Breaking News

ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು………..

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 87 ವರ್ಷದ ಮನಮೋಹನ್ ಸಿಂಗ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.ಪಂಜಾಬ್ ವಿಶ್ವವಿದ್ಯಾಲಯ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆದ ಮನಮೋಹನ್ ಸಿಂಗ್ ಪ್ರಧಾನಿಯಾಗುವ ಮೊದಲು ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದರು. ಅವರು ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದರು. ಬಳಿಕ ಅಂದ್ರೆ …

Read More »

ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟ ಸರ್ಕಾರ…….

ಬೆಂಗಳೂರು: ಇತ್ತೀಚೆಗಷ್ಟೆ ಧಾರಾವಾಹಿಗಳ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದ್ದ ಸರ್ಕಾರ ಇದೀಗ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ. ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಮಾತ್ರ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ಸರ್ಕಾರ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ. ಶೂಟಿಂಗ್ ಬೇಡ ಬದಲಿಗೆ ಪೋಸ್ಟ್ ಪ್ರೊಡಕ್ಷನ್, ಪ್ರೀ ಪ್ರೊಡಕ್ಷನ್ ಕೆಲಸಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಎಡಿಟಿಂಗ್, ಮಿಕ್ಸಿಂಗ್, ಗ್ರಾಫಿಕ್ಸ್ ಈ ರೀತಿಯ ಕೆಲಸ ಮಾಡಿಕೊಳ್ಳಬಹುದು ಎಂದು …

Read More »

ಕಾಫಿ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ…………

ಹಾಸನ: ಕೊರೊನಾ ಮಹಾಮಾರಿ ಹೊಡೆತಕ್ಕೆ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಫಿಗೆ ಒಳ್ಳೆ ಬೆಲೆನೂ ಸಿಗುತ್ತಿಲ್ಲ. ಇತ್ತ ಕಾಫಿಯನ್ನು ಕೊಳ್ಳುವವರು ಇಲ್ಲದಂತಾಗಿದೆ. ಪ್ರತಿ ವರ್ಷ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿದ್ದ ಕಾಫಿತೋಟದ ಮಾಲೀಕರು ಈ ಬಾರಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದರು. ಇದ್ದಕ್ಕಿದ್ದಂತೆ ವಕ್ಕರಿಸಿದ ಕೊರೊನಾ ಮಹಾಮಾರಿಯಿಂದಾಗಿ ಕಾಫಿ ಬೆಳೆಗೆ ಬೇಡಿಕೆ ಕುಸಿದಿದೆ. ಕಾಫಿ ಕೊಳ್ಳುವವರು ಕೂಡ ಮುಂದೆ ಬರುತ್ತಿಲ್ಲ. ಇದರಿಂದ ಸರಿಯಾದ ಬೆಲೆ ಕೂಡ ಸಿಗದಂತಾಗಿದೆ. ಇದೇ ರೀತಿ ಮುಂದುವರಿದರೆ …

Read More »

ಪಡಿತರ ಅಕ್ಕಿ ದಂಧೆಕೋರರ ಬೆನ್ನಿಗೆ ಅಧಿಕಾರಿಗಳು ನಿಂತ್ರಾ ಅನ್ನೋ ಪ್ರಶ್ನೆ…..?

ದಾವಣಗೆರೆ: ಪಡಿತರ ಅಕ್ಕಿ ದಂಧೆಕೋರರ ಬೆನ್ನಿಗೆ ಅಧಿಕಾರಿಗಳು ನಿಂತ್ರಾ ಅನ್ನೋ ಪ್ರಶ್ನೆಯೊಂದು ಮೂಡಿದೆ. ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮೇಲೆ ದಾಳಿ ಮಾಡಿ ನಕಲಿ ಎಫ್‍ಐಆರ್ ಹಾಕಿದ್ದಾರೆಂಬ ಆರೋಪವೊಂದು ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿದೆ.   ದಾವಣಗೆರೆ ನಗರದ ಕೆ.ಆರ್ ರಸ್ತೆ ಬಳಿಯ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ. ಈ ವಿಚಾರ ತಿಳಿದ ಆಹಾರ ನಿರೀಕ್ಷಕ ರವಿ ಶಿವಮೂರ್ತಿ ಹಿಪ್ಪರಗಿ ಹಾಗೂ ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ದಾಳಿ ನಡೆದು ಸುಮಾರು …

Read More »

ಮೇ 17ರ ಬಳಿಕ.. ಏನಿರುತ್ತೆ? ಏನಿರಲ್ಲ?………..

ಬೆಂಗಳೂರು: ಕೊರೊನಾ ಲಾಕ್‍ಡೌನ್ 3.0 ಮುಕ್ತಾಯಕ್ಕೆ ಇನ್ನು 7 ದಿನ ಬಾಕಿ ಇದೆ. ಈ ಹೊತ್ತಲ್ಲೇ ಮೇ 17ರ ಬಳಿಕ ಮುಂದಿನ ಕಥೆ ಏನು? ಲಾಕ್‍ಡೌನ್ ಅಂತ್ಯ ಆಗುತ್ತಾ? ಮತ್ತೆ ಏನಾದರೂ ಮುಂದುವರಿಸ್ತಾರಾ? ಮುಂದುವರಿಸೋದಾದ್ರೆ, ಯಾವ ಮಾರ್ಗಸೂಚಿ ಇರುತ್ತೆ? ಲಾಕ್‍ಡೌನ್ ಎಂಡ್ ಆದರೆ ಮತ್ತೆ ವೈರಸ್ ಹಬ್ಬಿದ್ರೆ ಏನ್ ಮಾಡೋದು? ಅನ್ನೋ ಎಲ್ಲಾ ಲೆಕ್ಕಾಚಾರ-ಆತಂಕದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಧ್ಯಾಹ್ನ 3 ಗಂಟೆಗೆ ಎಲ್ಲಾ ರಾಜ್ಯಗಳ …

Read More »

ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭ…………….

ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಮಹತ್ವ ಆದೇಶ ಹೊರಡಿಸಿದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಪ್ರಯಾಣಿಕರ ರೈಲುಗಳನ್ನು ಮೇ 12ರಿಂದ ಹಂತ ಹಂತವಾಗಿ ಪ್ರಾರಂಭಿಸಲು ಭಾರತೀಯ ರೈಲ್ವೆ ಯೋಜಿಸಿದೆ. ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಈ ವಿಶೇಷ ರೈಲುಗಳು ನವದೆಹಲಿ ನಿಲ್ದಾಣದಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, …

Read More »

ಕಲಬುರಗಿಯಲ್ಲಿ ಕೊರೊನಾ ಸೋಂಕಿನಿಂದ 13 ಮಂದಿ ಗುಣಮುಖ……..

ಕಲಬುರಗಿ: ಕೊರೊನಾ ಸೋಂಕಿನಿಂದ ಕಲಬುರಗಿ ನಗರದ 12 ಮತ್ತು ಆಳಂದ ಪಟ್ಟಣದ 65 ವರ್ಷದ ವೃದ್ಧೆ ಸೇರಿದಂತೆ ಒಟ್ಟು 13 ಜನ ಕೋವಿಡ್-19 ಪೀಡಿತರು ಸೋಂಕಿನಿಂದ ಗುಣಮುಖರಾಗಿ ರವಿವಾರ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಡಿ.ಸಿ ಶರತ್ ಬಿ. ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ನಂತರ ರವಿವಾರ ಪ್ರಥಮ ಬಾರಿಗೆ ಒಂದೇ ದಿನ ಇಷ್ಟೊಂದು ಗರಿಷ್ಠ ಪ್ರಮಾಣದಲ್ಲಿ ರೋಗಿಗಳು ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ಆಳಂದ ಪಟ್ಟಣದ 65 ವರ್ಷದ …

Read More »

ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಇಂದು ತಾಯ್ನಾಡಿಗೆ 326 ಕನ್ನಡಿಗರು ಬಂದಿಳಿದಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಭಾರತ ನಲುಗಿ ಹೋಗಿದೆ. ಹೀಗಾಗಿ ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ವಾಪಸ್ಸಾಗುತ್ತಿದ್ದಾರೆ. ಇಂದು ತಾಯ್ನಾಡಿಗೆ 326 ಕನ್ನಡಿಗರು ಬಂದಿಳಿದಿದ್ದಾರೆ. ಬೆಂಗಳೂರಿಗೆ 323 ಜನ ಕನ್ನಡಿಗರು ಬಂದಿಳಿದಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಸುಕಿನ ಜಾವ 4.47ಕ್ಕೆ ಕನ್ನಡಿಗರು ಆಗಮಿಸಿದ್ದಾರೆ. ಮೊದಲಿಗೆ ವಿಮಾನ ಲಂಡನ್‍ನಿಂದ  ದೆಹಲಿಗೆ ಬಂದಿದೆ. ನಂತರ ದೆಹಲಿಯಿಂದ ಬೆಂಗಳೂರಿಗೆ …

Read More »

ಲಾಕ್ ಡೌನ್ ಒತ್ತಡದ ನಡುವೆಯೂ ಬೆಳಗಾವಿ ನಗರದ ಮಾರ್ಕೆಟ್ ಠಾಣೆಯ ಪೋಲೀಸರು ಭರ್ಜರಿ ಬೇಟೆ

ಬೆಳಗಾವಿ- ಲಾಕ್ ಡೌನ್ ಒತ್ತಡದ ನಡುವೆಯೂ ಬೆಳಗಾವಿ ನಗರದ ಮಾರ್ಕೆಟ್ ಠಾಣೆಯ ಪೋಲೀಸರು ಭರ್ಜರಿ ಬೇಟೆಯಾಡಿದ್ದಾರೆ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಮಾಸ್ಟರ್ ಪ್ಲ್ಯಾನ್ ಮಾಡಿ ಜಮೀನು ಮಾಲೀಕನನ್ನು ಕಿಡ್ನ್ಯಾಪ್ ಮಾಡಿದ ನಾಲ್ಕು ತಿಂಗಳ ಕಾಲ ಈ ಮಾಲೀಕನನ್ನು ಕೂಡಿಹಾಕಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್ ಮಾಡುವಲ್ಲಿ ಮಾರ್ಕೆಟ್ ಪೋಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಬಾಂದೂರ ಗಲ್ಲಿಯ ನಿವಾಸಿ ಅಣ್ಣಾಸಾಹೇಬ ಚೌಗಲೆ ಬ್ರಹ್ಮಚಾರಿ ಈತನ ಹೆಸರಿನಲ್ಲಿ ಬೆಳಗಾವಿಯ ಸಾಂಬ್ರಾ ರಸ್ತೆಯ ಪೋತದಾರ …

Read More »

ರಾಜ್ಯದ 34,000 ಅರ್ಚಕರಿಗೆ ದಿನಸಿ ಕಿಟ್: ಕೋಟ ಶ್ರೀನಿವಾಸ ಪೂಜಾರಿ………

ಉಡುಪಿ: ಕೊರೊನಾ ಲಾಕ್‍ಡೌನ್ ಬಿಸಿ ಎಲ್ಲಾ ಕ್ಷೇತ್ರಕ್ಕೆ ತಟ್ಟಿದೆ. ಅದರಲ್ಲೂ ತಟ್ಟೆ ಕಾಣಿಕೆ ನಂಬಿರುವ ಹಳ್ಳಿಯ ದೇವಸ್ಥಾನದ ಅರ್ಚಕರ ಸ್ಥಿತಿ ಕೇಳೋದೇ ಬೇಡ. ರಾಜ್ಯದ ಮುಜರಾಯಿ ಇಲಾಖೆ ಇದೀಗ ರಾಜ್ಯದ ದೇವಸ್ಥಾನಗಳ ಅರ್ಚಕರು ಸಂಕಷ್ಟಕ್ಕೆ ಪರಿಹಾರ ಕೊಡಲು ಮುಂದಾಗಿದೆ. ರಾಜ್ಯದ 34,000 ಅರ್ಚಕರಿಗೆ ದಿನಸಿ ಕಿಟ್ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಅರ್ಚಕರಿಗೆ ದಿನಸಿ ಕಿಟ್ ವಿತರಣಾ ಜವಾಬ್ದಾರಿ …

Read More »