Breaking News

ಸದ್ಯದಲ್ಲೇ ಸಿಗಲಿದೆ ದೇವರ ದರ್ಶನ, ದೇವಸ್ಥಾನಗಳನ್ನು ತೆರೆಯಲು ಮುಂದಾದ ಸರ್ಕಾರ..!

ಬೆಂಗಳೂರು, ಮೇ 14- ಜಿಮ್, ಫಿಟ್‍ನೆಸ್ ಕೇಂದ್ರಗಳನ್ನು ಮುಂದಿನ ವಾರದಿಂದ ತೆರೆಯಲು ರಾಜ್ಯ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ , ಮುಚ್ಚಿದ್ದ ದೇವಾಲಯಗಳು ಕೂಡಾ ಆರಂಭವಾಗುವ ಲಕ್ಷಣಗಳು ಗೋಚರಿಸಿವೆ. ಒಂದು ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ದೇವಾಸ್ಥನಗಳು ತೆರೆದರೆ, ಅಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಭಕ್ತರು ಪಾಲಿಸಬೇಕಾಗುತ್ತದೆ. ಅದೆನೆಂದರೆ ಯಾವುದೇ ದೇವಾಲಯಗಳು ಭಕ್ತರಿಗೆ ಪ್ರಸಾದ, ತೀರ್ಥ ಕೊಡುವುದು ನಿಷಿದ್ಧ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರತಿ ಸಾಲಿನಲ್ಲಿ ಬರುವವರಿಗೆ ಕಟಕಟೆಗಳನ್ನು …

Read More »

ಭಾರತದಲ್ಲಿ ಕೊರೋನಾಗೆ 24 ಗಂಟೆಯಲ್ಲಿ 134 ಸಾವು, 3,722 ಮಂದಿಗೆ ಪಾಸಿಟಿವ್..!

ನವದೆಹಲಿ/ಮುಂಬೈ, ಮೇ 14- ಡೆಡ್ಲಿ ಕೊರೊನಾ ಹಾವಳಿ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ದೇಶದಲ್ಲಿ ಕಿಲ್ಲರ್ ವೈರಸ್ ಆರ್ಭಟ ಲಾಕ್‍ಡೌನ್ ಸಡಿಲಿಕೆ ನಂತರ ದಿನೇ ದಿನೇ ವ್ಯಾಪಕವಾಗುತ್ತಿದ್ದು, ರಾಷ್ಟ್ರವ್ಯಾಪಿ ಭಯಭೀತಿಯ ವಾತಾವರಣ ಯಥಾಸ್ಥಿತಿಯಲ್ಲಿಯೇ ಮುಂದುವರಿದಿದೆ. ಭಾರತದಲ್ಲಿ ಸಾವಿನ ಸಂಖ್ಯೆ 2,500 ದಾಟಿದ್ದು, ಸೋಂಕು ಪೀಡಿತರ ಸಂಖ್ಯೆಯೂ 80,000 ಸನಿಹದಲ್ಲಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 134 ಸಾವು ಮತ್ತು 3,722 ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ …

Read More »

3 ವರ್ಷ ಪ್ರೀತಿಸಿ ಒಂದು ತಿಂಗ್ಳ ಹಿಂದೆ ಮದುವೆ – ದಂಪತಿ ಆತ್ಮಹತ್ಯೆ

ಚೆನ್ನೈ: ಪ್ರೀತಿಸಿ ಒಂದು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ. ಜಯಕುಮಾರ್ ಮತ್ತು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ತಿರುವಣ್ಣಾಮಲೈ ಜಿಲ್ಲೆಯ ಜಯಕುಮಾರ್ ಮತ್ತು ಕೃಷ್ಣಗಿರಿ ಜಿಲ್ಲೆಯ ಕಲ್ಲೂರು ಗ್ರಾಮದ ವಿಜಯಲಕ್ಷ್ಮಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೀತಿಯ ಬಗ್ಗೆ ಮನೆಯಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಕುಟುಂಬ ಸದಸ್ಯರು ಇವರ ಪ್ರೀತಿಗೆ ಒಪ್ಪಿಗೆ ನೀಡಲಿಲ್ಲ. ಜಯಕುಮಾರ್ ಮತ್ತು …

Read More »

ಸಿಎಸ್‍ಕೆ ಪರ ಧೋನಿಗಿಂತಲೂ ಹೆಚ್ಚು ಪಂದ್ಯ ಆಡಿದ್ದಾರೆ ರೈನಾ………

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಅತ್ಯಂತ ಸ್ಥಿರವಾದ ಫ್ರ್ಯಾಂಚೈಸ್‍ಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ) ಇದುವರೆಗೂ ಒಬ್ಬ ನಾಯಕನನ್ನು ಮಾತ್ರ ಹೊಂದಿದೆ. ಎಂ.ಎಸ್ ಧೋನಿ ಅವರು ಮೊದಲು 9.5 ಕೋಟಿ ರೂ.ಗೆ ತಂಡವನ್ನು ಸೇರಿಕೊಂಡಿದ್ದರು. ಅವರು ಪ್ರತಿ ಬಾರಿಯ ಐಪಿಎಲ್‍ನಲ್ಲಿ ಸಿಎಸ್‍ಕೆ ತಂಡವನ್ನು ಮುನ್ನಡೆಸಿದ್ದಾರೆ. ಅವರ ನೇತೃತ್ವದಲ್ಲಿ ಸಿಎಸ್‍ಕೆ ತಂಡವು ಪ್ರತಿ ಬಾರಿಯೂ ಪ್ಲೇಆಫ್‍ನಲ್ಲಿ ಸ್ಥಾನ ಪಡೆಯುತ್ತಾ ಬಂದಿದೆ. ಅಷ್ಟೇ ಅಲ್ಲದೆ ಮತ್ತು ಇದುವರೆಗೂ ಮೂರು ಬಾರಿ …

Read More »

ಕೊರೊನಾದಿಂದ ಕಲ್ಯಾಣ ಮಂಟಪ ಮಾಲೀಕರಿಗೆ 50 ಕೋಟಿ ನಷ್ಟ

ಹಾಸನ: ಕೊರೊನಾ ವೈರಸ್ ಜಿಲ್ಲೆಯ ಕಲ್ಯಾಣ ಮಂಟಪದ ಮಾಲೀಕರನ್ನು ಅತಂತ್ರ ಸ್ಥಿತಿಗೆ ದೂಡಿದೆ. ಹಾಸನ ನಗರದಲ್ಲೇ ಕಲ್ಯಾಣ ಮಂಟಪ ಮಾಲೀಕರಿಗೆ ಬರೋಬ್ಬರಿ 50 ರಿಂದ 60 ಕೋಟಿ ನಷ್ಟ ಆಗಿದೆ ಎಂದು ಹಾಸನ ಕಲ್ಯಾಣ ಮಂಟಪದ ಅಧ್ಯಕ್ಷ ದಿನೇಶ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಅವರು, ಕಲ್ಯಾಣ ಮಂಟಪ ಮಾಲೀಕರು ಈಗಾಗಲೇ ಮದುವೆಗೆ ಬುಕ್ ಮಾಡಿದವರ ಹಣ ವಾಪಸ್ ಕೊಡಲು ಅಸಾಹಯಕತೆ ತೋಡಿಕೊಂಡಿದ್ದಾರೆ. ಈ ಕುರಿತು ಹಾಸನ …

Read More »

ಚಿನ್ನದ ಗಣಿಯಲ್ಲಿ ಕಳ್ಳತನಕ್ಕೆ ಯತ್ನ- ಮೂವರ ಸಾವು, ಇಬ್ಬರು ಅರೆಸ್ಟ್………..

ಕೋಲಾರ: ಚಿನ್ನದ ಗಣಿಯಲ್ಲಿ ಚಿನ್ನ ಕಳ್ಳತನಕ್ಕೆಂದು ತೆರಳಿದ್ದ ಐವರಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರನ್ನ ಬಂಧಿಸಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮಾರಿಕುಪ್ಪಂನ ಮೈಸೂರು ಮೈನಿಂಗ್ ನಲ್ಲಿ ಈ ಘಟನೆ ಜರುಗಿದ್ದು, ಮೂವರು ಕಳ್ಳರು ಮೃತಪಟ್ಟಿದ್ದಾರೆ. ಕಳೆದ ರಾತ್ರಿ ಕೆಜಿಎಫ್ ನ ಐವರು ನಿವಾಸಿಗಳು ಚಿನ್ನದ ಗಣಿಯಲ್ಲಿ ಚಿನ್ನ ಕಳ್ಳತನಕ್ಕೆಂದು ತೆರಳಿದ್ದರು. ಚಿನ್ನದ ಗಣಿಯ ಗುಂಡಿಯಲ್ಲಿ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಕೆಜಿಎಫ್ ನಗರದ ಬಿ-ಶಾಪ್ ನ …

Read More »

ಜೀವನಕ್ಕೆ ಬೇಕಾದ ಸೌಲಭ್ಯ ಕೊಡಿ – ಕಪ್ಪುಪಟ್ಟಿ ಧರಿಸಿ ಬಂದ ಕೊರೊನಾ ವಾರಿಯರ್ಸ್

ಯಾದಗಿರಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಒಟ್ಟು 560 ನೌಕರರು ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ …

Read More »

ಅಂದು ವೇಶ್ಯೆ ಆಗಿದ್ದಾಕೆ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ

ಮುಂಬೈ: ಬಾಲಿವುಡ್‍ನ ಖ್ಯಾತ ಬರಹಗಾರ್ತಿ ಒಬ್ಬರ ಕತೆ ಕೇಳಿದರೆ ಯಾವ ಸಿನಿಮಾ ಕತೆಗಳಿಗಿಂತಲೂ ಕಡಿಮೆಯಿಲ್ಲ ಎನಿಸುತ್ತೆ. ಆದರೆ ಇದು ಸಿನಿಮಾ ಕತೆಯಲ್ಲ ಖ್ಯಾತ ಬರಹಗಾರ್ತಿಯ ನಿಜ ಜೀವನದ ವ್ಯತೆ. ಹಿಂದೆ ಜೀವನ ನಡೆಸಲು ಮುಂಬೈನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಇಂದು ಬಾಲಿವುಡ್‍ನಲ್ಲಿ ತಮ್ಮ ಪ್ರತಿಭೆ ಮೂಲಕ ಖ್ಯಾತಿ ಗಳಿಸಿದ್ದಾರೆ. ಇವರು ಬರೆದ ಕತೆಗಳು ಇಂದು ಬಿಟೌನ್‍ನಲ್ಲಿ ಹಿಟ್ ಸಿನಿಮಾಗಳಾಗಿವೆ. ಅಂದು ಜೀವನ ನಿರ್ವಹಣೆಗಾಗಿ ವೇಶ್ಯೆ ಆಗಿದ್ದವರು ಇಂದು ಬಾಲಿವುಡ್‍ನಲ್ಲಿ ಖ್ಯಾತಿ …

Read More »

ರೈತರಿಗೆ ಹಣ ಕೊಡಲು ಕೈ ಸಾಲ ಸಿಗದೆ ಆಸ್ತಿ ಅಡ ಇಟ್ರು – ಜನರಿಗೆ ದಿನಸಿ ಕಿಟ್, ತರಕಾರಿ ವಿತರಿಸಲು 5.5 ಕೋಟಿ ಖರ್ಚು

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಕೊರೊನಾ ಹಿನ್ನೆಲೆಯಲ್ಲಿ ತಮ್ಮ ಕ್ಷೇತ್ರದ ಜನರಿಗೆ ದಿನಸಿ ಕಿಟ್ ವಿತರಿಸಲು ಪೆಟ್ರೋಲ್ ಬಂಕ್ ಹಾಗೂ ಪ್ರೀತಿಯಿಂದ ಕಟ್ಟಿಸಿದ ಮನೆಯನ್ನು ಬ್ಯಾಂಕಿನಲ್ಲಿ ಅಡ ಇಟ್ಟಿದ್ದಾರೆ. ತಮ್ಮ ಕ್ಷೇತ್ರದ ಜನರಿಗೆ 5.5 ಕೋಟಿ ರೂಪಾಯಿ ವೆಚ್ಚದಲ್ಲಿ ಪಡಿತರ ಕಿಟ್ ಹಾಗೂ ತರಕಾರಿ ವಿತರಿಸಿದ್ದಾರೆ. ರೈತರಿಂದ ಒಂದೂವರೆ ಕೋಟಿ ರೂಪಾಯಿಯಷ್ಟು ತರಕಾರಿ ಖರೀದಿ ಮಾಡಿದ್ದಾರೆ. ರೈತರಿಗೆ ಈ ತಿಂಗಳ 18ರ ಒಳಗೆ ಹಣ ಕೊಡುವ ಮಾತು ಕೊಟ್ಟಿದ್ದಾರೆ. …

Read More »

ಯಾರ ಸಹಾಯವೂ ಬೇಡ ನಮ್ಮನ್ನು ಬಿಟ್ಟು ಬಿಡಿ’ – ಬೈಕ್, ಕಾಲ್ನಡಿಗೆಯಲ್ಲಿ ತಮ್ಮೂರಿನತ್ತ ಕೂಲಿ ಕಾರ್ಮಿಕರ ಪಯಣ

ಯಾದಗಿರಿ: ಇಷ್ಟು ದಿನ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಪಾನಿಪೂರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಉತ್ತರ ಭಾರತದ ವಿವಿಧ ರಾಜ್ಯಗಳ ಕೂಲಿ ಕಾರ್ಮಿಕರು, ಕಾಲ್ನಡಿಗೆ ಮತ್ತು ಬೈಕ್ ಮೂಲಕ ತಮ್ಮ-ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಹೀಗೆ ತಮ್ಮ ಕುಟುಂಬಗಳೊಂದಿಗೆ ಕೆಲವರು ಮಧ್ಯಪ್ರದೇಶಕ್ಕೆ ನಡೆದುಕೊಂಡು ಹೋಗುತ್ತಿದ್ದರೆ. ಇನ್ನೂ ಕೆಲವರು ಉತ್ತರ ಪ್ರದೇಶಕ್ಕೆ ಬೈಕ್ ಮೇಲೆ ಹೊರಟಿದ್ದಾರೆ. ಕಲಬುರಗಿ, ವಿಜಯಪುರ ಹಾಗೂ ದಾವಣಗೆರೆಯಲ್ಲಿ ಪಾನಿಪೂರಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದ …

Read More »