ಕಿತ್ತೂರು: ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಾಹಸ ಅಕಾಡೆಮಿ ಆಶ್ರಯದಲ್ಲಿ ತುಂಬುಗೆರೆಯಲ್ಲಿ ಬುಧವಾರ ನಡೆದ ದೋಣಿ ವಿಹಾರ ಜನಾಕರ್ಷಿಸಿತು. ಸುಡು ಬಿಸಿಲಿನ ನಡುವೆ ಕೆರೆಯತ್ತ ಬಂದ ಜನ ತುಂಬುಕೆರೆಯ ದೋಣಿ ವಿಹಾರದಲ್ಲಿ ಕೆಲಹೊತ್ತು ನಲಿದರು. ದಶಕಗಳಿಂದ ನೀರು ಕಾಣದ ಐತಿಹಾಸಿಕ ಕೆರೆ ಈ ವರ್ಷ ಸುರಿದ ಭಾರಿ ಮಳೆಯಿಂದ ಮೈ ತುಂಬಿ ಹರಿಯುತ್ತಿರುವುದನ್ನು ಕಂಡು ಸಂಭ್ರಮಿಸಿದರು. ಬ್ರಿಟಿಷರ ವಿರುದ್ಧ …
Read More »ಕಿತ್ತೂರು ವಿಜಯೋತ್ಸವ: ಕಲಾವಿದರಿಗೆ ಮನಸೋತ ಜನಸಾಗರ
ಚನ್ನಮ್ಮನ ಕಿತ್ತೂರು: ಕಿತ್ತೂರ ನಾಡು ಹತ್ತೂರು ಕಲಾವಿದರನ್ನು ಬುಧವಾರ ಚುಂಬಕಶಕ್ತಿಯಂತೆ ಸೆಳೆಯಿತು. ಜನಪದರು, ಸಂಗೀತಗಾರರು, ನೃತ್ಯಪಟುಗಳು ಸೇರಿ ಕಲಾವಿದರ ದಂಡೇ ಕ್ರಾಂತಿಯ ನೆಲದತ್ತ ಹರಿದುಬಂದಿತ್ತು. ಬೆಳಿಗ್ಗೆ ಆರಂಭಗೊಂಡ ಜಾನಪದ ಕಲಾವಾಹಿನಿ ಮೆರವಣಿಗೆ ಮಧ್ಯಾಹ್ನದವರೆಗೂ ಸಾಗಿತು. ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದ ಈ ಮೆರವಣಿಗೆ ಮೇಲೂ ಕಾರ್ಮೋಡ ಕವಿದಿತ್ತು. ಆದರೆ, ವರುಣ ಬಿಡುವು ಕೊಟ್ಟಿದ್ದರಿಂದ ಮೆರವಣಿಗೆ ರಂಗೇರಿತು. ಉತ್ಸವದ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಗಾಗಿ ಶಾಲಾ …
Read More »ಹೇಳಿಕೆ ಹಿಂಪಡೆಯಿರಿ ಇಲ್ಲವೇ ಮಾನನಷ್ಟ ಮೊಕದ್ದಮೆ ಎದುರಿಸಿ:ಬೈರತಿಗೆ BY ರಾಘವೇಂದ್ರ
ಶಿವಮೊಗ್ಗ: ‘ಮುಡಾ ಹಗರಣದಲ್ಲಿ ತಮ್ಮ ಭ್ರಷ್ಟ ನಾಯಕರನ್ನು ಉಳಿಸಿಕೊಳ್ಳಲು ಹಾಗೂ ಪ್ರಕರಣದ ದಿಕ್ಕನ್ನು ಬೇರೆ ಕಡೆ ತಿರುಗಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ನಮ್ಮ ತಾಯಿ ಅವರ ಸಹಜ ಸಾವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸಲ್ಲ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ‘ಆಚಾರವಿಲ್ಲದ ತಮ್ಮ ನಾಲಿಗೆಯನ್ನು ಬೈರತಿ ಸುರೇಶ್, ಕಾಂಗ್ರೆಸ್ ಪಕ್ಷದ ಮೂಲ ರಾಜಕೀಯ ಸಂಸ್ಕೃತಿಯಾದ ಲಜ್ಜೆಗೆಟ್ಟ ರಾಜಕಾರಣಕ್ಕೆ ಬಳಸಿಕೊಂಡಿರುವುದು ಆಕ್ಷೇಪಾರ್ಹ. ಇದು ಅವರ ಸ್ಮರಣೆಗೆ ಮಾತ್ರವಲ್ಲ, ಮಾನವೀಯತೆಯ ಮೌಲ್ಯಗಳಿಗೂ …
Read More »ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್
ಬಳ್ಳಾರಿ: ಸಂಡೂರು ಕಾಂಗ್ರೆಸ್ ಭದ್ರಕೋಟೆ. ಯಾರೇ ಬಂದರೂ ಕಾಂಗ್ರೆಸ್ ಗೆಲ್ಲುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ರಾಜಕೀಯ ಮಾಡಲು ಎಲ್ಲರೂ ಬರುತ್ತಾರೆ ಎಂದು ಸಚಿವ ಸಂತೋಷ ಲಾಡ್ ಅವರು ಪರೋಕ್ಷವಾಗಿ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದರು. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಕೆಲಸ ನಮಗೆ ಗೆಲ್ಲುವಂತೆ …
Read More »ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ‘ಉಪ ಚುನಾವಣಾ ವೇಳಾಪಟ್ಟಿ’ ಪ್ರಕಟ
ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ‘ಉಪ ಚುನಾವಣಾ ವೇಳಾಪಟ್ಟಿ’ ಪ್ರಕಟ ಬಳ್ಳಾರಿ : ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ನ.12 ರಂದು ಕೊನೆಯ ದಿನವಾಗಿರುತ್ತದೆ. ನ.13 ರಂದು ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ನ.15 ಕೊನೆಯ ದಿನವಾಗಿರುತ್ತದೆ. ಮತದಾನವು ನ.23 …
Read More »ರಾಜ್ಯದ ಬೀಚ್ ಗಳಲ್ಲೂ ಗೋವಾ ಮಾದರಿಯಲ್ಲಿ ‘ಮದ್ಯ’ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ!
ಬೆಂಗಳೂರು : ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯೊಂದು ನೀಡಿರುವ ಪ್ರವಾಸೋದ್ಯಮ ಇಲಾಖೆಯು ನೆರೆಯ ಗೋವಾ ಬೀಚ್ ಗಳಲ್ಲಿ ಯಾವ ರೀತಿ ಮದ್ಯ ಮಾರಾಟ ಮಾಡಲಾಗುತ್ತದೆಯೊ ಅದೇ ಒಂದು ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಸಹ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ರಾಜ್ಯದ ಬೀಚ್ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. …
Read More »ಬೆಂಗಳೂರು ಕಟ್ಟಡ ಕುಸಿತ’ ಪ್ರಕರಣ : ಮೃತ 8 ಜನರ ಕುಟುಂಬಕ್ಕೆ ತಲಾ ‘2 ಲಕ್ಷ’ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.!
ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 8 ಕಾರ್ಮಿಕರು ಮೃತಪಟ್ಟಿದ್ದಾರೆ. ಈವರೆಗೆ ಕಟ್ಟಡದ …
Read More »ವಾಲ್ಮೀಕಿ’ ಸಮುದಾಯಕ್ಕೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ …
Read More »ವಿಧಾನ ಪರಿಷತ್ ಉಪ ಚುನಾವಣೆ. ಮತ ಎಣಿಕೆ ಪ್ರಕ್ರಿಯೆ ಆರಂಭ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಗುರುವಾರ (ಅ.24)ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು. ಈಗಾಗಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ ನಡೆಯಲಿದೆ, ಎರಡನೇ …
Read More »ಇಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಬಾಗಿಲು ಓಪನ್
ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ಮ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಅಲ್ಲದೆ ಮುಂದಿನ 9 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ. …
Read More »