲಿ : ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಕೊರೊನಾ ವೈರಸ್ ವಿರುದ್ಧ ಹೋರಾಟಲು ದೇಶವನ್ನು ಮೇ3ರವರೆಗೆ ಲಾಕ್ ಡೌನ್ ಮಾಡಿರುವುದು ಕಠಿಣ ಮತ್ತು ಸಮಯೋಚಿತ ತೀರ್ಮಾನವಾಗಿದೆ. ಈಗಲೇ ಅಂಕಿಅಂಶಗಳ ಬಗ್ಗೆ ಮಾತನಾಡಬಾರದು. ಆದರೆ 6 ವಾರಗಳು ದೇಶವನ್ನು ಲಾಕ್ ಡೌನ್ ಮಾಡುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಯವಾಗುತ್ತದೆ. ಹಾಗೇ …

Read More »

ಸುಮಲತಾ ಮಾಡಬೇಕಾದ ಕೆಲಸ ಮಾಡಿದ ಡಿಕೆ ಬ್ರದರ್ಸ್​:

ಬೆಂಗಳೂರು(ಏ.15): ಲಾಕ್​​ಡೌನ್​​ನಿಂದಾಗಿ ಮಂಡ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟ ಸಿಲುಕಿರುವ ಮಂಡ್ಯ ರೈತರಿಗೆ ಇದೀಗ ಪಕ್ಕದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಪತ್ಬಾಂಧವ ಆಗಿದ್ದಾರೆ. ತಮ್ಮ ಕ್ಷೇತ್ರದಲ್ಲಿ ರೈತರ ಪರಿಸ್ಥಿತಿ ಕಂಡು ಅನ್ನಾದತರು ಬೆಳೆದ ಬೆಳೆಗಳನ್ನು ತಮ್ಮ ಟ್ರಸ್ಟ್ ವತಿಯಿಂದ ಖರೀದಿಸಿ ಜನರಿಗೆ ಸಂಸದ ಸುರೇಶ್ ಉಚಿತವಾಗಿ ಹಂಚಿ ಮಾನವೀಯತೆ ಮೆರೆಯುತ್ತಿದ್ಧಾರೆ. ಈ ಮೂಲಕ ಬೆಳೆ ಬೆಳೆದ ರೈತರ ನೆರವಿಗೂ ನಿಂತಿದ್ದಾರೆ. ಸಂಸದ ಸುರೇಶ್ ರೈತರಿಂದ ಬೆಳೆ ಖರೀದಿಸುತ್ತಿರುವ …

Read More »

ಔಷಧಿ ಆಮದು: ಕೊರೋನಾ ಬಳಿಕ ಭಾರತದಿಂದ ಚೀನಾಗೆ ತೆರಳಿದ ಮೊದಲ ವಿಮಾನ ಸ್ಪೇಸ್ ಜೆಟ್!

ನವದೆಹಲಿ(ಏ.15): ಭಾರತದಲ್ಲಿ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಈ ಮಾರಕ ಕೋವಿಡ್​​​-19 ತಡೆಗೆ ಭಾರತ ಸರ್ಕಾರವೂ ಭಾರೀ ಕಸರತ್ತು ನಡೆಸುತ್ತಿದೆ. ಹಾಗಾಗಿಯೇ ಇಂದು ಚೀನಾದಿಂದ ಔಷಧಿ ಆಮದು ಮಾಡಿಕೊಳ್ಳಲು ಭಾರತದಿಂದ ಸ್ಪೇಸ್​​ ಜೆಟ್​​ ವಿಮಾನ ಪ್ರಯಾಣ ಬೆಳೆಸಿದೆ. ಕೊರೋನಾ ನಂತರ ಭಾರತದ ಕೋಲ್ಕತ್ತಾದ ಮೂಲಕ ಚೀನಾದ ಶಾಂಘೈಗೆ ತೆರಳಿದ ಮೊದಲ ವಿಮಾನ ಇದಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಕೋಲ್ಕತ್ತಾದಿಂದ ತೆರಳಿದ ವಿಮಾನ ಮಧ್ಯಾಹ್ನ 3 ಗಂಟೆ ಚೀನಾದ ಶಾಂಘೈಗೆ …

Read More »

ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು?

ಬೆಂಗಳೂರು: ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು? ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆಗೆ ಸರ್ಕಾರದ ಬಳಿ ಈಗಲೂ ಸ್ಪಷ್ಟವಾದ ಉತ್ತರವಿಲ್ಲ. ಹೌದು, ತಬ್ಲಿಘಿ ಜಮಾತ್ ಧಾರ್ಮಿಕ ಸಭೆಗೆ ಕರ್ನಾಟಕದಿಂದ 1,300 ಮಂದಿ ಭಾಗಿಯಾಗಿದ್ದರು ಎಂದು ಸರ್ಕಾರ ಅಧಿಕೃತ ಮಾಹಿತಿಯನ್ನು ಕಳೆದ ಬುಧವಾರ ಬಿಡುಗಡೆಗೊಳಿತ್ತು. ಕರ್ನಾಟಕದಿಂದ 1,300 ಮಂದಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ್ದು, 50 ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 269 ಮಂದಿ, ಇತರ …

Read More »

ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ

ನ್ಯೂಯಾರ್ಕ್: ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ ಆರಂಭದಲ್ಲೇ ಮಾಡಿದ ಮತ್ತೊಂದು ಎಡವಟ್ಟು ಈಗ ಬೆಳಕಿಗೆ ಬಂದಿದೆ. ಹೌದು. ವ್ಯಕ್ತಿಯಿಂದ ವ್ಯಕ್ತಿಗೆ ಈ ವೈರಸ್ ಹರಡುತ್ತಿದೆ ಎನ್ನುವುದು ತಿಳಿದಿದ್ದರೂ ಚೀನಾ 6 ದಿನಗಳ ಕಾಲ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬುದಾಗಿ ಎಎಫ್‍ಪಿ ವರದಿ ಮಾಡಿದೆ. ಈ ಸಂಬಂಧ ಎಎಫ್‍ಪಿಗೆ ದಾಖಲೆಗಳು ಲಭ್ಯವಾಗಿದ್ದು, ವುಹಾನ್ ನಲ್ಲಿ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತಿರುವ ವಿಚಾರ ಜ.14ರಂದೇ ಆರೋಗ್ಯ …

Read More »

ಅಕ್ರಮ ಮದ್ಯ ಮಾರಾಟ ಪರಿಶೀಲನೆ- ಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಪೊಲೀಸರು

ಮಡಿಕೇರಿ: ಅಕ್ರಮ ಮದ್ಯ ಮಾರಾಟ ಪರಿಶೀಲನೆ ಮಾಡಲು ಹೋಗಿದ್ದ ಅಬಕಾರಿ ಪೊಲೀಸರು ಅಶ್ಲೀಲ ಪದಗಳಿಂದ ಒಬ್ಬರನೊಬ್ಬರು ನಿಂದಿಸಿ, ನಡು ಬೀದಿಯಲ್ಲೇ ಬಡಿದಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಪ್ಪ ನಡುಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಲಾಕ್‍ಡೌನ್ ಆಗಿರುವುದರಿಂದ ಎಲ್ಲಿಯೂ ಮದ್ಯ ಮಾರುವಂತಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಜನರು ಕಳ್ಳಬಟ್ಟಿ, ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಹೀಗಾಗಿ ಉಪ ಅಧೀಕ್ಷಕ ಶಿವಪ್ಪ …

Read More »

ಗ್ಯಾಸ್ ಏಜೆನ್ಸಿ ಮಾಲೀಕ ಪೊಲೀಸರು, ಪೌರ ಕಾರ್ಮಿಕರಿಗೆ ಬಿರಿಯಾನಿ ಊಟ ನೀಡುತ್ತಿದ್ದಾರೆ

ಕೋಲಾರ: ಕೊರೊನಾ ಮಹಾಮಾರಿ ಆವರಿಸಿದ್ದರಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ಕಳೆದ 21 ದಿನಗಳಿಂದ ನಮ್ಮನ್ನು ಕಾಯುತ್ತಿರುವ ಕೊರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಗೆ ಕೋಲಾರದಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು. ಕೋಲಾರದ ರೇವತಿ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಿಂದ ವಾರಕ್ಕೊಮ್ಮೆ ಬಿರಿಯಾನಿ ವಿತರಣೆ ಮಾಡಲಾಗುತ್ತಿದೆ. ಕೋಲಾರ ನಗರ ಹಾಗೂ ಬಂಗಾರಪೇಟೆ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ನಗರಸಭೆ ಸಿಬ್ಬಂದಿಗೆ ಬಿರಿಯಾನಿ ವಿತರಣೆ ಮಾಡಲಾಯಿತು. ಕಳೆದ ಬುಧವಾರವೂ ಹೀಗೆ ಕರ್ತವ್ಯದಲ್ಲಿದ್ದ ನೂರಾರು ಪೊಲೀಸರಿಗೆ ಬಿರಿಯಾನಿ …

Read More »

ವಿಜಯಪುರದಲ್ಲಿ 686 ಜನರ ಮೇಲೆ ನಿಗಾ, 335ಕ್ಕೂ ಹೆಚ್ಚು ಜನ ಐಸೋಲೇಷನ್‍ಗೆ

ವಿಜಯಪುರ: ಜಿಲ್ಲೆಯಲ್ಲಿ ಇಲ್ಲಿಯವರೆಗೆ 686 ಜನರ ಮೇಲೆ ನಿಗಾ ವಹಿಸಲಾಗಿದ್ದು, 335ಕ್ಕೂ ಹೆಚ್ಚು ಜನರನ್ನು ಐಸೋಲೇಷನ್‍ ನಲ್ಲಿ ಇಡಲಾಗಿದೆ. ಒಟ್ಟು 362 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 256 ಸ್ಯಾಂಪಲ್ ನೆಗೆಟಿವ್ ಬಂದಿವೆ, 10 ಪಾಸಿಟಿವ್ ಬಂದಿವೆ. ಅಲ್ಲದೆ ಇನ್ನೂ 96 ಪ್ರಕರಣಗಳ ಕುರಿತು ಫಲಿತಾಂಶ ಬರಬೇಕಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಮತ್ತೆ 60 ಸ್ಯಾಂಪಲ್ ಕಲೆಕ್ಟ್ ಮಾಡಿ ಪರೀಕ್ಷೆಗೆ ಕಳುಹಿಸಲಾಗುವದು. ಇಂದಿನ ಮೂರು …

Read More »