ಡಾಣಕಶಿರೂರ ಗ್ರಾಮ ಸಂಪೂರ್ಣ ಸೀಲ್‍ಡೌನ್ -ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗಿ -ಡ್ರೋಣ್ ಕ್ಯಾಮೆರಾದಿಂದ ಹದ್ದಿನ ಕಣ್ಣು ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. …
Read More »ಇಂದು ಬೆಳಿಗ್ಗೆ 11ಕ್ಕೆ ಯಡಿಯೂರಪ್ಪ ಸುದ್ದಿಗೋಷ್ಠಿ; ಮಹತ್ವದ ಮಾಹಿತಿ ನೀಡಲಿದ್ದಾರೆ ಸಿಎಂ?
ಬೆಂಗಳೂರು (ಮೇ 6): ಲಾಕ್ಡೌನ್ ಆರಂಭವಾದಾಗಿನಿಂದಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಲೇ ಇದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸದ್ಯ ರಾಜ್ಯದ ಪರಿಸ್ಥಿತಿ ಹೇಗಿದೆ ಎನ್ನುವುದರ ಬಗ್ಗೆ ಬಿಎಸ್ವೈ ಇಂದು 11 ಗಂಟೆಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ. ಲಾಕ್ಡೌನ್ ಶುರುವಾದ ದಿನಾಂಕ ಅಂದರೆ ಮಾ.21 ನೇ ತಾರೀಕಿನಿಂದ ಇಲ್ಲಿಯವರೆಗಿನ ಪರಿಣಾಮ, ಕೋರೋನಾ ತಡೆಗಟ್ಟಲು ಲಾಕ್‌ಡೌನ್ ಎಷ್ಟರಮಟ್ಟಿಗೆ ಸಹಕಾರಿಯಾಗಿದೆ, ಕೊರೊನಾ ತಡೆಗಟ್ಟುವಲ್ಲಿ ಸರ್ಕಾರ …
Read More »ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದ 11 ಜನರಿಗೆ ಕೊರೋನಾ ಸೋಂಕು; ಮಾದಾವರ ಬಳಿ ಹೈ ಅಲರ್ಟ್
ಬೆಂಗಳೂರು (ಮೇ 06); ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (Bangalore International Exhibition Centre) ಕೆಲಸ ಮಾಡುವ ಉತ್ತರಪ್ರದೇಶ ಮೂಲದ 11 ಜನರಲ್ಲಿ ಇದೀಗ ಕೊರೋನಾ ಸೋಂಕು ಪತ್ತೆಯಾಗಿದ್ದು ಮಾದಾವರ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರಿ ಮಾದಾವರ ಬಳಿ ಇರುವ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಅನೇಕ ಉತ್ತರ ಭಾರತೀಯರು ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಿದ ವೇಳೆ ಹೈ ಟೆಂಪರೇಚರ್ ಕಂಡುಬಂದಿತ್ತು. ಹೀಗಾಗಿ 11 ಜನರನ್ನು ನೆನ್ನೆ ವಿಕ್ಟೊರಿಯಾ ಆಸ್ಪತ್ರೆಗೆ ರವಾನೆ …
Read More »ಮಲೆನಾಡಲ್ಲಿ ಭಾರೀ ಮಳೆ, ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ…
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಭರಣಿ ಮಳೆ ಅಬ್ಬರಕ್ಕೆ ಮಲೆನಾಡಿಗರು ತತ್ತರಿಸಿದೆ. ಮೂಡಿಗೆರೆಯಲ್ಲಿ ಸಂಜೆಯಿಂದ ಧಾರಾಕಾರ ಮಳೆ ಸುರಿದಿದ್ದು, ಜನ ಆತಂಕಕ್ಕೀಡಾಗಿ, ಕಳೆದ ವರ್ಷದ ಮಳೆಯನ್ನು ನೆನಪಿಸಿಕೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ತೋರಣಮಾವು ಗ್ರಾಮದಲ್ಲಿ ಮಳೆ ಆರಂಭಕ್ಕೂ ಮುನ್ನ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿದೆ. ನೋಡನೋಡ್ತಿದ್ದಂತೆ ತೆಂಗಿನ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ತಾಲೂಕಿನ ಬಯಲುಸೀಮೆ ಭಾಗ ಕಳಸಾಪುರ, ಬೆಳವಾಡಿ ಹಾಗೂ …
Read More »ಹೂವು ಬೆಳೆಗಾರರಿಗೆ ಮಾತ್ರ ಪರಿಹಾರ!- ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ……
ಮಡಿಕೇರಿ: ರೈತರಿಗೆ ಬಡ್ಡಿ ರಹಿತ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಈಗಾಗಲೇ ಬಡ್ಡಿ ರಹಿತ ಸಾಲ ಮರುಪಾವತಿ ಅವಧಿ ಮುಗಿದು ಹೋಗಿದೆ. ಆದರೆ ಲಾಕ್‍ಡೌನ್ ಕಾರಣ ರೈತರಿಗೆ ಅನುಕೂಲ ಆಗಬೇಕೆಂಬ ದೃಷ್ಠಿಯಿಂದ ಅವಧಿ ವಿಸ್ತರಿಸಲಾಗಿದೆ. ಸಾಲ ಮಾಡಿರುವ ರೈತರಿಗೆ ಯಾವುದೇ ಕಾರಣಕ್ಕೂ ಬ್ಯಾಂಕ್‍ಗಳು ಕಿರುಕುಳ ನೀಡಬಾರದು ಎಂದರು. ಲಾಕ್ ಡೌನ್ ಸಂದರ್ಭದಲ್ಲಿ ತರಕಾರಿ ಬೆಳೆಗಾರರು …
Read More »ಇಂದಿನಿಂದ ಎಣ್ಣೆ ಮತ್ತಷ್ಟು ದುಬಾರಿ?……..
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಎಣ್ಣೆ ಇಲ್ಲದೆ 42 ದಿನಗಳನ್ನು ಮುಗಿಸಿದ ಮದ್ಯಪ್ರಿಯರಿಗೆ ಇಂದು ಬಿಗ್ ಶಾಕ್ ಸುದ್ದಿಯೊಂದು ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಶೇ.6 ರಷ್ಟು ಅಬಕಾರಿ ಸುಂಕ ಹೆಚ್ಚಳದ ಬಿಸಿ ಅನುಭವಿಸಿದ್ದ ಮದ್ಯಪ್ರಿಯರಿಗೆ ಈಗ ಕೊರೊನಾ ಶಾಕ್ ಫಿಕ್ಸ್ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಹೌದು. ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆಯೆಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಅಬಕಾರಿ ಸುಂಕದ ಜೊತೆಗೆ ಮದ್ಯದ …
Read More »ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ…………..
ಧಾರವಾಡ: ಚಲಿಸುತ್ತಿದ್ದ ಲಾರಿಯಲ್ಲಿದ್ದ ಮಶಿನ್‍ಗೆ ಏಕಾಏಕಿ ಬೆಂಕಿ ತಗುಲಿದ ಘಟನೆ ಧಾರವಾಡ ಜಿಲ್ಲೆಯ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪುಣೆಯಿಂದ ಬೆಂಗಳೂರಿನ ಕೈಗಾರಿಕಾ ಪ್ರದೇಶಕ್ಕೆ ಈ ಮಶಿನ್‍ನ್ನು ಲಾರಿ ಹೊತ್ತೊಯ್ಯುತ್ತಿತ್ತು. ತೇಗೂರು ಬಳಿ ಮಿನಿ ಲಾರಿ ಬರುತ್ತಿದ್ದಂತೆ ಲಾರಿಯಲ್ಲಿದ್ದ ಮಶಿನ್‍ಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡ ಲಾರಿ ಚಾಲಕ, ಪಕ್ಕದಲ್ಲೇ ನೀರು ಇರುವುದನ್ನು ಕಂಡು ರಸ್ತೆ ಬದಿ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾನೆ. ಪಕ್ಕದಲ್ಲೇ …
Read More »ರಾಯಚೂರಿನಲ್ಲಿ ವೈದ್ಯಕೀಯ ಸಿಬ್ಬಂದಿಗೆ 3 ತಿಂಗಳಿಂದ ಸಂಬಳವನ್ನೇ ನೀಡಿಲ್ಲ!
ರಾಯಚೂರು: ಕೊರೊನಾ ವಿರುದ್ಧ ಆರೋಗ್ಯ ಇಲಾಖೆ, ವೈದ್ಯಕೀಯ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುತ್ತಿದ್ದಾರೆ. ಆದರೆ ರಾಯಚೂರಿನಲ್ಲಿ ಇವರ ಸೇವೆಗೆ ಬೆಲೆಕಟ್ಟುವುದಿರಲಿ ಸರಿಯಾಗಿ ಸಂಬಳವನ್ನೇ ನೀಡುತ್ತಿಲ್ಲ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ. ಹೌದು. ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕೋವಿಡ್ ಆಸ್ಪತ್ರೆಗಳಾದ ರಾಯಚೂರಿನ ಓಪೆಕ್ ಹಾಗೂ ರಿಮ್ಸ್ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸಂಬಳವನ್ನೇ ನೀಡಿಲ್ಲ. ವೇತನವಿಲ್ಲದೆ ಸಾವಿರಕ್ಕೂ ಅಧಿಕ ಸಿಬ್ಬಂದಿ ನಿತ್ಯ ದುಡಿಯುತ್ತಿದ್ದಾರೆ. ರಿಮ್ಸ್‍ನಲ್ಲಿ ಬಹುತೇಕ ಸಿ ಹಾಗೂ …
Read More »ಪಬ್‍ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದಕ್ಕೆ ಕೊಲೆಗೈದವನ ಕಾಲಿಗೆ ಗುಂಡೇಟು…..
ಬೆಂಗಳೂರು: ಪಬ್ ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದಕ್ಕೆ ಗೆಳೆಯನನ್ನು ಕೊಲೆಗೈದಿದ್ದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡೇಟು ಸದ್ದು ಕೇಳಿದೆ. ಪಬ್ ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದ ಅನ್ನೋ ಕಾರಣಕ್ಕೆ ಕರಣ್ ಸಿಂಗ್ ಎಂಬವನ್ನ ರೌಡಿ ಶೀಟರ್ ಪ್ರಭು ಕೊಲೆ ಮಾಡಿದ್ದನು. ಇಂದು ಪೊಲೀಸರು ಆಚಾರ್ಯ ಕಾಲೇಜ್ ಬಳಿಯ ಸಾಸಿವೆಘಟ್ಟದಲ್ಲಿ ಪ್ರಭು ಬಂಧನಕ್ಕೆ ಮುಂದಾಗಿದ್ದರು. ಈ ವೇಳೆ ಪೇದೆ …
Read More »ಹಸಿರು ವಲಯದಲ್ಲಿರೋ ಚಾಮರಾಜನಗರಕ್ಕೆ ಕಂಟಕವಾಗ್ತಾರಾ ಪೊಲೀಸ್ ಪೇದೆ?
ಬೆಂಗಳೂರು: ಇಷ್ಟು ದಿನ ಲಾಕ್‍ಡೌನ್ ಆದಾಗಿನಿಂದ ಹಸಿರು ವಲಯದಲ್ಲಿರೋ ಚಾಮರಾಜನಗರ ಕೆಂಪು ವಲಯಕ್ಕೆ ಸೇರ್ಪಡೆಯಾಗುತ್ತಾ ಅನ್ನೋ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಎಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿರೋ ಜಿಲ್ಲಾಡಳಿತ ವರದಿಗಾಗಿ ಕಾಯುತ್ತಿದೆ. ಇಂದು ಇವರೆಲ್ಲರ ವರದಿ ಬರುವ ಸಾಧ್ಯತೆಗಳಿವೆ. ಪೊಲೀಸ್ ಪೇದೆ ಬೆಂಗಳೂರಿನಲ್ಲಿಯೂ ನಾಲ್ಕು ಜನರ ಜೊತೆ ಸಂಪರ್ಕದಲ್ಲಿದ್ದನು. …
Read More »
Laxmi News 24×7