Breaking News

NDA ಸೇರ್ಪಡೆಯಾಗದೇ ಮಹಿಳಾ ಮೀಸಲಾತಿ, ಡಿಲಿಮಿಟೇಷನ್‌ ಮಸೂದೆಗೆ ಪವಾರ್ ಬಣ ಬೆಂಬಲ!

ಮುಂಬೈ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ  ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ  ಶರದ್ ಪವಾರ್ ಅವರ ಎನ್‌ಸಿಪಿ ಬಣ ಬೆಂಬಲ ನೀಡುವ ಸಾಧ್ಯತೆಯಿದೆ. ಆಡಳಿತರೂಢ ಎನ್‌ಡಿಎ  ಒಕ್ಕೂಟವನ್ನು ಅಧಿಕೃತವಾಗಿ ಸೇರದೆ ವಿಷಯ ಆಧಾರಿತವಾಗಿ ಈ ಪ್ರಮುಖ ಮಸೂದೆಗಳ ಪರವಾಗಿ ಮತ ಚಲಾಯಿಸಲು ಪವಾರ್ ಕ್ಯಾಂಪ್ ನಿರ್ಧರಿಸಿದೆ ಎಂದು ಎಂದು ಮೂಲಗಳು ತಿಳಿಸಿವೆ. ಕೇವಲ ಮಸೂದೆಗೆ ಬೆಂಬಲ ಸದ್ಯ 9 ಸಂಸದರು(8 ಲೋಕಸಭೆ ಮತ್ತು ಮತ್ತು …

Read More »

ಫಿಫಾ ವಿಶ್ವಕಪ್‌ 3ನೇ ಟ್ರೋಫಿ ಕನಸು ಭಗ್ನ – ಅಭಿಮಾನಿಗಳ ಆಕ್ರೋಶಕ್ಕೆ ಹೊತ್ತಿ ಉರಿದ ಫ್ರಾನ್ಸ್‌

ಪ್ಯಾರಿಸ್: ಫಿಫಾ ವಿಶ್ವಕಪ್‌ ಮೂರನೇ ಟ್ರೋಫಿ ಎತ್ತಿಹಿಡಿಯುವ ಫ್ರಾನ್ಸ್‌  ಕನಸು ಭಗ್ನವಾಗಿದೆ. ಮಂಗಳವಾರ ಮಧ್ಯರಾತ್ರಿ ಟೆಕ್ಸಾಸ್‌ನ ಆರ್ಲಿಂಗ್ಟನ್‌ನಲ್ಲಿರುವ ಎಟಿ & ಟಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್‌ ಸೆಮಿಫೈನಲ್‌ನಲ್ಲಿ ಸ್ಪೇನ್ (Spain) ವಿರುದ್ಧ 2-0 ಅಂತರದಿಂದ ಫ್ರಾನ್ಸ್‌ ಸೋತು 2026 ರ ಟೂರ್ನಿಯಿಂದ ಹೊರಬಿದ್ದಿತು. ಸೋಲಿನ ನಂತರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದಂತೆ ಫ್ರಾನ್ಸ್‌ನಲ್ಲಿ ಗಲಭೆಗಳು ಭುಗಿಲೆದ್ದಿವೆ. ಸೆಮಿಫೈನಲ್‌ ಪಂದ್ಯದಲ್ಲಿ ಸೋತು ಫ್ರಾನ್ಸ್‌ ತನ್ನ ಅಭಿಯಾನವನ್ನು ಕೊನೆಗೊಳಿಸಿತು. ಪಂದ್ಯದಲ್ಲಿ ಸಮಚಿತ್ತದಿಂದ …

Read More »

5 ನಿವೇಶನ, 4 ಫ್ಲಾಟ್‌, ಕಂತೆ ಕಂತೆ ನೋಟು, ಚಿನ್ನಾಭರಣ; 100 ಕೋಟಿ ಆಸ್ತಿ ಪತ್ತೆ – ಎಂಜಿನಿಯರ್‌ ಅರೆಸ್ಟ್‌

ಹೈದರಾಬಾದ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ  ಮುಖ್ಯ ಎಂಜಿನಿಯರ್ ಬಿ. ರವೀಂದರ್ ಅವರನ್ನು ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ  ಬಂಧಿಸಿದೆ. ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯಲ್ಲಿ ಎಂಜಿನಿಯರ್ ನಿವಾಸ, ಕಚೇರಿ‌, ಅವರ ಸಂಬಂಧಿಕರು, ಸಹಚರರು ಮತ್ತು ಬೇನಾಮಿದಾರರು ಎಂದು ಹೇಳಲಾದ ಒಂಬತ್ತು ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ಶೋಧದಲ್ಲಿ ಅಪಾರ ಪ್ರಮಾಣದ ಚರ ಮತ್ತು ಸ್ಥಿರ ಆಸ್ತಿಗಳು ಪತ್ತೆಯಾಗಿದ್ದು, ನೋಂದಣಿ ದಾಖಲೆಗಳ ಆಧಾರದ …

Read More »

ಶಾಶ್ವತ ನಿವಾಸಿ ಪ್ರಮಾಣಪತ್ರ ವಿರುದ್ಧ ಬಿಜೆಪಿ ಸಮರ – ರಾಜ್ಯಪಾಲರಿಗೆ ದೂರು

ಬೆಂಗಳೂರು: ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ  ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ  ಇದೀಗ ರಾಜ್ಯಪಾಲರಿಗೆ  ದೂರು ನೀಡಿದೆ. ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಸಿಟಿ ರವಿ, ಸುಧಾಕರ್ ಮತ್ತಿತರಿದ್ದ ಬಿಜೆಪಿ ನಿಯೋಗವು ಇಂದು (ಜು.15) ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ದೂರಿನಲ್ಲಿ ಪಿಆರ್‌ಸಿ ನೀಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ. ಪಿಆರ್‌ಸಿ ದೇಶದ ಭದ್ರತೆಗೆ ಆತಂಕ ತರಲಿದೆ. ಸರ್ಕಾರದ ಪಿಆರ್‌ಸಿಗೆ (PRC) ತಡೆಯೊಡ್ಡಲು ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ. …

Read More »

ಆಲಮಟ್ಟಿ ಡ್ಯಾಂನಿಂದ ಕೆರೆಗಳಿಗೆ ನೀರು ಹರಿಸಿ – ಸಿಎಂ ಡಿಕೆಶಿಗೆ ಮಾಜಿ ಸಚಿವ ಶಿವಾನಂದ ಪಾಟೀಲ್ ಮನವಿ

ಬೆಂಗಳೂರು; ವಿಜಯಪುರ  ಮತ್ತು ಬಾಗಲಕೋಟೆ  ಜಿಲ್ಲೆಯ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಲಾಲ್‌ಬಹದ್ದೂರ್ ಶಾಸ್ತ್ರಿ (ಆಲಮಟ್ಟಿ) ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶ ಮಾಡಿ ಎಂದು ಶಾಸಕ, ಮಾಜಿ ಸಚಿವ ಶಿವಾನಂದ ಪಾಟೀಲ್  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಆಲಮಟ್ಟಿ ಜಲಾಶಯ ಮುಂಗಾರಿನಲ್ಲಿ ಭರ್ತಿಯಾಗದಿದ್ದರೂ ಹಿಂಗಾರಿನಲ್ಲಿ ಭರ್ತಿಯಾಗುವ ವಿಶ್ವಾಸ ಇದೆ. ಜಲಾಶಯ ಹಿಂಗಾರಿನಲ್ಲೂ ಭರ್ತಿಯಾದ ಹಲವು ನಿದರ್ಶನಗಳಿವೆ. ಹೀಗಾಗಿ ಈಗಲೇ ಜಲಾಶಯದಿಂದ ಕಾಲುವೆಗಳಿಗೆ ನೀರು …

Read More »

ಬಿಡದಿ ಟೌನ್‌ಶಿಪ್‌ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ – ಸಮಿತಿ ರಚಿಸುತ್ತೇನೆ ಎಂದ ಸಿಎಂ

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದಂತೆ ಪರ ಹಾಗೂ ವಿರೋಧ ಹೋರಾಟಗಳು ತೀವ್ರಗೊಂಡಿರುವ ಹೊತ್ತಿನಲ್ಲೇ ಸಿಎಂ ಡಿಕೆ ಶಿವಕುಮಾರ್‌ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಸುದೀರ್ಘವಾಗಿ ಮಾತನಾಡಿದ ಮುಖ್ಯಮಂತ್ರಿಗಳು, ಬಿಡದಿ ಟೌನ್‌ಶಿಪ್‌ ಯೋಜನೆ 2 ತಿಂಗಳು ಮುಂದೂಡುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಸಣ್ಣ ಸಮಿತಿಯೊಂದನ್ನ ರಚನೆ ಮಾಡುತ್ತೇನೆ. 2 ತಿಂಗಳಲ್ಲಿ ವರದಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಇಷ್ಟ ಇದ್ದವರು ಕೊಡಲಿ, …

Read More »

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ವೇಳೆ ಪೊಲೀಸರಿಂದ ಫೈರಿಂಗ್

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ನಿನ್ನೆಯಷ್ಟೇ ಪರಾರಿಯಾಗಿದ್ದ ಆರೋಪಿಯನ್ನು ಅರೆಸ್ಟ್ ಮಾಡುವಾಗ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಾರಿಯಾಗಿದ್ದ ಮೂರು ಜನ ಆರೋಪಿಗಳ ಪತ್ತೆಗಾಗಿ ಕಲಬುರಗಿ ನಗರ, ಎಸ್‌ಪಿ ಹಾಗೂ ಬೀದರ್ ಪೊಲೀಸರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಅದರಂತೆ ಸಂತೋಷ್ ಎಂಬ ಕೈದಿ ಕಪನೂರ್ ಇಂಡಸ್ಡ್ರಿಯಲ್ ಏರಿಯಾದಲ್ಲಿ ಇರುವ ಖಚಿತ ಮಾಹಿತಿ …

Read More »

ಕರ್ನಾಟಕಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ – ಮೋದಿಗೆ ಪತ್ರ ಬರೆದು ಸಿಎಂ ಡಿಕೆಶಿ ಮನವಿ

ಬೆಂಗಳೂರು: ಎಲ್ ನೀನೋ  ಪರಿಣಾಮದಿಂದಾಗಿ ಕರ್ನಾಟಕ  ರಾಜ್ಯದಲ್ಲಿ ಶೇ. 30ರಷ್ಟು (ಜು.11ರ ಮಾಹಿತಿ) ಮಳೆ ಕೊರತೆಯಾಗಿದ್ದು, ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ನಿಯೋಜಿಸಬೇಕು ಎಂದು ಸಿಎಂ ಡಿ.ಕೆ ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿನ ಮಳೆ ಕೊರತೆ ಕುರಿತಂತೆ ಶಿವಕುಮಾರ್ ಅವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಪರಿಸ್ಥಿತಿ ವಿವರಿಸಿದ್ದಾರೆ. ಕೇಂದ್ರ ಸರ್ಕಾರ ನಿಯೋಜಿತ ತಂಡದ ಭೇಟಿಯೂ ಉದ್ಭವಿಸುತ್ತಿರುವ ಬರ ಪರಿಸ್ಥಿತಿಯ ತೀವ್ರತೆಯನ್ನು …

Read More »

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ತಲೆದಂಡವಾಗಿದ್ದ ಮೂವರು ಐಪಿಎಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ  ಬಳಿ ಕಾಲ್ತುಳಿತ  ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆದಂಡವಾಗಿದ್ದ ಮೂವರು ಐಪಿಎಸ್  ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮೂವರು ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆಯನ್ನು ಸರ್ಕಾರ ಕೈಬಿಟ್ಟಿದೆ. ಈ ಹಿಂದೆ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ಹಿಂಪಡೆದಿದ್ದ ಸರ್ಕಾರ, ಬಳಿಕ ಇಲಾಖಾ ತನಿಖೆಗೆ ಆದೇಶಿಸಿತ್ತು. ಅದರಂತೆ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ, ಅವರಿಂದ ಲಿಖಿತ ಹಾಗೂ ಮೌಖಿಕ ವಿವರಣೆ …

Read More »

ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್‌ಐಎ ಕೋರ್ಟ್‌  ತೀರ್ಪು ನೀಡಿದೆ. ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್‌ಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ. 2020 ರಂದು ರಾಜ್ಯ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದರು. ನಂತರ ಎನ್‌ಐಎ ಎಂಟ್ರಿಯಾಗಿ ಒಟ್ಟು 20 ಆರೋಪಿಗಳನ್ನು ಬಂಧಿಸಿತ್ತು. ಬಂಧನ ಮಾಡಿ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಿತ್ತು. ಇದರಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್ ಜೀವಾವಧಿ …

Read More »