ವಿಜಯಪುರ: ಒಂದು ಬಾಟಲ್ ಕೊಟ್ಟರೆ ಕೆಳಗೆ ಬರ್ತಿನಿ ಎಂದು ಟವರ್ ಹತ್ತಿ ಕುಡುಕ ಹುಚ್ಚಾಟ ಮೆರೆದಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಕೋಟ್ಯಾಳ ಗ್ರಾಮದ ನಿವಾಸಿಯಾಗಿರುವ ವ್ಯಕ್ತಿಯೋರ್ವ ಮದ್ಯವಸನಿಯಾಗಿದ್ದು, ಕಳೆದ ಎರಡು ವರ್ಷದಲ್ಲಿ ಎರಡನೇ ಬಾರಿ ಟವರ್ ಹತ್ತಿದ್ದಾನೆ. ಆಗಾಗ ಮೊಬೈಲ್ ಟವರ್ಗಳನ್ನು ಹತ್ತಿ ಹುಚ್ಚಾಟ ಮೆರೆಯುವುದು ಚಾಳಿ ಆಗಿಬಿಟ್ಟದೆ. ಸದ್ಯ ಮದ್ಯ ಕೊಟ್ಟರೆ ವಾಪಸ್ ಟವರ್ನಿಂದ ಬರ್ತಿನಿ ಎಂದು ಪಟ್ಟು ಹಿಡದಿದ್ದಾನೆ. …
Read More »ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ವಾತಾವರಣದ ನಡುವೆ ದಿಢೀರನೆ ಶುರುವಾದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಚಿಕ್ಕಮಗಳೂರು ನಗರದಲ್ಲೂ ಮಳೆ ಅಬ್ಬರಿಸುತ್ತಿದೆ. ಭಾರೀ ಗಾಳಿ ಜೊತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನ ಪರದಾಡುವಂತಾಗಿದೆ. ವಾಹನ ಸವಾರರು ವಾಹನ ಚಾಲನೆ ಮಾಡಲು ಸಾಧ್ಯವಾಗದೆ ಪರದಾಡಿದ್ದಾರೆ. ಬೈಕ್ ಸವಾರರು ಅಂಗಡಿಗಳು, ಬಸ್ ನಿಲ್ದಾಣಗಳ ಆಶ್ರಯ ಪಡೆದಿದ್ದಾರೆ. ಕೆಲವೆಡೆ ಗಾಳಿಯ ಅಬ್ಬರಕ್ಕೆ ಕಬ್ಬಿಣದ ತಗಡುಗಳು …
Read More »ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯ: ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಜರುಗಲಿದೆ. ಈ ವೈರಮುಡಿ ಉತ್ಸವದಲ್ಲಿ ಶ್ರೀದೇವಿ, ಭೂದೇವಿಯರೊಂದಿಗೆ ಚೆಲುವನಾರಾಯಣಸ್ವಾಮಿ ಭಕ್ತರಿಗೆ ದರ್ಶನ ನೀಡಿಲಿದ್ದಾರೆ. ಮಂಡ್ಯ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ವೈರಮುಡಿ ಉತ್ಸವಕ್ಕೆ ರಾತ್ರಿ 8 ಗಂಟೆಗೆ ಸಲ್ಲುವ ಪುಷ್ಯ ನಕ್ಷತ್ರದಲ್ಲಿ ಚಾಲನೆ ಸಿಗಲಿದೆ. ಬೆಳಗ್ಗೆ 7:30ಕ್ಕೆ ಜಿಲ್ಲಾ ಖಜಾನೆಯಿಂದ ವಜ್ರಖಚಿತ ವೈರಮುಡಿ ಆಭರಣ ತೆರಳಿದ್ದು, ಬಿಗಿ ಭದ್ರತೆಯಲ್ಲಿ ಮಂಡ್ಯದಿದ ಮೇಲುಕೋಟೆಗೆ ರವಾನೆ ಮಾಡಲಾಗುತ್ತದೆ. ಬಳಿಕ ಲಕ್ಷ್ಮಿ …
Read More »ಬೆಂಗಳೂರಲ್ಲಿ ಇಂದು ಐಪಿಎಲ್ ಉದ್ಘಾಟನೆ – ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ
ಬೆಂಗಳೂರು: ಬರೋಬ್ಬರಿ 18 ವರ್ಷ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಅಣಿಯಾಗಿದೆ. ಕಳೆದ ವರ್ಷದ ಭೀಕರ ಕಾಲ್ತುಳಿತ ಬಳಿಕ ಮತ್ತೆ ನಗರದಲ್ಲಿ ಕ್ರಿಕೆಟ್ ರಂಗೇರುತ್ತಿದೆ. ಆದ್ರೆ ಕಳೆದ ವರ್ಷ ಆರ್ಸಿಬಿ ವಿಜಯೋತ್ಸವದ ವೇಳೆ ಉಂಟಾದ ದುರಂತದಿಂದ ಎಚ್ಚೆತ್ತಿರುವ ಬೆಂಗಳೂರು ಪೊಲೀಸರು, ಈ ಸಲ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದಾರೆ. ಇಂದು ಮೊದಲ ಪಂದ್ಯದಲ್ಲಿ ಆರ್ಸಿಬಿ vs …
Read More »ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು
ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಪಲಮನೇರ್ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ …
Read More »ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ – ತನಗೆ ಐಪಿಎಲ್ ಟಿಕೆಟ್ ಬೇಡ ಎಂದ ಸುರೇಶ್ ಕುಮಾರ್
ಬೆಂಗಳೂರು: ಐಪಿಎಲ್ ( ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್ಗಳನ್ನು ವಿತರಿಸಬಾರದೆಂದು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸ್ಪೀಕರ್ ಯುಟಿ ಖಾದರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಮಾಜವಾದಿ ಎಂದು ಹೇಳಿಕೊಳ್ಳುವ ಸರ್ಕಾರದ ಆಡಳಿತದಲ್ಲಿ ಈ ವಿಐಪಿ ಸಂಸ್ಕೃತಿಗೆ ಪುರಸ್ಕಾರ ಸಿಗುತ್ತಿರುವುದು ಆಘಾತಕಾರಿಯಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಮಾ.26 ರಂದು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ …
Read More »ಕೋರ್ಟ್, ಏರ್ಪೋರ್ಟ್ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್
ಮೈಸೂರು: ದೇಶದ ನಾನಾ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಇಮೇಲ್ ರವಾನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿ ಶ್ರೀನಿವಾಸ್ ಅಲಿಯಾಸ್ ಶ್ರೀನಿವಾಸ್ ಲೂಯಿಸ್ ಎಂದು ಗುರುತಿಸಲಾಗಿದೆ. ಈತ ದೇಶದ ನಾನಾ ಭಾಗಗಳಿಗೆ ಒಟ್ಟು 1,100ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಇಮೇಲ್ ಮಾಡಿ ವಿಧ್ವಂಸಕ ಕೃತ್ಯ ನಡೆಸುವ ಆತಂಕ ಸೃಷ್ಟಿಸಿದ್ದ. ನ್ಯಾಯಾಲಯಗಳು, ವಿವಿಧ ನಗರಗಳ ಪ್ರತಿಷ್ಠಿತ ಶಾಲೆ – ಕಾಲೇಜುಗಳು, ಸರ್ಕಾರಿ …
Read More »ನೈಟ್ ಔಟ್ ವೇಳೆ ಬೈಕ್ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ (ಮಾ.27) ರಾತ್ರಿ ಬಿರಿಯಾನಿ ತಿನ್ನಲು ಮೂವರು ಒಂದೇ ಬೈಕ್ನಲ್ಲಿ ಕುಣಿಗಲ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾಗಡಿ ತಾಲ್ಲೂಕಿನ ಮರೂರು ಹ್ಯಾಂಡ್ ಪೋಸ್ಟ್ …
Read More »ಮೋದಿ ಇಸ್ರೇಲ್ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು: ಎಂ.ಬಿ ಪಾಟೀಲ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ಗೆ ಪ್ರವಾಸ ಹೋಗಿದ್ದರು, ಫಾದರ್ ಲ್ಯಾಂಡ್ ಅಂತ ಹೊಗಳಿದ್ರು. ಅವರು ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ರಾಜ್ಯದಲ್ಲಿ ತೈಲ ಕೊರತೆ (Oil Shortage) ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತೈಲ ಕೊರತೆಯಿಂದ ಕೈಗಾರಿಕೆಗಳಿಗೂ ಬಹಳ ಕಷ್ಟವಾಗಿದೆ. ಪ್ರಧಾನಿ ಮೋದಿ ಇಸ್ರೇಲ್ಗೆ ಹೋಗಿದ್ದರು. ಫಾದರ್ ಲ್ಯಾಂಡ್ ಅಂತ ಹೊಗಳಿದ್ರು, ಅವರು ಹೋಗಿಬಂದ ಮರುದಿನವೇ …
Read More »ಸಿದ್ದರಾಮಯ್ಯಗೆ ಬಂಜಾರ ವಿಚಾರ ಗೊತ್ತಿಲ್ಲ: ಪಿ. ರಾಜೀವ್ ಆರೋಪ
ಬಾಗಲಕೋಟೆ, ಮಾರ್ಚ್ 27: ಉಪಚುನಾವಣೆ ಹಿನ್ನೆಲೆ ಬಾಗಲಕೋಟೆ ಮತಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಪಿ. ರಾಜೀವ್ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಪರವಾಗಿ ಹಾಲೂರು ಎಲ್.ಟಿ. ಗ್ರಾಮದಲ್ಲಿ ಲಂಬಾಣಿ ಸಮುದಾಯದ ನಡುವೆ ಮತಯಾಚನೆ ನಡೆಸಿ ಗಮನ ಸೆಳೆದರು. ಆಲೂರು ಎಲ್,ಟಿ ಗ್ರಾಮದಲ್ಲಿ ನಡೆದ ಪ್ರಚಾರದ ವೇಳೆ ಲಂಬಾಣಿ (ಬಂಜಾರ) ಸಮುದಾಯದ ಸಂಸ್ಕøತಿ, ಪರಂಪರೆ ಹಾಗೂ ಅವರ ಶಕ್ತಿಯ ಕುರಿತು ಮಾತನಾಡಿದ ಅವರು, ಈ …
Read More »
Laxmi News 24×7