Breaking News

ಹೆಬ್ಬಾಳ್ಕರ್ ಶೀಘ್ರ ಗುಣಮುಖರಾಗಲಿ ;ಸಿ.ಟಿ ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಪ್ರಾರ್ಥಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿ.ಟಿ ರವಿ ಅವರು, ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಿ.ಟಿ ರವಿ ಮಧ್ಯೆ ನಡೆದ …

Read More »

ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ

ಬೆಳಗಾವಿ: ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಇಂದು ನಡೆದಿದೆ. ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪದಮುಕಿ(43) ಕೊಲೆಯಾದ ಮಹಿಳೆ. ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ(24) ಕೊಲೆ ಮಾಡಿದ ಆರೋಪಿ. ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ಮಗಳು ಛಾಯಾ, ಅಳಿಯ ಶುಭಂ ಜೊತೆ ವಾಸವಾಗಿದ್ದರು. ಕಳೆದ 7 ತಿಂಗಳ ಹಿಂದೆ ಅಷ್ಟೇ ಇವರ ಮದುವೆ …

Read More »

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ

ಬೆಂಗಳೂರು, ಜನವರಿ 14: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ (Bengaluru) ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ …

Read More »

ನಾನು ದಲಿತ, ನಾನೇಕೆ ಸಿಎಂ ಆಗಬಾರದು?’: ಸಚಿವ ತಿಮ್ಮಾಪುರ

ಹುಬ್ಬಳ್ಳಿ, ಜನವರಿ 14, ಆಡಳಿತಾರೂಢ ಕಾಂಗ್ರೆಸ್ (Congress)​ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ಜೋರಾಗಿದ್ದು, ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆಗುವ ಡ್ಯಾಮೇಜ್​ ಅನ್ನು ತಡೆಯಲು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ (Randeep Singh Surjewala) ​ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಸುರ್ಜೆವಾಲಾ ರಾಜ್ಯ ನಾಯಕರಿಗೆ ಖಡಕ್​ ಸೂಚನೆ ನೀಡಿದ ಬಳಿಕವೂ ಸಿಎಂ ಆಗುವ ಕೂಗು ನಿಂತಿಲ್ಲ. ದಲಿತ ಸಿಎಂ ಕೂಗು ರಾಜ್ಯದಲ್ಲಿ …

Read More »

ಹಾವೇರಿಯ ತೋಪಿನ ದುರ್ಗಾದೇವಿಗಿಲ್ಲ ಪ್ರಾಣಿ ಬಲಿ: ಇಲ್ಲಿ ಹಣ್ಣುಕಾಯಿಯೇ ನೈವೇದ್ಯ

ಹಾವೇರಿ: ಬಹುತೇಕ ಹೆಣ್ಣುದೇವರಿಗೆ ಭಕ್ತರು ನೈವೇದ್ಯ ರೂಪದಲ್ಲಿ ಕುರಿ, ಕೋಳಿಗಳನ್ನು ಅರ್ಪಿಸುವುದುಂಟು. ಇನ್ನು ಕೆಲವೆಡೆ ದುರ್ಗಾದೇವಿಗೆ ಕೋಣ ಬಲಿ ನೀಡುವ ಸಂಪ್ರದಾಯವೂ ಇದೆ. ಇತ್ತೀಚೆಗೆ ಪ್ರಾಣಿ ದಯಾ ಸಂಘದ ಹೋರಾಟದ ಫಲವಾಗಿ ಪ್ರಾಣಿಬಲಿ ಕಡಿಮೆಯಾಗಿದೆ. ಇದೇ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರದ ದೇವಿ ಜಾತ್ರೆ ವಿಶಿಷ್ಟವಾಗಿದೆ. ಈ ಜಾತ್ರೆಯಲ್ಲಿ ಯಾವುದೇ ಪ್ರಾಣಿಬಲಿ ನಡೆಯುವುದಿಲ್ಲ. ಭಕ್ತರು ದೇವಿಗೆ ಕುರಿ, ಕೋಳಿ, ಕೋಣ ಸೇರಿದಂತೆ ಯಾವುದೇ ಪ್ರಾಣಿಯ ರಕ್ತದ ನೈವೇದ್ಯ ಕೊಡುವುದಿಲ್ಲ. ಪ್ರಾಣಿ …

Read More »

6 ವರ್ಷದ ಬಾಲಕಿಯ ಅತ್ಯಾಚಾರಗೈದು ಹತ್ಯೆಗೈದ ಬಿಹಾರದ ಯುವಕ ಸೆರೆ

ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಬಿಹಾರದ ಯುವಕನನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಹೊಯ್ಸಳ ನಗರದಲ್ಲಿ ಸೋಮವಾರ ಸಂಜೆ ಘಟನೆ ನಡೆದಿದೆ. ದುಷ್ಕೃತ್ಯವೆಸಗಿದ ಅಭಿಷೇಕ್ ಕುಮಾರ್‌ (25) ಎಂಬಾತನನ್ನು ಸ್ಥಳೀಯರೇ ಹಿಡಿದು, ಥಳಿಸಿ ಪೊಲೀಸರಿಗೊಪ್ಪಿಸಿದ್ದರು. ಕೊಲೆಯಾದ ಬಾಲಕಿಯ ಪೋಷಕರು ನೇಪಾಳ ಮೂಲದವರಾಗಿದ್ದು, ಬೆಂಗಳೂರಲ್ಲಿ ಕಟ್ಟಡ ಕಾಮಗಾರಿ ಕೆಲಸ ಮಾಡಿಕೊಂಡಿದ್ದರು. ಆರೋಪಿಯೂ ಕಟ್ಟಡ ಕಾಮಗಾರಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ಸಂಜೆ 7:30ರ ಸುಮಾರಿಗೆ ಪೋಷಕರು …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು

ಬೆಳಗಾವಿ, ಜನವರಿ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ ಘಟನೆ ನಡೆದಿರುವುದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. …

Read More »

ಸರ್ಕಾರಕ್ಕಿಂತ ಪಕ್ಷ ದೊಡ್ಡದು,ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು;: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಂಪುಟ ಪುನಾರಚನೆ ಕಪೋಲಕಲ್ಪಿತ ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು. …

Read More »

ದೈಹಿಕ ಶ್ರಮ , ವ್ಯಾಯಮ,ಯೋಗ,ನಿಯಮಿತ ಸಾತ್ವಿಕ ಆಹಾರ ಸೇವನೆಯಿಂದ ಬಿಪಿ, ಶುಗರ ‘ ಬರದಂತೆ ತಡೆಯಬಹುದೆಂದು ಡಾ ಎಂ.ಆರ್ ಪ್ರಸಾದ ಅವರು ಹೇಳಿದರು.

ಬೆಳಗಾವಿ – ದೈಹಿಕ ಶ್ರಮ , ವ್ಯಾಯಮ,ಯೋಗ,ನಿಯಮಿತ ಸಾತ್ವಿಕ ಆಹಾರ ಸೇವನೆಯಿಂದ ಬಿಪಿ, ಶುಗರ ‘ ಬರದಂತೆ ತಡೆಯಬಹುದೆಂದು ಡಾ ಎಂ.ಆರ್ ಪ್ರಸಾದ ಅವರು ಹೇಳಿದರು. ಮಾಳಮಾರುತಿ ನಾಗರಿಕ ವಿಕಾಸ ಸಂಘದಿಂದ ಎಸ್ ಜಿ ವಿ ಮಹೇಶ ಪಿಯು ಕಾಲೇಜಿನಲ್ಲಿ ಏರ್ಪಡಿಸಿದ ಉಚಿತ ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಡಾ. ಪ್ರಸಾದ ಎಂ.ಆರ್ ಅವರು ಆರೋಗ್ಯ ತಪಸಣಾ ತಂಡದೊಂದಿಗೆ ಆಗಮಿಸಿ ಸುಮಾರು 60 ಹಿರಿಯ ನಾಗರಿಕರಿಗೆ ಬಿಪಿ, …

Read More »

ಡಿಸೆಂಬರ್​ನಲ್ಲಿ ಹಣದುಬ್ಬರ ಶೇ. 5.22; ನಾಲ್ಕು ತಿಂಗಳಲ್ಲೇ ಕನಿಷ್ಠ ಬೆಲೆ ಹೆಚ್ಚಳ

ನವದೆಹಲಿ, ಜನವರಿ 14: ಭಾರತದ ರೀಟೇಲ್ ಹಣದುಬ್ಬರ ದರ ಡಿಸೆಂಬರ್ ತಿಂಗಳಲ್ಲಿ ಶೇ. 5.22ರಷ್ಟಿದೆ. ಹಿಂದಿನ ತಿಂಗಳು ಮತ್ತು ಹಿಂದಿನ ವರ್ಷದಕ್ಕೆ ಹೋಲಿಸಿದರೆ ಹಣದುಬ್ಬರ ಇಳಿಕೆ ಆಗಿದೆ. 2023ರ ಡಿಸೆಂಬರ್ ತಿಂಗಳಲ್ಲಿ ಹಣದುಬ್ಬರ ಶೇ. 5.69ರಷ್ಟಿತ್ತು. 2024ರ ನವೆಂಬರ್ ತಿಂಗಳಲ್ಲಿ ಶೇ. 5.48ರಷ್ಟಿತ್ತು. ಸರ್ಕಾರ ನಿನ್ನೆ ಸೋಮವಾರ ಡಿಸೆಂಬರ್ ತಿಂಗಳ ಹಣದುಬ್ಬರ ದರದ ದತ್ತಾಂಶವನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ ತಿಂಗಳಲ್ಲಿ ಆಹಾರ ವಸ್ತು ವಿಭಾಗದಲ್ಲಿ ಬೆಲೆ ಏರಿಕೆ ಪ್ರಮಾಣ ಕಡಿಮೆ ಇದ್ದರಿಂದ …

Read More »