Breaking News

ಸಾಮಾಜಿಕ ಅಂತರ ನಿಯಮ ಉಲ್ಲಂಘನೆ ಬಸ್, ಆಟೋ, ಕ್ಯಾಬ್ ವಶಕ್ಕೆ: 9 ಪ್ರಕರಣ ದಾಖಲು

ಧಾರವಾಡ: ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಸಾಮಾಜಿಕ ಅಂತರ ನಿಯಮ ಪಾಲಿಸದೇ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ವಾಹನಗಳನ್ನು ಪೊಲೀಸರು ಸೀಜ್ ಮಾಡಿ, ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತ್ಯೇಕವಾಗಿ ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. 3 ಬೇಂದ್ರೆ ನಗರಸಾರಿಗೆ ವಾಹನಗಳು, ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್ ಹಾಗೂ ಸರಕು ಸಾಗಣೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. …

Read More »

ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಶುರುವಾದ ಆಸ್ತಿ ವಿವಾದ – ಕೋರ್ಟ್ ಮೆಟ್ಟಿಲೇರಿದ ಪತ್ನಿ

ಬೆಂಗಳೂರು: ಮುತ್ತಪ್ಪ ರೈ ಸಾವಿನ ನಂತರ ಅವರ ಕುಟುಂಬದಲ್ಲಿ ಆಸ್ತಿ ವಿವಾದ ಶುರುವಾಗಿದ್ದು, ರೈ ಎರಡನೇ ಪತ್ನಿ ಆಸ್ತಿಯಲ್ಲಿ ಪಾಲು ಕೇಳಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ …

Read More »

ಫೇಸ್ಬುಕ್, ಇನ್‍ಸ್ಟಾಗ್ರಾಮ್ ಸೇರಿ 89 ಆ್ಯಪ್ ಡಿಲೀಟ್ ಮಾಡುವಂತೆ ಸೈನಿಕರಿಗೆ ಸೂಚನೆ

ನವದೆಹಲಿ: ವಿದೇಶಿ ಆ್ಯಪ್ ಬ್ಯಾನ್ ಮಾಡುವ ಕುರಿತು ಕೇಂದ್ರ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, 59 ಚೀನಿ ಆ್ಯಪ್‍ಗಳನ್ನು ದೇಶಾದ್ಯಂತ ಬ್ಯಾನ್ ಮಾಡಿದ ಬಳಿಕ ಇದೀಗ ಸೇನೆಗೆ ವಿಶೇಷ ಸೂಚನೆಯೊಂದನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ಆ್ಯಪ್ ನಿಷೇಧ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಈಗಾಗಲೇ ಚೀನಾ ಆ್ಯಪ್‍ಗಳನ್ನು ಬ್ಯಾನ್ ಮಾಡಲಾಗಿದೆ. ಇದೀಗ ಸೇನೆಗೆ 89 ಆ್ಯಪ್‍ಗಳನ್ನು ಬಳಸದಂತೆ ಸೂಚನೆ ನೀಡಲಾಗಿದೆ. ಭಾರತೀಯ ಸೇನೆ ಈ ಕುರಿತು ಯೋಧರಿಗೆ ಸೂಚನೆ ನೀಡಿದ್ದು, …

Read More »

ಕೊರನಾ ಸೋಂಕಿನ ಕಣಗಳು ಗಾಳಿಯಲ್ಲೂ ಹರಡುತ್ತದೆ: ವಿಜ್ಞಾನಿಗಳ ವಾದ

ಜಿನಿವಾ,ಜು.8- ಕಿಲ್ಲರ್ ಕೊರನಾ ಸೋಂಕಿನ ಕಣಗಳು ಗಾಳಿಯಲ್ಲೂ ಹರಡುತ್ತದೆ ಎಂಬ ವಿಜ್ಞಾನಿಗಳ ವಾದವನ್ನು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಕೊಂಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಶ್ವಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯಸ್ಥ ಮರಿಯಾ ವ್ಯಾನ್ ಕೆರ್‍ಕೋವೆ ಅವರು ಕೋವಿಡ್ ಸೋಂಕು ಗಾಳಿಯಲ್ಲಿ ಹರಡುತ್ತದೆ ಎಂದು 32 ದೇಶಗಳ 239 ವಿಜ್ಞಾನಿಗಳು ಸಾಕ್ಷೀಕರಿಸಿರುವ ಅಂಶವನ್ನು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಈ ಮೊದಲು ಕೊರೊನಾ ಸೋಂಕು ಕಣ್ಣು ಮೂಗು ಬಾಯಿ …

Read More »

ಕಾಂಗ್ರೆಸ್ ಕಾರ್ಯಕರ್ತರಿಗೂ ಜನಸೇವೆಯ ಅವಕಾಶ ನೀಡುವಂತೆ ಸಿಎಂಗೆ ಡಿಕೆಶಿ ಪತ್ರ

ಬೆಂಗಳೂರು: ಕೊರೋನಾ ಮಹಾಮಾರಿ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೋನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು (ಕೊರೊನಾ ವಾರಿಯರ್ಸ್) ಬಳಸಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಸಿಎಂಗೆ ಪತ್ರ ಬರೆದಿರುವ ಶಿವಕುಮಾರ್, ಹೇಳಿರುವುದಿಷ್ಟು: ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಕೋವಿಡ್ …

Read More »

ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡದೆ ಸಭೆ ಸಕ್ಸಸ್, 6,000 ಬೆಡ್ ಮೀಸಲು

ಬೆಂಗಳೂರು , : ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದ್ದು ಕೊರೋನ ಚಿಕಿತ್ಸೆಗೆ ಹೆಚ್ಚುವರಿ ಹಾಸಿಗೆಗಳನ್ನು ಮೀಸಲಿಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ಸೂಚಿಸಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಆನ್‌ಲೈನ್ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 6,000 ದಿಂದ 7,000 ಹಾಸಿಗೆಗಳನ್ನು ತಮ್ಮದೇ ಆದ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಗಳಲ್ಲಿ ಮೀಸಲಿಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಕೊಂಡಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ …

Read More »

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ

ಬೆಳಗಾವಿ, : ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗವು ಇಂದು ಮಹಾರಾಷ್ಟ್ರ ಸರ್ಕಾರದ ಜತೆ ಚರ್ಚೆ ನಡೆಸಿತು. ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ರಾಜ್ಯ ನಿಯೋಗವು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಜಯಂತ್ ಪಾಟೀಲ್ ಅವರೊಂದಿಗೆ ಮುಂಬೈಯಲ್ಲಿ ಸಭೆ ನಡೆಸಿತು. ಆಲಮಟ್ಟಿ ಜಲಾಶಯದ ಎತ್ತರದ …

Read More »

ಕಾಫಿನಾಡಲ್ಲಿ ಕೊರೊನಾ ದರ್ಬಾರ್- ……………..

ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಎಗ್ಗಿಲ್ಲದೆ ಕೊರೊನಾ ಸೋಂಕು ಹಬ್ಬುತ್ತಿದೆ. ಇಂದು ಒಂದೇ ದಿನ 23 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ ಜನ ಮತ್ತಷ್ಟು ಕಂಗಾಲಾಗಿದ್ದಾರೆ. ಚಿಕ್ಕಮಗಳೂರು ಹಾಗೂ ಕಡೂರು ತಾಲೂಕಿನಲ್ಲಿ ಕೊರೊನಾ ಅಬ್ಬರ ಮುಂದುವರಿದಿದೆ. ಇಂದು ಚಿಕ್ಕಮಗಳೂರಿನಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಕಡೂರಿನಲ್ಲಿ ಎಂಟು ಪ್ರಕರಣಗಳು ಬೆಳಕಿಗೆ ಬಂದಿದೆ. ಉಳಿದಂತೆ ಜಿಲ್ಲೆಯ ಕೊಪ್ಪ, ಎನ್.ಆರ್.ಪುರ ಹಾಗೂ ಅಜ್ಜಂಪುರದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಕಡೂರು ನಗರದ …

Read More »

1.20 ಲಕ್ಷ ಮಂದಿ ಕೊರೋನಾ ಸೋಂಕಿಗೆ ತುತ್ತಾಗಬಹುದು

ಬೆಂಗಳೂರು: ಮನುಕುಲಕ್ಕೆ ಬೆನ್ನಿಗಂಟಿದ ಬೇತಾಳದಂತೆ ಮಾರ್ಪಟ್ಟಿರುವ ಕೊರೋನಾ ಹೆಮ್ಮಾರಿ ಸದ್ಯಕ್ಕೆ ಬಿಟ್ಟು ಹೋಗುವ ರೀತಿ ಕಾಣುತ್ತಿಲ್ಲ. ನವೆಂಬರ್‌ವರೆಗೆ ಅಲ್ಲ, ಡಿಸೆಂಬರ್‌ವರಗೆ ಅಲ್ಲ, ಫೆಬ್ರವರಿ ಕಳೆದರೂ ಕೂಡ ಸೋಂಕು ಕಡಿಮೆ ಆಗುವ ಲಕ್ಷಣವೂ ಇಲ್ಲ. ಅಕ್ಟೋಬರ್, ನವೆಂಬರ್ ಹೊತ್ತಿಗೆ ಅಂದ್ರೆ ದೀಪಾವಳಿ ವೇಳೆಗೆ ನೀವು ಊಹಿಸಲಾಗದ ಮಟ್ಟಕ್ಕೆ ಕೊರೋನಾ ಸೋಂಕು ವ್ಯಾಪಿಸುತ್ತದೆ. ಸೋಂಕು ಪೀಕ್‍ಗೆ ಹೋಗುತ್ತೆ. ಸಾವು ನೋವುಗಳು ಹೆಚ್ಚಾಗಬಹುದು ಎನ್ನಲಾಗುತ್ತಿದೆ. ಕೊರೋನಾ ಹಾಟ್‍ಸ್ಪಾಟ್ ಸಿಟಿಯಾಗಿ ಮಾರ್ಪಟ್ಟಿರುವ ಬೆಂಗಳೂರಿನಲ್ಲಿ ಫೆಬ್ರವರಿ ಹೊತ್ತಿಗೆ …

Read More »

ರಾಯಚೂರು: ಹೊರ ಜಿಲ್ಲೆಯಿಂದ ಬಂದವರಿಗೆ 14 ದಿನ ಕಡ್ಡಾಯ ಹೋಂ ಕ್ವಾರಂಟೈನ್

ರಾಯಚೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಗುಳೆ ಹೋದವರು ಸ್ವಗ್ರಾಮಕ್ಕೆ ವಾಪಾಸ್ ಆಗಮಿಸುತ್ತಿದ್ದು, ಇಂತಹವರಿಗೆ ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. ಕೊರೊನಾ ಭೀತಿಯಿಂದ ಬೆಂಗಳೂರಿನಿಂದ ಬಂದವರಿಗೆ ಹೋಂ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಬೆಂಗಳೂರಿನಿಂದ ವಾಪಸ್ ಆಗುವವರಿಗೆ ಹೋಂ ಕ್ವಾರಂಟೈನ್ ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಮೂಲಕ 14 ದಿನಗಳ ಹೋಂ ಕ್ವಾರಂಟೈನ್ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ …

Read More »