Breaking News

ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ |

ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ | ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ, ಧೂಪದಾಳ, ಕಾರ್ಲಕಟ್ಟಿ ಗ್ರಾಮದ ಜನರು ಮಲಪ್ರಭಾ ನದಿಗೆ ಅಡ್ಡಲಾಗಿ ನವಿಲು ತೀರ್ಥ ಡ್ಯಾಮ್ ಕಟ್ಟುವಾಗ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಇಲ್ಲಿನ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Read More »

ಸಹ್ಯಾದ್ರಿ ನಗರ ಬಸ್ ಪಲ್ಟಿ

ಸಹ್ಯಾದ್ರಿ ನಗರ ಬಸ್ ಪಲ್ಟಿ: ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾದ ಮುಸ್ತಾಕ್ ಮುಲ್ಲಾ | ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿ ಗಾಯಗೊಂಡ ಪ್ರಯಾಣಿಕರ ಆರೋಗ್ಯವನ್ನು ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಮುಸ್ತಾಕ್ ಮುಲ್ಲಾ ಜಿಲ್ಲಾಸ್ಪತ್ರೆಗೆ ದೌಡಾಯಿಸಿ ವಿಚಾರಣೆ ನಡೆಸಿದರು. ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿರುವುದರಿಂದ ಸಾರಿಗೆಯಲ್ಲಿ ಪ್ರಯಾಣ ಮಾಡುತ್ತಿರುವವರಿಗೆ ಹಾಗೂ ಚಾಲಕ, ನಿರ್ವಾಹಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆ ನೀಡಬೇಕು. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಗಾಯಾಳುಗಳಿಗೆ ಮುಸ್ತಾಕ್ …

Read More »

ಬೋರಗಾಂವ ವೃತ್ತದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ‌ಇಂದು‌ ಚಾಲನೆ ನೀಡಿದ ಪ್ರಿಯಾಂಕ ಸತೀಶ್ ಜಾರಕಿಹೊಳಿ

 ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕುಮಾರಿ ಪ್ರಿಯಾಂಕ ಸತೀಶ್ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿನ ನಿಪ್ಪಾಣಿ‌ ವಿಧಾನಸಭಾ ಕ್ಷೇತ್ರದ ಬೋರಗಾಂವ ವೃತ್ತದಲ್ಲಿ ಇಂದು ಭಾಟನಾಗನೂರ ಬೋರಗಾಂವವಾಡಿ ರಸ್ತೆ (ರಾಜಿ-98) ರಸ್ತೆ ಕಿಮೀ 35.38 ರಿಂದ 38.00 (ಬೋರಗಾಂವವಾಡಿ ಕ್ರಾಸ್‌ದಿಂದ ಬೋರಗಾಂವ ವೃತ್ತ ) ವರೆಗೆ ಅಂದಾಜು ₹ 3.50 ಕೋಟಿ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ‌ಇಂದು‌ ಚಾಲನೆ ನೀಡಿದರು. ಈ ವೇಳೆ ಬೋರಗಾಂವ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ, …

Read More »

ಗೊಂದಲಗಳಿಗೆ ತೆರೆ ಎಳೆದ ಬಸವಜಯ ಮೃತ್ಯುಂಜಯ ಸ್ವಾಮೀಜಿ.

ರಾಯಬಾಗ : ಜಾತಿ ಗಣತಿ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರದ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಏನನ್ನು ಬರಿಸಬೇಕು ಅಂತ ಲಿಂಗಾಯತ ಸಮಾಜದಲ್ಲಿ ಬಾರಿ ಗೊಂದಲ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಬಸವಜಯ ಮೃತ್ಯುಂಜಯ ಸ್ವಾಮೀಜಿ. ರಾಯಬಾಗ ತಾಲೂಕೀನ‌ ಪರಮಾನಂದವಾಡಿ ಗ್ರಾಮದಲ್ಲಿ ಕೂಡಲ ಸಂಗಮದ ಶ್ರೀಗಳಿಂದ ಸ್ಪಷ್ಟನೆ. ಸಮೀಕ್ಷೆಯಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಿ. ಲಿಂಗಾಯತ ಪಂಚಮಸಾಲಿ ಸಮಾಜದ ಬಾಂಧವರಿಗೆ ಶ್ರೀಗಳು ಕರೆ. ಎ-0868 ಎಂದು ಸಂಖ್ಯೆ ನಮೂದಿಸುವಂತೆ ಸ್ವಾಮೀಜಿ …

Read More »

ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಾಹುಕಾರ್

ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಮಕ್ಕಳ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಅವರ ಪಾಲಕರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಲು ಹಾಗೂ ಅಗತ್ಯ ಚಿಕಿತ್ಸಾ ವ್ಯವಸ್ಥೆಗಳನ್ನು ತಕ್ಷಣ ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ …

Read More »

ನಿಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ

ಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ ವಿದ್ಯುತ್ ಸಂಘದ ಚುನಾವಣೆಯಲ್ಲಿ ದಿ.ಅಪ್ಪಣ್ಣಗೌಡ ಪಾಟೀಲರ ಪೆನೆಲ್ ನ್ನು ಆಶೀರ್ವದಿಸಿದರೆ ಉತ್ಕೃಷ್ಟ ದರ್ಜೆಯ ಸೇವೆ- ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಜೊಲ್ಲೆಗೆ ಸಾಥ್ ನೀಡಿದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಸಂಕೇಶ್ವರ – ದಿ. ಅಪ್ಪಣ್ಣಗೌಡ ಪಾಟೀಲರ ಪೆನೆಲ್ ಬೆಂಬಲಿಸಿ ಆಶೀರ್ವಾದ ಮಾಡಿದರೆ ಮುಂದಿನ ದಿನಗಳಲ್ಲಿ ವಿದ್ಯುತ್ ಸಹಕಾರಿ ಸಂಘವು ಅಭಿವೃದ್ಧಿ ಪಥದತ್ತ ಸಾಗುವುದಲ್ಲದೇ ಗ್ರಾಹಕರಿಗೆ ಉತ್ತಮ ದರ್ಜೆಯ …

Read More »

ನದಿಯಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್: 10 ಜನರು ದುರ್ಮರಣ

ಉತ್ತರಾಖಂಡದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆ ನಡುವೆ ಟ್ರ್ಯಾಕ್ಟರ್ ಒಂದು ನದಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಟನ್ಸ್ ನದಿಯಲ್ಲಿ ಈ ಗಹ್ಟನೆ ನಡೆದಿದೆ. ಕಾರ್ಮಿಕರಿದ್ದ ಟ್ರ್ಯಾಕ್ಟರ್ ನದಿಗೆ ಬಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. 10 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆ ನಡುವೆಯೇ ನದಿ ದಾಟುವ ವೇಳೆ …

Read More »

ವಿಶೇಷಚೇತನ ಮಕ್ಕಳಿಗೆ ಟ್ರೈಸೈಕಲ್, ವೀಲ್ ಚೇ‌ರ್ ವಿತರಣೆ

ವಿಶೇಷಚೇತನ ಮಕ್ಕಳಿಗೆ ಟ್ರೈಸೈಕಲ್, ವೀಲ್ ಚೇ‌ರ್ ವಿತರಣೆ ನನ್ನ ಸಹೋದರರಾದ ಶ್ರೀ ಅಶ್ವತ್ ವೈದ್ಯ ಅವರು ಸವದತ್ತಿಯ ಗೃಹ ಕಚೇರಿಯಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಸಹಯೋಗದೊಂದಿಗೆ, ವಿಶೇಷ ಚೇತನ ಮಕ್ಕಳಿಗೆ ಟ್ರೈಸೈಕಲ್, ವೀಲ್ ಚೇರ್ ಹಾಗೂ ಇನ್ನಿತರ ಉಪಕರಣಗಳನ್ನು ವಿತರಿಸಿದರು.

Read More »

ವಿರೋಧ ಪಕ್ಷದ ಶಾಸಕರಿಗೆ ತಲಾ ₹25 ಕೋಟಿ ಅನುದಾನ ಮಂಜೂರು ಮಾಡಲು ಸರ್ಕಾರ ತೀರ್ಮಾನ

ಬೆಂಗಳೂರು: ವಿಪಕ್ಷಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಹಂಚಿಕೆ ಮಾಡಿದೆ. ಈಗಾಗಲೇ ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಮಂಜೂರು ಮಾಡಿ, ಕ್ರಿಯಾ ಯೋಜನೆ ಸಲ್ಲಿಸಲು ಸೂಚಿಸಿದ್ದ ಸರ್ಕಾರ, ಇದೀಗ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ತಲಾ‌ 25 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದೆ. ಅನುದಾನ ಹಂಚಿಕೆ ಸಂಬಂಧ ಪ್ರತಿಪಕ್ಷ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ …

Read More »

ಗ್ರೇಟರ್ ಬೆಂಗಳೂರು ಟೌನ್‌ಶಿಪ್​ಗೆ ವಿರೋಧ: ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿ ಟೌನ್ ಶಿಪ್​​ಗೆ ಭೂ ಸ್ವಾಧೀನ ವಿರೋಧಿಸಿ ಕಳೆದ ನಾಲ್ಕು ದಿನಗಳಿಂದ ರೈತರು ಆಹೋರಾತ್ರಿ ಧರಣಿ ನಡೆಸುತ್ತಿರುವ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ ರೈತರು, ಇಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭೂ‌ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಇಂದು ಭೇಟಿ ನೀಡಿತ್ತು. …

Read More »