ಬೆಂಗಳೂರು: ನೇಮಕಾತಿಯಲ್ಲಿ ಹಗರಣ ಪ್ರಕರಣ ಸಂಬಂಧ ಕೆಪಿಎಸ್‌ಸಿ ಮೇಲೆ ಅಧಿಕಾರಿಗಳು ದಾಳಿ ಮಾಡಿದ ವೇಳೆ ಶಾಕಿಂಗ್ ವಿಚಾರವೊಂದು ಬಯಲಾಗಿದೆ. ಕೆಪಿಎಸ್‌ಸಿ ಕೇಂದ್ರ ಕಚೇರಿಯಲ್ಲಿಯೇ ಅತಿ ದೊಡ್ಡ ಅಕ್ರಮ ನಡೆದಿದ್ದು, ಒಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿರುವ ಹಾರ್ಡ್ ಡಿಸ್ಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಪರೀಕ್ಷೆ ಪ್ರಾರಂಭ ಆಗುವಾಗ ಸ್ಟ್ರಾಂಗ್ ರೂಂ ತೆರೆಯಬೇಕು. ಪ್ರಶ್ನೆ ಪತ್ರಿಕೆ ಒಎಂಆರ್ ಇಡುವಾಗ 24*7 ಸಿಸಿಟಿವಿ ಕಣ್ಗಾವಲು ಇಡಬೇಕು. ಕೆಪಿಎಸ್‌ಸಿ ಸ್ಟ್ರಾಂಗ್ ರೂಂ ಅಲ್ಲಿ ಸಿಸಿ ಟಿವಿ …
Read More »ದೇವಾಲಯದ ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು
ಉಡುಪಿ: ದೇವಾಲಯದ ಕೆರೆಗೆ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ನಗರದ ತೆಂಕಪೇಟೆಯಲ್ಲಿರುವ ವೆಂಕಟರಮಣ ದೇವಾಲಯದಲ್ಲಿ ನಡೆದಿದೆ. ಮೃತನನ್ನು ಕುಕ್ಕಿಕಟ್ಟೆ ನಿವಾಸಿ ಆದಿತ್ಯ ನಾಯಕ್ (13) ಎಂದು ಗುರುತಿಸಲಾಗಿದೆ. ದೇವಾಲಯದಲ್ಲಿ ನಡೆಯುತ್ತಿದ್ದ ಭಜನಾ ಸಪ್ತಾಹ ಕಾರ್ಯಕ್ರಮದ ವೇಳೆ ಘಟನೆ ಸಂಭವಿಸಿದೆ. ಅಕ್ಕನ ಮಗನ ಒತ್ತಾಯದ ಮೇರೆಗೆ ಈಜಲು ಕೆರೆಗೆ ಇಳಿದಿದ್ದ ಆದಿತ್ಯನಿಗೆ ಈಜಲು ಬರುತ್ತಿರಲಿಲ್ಲ ಎನ್ನಲಾಗಿದೆ. ಸುಮಾರು 20 ಅಡಿ ಆಳದ ಕೆರೆಯಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. …
Read More »ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ: ಶಾಸಕ ಪ್ರಕಾಶ್ ಕೋಳಿವಾಡಗೆ 500 ರೂ. ದಂಡ
ಹಾವೇರಿ: ಟ್ರಾಫಿಕ್ ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ಟ್ರಾಫಿಕ್ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಆಗಸ್ಟ್ 25ರಂದು ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್ ಚಲಾಯಿಸಿದ್ದರು. ಈ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದಕ್ಕೆ ಸಾರ್ವಜನಿಕರಿಂದಲೂ ಟೀಕೆ ವ್ಯಕ್ತವಾಗಿತ್ತು. ಸಾಮಾನ್ಯ ಜನರು ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸಿದರೆ ದಂಡ ಹಾಕುತ್ತಾರೆ. ಆದರೆ, ಜನಪ್ರತಿನಿಧಿಗಳಿಗೆ …
Read More »ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ
ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಾಗ ಗುರುತು ಮಾಡಿರುವ ಜಾಗದಲ್ಲಿ ಕಂಬಳ ನಡೆಯುತ್ತದೆ. ಸಿಎಂ ಕೂಡ ಕಂಬಳ ನಡೆಸಿ ಎಂದು ಸೂಚನೆ ಕೊಟ್ಟಿದ್ದಾರೆ ಎಂದರು. ಇಂದು ಗಜಪಯಣ ಆರಂಭವಾಗಿದೆ. ವೀರನಹೊಸಹಳ್ಳಿಯಲ್ಲಿ ಪೂಜೆ ಸಲ್ಲಿಸಲಾಗಿದೆ. 25 ವರ್ಷಗಳಿಂದ ದಸರಾದಲ್ಲಿ ಅಭಿಮನ್ಯು ಭಾಗಿಯಾಗಿತ್ತು. ಈ ಬಾರಿ ಅಭಿಮನ್ಯು ನಿವೃತ್ತಿಯಾಗಿದೆ. …
Read More »ಖೇಲೋ ಇಂಡಿಯಾ; ನಾಳೆ ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ
ನವದೆಹಲಿ: 2026 ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ (National Sports Day) ಅಂಗವಾಗಿ ಗುರುವಾರ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಖೇಲೋ ಇಂಡಿಯಾ (Khelo India) ಸಂವಾದದಲ್ಲಿ ಯುವಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ನಿಗದಿಯಾಗಿರುವ ಈ ಕಾರ್ಯಕ್ರಮವನ್ನು ಮೇರಾ ಯುವ ಭಾರತ್ (ಎಂವೈ ಭಾರತ್) ಆಯೋಜಿಸಿದೆ. ಯುವಜನರು ಭಾರತದ ಕ್ರೀಡಾ ಪಯಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಯುವ …
Read More »ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್
ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಗೃಹ ಕಚೇರಿಗೆ ಆಗಮಿಸಿ ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಒಳಗೊಂಡ ಅರ್ಜಿಗಳನ್ನು ಸಲ್ಲಿಸಿದರು. ಪ್ರತಿಯೊಬ್ಬರ ಸಮಸ್ಯೆಗಳನ್ನು …
Read More »ಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಳೇಬೈಲ್ ಹಾಗೂ ಇನಾಂ ಬಡಸ್ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರ ಕುಟುಂಬಗಳಲ್ಲಿ ಇತ್ತೀಚೆಗೆ ಸಂಭವಿಸಿದ ದುಃಖದ ಘಟನೆಗಳ ಹಿನ್ನೆಲೆಯಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಎಳೇಬೈಲ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ಧಾನಾಜಿ ರಾಮು ಮೊರೆ ಅವರ ಪತ್ನಿ ಮಂಗಲ ಮೊರೆ ಅವರು ಇತ್ತೀಚೆಗೆ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು …
Read More »ಮೈಸೂರು ದಸರೆಗೆ ದುಬಾರೆಯ 5 ಆನೆಗಳ ಪಯಣ
ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರೆಗೆ ದಿನಗಣನೆ ಆರಂಭವಾಗಿದ್ದು, ನಾಡಹಬ್ಬದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಇದೀಗ ಮೈಸೂರಿನತ್ತ ಪ್ರಯಾಣ ಬೆಳೆಸಿದೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರದಿಂದ ಮೊದಲ ಹಂತದಲ್ಲಿ 5 ಆನೆಗಳು ವೀರನಹೊಸಹಳ್ಳಿಯತ್ತ ಪಯಣ ಬೆಳೆಸಿವೆ. ಗಣಪತಿ ಪೂಜೆ ನೆರವೇರಿಸುವ ಮೂಲಕ ಸಾಂಪ್ರದಾಯಿಕವಾಗಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದಕ್ಕಾಗಿ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ …
Read More »ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- UP ವಿದ್ಯಾರ್ಥಿನಿಯ ಅರ್ಜಿ ವಜಾ
ಲಕ್ನೋ: ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಾಲಾ ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಶೈಕ್ಷಣಿಕ ಸಂಸ್ಥೆಗಳು ನಿಗದಿಪಡಿಸಿರುವ ಸಮವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಆದ್ಯತೆಗಳಿಗೆ ತಕ್ಕಂತೆ ಬದಲಾಯಿಸುವ ಯಾವುದೇ ಹಕ್ಕನ್ನು ಹೊಂದಿಲ್ಲ ಎಂದು ಹೇಳಿದೆ. ಪ್ರಯಾಗ್‌ರಾಜ್‌ನ ಖಾಸಗಿ ಶಾಲೆಯೊಂದರ ಅಪ್ರಾಪ್ತ ವಿದ್ಯಾರ್ಥಿನಿ ತನ್ನ ತಾಯಿಯ ಮೂಲಕ …
Read More »ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 19 ದಿನದಲ್ಲಿ 2.81 ಕೋಟಿ ಕಾಣಿಕೆ ಸಂಗ್ರಹ
ರಾಯಚೂರು: ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್ ತಿಂಗಳಿನ 19 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 2.81 ಕೋಟಿ ರೂ. ಕಾಣಿಕೆ ಹರಿದುಬಂದಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಭಕ್ತರ ದಂಡು ಮಠಕ್ಕೆ ಹರಿದು ಬಂದಿದ್ದು, ಕೇವಲ 19 ದಿನದಲ್ಲಿ ಒಟ್ಟು 2,81,69,135 ರೂ. ಕಾಣಿಕೆ ಸಂಗ್ರಹವಾಗಿದೆ. ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 2,73,34,635 ರೂ. ಕರೆನ್ಸಿ ನೋಟುಗಳು ಹಾಗೂ 8,34,500 ರೂ. ನಾಣ್ಯಗಳು ಹರಿದುಬಂದಿದೆ. …
Read More »
Laxmi News 24×7