Breaking News

ಬಿಎಂಟಿಸಿ ಆರ್ಥಿಕ ಕುಸಿತಕ್ಕೆ ಕಾರಣ ಬಹಿರಂಗ

ಡಿಸೆಂಬರ್​ 13: ಪ್ರಯಾಣ ದರ ಹೆಚ್ಚಿಸದಿದ್ದಕ್ಕೆ ಮತ್ತು ಕರ್ನಾಟಕ ಸರ್ಕಾರವು (Karnataka Government) ಆರ್ಥಿಕ ನೆರವು ನೀಡದೆ ಇರುವುದರಿಂದ ಬೆಂಗಳೂರು ಮಹಾನಗರ ಸಾರಿಗೆ (BMTC)ಯ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ. ಇದು ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಕಾರಣವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ (ಸಿಎಜಿ) ವರದಿ ಬಯಲು ಮಾಡಿದೆ.ಬಿಎಂಟಿಸಿಯ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆಯ ಸಿಎಜಿ ವರದಿ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಯಿತು. ಹಿರಿಯ ನಾಗರೀಕರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ಪ್ರಯಾಣಿಕರಿಗೆ ರಿಯಾಯಿತಿ …

Read More »

ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ

ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ಬಯಲು. ಈತ ಖಾನಾಪುರದ ಬಿಜೆಪಿ ಮುಖಂಡ ಹಾಗೂ ಶಾಸಕರ ಆಪ್ತ ಆಕಾಶ ಅಥಣಿಕರ್. ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ ಪತ್ರಗಳನ್ನು ತಯಾರಿಸಿ ಕೊಟ್ಟು ಜನರನ್ನು ಯಾಮಾರಿಸುವುದೇ ಈ ಮಹಾನುಭಾವನ ಕಾಯಕ. ಖಾನಾಪುರ ತಾಲ್ಲೂಕಿನ ಶ್ರೀಮತಿ ಶೀತಲ ಪಾಟೀಲ ಎಂಬ ಮಹಿಳೆಗೆ ಅಂಗನವಾಡಿ ಕಾರ್ಯಕರ್ತೆಯ ನೌಕರಿ ಕೊಡಿಸುವುದಾಗಿ ನಂಬಿಸಿ ಆಕೆಯಿಂದ 30000/- ಹಣ ಪಡೆದುಕೊಂಡು ಖೊಟ್ಟಿ ಆದೇಶ ಪ್ರತಿಯನ್ನು …

Read More »

ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ

ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ. 2023-24ನೇ ಸಾಲಿನಲ್ಲಿ ಅಭಿವೃದ್ಧಿ ಕೆಲಸಗಳಿಗೆಂದೇ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 52,009 ಕೋಟಿ ರೂ.ಗಳನ್ನು ಒದಗಿಸಿದೆ. ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ.ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ …

Read More »

ಯತ್ನಾಳ್​, ತೇಜಸ್ವಿ ಸೂರ್ಯ ವಿರುದ್ಧದ ಕೇಸ್​ ರದ್ದುಗೊಳಿಸಿದ ಹೈಕೋರ್ಟ್​: ಪ್ರಕರಣವೇನು?

ಬೆಂಗಳೂರು, ಡಿಸೆಂಬರ್​​ 12: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ತೇಜಸ್ವಿ ಸೂರ್ಯ ಅವರಿಗೆ ಬಿಗ್​ ರೀಲಿಫ್ ಸಿಕ್ಕಿದೆ. ಎಫ್​ಐಆರ್​ ರುದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕಳೆದ ವಾರ ಮಾಡಲಾಗಿತ್ತು. ಬಳಿಕ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ತೀರ್ಪು ನೀಡಲಾಗಿದೆ.ಮೃತ ರೈತನ‌ ತಂದೆಯ ಹೇಳಿಕೆ ಆಧರಿಸಿ …

Read More »

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಬಿಗ್​ ರಿಲೀಫ್

ಬೆಂಗಳೂರು, (ಡಿಸೆಂಬರ್ 12): ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ಹಿಂದೂ ಧರ್ಮ‌ ನಿಂದನೆ‌ ಮೂಲಕ ಅಶಾಂತಿ ಮೂಡಿಸಲು ಯತ್ನ, ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಿದ್ದಾರೆಂದು ವಕೀಲ ಕೆ.ದಿಲೀಪ್ ಕುಮಾರ್ ಅವರು ದಾಖಲಿಸಿದ್ದ ಖಾಸಗಿ ದೂರನ್ನು ಇಂದು (ಡಿಸೆಂಬರ್ 12) ಹೈಕೋರ್ಟ್​ ರದ್ದುಪಡಿಸಿದೆ ಇದರಿಂದ ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣ ಹಿನ್ನೆಲೆ 2022ರ ನವೆಂಬರ್​ನಲ್ಲಿ …

Read More »

ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ, ಬಿಜೆಪಿ, ಆರ್‌ಎಸ್‌ಎಸ್​​ನವರು: ಕಾಶಪ್ಪನವರ್​ ಹೊಸ ಬಾಂಬ್

ಬೆಳಗಾವಿ, ಡಿಸೆಂಬರ್​ 12: 2ಎ ಮೀಸಲಾತಿಗಾಗಿ (Panchamasali reservation) ಹೋರಾಟ ಮಾಡುತ್ತಿದ್ದ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಆಡಳಿತಾರೂಢ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮಧ್ಯೆ ಅದೇ ಸಮುದಾಯದ ಶಾಸಕ ವಿಜಯಾನಂದ ಕಾಶಪ್ಪನವರ್,​ ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್​ನವರು ಎಂದು ಹೊಸ ಬಾಂಬ್​ ಹಾಕಿದ್ದಾರೆ. ಕಲ್ಲು ತೂರಲು …

Read More »

ಕಾಂಗ್ರೆಸ್‌ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಇಂದು ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್.‌ ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ

ಕಾಂಗ್ರೆಸ್‌ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಇಂದು ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್.‌ ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಶಾಸಕರು, ಪರಿಷತ್‌ ಸದಸ್ಯರು ಉಪಸ್ಥಿತರಿದ್ದರು. #CongressFailsKarnataka #PanchamasaliProtest

Read More »

ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆ

ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ. ಡಿ.10ರಂದು ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ನಡೆಸಿರುವ ಲಾಠಿ ಚಾರ್ಜ್ ಕ್ರಮ ಖಂಡಿಸಿ ಹಾಗೂ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾಕಾರರು ಇಂದು ಹಳ್ಳಿ ಹಳ್ಳಿಗಳ ಮುಖ್ಯ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆಯಾಗಿದೆ. ಸ್ಕೂಟರ್ ಮೇಲೆ ಮಾರಕಾಸ್ತ್ರಗಳು ಇರುವುದು ಕಂಡು ಒಂದು …

Read More »

ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರ ಪ್ರತಿಭಟನೆ

ಪಂಚಮಸಾಲಿ ಹೋರಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದರಲ್ಲಿಯೂ ಬೆಳಗಾವಿಯಲ್ಲಿ ಪ್ರತಿಭಟನೆ ಮತ್ತೆ ತೀವ್ರ ಸ್ವರೂಪ ಪಡೆಯುತ್ತಿದೆ. ಬೆಳಗಾವಿಯ ಹಿರೆಬಾಗೇವಾಡಿ, ಅಥಣಿ ಸೇರಿದಂತೆ ಹಲವೆಡೆ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲಿಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಟಿವಿ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ಖ್ಯಾತ ನಟ ಮೋಹನ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಟಿವಿ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ಖ್ಯಾತ ನಟ ಮೋಹನ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಗಲಾಟೆ ಪ್ರಕರನ ಸಂಬಂಧ ವರದಿ ಗೆ ತೆರಳಿದ್ದ ಖಾಸಗಿ ಮಾಧ್ಯಮದ ಪತ್ರಕರ್ತ ನಟನಿಗೆ ಪ್ರಶ್ನೆ ಕೇಳುತ್ತಿದ್ದಂತೆ ಪತ್ರಕರ್ತನ ಕೈಲಿದ್ದ ಮೈಕ್ ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ. ನಟ ಮೋಹನ್ ಬಾಬು ಹಲ್ಲೆ ನಡೆಸುವಾಗ ಜೊತೆಯಲ್ಲಿ ಅವರ ಮಗ ಕೂಡ ಇದ್ದರು.ಪತ್ರಕರ್ತನ ಮೇಲೆ ಹಲ್ಲೆ ಪಕರಣ ಸಂಬಂಧ ಮೋಹನ್ ಬಾಬು …

Read More »