ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಎಂಟು ಕುಟುಂಬ ಕಾರ್ಮಿಕರ ಕುಟುಂಬಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪರಿಹಾರದ ಚೆಕ್ ವಿತರಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2.04 ಲಕ್ಷ ರೂಪಾಯಿ ಮೊತ್ತದ ಚೆಕ್ ಗಳನ್ನು ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಚೆಕ್ ವಿತರಿಸಲಾಗಿದೆ. ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಕಳಪೆ …
Read More »ಅಂಜಲಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ
ಹುಬ್ಬಳ್ಳಿ: ಕೆಲ ತಿಂಗಳ ಹಿಂದೆ ವೀರಾಪುರ ಓಣಿಯ ಮನೆಯಲ್ಲಿ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹5ಲಕ್ಷ ಪರಿಹಾರದ ಚೆಕ್ ಅನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿತರಿಸಿದರು. ಅಂಬಿಗೇರ ಸಮಾಜದ ಮುಖಂಡ ಮನೋಜ ಕರ್ಜಗಿ ಮಾತನಾಡಿ, ‘ಅಂಜಲಿ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಜನಪ್ರತಿನಿಧಿ ಗಳ ಸಹಕಾರ ದೊಡ್ಡದು. ₹25 ಲಕ್ಷ ಪರಿಹಾರಕ್ಕೆ ಒತ್ತಾಯಿಸಲಾಗಿತ್ತು. ಸದ್ಯ ಸಿಎಂ ಪರಿಹಾರ …
Read More »ಸಂಕಷ್ಟದಲ್ಲಿ ಅಲೆಮಾರಿಗಳ ಬದುಕು
ಹುಬ್ಬಳ್ಳಿ: ‘ಇವತ್ತು ಈ ಊರು, ನಾಳೆ ಮತ್ತೊಂದು ಊರು. ನಮ್ಮಂತಹ ಅಲೆಮಾರಿಗಳಿಗೆ ಸ್ವಂತ ಜಾಗ, ಮನೆ ಎಂಬುದು ಇರುವುದಿಲ್ಲ. ಆಶ್ರಯ ಸಿಕ್ಕ ಕಡೆ ಉಳಿಯುತ್ತೇವೆ. ಕೆಲ ದಿನಗಳ ಬಳಿಕ ಮತ್ತೆ ಮುಂದಿನ ಊರಿಗೆ ಪ್ರಯಾಣಿಸುತ್ತೇವೆ. ಆಯಾ ಸಮಯಕ್ಕೆ ಸಿಗುವ ವಸ್ತುಗಳನ್ನು ಮಾರುತ್ತ ಬದುಕುತ್ತೇವೆ’ ತಮ್ಮ ದೈನಂದಿನ ಬದುಕನ್ನು ಹೀಗೆ ಸಂಕ್ಷಿಪ್ತವಾಗಿ ವಿವರಿಸಿದವರು ಮಲ್ಲಶೆಟ್ಟಿ. ಅಲೆಮಾರಿ ಸಮುದಾಯದ ಅವರು ಕುಟುಂಬ ಸದಸ್ಯರ ಜೊತೆಗೆ ಹುಬ್ಬಳ್ಳಿಯ ಆರ್ಟಿಒ ಕಚೇರಿ ಬಳಿ ತಾತ್ಕಾಲಿಕ ನೆಲೆ …
Read More »ಡಿಜಿಟಲ್ ಅರೆಸ್ಟ್; ವಂಚಕರ ಹೊಸ ಟ್ರಿಕ್!
ಹುಬ್ಬಳ್ಳಿ: ತಂತ್ರಜ್ಞಾನ ಆವಿಷ್ಕಾರಗಳು ಹೆಚ್ಚುತ್ತಾ ಹೋದಂತೆ, ಸೈಬರ್ ವಂಚಕರ ಯೋಜನೆ ಮತ್ತು ಯೋಚನೆಗಳು ಸಹ ವಿಸ್ತಾರವಾಗುತ್ತ ಹೋಗುತ್ತಿವೆ. ಒಟಿಪಿ, ಲಿಂಕ್ ಕಳುಹಿಸಿ ಹಣ ವರ್ಗಾವಣೆ, ಮಾರುಕಟ್ಟೆಯಲ್ಲಿ ಹಣ ಹೂಡಿಕೆ ನೆಪದಲ್ಲಿ ಆನ್ಲೈನ್ ಕಳ್ಳರು, ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ಕೋಟಿ ಕೋಟಿ ವಂಚಿಸುತ್ತಿದ್ದಾರೆ. ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಒಂದು ವಾರದ ಅವಧಿಯಲ್ಲಿ ‘ಡಿಜಿಟಲ್ ಅರೆಸ್ಟ್’ ಸಂಬಂಧಿಸಿ ಮೂರು ಪ್ರಕರಣಗಳು ದಾಖಲಾಗಿದ್ದು, ಒಟ್ಟು ₹1.84 ಕೋಟಿ ವರ್ಗಾಯಿಸಿಕೊಂಡಿದ್ದಾರೆ. …
Read More »ನಗರದ ವಿವಿಧೆಡೆ ಪೊಲೀಸರ ಕಾರ್ಯಾಚರಣೆ: 264 ದ್ವಿಚಕ್ರ ವಾಹನ ವಶ
ಹುಬ್ಬಳ್ಳಿ: ‘ಹು-ಧಾ ಕಮಿಷನರೇಟ್ ವ್ಯಾಪ್ತಿಯ ದಕ್ಷಿಣ ಉಪವಿಭಾಗದ ವಿವಿಧೆಡೆ ಶನಿವಾರ ಕಾರ್ಯಾಚರಣೆ ನಡೆಸಿ, ಸರಿಯಾದ ದಾಖಲೆ ಇಲ್ಲದ ಒಟ್ಟು 264 ದ್ವಿಚಕ್ರ ವಾಹನಗಳು ಹಾಗೂ ಮೂರು ಆಟೊಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು. ಕಸಬಾಪೇಟ್ ಪೊಲೀಸ್ ಠಾಣೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹುಬ್ಬಳ್ಳಿ ಶಹರ, ಘಂಟಿಕೇರಿ, ಕಸಬಾ, ಹಳೆ ಹುಬ್ಬಳ್ಳಿ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ಕಡೆ ಚೆಕ್ಪೋಸ್ಟ್ …
Read More »ವಿಜಯಪುರದಲ್ಲಿ ಸರಣಿ ಕಳ್ಳತನ: ನಗನಾಣ್ಯ ದೋಚಿ ಪರಾರಿ
ವಿಜಯಪುರದಲ್ಲಿ ಸರಣಿ ಕಳ್ಳತನ: ನಗನಾಣ್ಯ ದೋಚಿ ಪರಾರಿ ನಿನ್ನೆ ತಡರಾತ್ರಿ ವಿಜಯಪುರದಲ್ಲಿ 5 ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ ವಿಜಯಪುರ ನಗರದ ಅಕ್ಕಮಹಾದೇವಿ ಶಾಲೆಯ ಬಳಿ ಜಮಖಂಡಿ ರಸ್ತೆಯಲ್ಲಿರುವ 5 ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಎರಡು ಮನೆಗಳಿಂದ 3 ತೊಲ ಚಿನ್ನ, ಬೆಳ್ಳಿ ಮತ್ತು ೬೫೦೦೦ ನಗದು ಹಣದೊಂದಿಗೆ ಕಳ್ಳರು ಪರಾರಿಯಾಗಿರುವುದಾಗಿ ತಿಳಿಸಿದರು.. ಇಲ್ಲಿನ ಮನೆಗಳ ಸುತ್ತ ಲೈಟ್ಗಳಿಲ್ಲದ ಕಾರಣ ಹಲವೆಡೆ ಕಳ್ಳರು ಸುಲಭವಾಗಿ …
Read More »ಇತ್ತ ಮಳೆ ಭಾರಿ, ಅತ್ತ ಬೀಜಗಳೂ ದುಬಾರಿ
ಬೆಳಗಾವಿ: ಅಕಾಲಿಕ ಮಳೆ ಹಿಂಗಾರಿ ಹಂಗಾಮಿಗೆ ಸಿದ್ಧಗೊಂಡ ರೈತರಿಗೆ ಚಿಂತೆ ತಂದಿಟ್ಟಿವೆ. ಜಿಲ್ಲೆಯ ಹಲವು ರೈತರು ಇನ್ನೂ ಮುಂಗಾರು ಫಸಲಿನ ರಾಶಿಯಲ್ಲಿ ನಿರತರಾಗಿದ್ದಾರೆ. ಮತ್ತಷ್ಟು ರೈತರು ಹಿಂಗಾರಿ ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ. ಕಳೆದ ಎರಡು ವಾರಗಳಿಂದ ಸುರಿದ ಮಳೆ ಎರಡೂ ಕೆಲಸಕ್ಕೆ ಅಡಚಣೆ ತಂದೊಡ್ಡಿದೆ. ಗಾಯದ ಮೇಲೆ ಬರೆ ಎಂಬಂತೆ ಬಿತ್ತನೆ ಬೀಜಗಳ ದರ ಹೆಚ್ಚಳವಾಗಿದೆ. ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳಾದ ರಾಗಿ, ಗೋಧಿ, ಕಡಲೆ ದರ ತುಸು ಹೆಚ್ಚಾಗಿದೆ. ಜೋಳ, …
Read More »ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!
ßಬೆಂಗಳೂರು: ಕಾಂಗ್ರೆಸ್ ನ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ವಾಟ್ಸಪ್ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಆಡಿಯೋ-ವಿಡಿಯೋ ಬಹಿರಂಗಗೊಳಿಸದಿರಲು 20 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲರನ್ನು ಬಂಧಿಸಲಾಗಿದೆ. ಮಂಜುಳಾ ಪಾಟೀಲ್ …
Read More »ಉಪ ಚುನಾವಣೆ ನಡುವೆ ಕುಮಾರಸ್ವಾಮಿ ಕುಟುಂಬಕ್ಕೆ ಸಿದ್ದೇಶ್ವರ ಸ್ವಾಮಿ ಪ್ರಸಾದ! ಚರ್ಚೆ ಶುರು
ಹಾಸನ: ರಾಜ್ಯದಲ್ಲಿ ನಡೆಯುತ್ತಿರುವ ಮೂರು ಕ್ಷೇತ್ರಗಳ ವಿಧಾನಸಭಾ ಚುನಾವಣೆಗಳ ಪೈಕಿ ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯ ಹಾಗೂ ದೇಶದ ಗಮನ ಸೆಳೆದಿದೆ. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್ ನಡುವಿನ ನೇರಾ ಹಣಾಹಣಿ ಹಾಗೂ ಕಾಂಗ್ರೆಸ್-ಎನ್ ಡಿಎ ಪಕ್ಷಗಳ ಪ್ರತಿಷ್ಠೆಯೇ ಇದಕ್ಕೆ ಕಾರಣ. ಈ ಮಧ್ಯೆ ಎಚ್.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸಿದ್ದೇಶ್ವರ ಸ್ವಾಮಿ ಬಲಗಡೆಯಿಂದ ಹೂವು ನೀಡಿದ್ದು, ಚನ್ನಪಟ್ಟಣದಲ್ಲಿ ನಿಖಿಲ್ …
Read More »ರಾಷ್ಟ್ರ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ ಬಿಎಂಟಿಸಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು(BMTC) ‘ಸಿಟಿ ವಿಥ್ ಬೆಸ್ಟ್ ರೆಕಾರ್ಡ್ ಆಫ್ ಪಬ್ಲಿಕ್ ಇನ್ವಾಲ್ವ್ಮೆಂಟ್ ಇನ್ ಟ್ರಾನ್ಸ್ಪೋರ್ಟ್’ ವಿಭಾಗದಲ್ಲಿ ರಾಷ್ಟ್ರ ಮಟ್ಟದ ಪ್ರತಿಷ್ಠಿತ ‘ಅವಾರ್ಡ್ ಆಫ್ ಎಕ್ಸೆಲೆನ್ಸ್ ಇನ್ ಅರ್ಬನ್ ಟ್ರಾನ್ಸ್ಪೋರ್ಟ್’ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಗುಜರಾತ್ನ ಗಾಂಧಿನಗರದ ಮಹಾತ್ಮ ಗಾಂಧಿ ಮಂದಿರ ಕನ್ವೆನ್ಷನ್ ಸೆಂಟರ್ನಲ್ಲಿ ಭಾನುವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದೆ ಎಂದು …
Read More »