Breaking News

6 ಸರ್ಜರಿ, 190 ಹೊಲಿಗೆ: ಶಿವರಾಜ್​ಕುಮಾರ್ ಚಿಕಿತ್ಸೆ

ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ ಮುಕ್ತವಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿದ್ದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಣ್ಣ ಅವರಿಗೆ ಯಾವ ರೀತಿಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂಬುದನ್ನು ಅವರ ಸಂಬಂಧಿ ಮಧು ಬಂಗಾರಪ್ಪ ವಿವರಿಸಿದ್ದಾರೆ. ‘ನಡೆದಿರುವುದು ತುಂಬ ದೊಡ್ಡ ಆಪರೇಷನ್​. ಹಾಗಾಗಿಯೇ ನಾನು ಅವರ ಜೊತೆ ಅಲ್ಲಿಗೆ ಹೋಗಿದ್ದು. ಯಶಸ್ವಿಯಾಗಿ ಸರ್ಜರಿ ನಡೆದಿದೆ’ ಎಂದು ಹೇಳಿದ್ದಾರೆ. ಒಟ್ಟು 6 ಸರ್ಜರಿ ಮಾಡಿದ್ದು, 190 ಹೊಲಿಗೆ ಹಾಕಲಾಗಿದೆ ಎಂದು ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ. …

Read More »

ಮುಂಬೈ ಅಸುರಕ್ಷಿತ ಎನ್ನುವುದು ಅನ್ಯಾಯ:ಫಡ್ನವೀಸ್

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಇಂದು ಬೆಳಗಿನ ಜಾವ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ನಡೆದ ಹಲ್ಲೆಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ಈಗಾಗಲೇ ನಿಮಗೆ ಇದರ ಬಗ್ಗೆ ಎಲ್ಲಾ ಮಾಹಿತಿಯನ್ನು ಒದಗಿಸಿದ್ದಾರೆ. ಈ ಹಲ್ಲೆಗೆ ಕಾರಣವೇನೆಂಬುದರ ತನಿಖೆ ನಡೆಯುತ್ತಿದೆ ಎಂದಿದ್ದಾರೆ.“ಮುಂಬೈ ಇನ್ನು ಮುಂದೆ ಸುರಕ್ಷಿತ ಸ್ಥಳವಲ್ಲ” ಎಂದು ವಿರೋಧ ಪಕ್ಷದ ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ದೇವೇಂದ್ರ ಫಡ್ನವೀಸ್, …

Read More »

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಬೀದರ್, ಜನವರಿ 16: ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ. ಬೀದರ್ ಶಿವಾಜಿ ಚೌಕ್​ನಲ್ಲಿ ನಡೆದಿದ್ದೇನು? ಅದು ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್. ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ …

Read More »

ಅಹಿಂದ ನಾಯಕರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ ಖರ್ಗೆಯನ್ನೇ:ಡಿಕೆ ಶಿ

ಬೆಂಗಳೂರು, ಜನವರಿ 16: ಕರ್ನಾಟಕ ಕಾಂಗ್ರೆಸ್​ನಲ್ಲಿ ಮತ್ತೆ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಹೊಸ ದಾಳ ಉರುಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ. ಇವರು (ಅಹಿಂದ ನಾಯಕರು) ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ, ಖರ್ಗೆ ಅವರನ್ನು ಎಂದಿದ್ದಾರೆ. …

Read More »

ಪ್ರೇಯಸಿ ಸಿಟ್ಟುಮಾಡಿಕೊಂಡು ಹೋಗಿದ್ದಕ್ಕೆ ಗೆಳೆಯನ ಮನೆಯಲ್ಲೇ ಪ್ರಿಯಕರ ದುರಂತ ಸಾವು

ಪ್ರೇಯಸಿಗೆ ಹೆದರಿಸಲು ಹೋಗಿ ಪ್ರಿಯಕರ ದುರಂತ ಸಾವು ಕಂಡಿದ್ದಾನೆ. ಪ್ರೇಯಸಿ ಸಿಟ್ಟು ಮಾಡಿಕೊಂಡು ಹೋಗಿದ್ದಕ್ಕೆ ಪ್ರಿಯಕರ ದುಡುಕಿನ ನಿರ್ಧಾರ ಕೈಗೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಹೌದು…ಪ್ರೇಯಸಿ ಬರಲಿಲ್ಲವೆಂದು ಅಜಯ್ ಎನ್ನುವಾತ, ಸ್ನೇಹಿತನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಜಯಪುರ ಜಿಲ್ಲೆಯ ಬೀಳಗಿ ತಾಲೂಕಿನ ನಿಂಗಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಜಯ್ ಹಾಗೂ ಅನುಪಮ(ಹೆಸರು ಬದಲಾಯಿಸಲಾಗಿದೆ) ಇಬ್ಬರು‌ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರ ನಿವಾಸಿಗಳು. ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದು, …

Read More »

ಕುರುಕ್ಷೇತ್ರ ನಾಟಕದ ಭೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ

ಹಾಸನ, ಜನವರಿ 16: ಶಾಸಕ ಶಿವಲಿಂಗೇಗೌಡ ಕುರುಕ್ಷೇತ್ರ ನಾಟಕದ ಭೀಮನ ಪಾತ್ರದ ಡೈಲಾಗ್ ಹೇಳಿ ಗಮನ ಸೆಳೆದರು. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆ ಗ್ರಾಮದಲ್ಲಿ ಬುಧವಾರ ಗ್ರಾಮಸ್ಥರು ಕುರುಕ್ಷೇತ್ರ ನಾಟಕ ಅಭಿನಯಿಸಿದ್ದರು. ನಾಟಕ ಉದ್ಘಾಟನೆಗೆ ತೆರಳಿದ್ದ ಶಿವಲಿಂಗೇಗೌಡ, ಭೀಮನ ಪಾತ್ರ ಅಭಿನಯ ಮಾಡಿ ತೋರಿಸಿದರು. ಈ ಹಿಂದೆ ಶಿವಲಿಂಗೇಗೌಡ ಪೌರಾಣಿಕ ನಾಟಕದಲ್ಲಿ ಭೀಮನ ಪಾತ್ರ ನಟಿಸುತ್ತಿದ್ದರು. ಹೀಗಾಗಿ ಉದ್ಘಾಟನಾ ಸಮಾರಂಭದ ವೇಳೆ, ಭೀಮನ ಡೈಲಾಗ್ ಹೇಳುವಂತೆ ಜನ ಒತ್ತಾಯಿಸಿದ್ದರು. ಇದೇ …

Read More »

ಓಂಶಕ್ತಿ ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ

ಚಿತ್ರದುರ್ಗದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಬೆಂಜ್ ಕಾರು ರಸ್ತೆ ದಾಟುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದಲ್ಲಿ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಅಪಘಾತಕ್ಕೀಡಾದ ಕಾರನ್ನು ಜಪ್ತಿ ಮಾಡಲಾಗಿದೆ. ಶಾಸಕ ಕೆ.ಸಿ.ವೀರೇಂದ್ರ (kc veerendra) ಪಪ್ಪಿ ಕಾರು ಡಿಕ್ಕಿ ಹೊಡೆ ಪರಿಣಾಮ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ …

Read More »

ಜಾತಿಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

ಬೆಂಗಳೂರು, ಜನವರಿ 16: ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಈ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ. ಆ ಮೂಲಕ ಕರ್ನಾಟಕವೇ ಎದುರು ನೋಡುತ್ತಿದ್ದ ಜಾತಿಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.ಇಂದಿನ ಸಚಿವ ಸಂಪುಟದಲ್ಲೇ ಜಾರಿಗಣತಿ ವರದಿ …

Read More »

ಸೈಫ್ ಅಲಿ ಖಾನ್​ಗೆ ಚಾಕು ಇರಿತ: ಶಂಕಿತ ವ್ಯಕ್ತಿಯ ಫೋಟೋ ಬಹಿರಂಗ

ಬಾಲಿವುಡ್ ನಟ ಸೈಫ್ ಅಲಿ ಖಾನ್​ ಅವರ ಮನೆಗೆ ನುಗ್ಗಿ, ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ. ಆ ಪೈಕಿ ಓರ್ವ ಶಂಕಿತನ ಫೋಟೋ ಕೂಡ ಲಭ್ಯವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ. ಸೈಫ್ ಕುಟುಂಬ ವಾಸವಾಗಿರುವ ಅಪಾರ್ಟ್​ಮೆಂಟ್​ನ ಮೆಟ್ಟಿಲುಗಳನ್ನು ಹತ್ತಿ ಬರುವಾಗ ಸಿಸಿಟಿವಿಯಲ್ಲಿ ಶಂಕಿತನ ವಿಡಿಯೋ ಸೆರೆಯಾಗಿದೆ. ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಸೈಫ್ ಅಲಿ ಖಾನ್ ಅವರ …

Read More »

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 8ನೇ ವೇತನ ಆಯೋಗ ರಚನೆಗೆ ಅನುಮೋದನೆ

ನೌಕರರ ವೇತನ ಹಾಗೂ ಪಿಂಚಣಿದಾರರ ಭತ್ಯೆ ಪರಿಷ್ಕರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ವೇತನ, ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗ ರಚಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

Read More »