ಮೈಸೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಮೈಸೂರಿನ ಎಂಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಂಪೂರ್ಣ ಗುಣಮುಖವಾದ ಹಿನ್ನೆಲೆಯಲ್ಲಿ ರೋಗಿ ನಂಬರ್ 140, 195, 201, 213, 216 311, 312 ಮತ್ತು 273 ಎಂಟು ಜನರು ಇಂದು ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಕೊರೊನಾದಿಂದ ಗುಣಮುಖವಾವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಸದ್ಯ 38 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ …
Read More »ಕಲಬುರಗಿ ಜಿಲ್ಲಾಧಿಕಾರಿ ಶರತ್ ವರ್ಗಾವಣೆಗೆ ಸಿಎಂ ತಡೆ……….
ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರ ವರ್ಗಾವಣೆಯ ಆದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ತಡೆ ಹಿಡಿದಿದ್ದಾರೆ. ಇಂದು ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ, ಸುರಾಲ್ಕರ್ ವಿಕಾಸ್ ಕಿಶೋರ್ ಕಲಬುರಗಿ ಡಿಸಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಡಿಸಿ ವರ್ಗಾವಣೆ ಆದೇಶದ ಬೆನ್ನಲ್ಲೇ ವ್ಯಾಪಕ ಟೀಕೆಗಳು ವ್ಯಕ್ತವಾದವು. ಕಲಬುರಗಿಯಲ್ಲಿ ಈಗಾಗಲೇ ಕೊರೊನಾದಿಂದ ಐವರು ಸಾವನ್ನಪ್ಪಿದ್ರೆ, ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಬೇಕಿತ್ತಾ ಎಂದು ಸಾರ್ವಜನಿಕರು …
Read More »ಬಟ್ಟೆಯಿಂದ ವ್ಯಕ್ತಿ ಅಳೆಯೋ ಸಮಾಜ ನಮ್ಮದು ಎಂದ ಅನಿತಾ ಭಟ್
ಬೆಂಗಳೂರು: ಕನ್ನಡ, ತೆಲುಗು ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ಹಾಟ್ ಬೆಡಗಿ ಅನಿತಾ ಭಟ್ ಬಟ್ಟೆ ಬಗ್ಗೆ ಚರ್ಚೆಗೆ ಇಳಿದಿದ್ದು, ನೆಟ್ಟಿಗರ ಪ್ರಶ್ನೆಗೆ ತಕ್ಕ ಉತ್ತರ ನೀಡಿದ್ದಾರೆ. ಅದೇನಪ್ಪಾ ಬಟ್ಟೆ ವಿಚಾರ ಅಂತೀರಾ ಈ ವಿಡಿಯೋ ನೀಡಿ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಹಾಟ್ ಬೆಡಗಿ ಅನಿತಾ ಭಟ್, ತಮ್ಮ ಹಾಟ್ ಫೋಟೋಗಳಿಂದಲೇ ಕಿಕ್ಕೇರಿಸುತ್ತಿರುತ್ತಾರೆ. ಇದೀಗ ಅದೇ ರೀತಿಯ ಫೋಟೋ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ವಿಶೇಷವೆಂದರೆ …
Read More »ಪ್ಲಾಸ್ಮಾ ನೀಡಿ ಜೀವ ಉಳಿಸಲು ಮುಂದಾದ ಗಾಯಕಿ
ನವದೆಹಲಿ: ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಕೊರೊನಾ ಸೋಂಕು ತಗುಲಿದ ನಂತರ ಸ್ವಯಂ ದಿಗ್ಬಂಧನ ವಿಧಿಸಿಕೊಳ್ಳದೆ, ಹಲವು ಗಣ್ಯರು ಭಾಗವಹಿಸಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದೀಗ ಜನರೇ ಕೊಂಡಾಡುವ ಕೆಲಸ ಮಾಡುತ್ತಿದ್ದು, ಜೀವ ಉಳಿಸುವ ನಿರ್ಧಾರ ಕೈಗೊಂಡಿದ್ದಾರೆ. ಹೌದು, ರಾಜಕಾರಣಿಗಳೂ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಿದ್ದ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಕನಿಕಾ ಕಪೂರ್ ವಿಪರೀತ ಟೀಕೆಗೆ ಗುರಿಯಾಗಿದ್ದರು. ಅಲ್ಲದೆ ನಂತರ ಈ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ …
Read More »ವದಂತಿ ನಂಬಿ ಮಂಗ್ಳೂರು ಟೌನ್‍ಹಾಲ್ ಎದುರು ಜಮಾಯಿಸಿದ ವಲಸೆ ಕಾರ್ಮಿಕರು
ಮಂಗಳೂರು: ಎರಡು ವಾರಗಳ ಹಿಂದೆ ವದಂತಿ ನಂಬಿ ಮುಂಬೈನಲ್ಲಿ ಸಾವಿರಾರು ವಲಸೆ ಕಾರ್ಮಿಕರು ರೈಲ್ವೇ ಸ್ಟೇಷನ್‍ಗೆ ಬಂದಿದ್ದರು. ಆ ವೇಳೆ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹೆಣಗಾಡಿದರು. ಇಂತದ್ದೆ ಸನ್ನಿವೇಶ ಇಂದು ಮಂಗಳೂರಿನಲ್ಲಿ ಕಂಡು ಬಂತು. ಜಿಲ್ಲಾಡಳಿತ ತಮ್ಮನ್ನು ಸ್ವಗ್ರಾಮಗಳಿಗೆ ಕಳಿಸಲಿದೆ ಎಂಬ ವದಂತಿ ನಂಬಿದ ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮಂಗಳೂರಿನ ಟೌನ್‍ಹಾಲ್‍ನಲ್ಲಿ ಕಾಣಿಸಿಕೊಂಡರು. ಸಾಮಾಜಿಕ ಅಂತರಪಾಲಿಸದೆ ಗುಂಪು ಸೇರಿದ್ದರು. ಇದು ವದಂತಿ ಹೋಗಿ ಎಂದರೂ ಯಾರೂ ಕೇಳಲಿಲ್ಲ. ಕಾರ್ಮಿಕರು …
Read More »ಇಂದು 11 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 523 ಕ್ಕೆ ಏರಿಕೆಯಾಗಿದೆ. ಕಲಬುರಗಿ 6, ಗದಗ 1, ಬೆಂಗಳೂರು (ಪಾದರಾಯನಪುರ)1 ಮತ್ತು ಬಾಗಲಕೋಟೆಯ ಮೂವರಿಗೆ ಇಂದು ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಹೊಂಗಸಂದ್ರದ 145 ಮತ್ತು ಪಾದರಾಯನಪುರದ 70 ಜನರ ವರದಿ ನೆಗೆಟಿವ್ ಬಂದಿದೆ. ಸೋಂಕಿತರ ವಿವರ: 1.ರೋಗಿ-513: ಬೆಂಗಳೂರಿನ 48 ವರ್ಷ ಪುರುಷ. ಬಿಬಿಎಂಪಿ ವಾರ್ಡ್-135ರ ಕಂಟೈನ್ಮೆಂಟ್ ಝೋನ್ ಸಂಪರ್ಕ …
Read More »ಮದುವೆಯಾಗದ ಸಿಬ್ಬಂದಿಗೆ ಬೇಗ ಮದುವೆ ಮಾಡಿಸಿ ಎಂದು ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಬೆಳಗಾವಿ: ಮದುವೆಯಾಗದ ಸಿಬ್ಬಂದಿಗೆ ಬೇಗ ಮದುವೆ ಮಾಡಿಸಿ ಎಂದು ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಕೊರೊನಾ ಡ್ಯೂಟಿಯನ್ನು ನಿರಂತರವಾಗಿ ಮಾಡುತ್ತಿರುವ ಕೆಎಸ್‍ಆರ್‍ಪಿ ಸಿಬ್ಬಂದಿಗೆ ಧೈರ್ಯ ತುಂಬುವ ಕೆಲಸವನ್ನ ಇಂದು ಕೆಎಸ್‍ಆರ್‍ಪಿ ಎಡಿಜಿಪಿ ಅಲೋಕ್ ಕುಮಾರ್ ಮಾಡಿದ್ದಾರೆ. ಬೆಳಗಾವಿ ನಗರಕ್ಕೆ ಆಗಮಿಸಿದ್ದ ಅಲೋಕ್ ಕುಮಾರ್ ಕೆಎಸ್‍ಆರ್‍ಪಿ ತುಕಡಿಗಳು ಕೆಲಸ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಅವರ ಆರೋಗ್ಯ ವಿಚಾರಣೆ ಮಾಡಿದರು. ಪ್ರತಿಯೊಬ್ಬ ಪೇದೆಗಳ …
Read More »ಬೆಳಗಾವಿ:ಯೋಧ ಸಚಿನ್ ಸಾವಂತ್‍ಗೆ ಬೇಲ್……..
ಬೆಳಗಾವಿ: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಆರ್‌ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ನ್ಯಾಯಾಲಯ ಜಾಮೀನು ನೀಡಿದೆ. ಸಚಿನ್ ಸಾವಂತ್ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆ ನ್ಯಾಯಾಲಯದ ಆದೇಶ ಪ್ರತಿ ಜೊತೆಗೆ ಸಿಆರ್‌ಪಿಎಫ್ ಅಧಿಕಾರಿಗಳು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಜೈಲು ಅಧಿಕಾರಿಗಳು ನ್ಯಾಯಾಲಯ ಆದೇಶ ಪ್ರತಿ ಪರಿಶೀಲನೆ ನಡೆಸಿ ಸಚಿನ್ ಸಾವಂತ್ ಅವರನ್ನು ಬಿಡುಗಡೆ ಮಾಡಿದ್ದಾರೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ …
Read More »2 ದಿನದ ಹಿಂದೆ ಮದ್ವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ………..
ಗದಗ: ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ಮಸಾರಿ ಭಾಗದ ನಂದೀಶ್ವರಮಠ ಬಳಿ ಇರುವ ಮನೆಯಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಧನಲಕ್ಷ್ಮೀ ನವಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲಾಕ್‍ಡೌನ್ ಮುನ್ನವೇ ಧನಲಕ್ಷೀ ಮದುವೆ ನಿಶ್ಚಯವಾಗಿತ್ತು. ಆದರೆ ಕುಟುಂಬದವರು ಮದುವೆ ಮುಂದೂಡುವುದು ಬೇಡ ಎಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರಳವಾಗಿ ಮದುವೆ ಮಾಡಿದ್ದಾರೆ. ಮನೆಯಲ್ಲಿ …
Read More »ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಮಾಡಲು ರೋಗಿಗಳೇ ಇಲ್ಲ: ವೈದ್ಯಕೀಯ ಸಚಿವ ಸುಧಾಕರ್……
ಚಿಕ್ಕಬಳ್ಳಾಪುರ: ಕೊರೊನಾದಿಂದ ಗುಣಮುಖರಾದವರು ರಕ್ತದಾನ ಮಾಡಿದ್ದು ಪ್ಲಾಸ್ಮಾ ಸಿದ್ಧವಾಗಿದೆ. ಆದ್ರೆ ಪ್ಲಾಸ್ಮಾ ಟ್ರಾನ್ಸ್ ಫ್ಲಾಂಟ್ ಮಾಡುವಂತಹ ರೋಗಿಗಳೇ ನಮ್ಮ ರಾಜ್ಯದಲ್ಲಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಮೊಬೈಲ್ ಸ್ವಾಬ್ ಕಲೆಕ್ಷನ್ ಯೂನಿಟ್ ಉದ್ಗಾಟನೆ ಮಾಡಿ ಮಾತನಾಡಿದ ಸಚಿವ ಸುಧಾಕರ್, ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ರಾಜ್ಯದಲ್ಲಿನ 523 ಪ್ರಕರಣಗಳಲ್ಲಿ 198 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಉಳಿದ 325 ಮಂದಿಯಲ್ಲಿ 20 …
Read More »