Breaking News

ಹನೂರು ಎನ್‌ಕೌಂಟರ್ ಪ್ರಕರಣ – ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಹನೂರಿನ ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾಗಿದೆ.‌ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದಾರೆ. ಚಾಮರಾಜನಗರ ಎಸಿ ದಿನೇಶ್ ಕುಮಾರ್ ಮೀನಾ ಅವರಿಂದ ಮ್ಯಾಜಿಸ್ಟ್ರೇಟ್ ತನಿಖೆ ನಡೆದಿತ್ತು. ಅರಣ್ಯ ಸಿಬ್ಬಂದಿ ಹಾಗೂ ಪ್ರತ್ಯಕ್ಷ ಸಾಕ್ಷಿ ಮಹಿಮಾ ದಾಸ್ ಹೇಳಿಕೆಗಳನ್ನು ವರದಿಯಲ್ಲಿ ದಾಖಲಿಸಲಾಗಿದೆ. ಅಲ್ಲದೆ, ಮರಣೋತ್ತರ ಪರೀಕ್ಷೆ, ಘಟನಾ ಸ್ಥಳದ …

Read More »

ನಾಗೇಂದ್ರ ರಾಜೀನಾಮೆ; ವ್ಯಕ್ತಿಯಲ್ಲ ವ್ಯವಸ್ಥೆ ವಿರುದ್ಧ ನಮ್ಮ ಹೋರಾಟ: ಸಿ‌.ಸಿ ಪಾಟೀಲ

ಗದಗ: ಮಾಜಿ ಸಚಿವ ನಾಗೇಂದ್ರ ರಾಜೀನಾಮೆ  ನೀಡಿರುವ ವಿಚಾರವಾಗಿ ನರಗುಂದ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಸಿ.ಸಿ. ಪಾಟೀಲ, ಇದು ವ್ಯಕ್ತಿಯ ವಿರುದ್ಧದ ಹೋರಾಟವಲ್ಲ, ವ್ಯವಸ್ಥೆಯ ವಿರುದ್ಧದ ಹೋರಾಟ ಎಂದು ಹೇಳಿದ್ದಾರೆ. ನರಗುಂದದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಾಗೇಂದ್ರ ರಾಜೀನಾಮೆ ನೀಡಿರುವುದರಿಂದ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸಣ್ಣ ಪ್ರಯತ್ನ ಯಶಸ್ವಿಯಾಗಿದೆ. ನೊಂದ ಜನರಿಗೆ ಇದರ ಪ್ರಯೋಜನ ಸಿಗಬೇಕು …

Read More »

ಫುಡ್‌ ಪ್ರೊಸೆಸಿಂಗ್‌ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಆಹಾರ ಪದಾರ್ಥ ಸೀಜ್

ಹಾವೇರಿ: ಜಿಲ್ಲೆಯ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ರಾಣೇಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಒಟ್ಟು 1,033 ಕೆಜಿ ಆಹಾರ ಪದಾರ್ಥಗಳನ್ನು ಸೀಜ್ ಮಾಡಲಾಗಿದೆ. ರಾಣೇಬೆನ್ನೂರು ತಾಲೂಕಿನ ಕೃಷ್ಣಾಪುರ, ತರೇದಹಳ್ಳಿ ಹಾಗೂ ಹನುಮನಹಳ್ಳಿ ಗ್ರಾಮದಲ್ಲಿರುವ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಇತ್ತೀಚೆಗೆ ದಿಢೀರ್ ತಪಾಸಣೆ ನಡೆಸಲಾಯಿತು. ಈ ವೇಳೆ ಆಹಾರ ಪದಾರ್ಥಗಳನ್ನು ಸರಿಯಾಗಿ ಪ್ಯಾಕ್ ಮಾಡದೆ ಸಾಗಣೆ ಮಾಡುತ್ತಿರುವುದು ಅಧಿಕಾರಿಗಳ …

Read More »

ಜಮೀನಿಗಾಗಿ 20 ವರ್ಷಗಳಿಂದ ಅಲೆದಾಟ – ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ್ದ ಯೋಧನಿಂದ ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರ: ಜಮೀನಿಗಾಗಿ 20 ವರ್ಷಗಳ ಕಾಲ ಅಲೆದಾಡಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಮಾಜಿ ಯೋಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಂತಾಮಣಿಯಲ್ಲಿ ನಡೆದಿದೆ. ರಾಯಪಲ್ಲಿ ನಿವಾಸಿ ಮಾಜಿ ಸೈನಿಕ ಶಿವಾನಂದ ರೆಡ್ಡಿ ವಿಷ ಸೇವಿಸಿದ ಮಾಜಿ ಯೋಧ. 1987ರಲ್ಲಿ ಭಾರತೀಯ ಸೇನೆ ಸೇರಿದ್ದ ಇವರು, 1999ರ ಕಾರ್ಗಿಲ್ ಯುದ್ಧದ ವೇಳೆ ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಗಂಭೀರವಾಗಿ ಗಾಯಗೊಂಡಿದ್ದರು. ಕಾಲಿಗೆ ಫ್ರ‍್ಯಾಕ್ಚರ್ ಆಗಿ ವಿಕಲಚೇತನರಾಗಿ ಕೊನೆಗೆ 2004ರಲ್ಲಿ …

Read More »

101 ತಾಲೂಕುಗಳಲ್ಲಿ ಬರ; ವಿಬಿಜಿ ರಾಮ್ ಜಿ ಯೋಜನೆಯಲ್ಲಿ 15 ದಿನದೊಳಗೆ ಕೂಲಿ ಪಾವತಿಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೆ ವಿಬಿಜಿ ರಾಮ್ ಜಿ ಯೋಜನೆಯಡಿ ಹೆಚ್ಚಿನ ಉದ್ಯೋಗ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರು ದಕ್ಷಿಣ, ಹಾಸನ, ಚಿಕ್ಕಮಗಳೂರು, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ಅನುಷ್ಠಾನದ ಬಗ್ಗೆ ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮೀಣ …

Read More »

ಸಾಕು ನಾಯಿಯನ್ನು ಕಚ್ಚಿದ ಬೀದಿನಾಯಿಗೆ ಗುಂಡಿಕ್ಕಿ ಹತ್ಯೆ – ಆರೋಪಿ ಅರೆಸ್ಟ್‌

ಶಿವಮೊಗ್ಗ: ತಾನು ಸಾಕಿದ ನಾಯಿಯನ್ನ ಕಚ್ಚಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗಮೂರ್ತಿ ನಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಗ್ರಾಮದ ಬೋರಪ್ಪ ಎಂಬವರು ಪ್ರತಿನಿತ್ಯ ದನ ಮೇಯಿಸಲು ತೆರಳುತ್ತಿದ್ದ ವೇಳೆ ಅವರೊಂದಿಗೆ ಬೀದಿ ನಾಯಿಯೊಂದು ಹಿಂಬಾಲಿಸಿ ಬರುತ್ತಿತ್ತು. ಅದೇ ನಾಯಿ ಗ್ರಾಮದ ಲಿಂಗಮೂರ್ತಿಯ ಮನೆ ಬಳಿ ಬಂದಾಗ ಅಲ್ಲಿದ್ದ ಸಾಕು ನಾಯಿಗಳನ್ನು ಕಚ್ಚಿತ್ತು. …

Read More »

ಗುಟ್ಕಾ ನಿಷೇಧ ವಿರೋಧಿಸಿ ದಾವಣಗೆರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ – ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ದಾವಣಗೆರೆ: ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಆದೇಶ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಅಡಿಕೆ ಬೆಳೆಗಾರರು ಹಾಗೂ ಬಿಜೆಪಿ ಮುಖಂಡರು ದಾವಣಗೆರೆ ಎಸಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಪರಿಷತ್ ಸದಸ್ಯ ಮಾಡಾಳ್ ಮಲ್ಲಿಕಾರ್ಜುನ್  ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ.26 ರಿಂದ ಅಯಾ ಕ್ಷೇತ್ರಗಳಿಂದ ಪಾದಯಾತ್ರೆ ನಡೆಸಿದ ಬಿಜೆಪಿ ನಾಯಕರು, ಇಂದು ದಾವಣಗೆರೆಗೆ ಆಗಮಿಸಿ ಪ್ರತಿಭಟನೆ …

Read More »

ಹೆಂಡತಿ ಮೇಲಿನ ಕೋಪಕ್ಕೆ ಮಗುವನ್ನು ನದಿಗೆಸೆದು ಕೊಂದ ಪಾಪಿ ತಂದೆ

ಕಲಬುರಗಿ: ಹೆಂಡತಿ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ 4 ವರ್ಷದ ಮಗುವನ್ನು ನದಿಗೆ ಎಸೆದು ಹತ್ಯೆ ಮಾಡಿದ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಈತ ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ. ಇದೇ ಸಿಟ್ಟಲ್ಲಿ ಕೆಲಕಾಲ ಮಗು ಗುಂಡೇಶ್‌ನನ್ನು ಎತ್ತಿಕೊಂಡು ಆಟವಾಡಿಸುತ್ತಾ ಕರೆದುಕೊಂಡು ಹೋಗಿ ನಾಗರಾಳ ಜಲಾಶಯಕ್ಕೆ ಎಸೆದಿದ್ದಾನೆ. ಈ ವಿಷಯ ತಿಳಿದ ಬಳಿಕ ಗಂಡನ ವಿರುದ್ಧ ಪತ್ನಿ ಕಲ್ಪನಾ ದೂರು …

Read More »

ನೈಸ್ ವಿರುದ್ಧ ಜೆಡಿಎಸ್ ಜಾಗೃತಿ ಅಭಿಯಾನ – Nothing Nice ವೆಬ್‌ಸೈಟ್ ಬಿಡುಗಡೆ ಮಾಡಿದ ನಿಖಿಲ್

ಬೆಂಗಳೂರು: ನೈಸ್ ವಿರುದ್ಧ ಜೆಡಿಎಸ್  ಹೋರಾಟ ಮತ್ತೊಂದು ಹಂತಕ್ಕೆ ತಲುಪಿದೆ. ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿರೋ ಜೆಡಿಎಸ್ “ನಥಿಂಗ್ ನೈಸ್” ವೆಬ್‌ಸೈಟ್ ಬಿಡುಗಡೆ ಮಾಡಿದೆ. ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ವೆಬ್‌ಸೈಟ್ ಬಿಡುಗಡೆ ಮಾಡಿದರು. ಈ ವೆಬ್‌ಸೈಟ್‌ನಲ್ಲಿ ನೈಸ್ ಯೋಜನೆಯ ಸಂಪೂರ್ಣ ವಿವರ, ಟೋಲ್ ಯಾಕೆ ಕಟ್ಟಬಾರದು? ಹೈಕೋರ್ಟ್ ಆದೇಶ ಏನು? ಎಂಬುದು ಸೇರಿ ನೈಸ್ ಅಕ್ರಮದ ಸಂಪೂರ್ಣ ದಾಖಲಾತಿಗಳು ಇರಲಿವೆ. ಈ ಮೂಲಕ ಜನರಲ್ಲಿ ಜಾಗೃತಿ ಅಭಿಯಾನ …

Read More »

ದರ್ಶನ್‌ಗೆ ಸಂಕಷ್ಟ ಫಿಕ್ಸ್‌ – ಪ್ರದೋಷ್ ಮಾಫಿ ಸಾಕ್ಷಿಗೆ ಮುಹೂರ್ತ ಫಿಕ್ಸ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ  ಸಂಕಷ್ಟ ಎದುರಾಗುವ ಕಾಲ ಸನ್ನಿಹಿತವಾದಂತಿದೆ. ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿ ನುಡಿಯಲು ಕೋರ್ಟ್‌ ಕೊನೆಗೂ ಮುಹೂರ್ತ ಫಿಕ್ಸ್‌ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ  ಸಾಕ್ಷ್ಯ ನೀಡುವಂತೆ 59ನೇ ಸಿಸಿಹೆಚ್ ಕೋರ್ಟ್‌ ಪ್ರದೋಷ್‌ಗೆ ವಿಟ್ನೆಸ್ ಸಮನ್ಸ್ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಪ್ರದೋಷ್‌ಗೆ ವಿಟ್ನೆಸ್‌ ಸಮನ್ಸ್‌ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿಯನ್ನ ಪರಿಗಣಿಸಿದ ನ್ಯಾಯಾಲಯ …

Read More »