ಬೆಂಗಳೂರು: ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕ ‘ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ವಿಧೇಯಕ 2025’ಕ್ಕೆ ಕೊನೆಗೂ ರಾಜ್ಯಪಾಲರು ಸಹಿ ಹಾಕಿದ್ದಾರೆ. ಸಚಿವರ ನಿಯೋಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ಭೇಟಿಯಾಗಿ ವಿಧೇಯಕಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದರು. ಸರ್ಕಾರದ ಮನವಿ ಮೇರೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳು ನೇಮಕಾತಿ ಆಗುತ್ತಿಲ್ಲ ಅಂತ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ನೇಮಕಾತಿ …
Read More »ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ
ಬೆಂಗಳೂರು: ಖಾಸಗಿ ಹೋಟೆಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಮೇಖ್ರಿ ಸರ್ಕಲ್ ಬಳಿ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲಾಗಿದೆ. ಒತ್ತಡ ಹೆಚ್ಚಿಸಲು ಡಿಕೆಶಿ ಬೆಂಬಲಿಗರ ಸಭೆ ನಡೆಸಿದ್ದಾರೆನ್ನಲಾಗಿದೆ. ಶಾಸಕ ಹೆಚ್.ಸಿ.ಬಾಲಕೃಷ್ಣ ಬರ್ತ್ ಡೇ ಪಾರ್ಟಿ ನೆಪದಲ್ಲಿ ಶಾಸಕರು ಸಭೆ ಸೇರಿದ್ದರು. ಸಿ.ಪಿ.ಯೋಗೇಶ್ವರ್, ಕುಣಿಗಲ್ ರಂಗನಾಥ್, ಆನೇಕಲ್ ಶಿವಣ್ಣ, ಪಾವಗಡ ವೆಂಕಟೇಶ್, ಮದ್ದೂರು ಉದಯ್ ಗೌಡ, ಮಂಥರ್ ಗೌಡ, ಬಸವರಾಜ ಶಿವಗಂಗಾ, ಶರತ್ ಬಚ್ಚೇಗೌಡ, ಗಣಿಗ …
Read More »ಎಪಿಎಂಸಿ, ಜೈ ಕಿಸಾನ್ ಮಾರುಕಟ್ಟೆ ವರ್ತಕರ ಸಮಸ್ಯೆ ನಿವಾರಣೆಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆಗೆ ದೇಶದಲ್ಲಿಯೇ ಒಳ್ಳೆಯ ಹೆಸರು ಇದ್ದು, ಈ ಹೆಸರನ್ನು ಉಳಿಸುವ ಜವಾಬ್ದಾರಿ ಎಪಿಎಂಸಿ ಮತ್ತು ಜೈ ಕಿಸಾನ್ ಖಾಸಗಿ ಮಾರುಕಟ್ಟೆ ವರ್ತಕರ ಮೇಲಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗಾವಿ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಮತ್ತು ಜೈ ಕಿಸಾನ್ ಖಾಸಗಿ ಮಾರುಕಟ್ಟೆ ವರ್ತಕರ ವಿವಾದ ಬಗೆಹರಿಸಲು …
Read More »ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್
ಬೆಂಗಳೂರು: ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು ಅಂತ ಗೃಹ ಸಚಿವ ಪರಮೇಶ್ವರ್ ಪುನರುಚ್ಚಾರ ಮಾಡಿದ್ದಾರೆ. ಪರಮೇಶ್ವರ್ ಸಿಎಂ ಆಗಬೇಕು ಎಂಬ ಅಭಿಮಾನಿಗಳು ಕೂಗಿನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಕುರ್ಚಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಆಗಿದೆ. ನಾನು ಅದಕ್ಕೆ ಹೆಚ್ಚು ಗೊಂದಲ ಮಾಡೋದಕ್ಕೆ ತಯಾರಿಲ್ಲ. ಅನೇಕರು ನನ್ನನ್ನ ಪ್ರಶ್ನೆ ಮಾಡ್ತಾರೆ, ಅಭಿಮಾನಿಗಳು ಅಲ್ಲಲ್ಲಿ ಸಿಎಂ ಅಗಬೇಕು ಅಂತ ಅವರ ಭಾವನೆ ವ್ಯಕ್ತಪಡಿಸುತ್ತಾರೆ. ಸಿಎಂ ಆಗಬೇಕು …
Read More »ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ
ವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ ) ಸಮಾವೇಶ ಆಯೋಜನೆ ಮಾಡಲಾಗಿದೆ. ಶುಕ್ರವಾರ ವಿಜಯಪುರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿ ಆಗಲಿದ್ದಾರೆ. ವಿಜಯಪುರ ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದ …
Read More »ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ – ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್
ತುಮಕೂರು: ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ ಎಂದು ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುರುವೇಕೆರೆ ಪಟ್ಟಣದ ಡಿಪ್ಲೋಮಾ ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆ ಬಳಿ ಘಟನೆ ನಡೆದಿದೆ. ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ದುರ್ದೈವಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬುಧವಾರ (ಫೆ.25) ಬೆಳಿಗ್ಗೆ ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೊರಟಿದ್ದ. …
Read More »ಅಕ್ರಮವಾಗಿ ಗೋವಾ ಮದ್ಯ ಮಾರಾಟ: ಆರೋಪಿ ವಶಕ್ಕೆ
ಬೆಳಗಾವಿ: ಬೆಳಗಾವಿ ನಗರದ ಉದ್ಯಮಬಾಗದ ಅರುಣ ಇಂಜಿನಿಯರಿಂಗ್ ಫ್ಯಾಕ್ಟರಿ ಎದುರಿಗೆ, ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕಿರುವ ವಿವಿಧ ಕಂಪನಿಯ ರಮ್, ವೋಡಾ, ವಿಸ್ಕಿ ಒಟ್ಟು 16 ಸರಾಯಿ ಬಾಟಲಿಗಳನ್ನು ಕೈಚೀಲದಲ್ಲಿಟ್ಟುಕೊಂಡು ಮಾರಾಟದಲ್ಲಿ ತೊಡಗಿದ್ದಾಗ ಉದ್ಯಮಬಾಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪರಮೇಶ್ವರ ದೇವಪ್ಪ ನಾಯಿಕ (50) ಬಂದಿತ ಆರೋಪಿ. ಉದ್ಯಮಬಾಗ ಪೊಲೀಸ್ ಠಾಣೆಯ ಪಿಎಸ್‌ಐ ಕಿರಣ ಸಿ ಹೊನಕಟ್ಟಿ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ, ಒಟ್ಟು …
Read More »ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮೀಶನರ್ ಎದೆ ನೋವು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ
ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮೀಶನರ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಘಟನೆ ನಡೆದಿದೆ. Hubballi–Dharwad ಪೊಲೀಸ್ ಕಮೀಶನರ್ ಅವರಿಗೆ ಎದೆ ನೋವು ಜಾಸ್ತಿಯಾದ ಕಾರಣ ತಕ್ಷಣವೇ ಚಿಕಿತ್ಸೆ ಪಡೆಯಲಾಯಿತು. ಇತ್ತೀಚೆಗೆ Dharwadನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಉಂಟಾದ ಗದ್ದಲ ಹಾಗೂ ಉದ್ವಿಗ್ನ ಪರಿಸ್ಥಿತಿಯ ನಡುವೆ ಅವರು ಸ್ಥಳದಲ್ಲೇ ಹಾಜರಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಮುನ್ನಡೆ ವಹಿಸಿದ್ದರು. ಪ್ರತಿಭಟನೆ ವೇಳೆ ನಡೆದ ತಳ್ಳಾಟ–ಗಲಾಟೆ ಹಾಗೂ ಒತ್ತಡದ …
Read More »ಸಂಕೇಶ್ವರ: ಹಿಂದೂ ಸಂಘಟನೆ ಕಾರ್ಯಕರ್ತರಿಂದಲೇ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ಕೊಲೆ ಯತ್ನ!
24 ಗಂಟೆಗಳಲ್ಲಿ 7 ಆರೋಪಿಗಳನ್ನು ಬಂಧಿಸಿದ ಸಂಕೇಶ್ವರ ಪೊಲೀಸರು ಹುಕ್ಕೇರಿ: ಸಂಕೇಶ್ವರ ಪಟ್ಟಣದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ನಡೆದ ತಲವಾರ್ ದಾಳಿಯ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಕೇವಲ 24 ಗಂಟೆಗಳೊಳಗಾಗಿ ಬೇಧಿಸಿ ಏಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಕೇಶ್ವರ ಪಟ್ಟಣದ ಸಾಯಿ ಕಾರ್ಯಾಲಯದ ಸಮೀಪ ಸೋಮವಾರ ರಾತ್ರಿ ಅನಾಮಿಕ ಗುಂಪೊಂದು ಕಾರಿನಲ್ಲಿ ಬಂದು ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ದತ್ತಾ ಥೋರವತ್ ಅವರ ಮೇಲೆ ತಲವಾರ್‌ನಿಂದ ಕುತ್ತಿಗೆ …
Read More »ಕಿತ್ತೂರು ಹಿರೇನಂದಿಹಳ್ಳಿ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು: ಪತ್ನಿ–ಪುತ್ರ ಸೇರಿ ನಾಲ್ವರ ಬಂಧನ
ಬೆಳಗಾವಿ, ಫೆಬ್ರವರಿ 26: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದ ಅಮಾನುಷ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆಗೈದ ಪ್ರಕರಣದಲ್ಲಿ ಮೃತನ ಪತ್ನಿ ಹಾಗೂ ಪುತ್ರನೇ ಸಂಚಿನಲ್ಲಿ ಭಾಗಿಯಾಗಿದ್ದರೆಂಬ ಅಂಶ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಹೊರವಲಯದ ಜಮೀನಿನಲ್ಲಿ ಶವ ಪತ್ತೆಯಾಗಿತ್ತು. ಮೃತರನ್ನು ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ್ …
Read More »
Laxmi News 24×7