ಹುಕ್ಕೇರಿ : ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ – ಡಿಎಸ್ಪಿ ಬಿ ಎಸ್ ಪಾಟೀಲ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ತಾಲೂಕಾ ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಬೆಳಗಾವಿ ಲೋಕಾಯುಕ್ತ ಡಿ ಎಸ್ಪಿ ಬಿ ಎಸ್ ಪಾಟೀಲ ಹೇಳಿದರು. ಅವರು ಇಂದು ಹುಕ್ಕೇರಿ ತಾಲೂಕಿನ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಹಮ್ಮಿಕೊಂಡ ಸಾರ್ವಜನಿಕ ಜನ ಸ್ಪಂದನಾ ಕಾರ್ಯಕ್ರಮದಲ್ಲಿ …
Read More »ಮಹಾಮೇಳಾವಾ ನಡೆಸುವುದಾಗಿ ಎಂ. ಇ. ಎಸ್ ಡಿಸಿಗೆ ಮನವಿ
ಮಹಾಮೇಳಾವಾ ನಡೆಸುವುದಾಗಿ ಎಂ. ಇ. ಎಸ್ ಡಿಸಿಗೆ ಮನವಿ ನಿಜವಾಗಿಯೂ ಕರ್ನಾಟಕ ಸರಕಾರಕ್ಕೆ ಬೆಳಗಾವಿ ಮತ್ತು ಉತ್ತರ ಕರ್ನಾಟಕದ ಕಾಳಜಿ ಇದ್ದರೇ 1956 ರಿಂದ ಯಾಕೆ ಅಧಿವೇಶನ ನಡೆಸಲಿಲ್ಲ? – ಮಾಜಿ ಶಾಸಕ ಕಿಣೇಕರ್ ಮಹಾಮೇಳಾವಾ ನಡೆಸುವುದಾಗಿ ಎಂ. ಇ. ಎಸ್ ಡಿಸಿಗೆ ಮನವಿ ನಿಜವಾಗಿಯೂ ಕರ್ನಾಟಕ ಸರಕಾರಕ್ಕೆ ಬೆಳಗಾವಿ ಮತ್ತು ಉತ್ತರ ಕರ್ನಾಟಕದ ಕಾಳಜಿ ಇದ್ದರೇ 1956 ರಿಂದ ಯಾಕೆ ಅಧಿವೇಶನ ನಡೆಸಲಿಲ್ಲ? ಮಾಜಿ ಶಾಸಕ ಕಿಣೇಕರ್ ಪ್ರಶ್ನೆ …
Read More »ವಿಕಲ ಚೇತನರ ದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಕಚೇರಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆ
ವಿಕಲ ಚೇತನರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷದಂತೆ ವಿಕಲ ಚೇತನರ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ಸಾಧಕರಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಮಟ್ಟದ 2024ನೇ ಸಾಲಿನ ವಿಕಲಚೇತನರ ಪ್ರಶಸ್ತಿ ನೀಡುವ ಕುರಿತು ವಿಧಾನ ಸೌಧದ ಕಚೇರಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಸಿದ್ದೇಶ್ವರ್, ಅಂಗ ವಿಕಲರ …
Read More »ಯಡಿಯೂರಪ್ಪ ಮತ್ತು ಅನಂತಕುಮಾರ್ ನಡುವಿದ್ದ ಜಗಳ ಯಾವತ್ತೂ ಬೀದಿಗೆ ಬಂದಿರಲಿಲ್ಲ: ಡಿವಿ ಸದಾನಂದಗೌಡ
ಬೆಂಗಳೂರು: ಪಕ್ಷದ ರಾಜ್ಯಾಧ್ಯನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ ಹೇಳಿದರು. ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ, ಇದು ಸರಿಯಲ್ಲ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷನಾಗಿ ಹೈಕಮಾಂಡ್ ಗೆ …
Read More »ಮಾರುಕಟ್ಟೆಯಲ್ಲಿ ದಿಢೀರನೆ ಕುಸಿದ ಭತ್ತದ ಬೆಲೆ
ಕೊಪ್ಪಳ, ನವೆಂಬರ್ 28: ರಾಜ್ಯದ ಕೊಪ್ಪಳ, ರಾಯಚೂರು ಜಿಲ್ಲೆಗಳನ್ನು ಭತ್ತದ ಕಣಜ ಎಂದು ಕರೆಯುತ್ತಾರೆ. ತುಂಗಭದ್ರಾ ಜಲಾಶಯದ ನೀರನ್ನು ಬಳಸಿ ಬೆಳೆಯುವ ಈ ಭಾಗದ ಭತ್ತಕ್ಕೆ ಬಹಳ ಬೇಡಿಕೆ ಇತ್ತು. ಆದರೆ, ಈ ಬಾರಿ ಭತ್ತದ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದು, ಭತ್ತದ ಬೆಳೆಗಾರರನ್ನು ಕಂಗಾಲು ಮಾಡಿದೆ. ಇನ್ನೊಂದಡೆ ಭತ್ತ ಖರೀದಿ ಕೇಂದ್ರವೂ ಆರಂಭವಾಗಿಲ್ಲ. ಮಾರುಕಟ್ಟೆಯಲ್ಲಿ ದಿಢೀರನೆ ಕುಸಿದ ಭತ್ತದ ಬೆಲೆ ಕೊಪ್ಪಳ ಜಿಲ್ಲೆ, ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಬೆಳೆಯುವ ಪ್ರಮುಖ …
Read More »ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು
ಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಸಂಬಂಧ ಇದೀಗ ಜಿಲ್ಲೆಯಲ್ಲಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು. ಏತನ್ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. …
Read More »ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..!
ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..! ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ.. ಬೆಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು.. ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೋನಿಯಾ.. ಸೋಮವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ತಾಯಿಯ ಜೊತೆ ಮಾತನಾಡಿದ್ದ ಯುವತಿ.. ಮಾತುಕತೆ ಬಳಿಕ ನೇಣು ಬಿಗಿದುಕೊಂಡಿರುವ ಶಂಕೆ.. ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಕರೆ ಮಾಡಿದ್ದ ಸ್ಪಾ ಮಾಲೀಕ.. …
Read More »ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ,
ಬೆಳಗಾವಿ, ನವೆಂಬರ್ 28: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಅಕ್ಟೋಬರ್ 30ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಾಗಿದೆ. ಪಾಗಲ್ ಪ್ರೇಮಿ ಪ್ರಕಾಶ್ ಜಾಧವ್ ಎಂಬಾತ ಕೃತ್ಯ ಎಸಗಿದ್ದಾನೆ. ಏತನ್ಮಧ್ಯೆ, ಮಗಳ ಮೇಲಿನ ದಾಳಿಯಿಂದ ಮನನೊಂದ ಆಕೆಯ ತಂದೆ ಮೃತಪಟ್ಟಿದ್ದಾರೆ. ಘಟನೆಯ ಹಿನ್ನೆಲೆ ಪ್ರೀತಿಸುವಂತೆ ನರ್ಸ್ ಹಿಂದೆ ಬಿದ್ದಿದ್ದ ಆರೋಪಿ …
Read More »ನವಜಾತ ಶಿಶುವನ್ನು ಟಾಯ್ಲೆಟ್ಗೆ ಹಾಕಿ ಫ್ಲಶ್,
ನವಜಾತ ಶಿಶುವನ್ನು ಟಾಯ್ಲೆಟ್ಗೆ ಹಾಕಿ ಫ್ಲಶ್, ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ಇಡೀ ಮಾನವ ಕುಲವೇ ತಲೆತಗ್ಗಿಸುವಂಥ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ನಡೆದಿರುವುದು ತಿಳಿದುಬಂದಿದೆ. ನವಜಾತ ಶಿಶುವೊಂದನ್ನು ಟಾಯ್ಲೆಟ್ಗೆ ಹಾಕಿ ಫ್ಲಶ್ ಮಾಡಿದ ವಿದ್ಯಮಾನ ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ರಾಮನಗರ, ನವೆಂಬರ್ 28: ಮಾನವ ಕುಲವೇ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಗತಾನೆ ಜನಿಸಿರುವ …
Read More »ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್
ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಲಸಕ್ಕಾಗಿ ಹುಡುಕುತ್ತಿರುವ ಪದವೀಧರರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಖಾಲಿಯಿರುವ ಗ್ರಾಹಕ ಸೇವಾ ಸಹಾಯಕ ಹುದ್ದೆ, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಯ ಸ್ಥಳ ದೇಶಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಕಚೇರಿಗಳ ಶಾಖೆಯ ಯಾವುದೇ ಭಾಗದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ ರೂ. 24,050 ರಿಂದ ರೂ.64,480ರವರೆಗೆ …
Read More »