ಚಿತ್ರದುರ್ಗ: ಕೊರೊನಾ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳದೆ ಗ್ರೀನ್ ಝೋನ್‍ನಲ್ಲಿರು ಚಿತ್ರದುರ್ಗಕ್ಕೆ ತಬ್ಲಿಘಿಗಳು ವಾಪಸ್ ಆಗಿದ್ದಾರೆ. ಭಾರತದಲ್ಲಿ ಕೊರೊನಾ ಶುರುವಾದಾಗ ವಿದೇಶಕ್ಕೆ ತೆರಳಿದ್ದ ಚಿತ್ರದುರ್ಗ ಮೂಲದ ಓರ್ವ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದ್ದದಿಂದ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದರು. ಮಹಿಳೆ ಗುಣಮುಖರಾಗಿ ಮನೆ ಸೇರಿದ ಬಳಿಕ ನಿಟ್ಟುಸಿರು ಬಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಯಾರಿಗೂ ಸೋಂಕು ಕಾಣಿಸಿಕೊಳ್ಳದೆ ಗ್ರೀನ್ ಝೋನ್‍ನಲ್ಲಿದೆ. ಆದರೆ ಮಂಗಳವಾರ ಗುಜರಾತ್‍ನಿಂದ ಬಂದಿರುವ 33ಜನ ತಬ್ಲಿಘಿಗಳು ಬಂದಿದ್ದಾರೆ. …
Read More »ಡಿಎಲ್/ಎಲ್‍ಎಲ್ ಪರೀಕ್ಷೆಗೆ ಕಾಯುತ್ತಿರುವ ಮಂದಿಗೆ ಗುಡ್‍ನ್ಯೂಸ್. ಮೇ 7ರ ಗುರುವಾರದಿಂದ ಹಸಿರು ವಲಯದಲ್ಲಿ ಈ ಪರೀಕ್ಷೆಗಳು ಆರಂಭ
ಬೆಂಗಳೂರು: ಡಿಎಲ್/ಎಲ್‍ಎಲ್ ಪರೀಕ್ಷೆಗೆ ಕಾಯುತ್ತಿರುವ ಮಂದಿಗೆ ಗುಡ್‍ನ್ಯೂಸ್. ಮೇ 7ರ ಗುರುವಾರದಿಂದ ಹಸಿರು ವಲಯದಲ್ಲಿ ಈ ಪರೀಕ್ಷೆಗಳು ಆರಂಭವಾಗಲಿದೆ. ಡಿಎಲ್/ ಎಲ್‍ಎಲ್ ಲೈಸೆನ್ಸ್ ಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಆದ್ಯತೆ ಮೇರೆಗೆ ಈ ಪರೀಕ್ಷೆ ನಡೆಯಲಿದೆ. ಪ್ರತಿದಿನ ಶೇ.50 ರಷ್ಟು ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ದಿನಾಂಕವನ್ನು ಆರ್‌ಟಿಒ ಅಭ್ಯರ್ಥಿಗಳ ಮೊಬೈಲ್‍ಗೆ ಸಂದೇಶ ಕಳುಹಿಸಿದೆ. ಹಸಿರು ವಲಯದಲ್ಲಿರುವ 14 ಜಿಲ್ಲೆಗಳಲ್ಲಿ ಮಾತ್ರ ಈ ಪರೀಕ್ಷೆ ನಡೆಯಲಿದ್ದು, …
Read More »ಸ್ಥಳೀಯರ ಮನವೊಲಿಸಿ 17 ತಬ್ಲಿಘಿಗಳು ತುಮಕೂರಿನಲ್ಲಿ ಕ್ವಾರಂಟೈನ್…………
ತುಮಕೂರು: ಶತಾಯಗತಾಯ ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಗ್ರಾಮಸ್ಥರ ಮನವೊಲಿಸಿ 17 ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡಿದ್ದಾರೆ. ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇದರಲ್ಲಿ ಪಾವಗಡದ ವೈ.ಎನ್.ಹೊಸಕೋಟೆಯ 13 ಜನರಿದ್ದು, ಉಳಿದ 5 ಜನ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ. ಕ್ವಾರಂಟೈನ್ ಮಾಡಲು ಅವಕಾಶ ಕೊಡದೆ ಸ್ಥಳೀಯರು ಆರಂಭದಲ್ಲಿ ತಗಾದೆ …
Read More »ಆಸ್ಪತ್ರೆ ಆರಂಭಿಸಿ ಚಿಕಿತ್ಸೆ ನೀಡದಿದ್ದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ
ಬೆಳಗಾವಿ, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೆ.ಪಿ.ಎಂ.ಇ. ಕಾಯ್ದೆ ಅಡಿ ನೋಂದಣಿಯಾಗಿರುವ ಎಲ್ಲ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳು ತಕ್ಷಣವೇ ಆಸ್ಪತ್ರೆಗಳನ್ನು ಆರಂಭಿಸಿ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು. ಒಂದು ವೇಳೆ ಜನರಿಗೆ ವೈದ್ಯಕೀಯ ಸೇವೆ ನೀಡದಿದ್ದರೆ ಲೈಸೆನ್ಸ್ ರದ್ದುಪಡಿಸುವುದರ ಜತೆಗೆ ಸೂಕ್ತ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಕೋವಿಡ್ ಹೊರತುಪಡಿಸಿ ಇತರೆ …
Read More »BIG-BREAKING ರಾಜ್ಯ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್..!
ಬೆಂಗಳೂರು : ತೀವ್ರ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಭತ್ಯೆ (ಡಿ.ಎ)ಕಡಿತಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕೊರೋನ ಆಲಾಕ್‌ಡೌನ್ ಪರಿಣಾಮ ಆಥೀಕ ಸಂನ್ಮೂಲ ಸಂಗ್ರಹಕ್ಕೆ ಭಾರೀ ಪೆಟ್ಟು ಬಿದ್ದಿದ್ದು, ಸರಖಾರ ಅನಿವಾರ್‍ಯವಾಗಿ ಈ ಕ್ರಮಕ್ಕೆ ಮುಂದಾಗಿದೆ. ಕಳೆದ ಜನವಿರಯಿಂದ ರಾಜ್ಯ ಸರಕಾರಿ ನೌಕರರಿಗೆ ನಿಡಬೇಕಿದ್ದ ಹೆಚ್ಚವರಿ ಡಿಎಯನ್ನು ಮುಂದಿನ ವರ್ಷ ಜೂನ್‌ವರೆಗೆ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರಕಾರ ಈಗಾಗಲೇ ಇಂತಹ ಕ್ರಮ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅದನ್ನೇ …
Read More »ಧಾರಾವಾಹಿ ಶೂಟಿಂಗ್‍ಗೆ ಸರ್ಕಾರದಿಂದ ಅನುಮತಿ..!
ಬೆಂಗಳೂರು : ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿರುವ ಧಾರಾವಾಹಿ ಶೂಟಿಂಗ್‍ಗಳಿಗೆ ಸರ್ಕಾರ ಅನುಮತಿ ನೀಡಿ ಮಹತ್ವದ ನಿರ್ಧಾರ ಪ್ರಕಟಿಸಿದೆ. ಲಾಕ್‌ಡೌನ್‌ನಿಂದ ಕಿರುತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದು ಒಂದೂವರೆ ತಿಂಗಳಾಗಿವೆ. ಈ ಮಧ್ಯೆ ಲಾಕ್‌ಡೌನ್ ಕೊಂಚ ಸಡಲಿಕೆಯಾಗಿರುವುದರಿಂದ ಮತ್ತು ಬೇರೆ ಬೇರೆ ವಲಯಗಳಲ್ಲಿ ಕೆಲಸ ಪ್ರಾರಂಭವಾಗುತ್ತಿರುವುದರಿಂದ, ಕಿರುತೆರೆಯ ಚಿತ್ರೀಕರಣಕ್ಕೂ ಅನುವು ಮಾಡಿಕೊಡಬೇಕೆಂದು ಹಲವರು ಇದೀಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಕುರಿತು ಮಂಗಳವಾರ ಮಾತನಾಡಿದ್ದ ಕಂದಾಯ ಸಚಿವ ಆರ್. ಅಶೋಕ್, ಧಾರಾವಾಹಿ ಮತ್ತು …
Read More »ನಟ ಜೈ ಜಗದೀಶ್ ವಿರುದ್ಧ ಎಫ್‍ಐಆರ್…………..
ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಮತ್ತು ಚಲನಚಿತ್ರ ಕಾರ್ಮಿಕರ, ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷ ಸಾ.ರಾ.ಗೋವಿಂದು ಅವರು ನಿಂದನೆ ಆರೋಪದ ಅಡಿ ಜೈ ಜಗದೀಶ್ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಏನಿದು ಪ್ರಕರಣ?: ಹೆಮ್ಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ತತ್ತರಿಸಿ ಹೋಗಿದೆ. ಭಾರತದಲ್ಲಿ ಲಾಕ್‍ಡೌನ್‍ನಿಂದಾಗಿ …
Read More »ಕುಡುಕರ ಅವಾಂತರದಿಂದ ಮತ್ತೊಂದು ಕೊಲೆ!
ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ 43 ದಿನಗಳಿಂದ ಮದ್ಯ ಸಿಗದೆ ಪರದಾಡಿದ್ದ ಕುಡುಕರು ಸೋಮವಾರ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮದ್ಯ ಸೇವಿಸಿ ಸುಮ್ಮನಿರದ ಕೆಲವರು ಕೊಲೆ, ಹಲ್ಲೆಗೆ ನಡೆಸಿರುವ ಘಟನೆಗಳು ವರದಿಯಾಗುತ್ತಲೇ ಇವೆ. ಇಂತಹದ್ದೇ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಕಾಮಾಕ್ಷಿಪಾಳ್ಯದ ಆದಿತ್ಯ ಬಾರ್ ಮುಂದೆ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ …
Read More »2ನೇ ದಿನವೂಮದ್ಯ ಮಾರಾಟದಲ್ಲಿ ಬಂಪರ್- 197 ಕೋಟಿ ರೂ. ಮದ್ಯ ಮಾರಾಟ
ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ನಿಯಮಗಳ ಸಡಿಲಿಕೆಯ 2ನೇ ದಿನವೂ ಮದ್ಯ ಮಾರಾಟ ಜೋರಾಗಿದ್ದು, ಇಂದು 197 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ಮಾಡಲಾಗಿದೆ ಎಂದು ಕೆಎಸ್‍ಬಿಸಿಎಲ್ ಅಧಿಕಾರಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಮಾರಾಟವಾಗಿರುವ ಮದ್ಯದ ಮಾಹಿತಿ ನೀಡಲಾಗಿದ್ದು, 36.37 ಲಕ್ಷ ಲೀಟರ್ ಭಾರತೀಯ ಮದ್ಯ ಹಾಗೂ 7.02 ಲಕ್ಷ ಲೀಟರ್ ಬಿಯರ್ ಮಾರಾಟ ಮಾಡಲಾಗಿದೆ. ಉಳಿದಂತೆ ಬೆಳಗ್ಗೆಯಿಂದ ನಾಲ್ಕು ಗಂಟೆಯವರೆಗೆ ಕರ್ನಾಟಕ ಪಾನೀಯ ನಿಗಮ (ಕೆಎಸ್‍ಬಿಸಿಎಲ್) ನಿಂದ …
Read More »ಸಾರ್ವಜನಿಕ ಸೇವೆಗೆ ನೈರುತ್ಯ ರೈಲ್ವೆ ಸನ್ನದ್ಧ- ಮುಂಜಾಗ್ರತಾ ಕ್ರಮ ಹೇಗಿದೆ ಗೊತ್ತಾ?
ಹುಬ್ಬಳ್ಳಿ: ಕೊರೊನಾ ಲಾಕ್‍ಡೌನ್‍ನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಡಿಲಿಕೆ ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆಯ ಆಡಳಿತ ಕಚೇರಿ, ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಗ್ಯಾರೇಜ್ ಮತ್ತು ವರ್ಕ್‌ಶಾಪ್ ಮೇ 4ರಿಂದ ಶೇ.33 ಸಿಬ್ಬಂದಿಯೊಂದಿಗೆ ಕೆಲಸ ಆರಂಭಿಸಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತೆ ಕೆಲಸಕ್ಕೆ ಹಾಜರಾಗುತ್ತಿರುವುದರಿಂದ ಕೋವಿಡ್-19 ವೈರಸ್ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿನ ಗ್ಯಾರೇಜ್ ಮತ್ತು ವರ್ಕ್‌ಶಾಪ್ ಪ್ರವೇಶದ್ವಾರದಲ್ಲಿ ದೇಹ ತಾಪಮಾನ ಸ್ಕ್ರೀನಿಂಗ್ ಸ್ಮಾರ್ಟ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕಾರ್ಯಾಗಾರಕ್ಕೆ …
Read More »
Laxmi News 24×7