ಬೀದರ್: ಶ್ರೀರಾಮಲೀಲಾ ಸೇವಾ ಸಮಿತಿಯಿಂದ ವಿಜಯದಶಮಿ ಅಂಗವಾಗಿ ನಗರದ ಸಾಯಿ ಶಾಲೆಯ ಮೈದಾನದಲ್ಲಿ ಶನಿವಾರ ರಾತ್ರಿ ರಾವಣನ ಪ್ರತಿಕೃತಿ ದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 40 ಅಡಿ ಎತ್ತರದ ರಾವಣನ ಪ್ರತಿಕೃತಿಗೆ ಬಾಣದಿಂದ ಬೆಂಕಿ ಹೊತ್ತ ಬಿಲ್ಲನ್ನು ಬಿಟ್ಟು ದಹಿಸಲಾಯಿತು. ಎತ್ತರದ ಪ್ರತಿಕೃತಿಯೂ ಪಟಾಕಿಗಳೊಂದಿಗೆ ದಹನಗೊಂಡಿತು. ಜನ ಅದನ್ನು ನೋಡಿ ಸಂಭ್ರಮಿಸಿದರು. ಸೆಲ್ಫಿ, ಛಾಯಾಚಿತ್ರ ತೆಗೆದುಕೊಂಡರು. ವಿವಿಧ ಕಡೆಗಳಿಂದ ಅಪಾರ ಸಂಖ್ಯೆಯ ಜನ ಆಗಮಿಸಿದ್ದರು. ಪ್ರತಿಕೃತಿ ದಹನಕ್ಕೂ ಮುನ್ನ ರಾಮಲೀಲಾ ನಾಟಕ ಪ್ರಸ್ತುತ …
Read More »ಮುಹೂರ್ತ ಮೀರಿ ಪುಷ್ಪಾರ್ಚನೆ: ಸರ್ಕಾರ-ರಾಜಮನೆತನದ ನಡುವೆ ತಿಕ್ಕಾಟ
ಮೈಸೂರು: ವಿಜಯದಶಮಿ ಮೆರವಣಿಗೆಯಲ್ಲಿ ಅಂಬಾರಿಗೆ ಪುಷ್ಪಾರ್ಚನೆಯು ಮುಹೂರ್ತ ಮೀರಿದ ಬಳಿಕ ಅಂದರೆ ಅರ್ಧ ತಾಸು ತಡವಾಗಿ ನಡೆದಿದ್ದಕ್ಕೆ ಅಂಬಾರಿಯನ್ನು ಸಿದ್ಧಪಡಿಸುವಲ್ಲಿ ಆದ ವಿಳಂಬವೇ ಕಾರಣ ಎಂದು ಹೇಳಲಾಗುತ್ತಿದೆ. ಮುಹೂರ್ತದ ಪ್ರಕಾರ, 4ರಿಂದ 4.30ರೊಳಗೆ ವಿಜಯದಶಮಿ ಮೆರವಣಿಗೆಯನ್ನು ಮುಖ್ಯಮಂತ್ರಿ ಉದ್ಘಾಟಿಸಬೇಕಿತ್ತು. ಆದರೆ, ಅದು ನಡೆದಾಗ 5 ಗಂಟೆ 2 ನಿಮಿಷ ಆಗಿತ್ತು. ಇದಕ್ಕೆ, ರಾಜವಂಶಸ್ಥರಿಂದ ಅಂಬಾರಿಯು ವಿಳಂಬವಾಗಿ ದೊರೆತಿದ್ದು ಕಾರಣ ಎಂದು ಹೇಳಲಾಗುತ್ತಿದೆ. ಅಂಬಾರಿಯು ರಾಜವಂಶಸ್ಥರ ಸುಪರ್ದಿಯಲ್ಲಿರುತ್ತದೆ. ಅದನ್ನು ಸಾಮಾನ್ಯವಾಗಿ ವಿಜಯದಶಮಿ ಮೆರವಣಿಗೆಯ …
Read More »ಕೇಸ್‌ಗೆ ಹೆದರಲ್ಲ, ಕೋರ್ಟ್‌ನಲ್ಲೇ ಉತ್ತರ ಕೊಡ್ತೀನಿ: ಕುಮಾರಣ್ಣ
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕುಮಾರಸ್ವಾಮಿ, ಆ ದೂರಿಗೆ ನಾನು ಕಾನೂನು ಪ್ರಕಾರವೇ ಉತ್ತರಿಸುತ್ತೇನೆ ಎಂದಿದ್ದಾರೆ. ನಾನು ಅವರಿಗೆ ಬೆದರಿಕೆ ಹಾಕಿದ್ದೇನೆ ಎಂದು ದೂರು ನೀಡಿರುವ ಎಡಿಜಿಪಿಯವರು ನನಗೆ ಹೆದರಬೇಕಾದ ಅಗತ್ಯವಿಲ್ಲ. ನಾನು ಅವರಿಗೆ ಬೆದರಿಕೆ ಎಲ್ಲಿ ಹಾಕಿದ್ದೇನೆ? ಎಂದು ಪ್ರಶ್ನಿಸಿದ ಅವರು, ಎಡಿಜಿಪಿ ಅವರಿಗೆ ಸಂಬಂಧಿಸಿ …
Read More »ಹೊಸ ಹೇರ್ ಸ್ಟೈಲ್ನಲ್ಲಿ ಮಿಂಚಿದ ಕ್ಯಾಪ್ಟನ್ ಕೂಲ್
ನವದೆಹಲಿ:ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ( MS Dhoni New Look ) ಮೈದಾನದಲ್ಲಿ ಮಾತ್ರವಲ್ಲದೆ ಹೊರಗಡೆಯೂ ಸ್ಟೈಲ್ ಟ್ರೆಂಡ್‌ಸೆಟರ್ ಆಗಿದ್ದಾರೆ. ಇತ್ತೀಚೆಗೆ, ಧೋನಿ ಅವರು ತಮ್ಮ ಪ್ರಸಿದ್ಧ ಕೇಶ ವಿನ್ಯಾಸಕ ಅಲೀಮ್ ಹಕೀಮ್ ಅವರೊಂದಿಗೆ ಸ್ಟೈಲಿಶ್ ಕ್ವಿಫ್ ಕೇಶವಿನ್ಯಾಸವನ್ನು ಮಾಡಿದರು. ಹೊಸ ಲುಕ್ ನಲ್ಲಿ ಧೋನಿ 25 ವರ್ಷದ ಹುಡುಗನಂತೆ ಕಾಣುತ್ತಿದ್ದು ಅಭಿಮಾನಿಗಳು ಫುಲ್ ಖುಷಿಯಲ್ಲಿದ್ದಾರೆ. ಹೇರ್ ಸ್ಟೈಲಿಸ್ಟ್ ಹಕೀಮ್ ನಾಲ್ಕು ತಿಂಗಳ ಹಿಂದೆ …
Read More »ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ
ಮೈಸೂರು: ವಿಶ್ವ ವಿಖ್ಯಾತ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡ ಅದಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಅಂಬಾರಿಯಲ್ಲಿ ವಿರಾಜಮಾನವಾಗಿರುವ ತಾಯಿ ಚಾಮುಂಡಿ ದೇವಿ ವಿಗ್ರಹಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ಚಿನ್ನದ ಅಂಬಾರಿಯಲ್ಲಿ ನಾಡ ಅದಿದೇವತೆ ತಾಯಿ ಚಾಮುಂಡೇಶ್ವರಿ ವಿರಾಜಮಾನವಾಗಿದ್ದು, 750ಕೆಜಿ …
Read More »ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು
ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ನಕಲಿ ಗಾಂಧಿಗಳ ಪಾದ ನೆಕ್ಕಿದವರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ. “ಪ್ರಲ್ಹಾದ ಜೋಶಿ ಇವತ್ತಿಗೂ ಗೋಡ್ಸೆ ಪೂಜೆ ಮಾಡುತ್ತಾರೆ” ಎಂಬ ಹರಿಪ್ರಸಾದ್ ಹೇಳಿಕೆಗೆ ಜೋಶಿ ತಿರುಗೇಟು ಕೊಟ್ಟರು. ಹುಬ್ಬಳ್ಳಿಯಲ್ಲಿ ಶನಿವಾರ (ಅ.12) ಮಾದ್ಯಮದವರೊಂದಿಗೆ ಮಾತನಾಡುತ್ತ ಹರಿಪ್ರಸಾದ್ ವಿರುದ್ಧ ತೀವ್ರ ಹರಿಹಾಯ್ದರು. ಈಗಿನ ಕಾಂಗ್ರೆಸ್ ನಲ್ಲಿ ಇರುವರೆಲ್ಲಾ ನಕಲಿ ಗಾಂಧಿಗಳು. ಇಂಥ ನಕಲಿ ಗಾಂಧಿಗಳ ಪಾದ ನೆಕ್ಕುವ ಹರಿಪ್ರಸಾದ್, ನಮ್ಮ …
Read More »ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ಅ.14 ತರೂರ್ ಅರ್ಜಿ ವಿಚಾರಣೆ
ನವದೆಹಲಿ: ತನ್ನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ. ‘ನರೇಂದ್ರ ಮೋದಿ ಶಿವಲಿಂಗದ ಮೇಲೆ ಕುಳಿತ ಚೇಳು ಇದ್ದಂತೆ’ ಎಂದು ಆರ್‌ಎಸ್‌ಎಸ್ ನಾಯಕರೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ತರೂರ್ ಭಾಷಣ ಮಾಡಿದ್ದರು. ಈ ಸಂಬಂಧ ತರೂರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸೆ. 10ರಂದು ಸುಪ್ರೀಂಕೋರ್ಟ್ ತಡೆಯಾಜ್ಞೆ …
Read More »ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿಯನ್ನು ಸ್ವಾಗತಿಸಲಾಗುವುದು’ ಎಂದ ವಿಜಯೇಂದ್ರ
ಬೆಳಗಾವಿ: ‘ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿಯನ್ನು ಸ್ವಾಗತಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಡಾ ಹಗರಣದ ಕಾರ್ಮೋಡ ಮುಖ್ಯಮಂತ್ರಿ ಕುರ್ಚಿ ಆವರಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅವರೇ ಒಪ್ಪಿಕೊಂಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ಸ್ಥಾನದ ಮೇಲೆ ಕಣ್ಣಿಟ್ಟಿರುವರು, ತಮಗೆ ಬೆಂಬಲ ಕೋರಿ ರಹಸ್ಯ ಸಭೆ ನಡೆಸುತ್ತಿದ್ದಾರೆ’ ಎಂದರು. ‘ವಿಜಯೇಂದ್ರ ಅವರನ್ನು ಬಿಜೆಪಿ …
Read More »ಬಿತ್ತನೆ ಬೀಜ: ದರದಲ್ಲಿ ಏರಿಳಿತ
ಬೆಳಗಾವಿ: ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳಾದ ರಾಗಿ, ಗೋಧಿ ಮತ್ತು ಕಡಲೆ ದರ ತುಸು ಹೆಚ್ಚಾಗಿದೆ. ಜೋಳ, ಶೇಂಗಾ ಮತ್ತು ಕುಸುಬೆ ಬೀಜಗಳ ದರ ಕಡಿಮೆಯಾಗಿದೆ. ಉತ್ತರ ಕರ್ನಾಟಕ ಭಾಗದ ರೈತರಿಗೆ ತುಸು ಅನುಕೂಲವಾಗಿದ್ದರೆ, ದಕ್ಷಿಣ ಕರ್ನಾಟಕ ಭಾಗದವರಿಗೆ ದರದ ಬಿಸಿ ತಟ್ಟಿದೆ. ಕಳೆದ ವರ್ಷ ರಾಜ್ಯದ ಎಲ್ಲೆಡೆ ಬರಗಾಲ ಆವರಿಸಿದ್ದರಿಂದ ಬಿತ್ತನೆ ಬೀಜಗಳ ಕೊರತೆ ಉಂಟಾಗಿದೆ. ಕರ್ನಾಟಕ ರಾಜ್ಯ ಬೀಜ ನಿಗಮ, ರಾಷ್ಟ್ರೀಯ ಬೀಜ ನಿಗಮ ಹಾಗೂ ಕರ್ನಾಟಕ ರಾಜ್ಯ …
Read More »ಸಿಎಂ ಸಿದ್ದರಾಮಯ್ಯಗೆ ಇದು ಕೊನೆಯ ‘ದಸರಾ’ : ಶಾಸಕ ಮಹೇಶ್ ಟೆಂಗಿನಕಾಯಿ ಸ್ಪೋಟಕ ಭವಿಷ್ಯ!
ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ರಾಜಿನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಿದ್ದರೆ. ಇನ್ನೊಂದೆಡೆ ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಇದು ಸಿದ್ದರಾಮಯ್ಯ ಅವರಿಗೆ ಕೊನೆಯ ದಸರಾ ಹಾಗೂ ವಿಜಯದಶಮಿ ಆಗಲಿದ್ದು, ಬಳಿಕ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕೊಡುತ್ತಾರೆ ಎಂದು ಸ್ಪೋಟಕ ಭವಿಷ್ಯ ನುಡಿದರು. …
Read More »