ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ರೋಗಿಗಳ ಸಂಖ್ಯೆ 7ಕ್ಕೇರಿದೆ. ರಾಯಬಾಗದ ಮೂವರು ಮಹಿಳೆಯರು ಸೇರಿದಂತೆ ಒಟ್ಟೂ ನಾಲ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 36 ವರ್ಷ, 67 ವರ್ಷ ಹಾಗೂ 41 ವರ್ಷದ ಮಹಿಳೆಯರಿಗೆ ಹಾಗೂ 40 ವರ್ಷದ ಪುರುಷನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇವರೆಲ್ಲರೂ ಮಾರ್ಚ 13ರಿಂದ 18ರ ವರೆಗೆ ನಿಜಾಮುದ್ದೀನ್ ನಲ್ಲಿ ನಡೆದ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದರು ಎನ್ನುವುದು ಬಹಿರಂಗವಾಗಿದೆ. ಈ ಎಲ್ಲರಿಗೂ ಬೆಳಗಾವಿಯ ಬಿಮ್ಸ್ …
Read More »ಲಾಕಡೌನ ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಜನರಿಗೆ ತುರ್ತು ಸೇವೆ ನೀಡದಿದ್ಧರೆ ಕಠಿಣ ಕ್ರಮ : ಪ್ರಕಾಶ ಹೋಳೆಪ್ಪಗೋಳ
ಗೋಕಾಕ:ಲಾಕಡೌನ ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಜನರಿಗೆ ತುರ್ತು ಸೇವೆ ನೀಡದಿದ್ಧರೆ ಕಠಿಣ ಕ್ರಮ : ಪ್ರಕಾಶ ಹೋಳೆಪ್ಪಗೋಳ ಲಾಕಡೌನ ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಜನರಿಗೆ ತುರ್ತು ಸೇವೆ ನೀಡದಿದ್ಧರೆ ಕಠಿಣ ಕ್ರಮ ಜರುಗಿಸಲಾಗುವದು ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು ತುರ್ತು ಸಂದರ್ಭದಲ್ಲಿ ಖಾಸಗಿ ವೈದ್ಯರು ತಮ್ಮ ಸೇವೆ ಸ್ಥಗಿತಗೋಳಿಸಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಶನಿವಾರದಂದು ನೀಡಿದ ಮನವಿಗೆ ಸ್ವಂದಿಸಿದ ಅಧಿಕಾರಿಗಳು ರವಿವಾರದಂದು ನಗರದ ತಹಶೀಲ್ದಾರ …
Read More »ಬೆಂಗಳೂರು: ವಿದೇಶದಿಂದ ಭಾರತಕ್ಕೆ ಮರಳಿದ್ದ 47 ಮಂದಿ ಕೊರೋನಾ ಶಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಬೆಂಗಳೂರು: ವಿದೇಶದಿಂದ ಭಾರತಕ್ಕೆ ಮರಳಿದ್ದ 47 ಮಂದಿ ಕೊರೋನಾ ಶಂಕಿತರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕೊರೋನಾ ಶಂಕೆ ಹಿನ್ನಲೆಯಲ್ಲಿ ವಿದೇಶದಿಂದ ಬಾಂದವರನ್ನು 16 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಇದೀಗ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಮನೆ ಸೇರಿಕೊಂಡಿದ್ದಾರೆ. ಆಸ್ಟ್ರೇಲಿಯಾ, ಜಪಾನ್, ದುಬೈ, ಸಿಂಗಾಪುರ್ ಸೇರಿ 6 ದೇಶಗಳಿಂದ 47 ಮಂದಿ ಭಾರತೀಯರು ಆಗಮಿಸಿದ್ದರು. ಕೊರೋನಾ ಶಂಕೆ ಹಿನ್ನೆಲೆ, ಸಪ್ತಗಿರಿ ಆಸ್ಪತ್ರೆಯಲ್ಲಿ ಕಳೆದ …
Read More »ವಧು-ವರರಿಬ್ಬರು ಮಾಸ್ಕ್ ಧರಿಸಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಚಿಕ್ಕಮಗಳೂರು: ದೇಶಾದ್ಯಾಂತ ಕೊರೊನಾಆ ಭೀತಿ ಹೆಚ್ಚಿದ್ದು, ಲಾಕ್ ಡೌನ್ ಘೋಷಿಸಾಲಾಗಿದೆ. ಈ ಹಿನ್ನಲೆಯಲ್ಲಿ ನಿಶ್ಚಯವಾಗಿದ್ದ ಮದುವೆಗಳೆಲ್ಲ ಯಾವುದೇ ಆಡಂಬರ, ಅಬ್ಬರವಿಲ್ಲದೇ ಸರಳವಾಗಿ ನಡೆಯುತ್ತಿದೆ. ಈ ನಡುವೆ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಧು-ವರರಿಬ್ಬರು ಮಾಸ್ಕ್ ಧರಿಸಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹಲಸುಗುಡ್ಡೆ ಗ್ರಾಮದಲ್ಲಿ ಲಾಅಕ್ ಡೌನ್ ನಡುವೆ ವಧು-ವರರಿಬ್ಬರೂ ಮುಖಕ್ಕೆ ಮಾಸ್ಕ್ ಧರಿಸಿ ಪುರೋಹಿತರು ಹಾಗೂ ತಂದೆ-ತಾಯಿ ಸಮ್ಮುಖದಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. …
Read More »ಸ್ವ ಇಚ್ಛೆಯಿಂದ ಗಲ್ಲಿ, ಗ್ರಾಮಗಳ ಸಂಪರ್ಕ್ ಬಂದ್ ಮಾಡುತ್ತಿರುವುದು ಶಿಕ್ಷಾರ್ಹ ಅಪರಾಧ
ಬೆಳಗಾವಿ: ಕೊರೊನಾ ಸೋಂಕು ಹತ್ತಿಕ್ಕಲು ಜಿಲ್ಲೆಯಾದ್ಯಂತ ವಿವಿಧ ಗ್ರಾಮಗಳಲ್ಲಿ ಕೆಲವರು ಸ್ವ ಇಚ್ಛೆಯಿಂದ ಗಲ್ಲಿ, ಗ್ರಾಮಗಳ ಸಂಪರ್ಕ್ ಬಂದ್ ಮಾಡುತ್ತಿರುವುದರಿಂದ ಪಡಿತರ ಧಾನ್ಯಗಳ ಸಾಗಾಣಿಕೆ ಸೇರಿದಂತೆ ಹಲವು ರೀತಿಯ ತೊಂದರೆಗಳಾಗುತ್ತಿವೆ. ಆದ ಕಾರಣ ರೀತಿ ರಸ್ತೆ ಬಂದ್ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.ಕೂಡಲೇ ರಸ್ತೆಗಳಿಗೆ ಹಾಕಿರುವ ಬೇಲಿಗಳನ್ನು ತೆಗೆಯಬೇಕು ಎಂದು ಜಿಲ್ಲಾದಿಕಾರಿಗಳು ತಿಳಿಸಿದ್ದಾರೆ. ನಗರ ಹಾಗೂ ಜಿಲ್ಲೆಯಲ್ಲಿ ಗ್ರಾಮಗಳಲ್ಲಿ ಬೇರೆ ಜನರು ಗಲ್ಲಿ ಹಾಗೂ ಗ್ರಾಮಗಳಿಗೆ ಬರಬಾರದು. ಅಪರಚಿತರು ಆಗಮಿಸಬಾರದು ಎಂದು …
Read More »ಆಸ್ಪತ್ರೆಯಿಂದ ಡಿಸ್ಚಾರ್ಜ್- ಸ್ವಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಬಾಣಂತಿ ಪರದಾಟ
ಬೆಳಗಾವಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಬಾಣಂತಿ ಮತ್ತು ಆಕೆಯ ತಾಯಿ ಕಣ್ಣೀರು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ಶನಿವಾರ ಬಾಣಂತಿಯನ್ನು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಬೆಳಗಾವಿ ಜಿಲ್ಲೆ ಗೋಕಾಕ್ ನಿವಾಸಿ ಗೀತಾ ತನ್ನ ಮಗು, ತಂದೆ ತಾಯಿ ಜೊತೆ ಊರಿಗೆ ತೆರಳಲು ಪರದಾಡುತ್ತಿದ್ದರು. ಕರ್ನಾಟಕ ಲಾಕ್‍ಡೌನ್ ಹಿನ್ನೆಲೆ ಯಾವುದೇ ವಾಹನ ಸಿಗದಿದ್ದಕ್ಕೆ ಬಾಣಂತಿ ತಾಯಿ ಕಣ್ಣೀರು ಹಾಕಿದ್ದರು. ಇಂದು ಸಹ ಯಾವುದೇ ವಾಹನ ಸಿಗದಕ್ಕೆ …
Read More »ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಎಸ್.ಆರ್.ಕಳ್ಳಿಗುದ್ದಿ(16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಲಾಕ್ ಡೌನ್ ಹಿನ್ನೆಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದರಿಂದ ಪೋಷಕರು ಸಮಯವನ್ನು ಹಾಳು ಮಾಡದೆ ಪರೀಕ್ಷೆಗೆ ಓದಿಕೊಳ್ಳುವಂತೆ ಬುದ್ದಿ ಹೇಳಿದ್ದಾರೆ. ಇದರಿಂದ ಮನನೊಂದು ಶನಿವಾರ ರಾತ್ರಿಯೇ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »16 ಹೊಸ ಪ್ರಕರಣ – ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 144ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 16 ಪ್ರಕರಣಗಳು ಬೆಳಕಿಗೆ ಬಂದಿದ್ದು ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 144ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾಟ್‍ಸ್ಪಾಟ್‍ಗಳಲ್ಲಿ ಒಂದಾಗಿರುವ ಮೈಸೂರಿನಲ್ಲಿ ಇಂದು ಒಂದೇ ದಿನಕ್ಕೆ 7 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಲ್ಲಿ 5 ಮಂದಿ ದೆಹಲಿಗೆ ಹೋಗಿ ಬಂದವರಾಗಿದ್ದಾರೆ. ದೆಹಲಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಒಟ್ಟು 16 ಮಂದಿ ಕೊರೊನಾಗೆ ತುತ್ತಾಗಿದ್ದು, ಈ ಮೂಲಕ ಮೈಸೂರಿನಲ್ಲಿ ಸೊಂಕಿತರ ಸಂಖ್ಯೆ 28ಕ್ಕೆ ಏರಿದೆ. ದೆಹಲಿಯಲ್ಲಿ …
Read More »ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಹೋಗಿ ಬಂದಿದ್ದರೆ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ
ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಿಂದ ಯಾರಾದರೂ ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆ ಸೇರಿದಂತೆ ಅನ್ಯ ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಿ ಬಂದಿದ್ದರೆ ಅಂತವರು ತಾವಾಗಿಯೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮಾಡಿಕೊಂಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈಗಾಗಲೇ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಗೂ ಲಗ್ಗೆ ಇಟ್ಟಿದೆ. ಮೂರು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ದೆಹಲಿಯ …
Read More »ಸಿದ್ದಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ
ತುಮಕೂರು: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಿದ್ದಗಂಗಾ ಮಠ ಹಾಗೂ ಸಿದ್ದಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರೂ.ವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಲಾಗಿದೆ. ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಇಂದು ಮಠದಿಂದ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯಿಂದ 25ಲಕ್ಷ ರೂ. ಸೇರಿ ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು. ಈ …
Read More »
Laxmi News 24×7