ಸಂಕೇಶ್ವರ (ಬೆಳಗಾವಿ ಜಿಲ್ಲೆ): ಸಮೀಪದ ಕುರಣಿ ಗ್ರಾಮದ ರೈತ ಅಡಿವೆಪ್ಪ ಶಿವಪ್ಪ ಕಾಚಿ ಅವರು 30 ಗುಂಟೆ ಜಮೀನಿನಲ್ಲಿ 12 ಕ್ವಿಂಟಲ್ ಸೋಯಾಬಿನ್ ಇಳುವರಿ ಪಡೆದಿದ್ದಾರೆ. ತಾವೇ ಕಾದಿಟ್ಟ ಬಿತ್ತನೆ ಬೀಜಗಳಿಗೆ ಸರಿಯಾಗಿ ಪೋಷಣೆ, ಜತೆಗೆ ಸಕ್ಕರೆ ಕಾರ್ಖಾನೆಯಿಂದ ಹೊರಬರುವ ವ್ಯರ್ಥ ಮೊಲಾಸಿಸ್ ಅನ್ನು ಬಿತ್ತನೆ ವೇಳೆ ಬಳಸುವ ಮೂಲಕ ಈ ಪ್ರಯೋಗದಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿ ವರ್ಷ ರೈತರಿಗೆ ವಿವಿಧ ಕಂಪನಿಗಳು ಬಿತ್ತನೆ ಬೀಜ ನೀಡುತ್ತವೆ. ಆದರೆ, ಅಡಿವೆಪ್ಪ ಕಂಪನಿ …
Read More »ಮ್ಮು&ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಭರ್ಜರಿ ಮುನ್ನಡೆ
ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಜಮ್ಮು& ಕಾಶ್ಮೀರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಜಮ್ಮು& ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಮೈತ್ರಿ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ …
Read More »ಮತ್ತೆ ಏರುಗತಿಯಲ್ಲಿ ಟೊಮೆಟೋ
ರಾಜ್ಯದಲ್ಲಿ ಕೆಲವು ದಿನಗಳಿಂದ ಟೊಮೆಟೋ ಧಾರಣೆ ಏರುಗತಿಯಲ್ಲಿ ಸಾಗುತ್ತಿದೆ. ಅತಿದೊಡ್ಡ ಟೊಮೆಟೋ ಮಾರುಕಟ್ಟೆ ಖ್ಯಾತಿಯ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಸದ್ಯ ಕೆ.ಜಿ. ಟೊಮೆಟೋ 30ರಿಂದ 75 ರೂ. ವರೆಗೆ ಹಾಗೂ 15 ಕೆ.ಜಿ.ಯ ಬಾಕ್ಸ್ ಕನಿಷ್ಠ 500ರಿಂದ ಗರಿಷ್ಠ 1,100 ರೂ.ಗೆ ಮಾರಾಟವಾಗುತ್ತಿದೆ. ದೇಶದ ವಿವಿಧ ಮಹಾನಗರಗಳು, ನೆರೆ ರಾಷ್ಟ್ರಗಳಿಗೂ ಟೊಮೆಟೋ ಕಳುಹಿಸುತ್ತಿದ್ದ ಮಾರುಕಟ್ಟೆಯಿಂದ ಇದೀಗ ಜಿಲ್ಲೆಯ ಅಥವಾ ರಾಜ್ಯದ ಬೇಡಿಕೆಯನ್ನು ಪೂರೈಸಲು ಸಾಧ್ಯವಿಲ್ಲವಾಗಿದೆ. ಫಸಲು ಕಡಿಮೆಗೆ ಕಾರಣ? ಟೊಮೆಟೋವನ್ನು …
Read More »ಗಜಪಡೆ ತೂಕ ಪರೀಕ್ಷೆ: ಅಭಿಮನ್ಯುವೇ ‘ಕ್ಯಾಪ್ಟನ್’
ಮೈಸೂರು: ದಸರಾ ಗಜಪಡೆಯ ಎಲ್ಲ 14 ಆನೆಗಳಿಗೆ ಸೋಮವಾರ 2ನೇ ಹಂತದ ತೂಕ ಪರೀಕ್ಷೆ ನಡೆಯಿತು. ಕ್ಯಾಪ್ಟನ್ ಅಭಿಮನ್ಯು ಅತಿ ಹೆಚ್ಚು ತೂಕ ತೂಗಿದರೆ, ಭೀಮ ಕಳೆದ ಬಾರಿಗಿಂತ ಬರೋಬ್ಬರಿ 435 ಕೆ.ಜಿ. ತೂಕ ಹೆಚ್ಚಿಸಿಕೊಳ್ಳುವ ಮೂಲಕ 2ನೇ ಸ್ಥಾನದಲ್ಲಿದ್ದಾನೆ. ಎಂದಿನಂತೆ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್ ಅಭಿಮನ್ಯುವೇ ಹೆಚ್ಚು ಬಲಶಾಲಿಯಾಗಿದ್ದಾನೆ. ಆ. 21ರ ತೂಕ ಪರೀಕ್ಷೆಯಲ್ಲಿ 5,560 ಕೆ.ಜಿ., ಎರಡನೇ ಪರೀಕ್ಷೆಯಲ್ಲಿ 5,820 ಕೆ.ಜಿ. ತೂಕ ತೂಗಿದ್ದು 260 ಕೆ.ಜಿ. ಹೆಚ್ಚಿಸಿಕೊಂಡಿದ್ದಾನೆ. …
Read More »ಗ್ರಾಮಸಭೆ ಕಡ್ಡಾಯ :ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗ್ರಾಮ ಪಂಚಾಯತ್‌ಗಳಲ್ಲಿ ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾ ಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾ.ಪಂ.ಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾ.ಪಂ. ಅಧ್ಯಕ್ಷರು ನಡೆಸಬೇಕು. ಒಂದು ವರ್ಷದಲ್ಲಿ 2 …
Read More »ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
ಮಂಗಳೂರು: ನಗರದ ಸಿಸಿಬಿ ಪೊಲೀಸರು ಬೃಹತ್ ಡ್ರಗ್ ಜಾಲವೊಂದನ್ನು ಪತ್ತೆ ಮಾಡಿದ್ದಾರೆ. ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ. ಸುಮಾರು 6 ಕೆ.ಜಿ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್ …
Read More »ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್
ಹುಬ್ಬಳ್ಳಿ: ಕ್ರಿಕೆಟಿಗ ಕೆ.ಎಲ್.ರಾಹುಲ್ (KL Rahul) ಅವರು ಇಲ್ಲಿನ ಪ್ರತಿಭಾವಂತ ಬಡ ವಿದ್ಯಾರ್ಥಿಯೊಬ್ಬರ ಎರಡನೇ ವರ್ಷದ ಶೈಕ್ಷಣಿಕ ಶುಲ್ಕ ಪಾವತಿಸುವ ಮೂಲಕ ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ. ಇಲ್ಲಿನ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಬಿಕಾಂ ಕಲಿಯುತ್ತಿರುವ ಅಮೃತ್ ಮಾವಿನಕಟ್ಟಿ ಎನ್ನುವ ವಿದ್ಯಾರ್ಥಿಯ ಎರಡನೇ ವರ್ಷದ ಶುಲ್ಕವನ್ನು ಕೆ.ಎಲ್.ರಾಹುಲ್ ಅವರು ಪಾವತಿ ಮಾಡಿದ್ದಾರೆ. 3 ಮತ್ತು 4 ನೇ ಸೆಮಿಸ್ಟರ್ ನ 75,504 ರೂ. ಪಾವತಿಸಿದ್ದಾರೆ. ಇದರ ಮೂಲಕ ಕಳೆದ ವರ್ಷ ಬಿಕಾಂ …
Read More »ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ
ವಿಜಯನಗರ/ವಿಜಯಪುರ: ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾದ ಬೆನ್ನಲ್ಲೇ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ “ದಲಿತ ಸಿಎಂ’ ಚರ್ಚೆಗೆ ರೆಕ್ಕೆಪುಕ್ಕಗಳು ಬಂದಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿರುವ ಬಗ್ಗೆ ಹೆಚ್ಚಿನ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ರಾಜ್ಯದ ಕೆಲವು ನಾಯಕರು ಹೇಳಿಕೆ …
Read More »ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!;
ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಬೀದರ: ತೊಗರಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ, ಕಿತ್ತು ಹಾಕಿರುವ ಘಟನೆ ರವಿವಾರ(ಅ6) ಕರ್ನಾಟಕ – ಮಹಾರಾಷ್ಟ್ರ ಗಡಿ ಗ್ರಾಮ ಉಜಳಂಬದಲ್ಲಿ ನಡೆದಿದೆ. ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಡಿವೈಎಸ್ಪಿ ಮತ್ತು ಸಿಪಿಐ ನೇತೃತ್ವದ ತಂಡ ದಾಳಿ ನಡೆಸಿದೆ. 3.7 ಎಕರೆ ಜಮೀನಿನಲ್ಲಿ ತೊಗರಿ ಬೆಳೆಯಲಾಗಿದ್ದು, ಮಧ್ಯದಲ್ಲಿ ಗಾಂಜಾ …
Read More »25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್!!
ಗದಗ: ಪರವಾನಗಿ ಹೊಂದಿದ ಭೂ ಮಾಪಕರ ಪರವಾನಗಿಯನ್ನು ನವೀಕರಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂ ದಾಖಲೆ ಸಹಾಯಕ ನಿರ್ದೇಶಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ರೋಣ ತಾಲೂಕು ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ (ಎಡಿಎಲ್‌ಆರ್)ವಿ. ಗಿರೀಶ್ ರವಿವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗಜೇಂದ್ರಗಡ ತಾಲೂಕಿನ ಅರುಣಕುಮಾರ್ ನೀರಲಕೇರಿಎಂಬುವರು ಸರ್ವೇಯರ್ ಪರವಾನಗಿ ನವೀಕರಿಸಿಕೊಡುವಂತೆ ವಿ. ಗಿರೀಶ್ ಬಳಿ ಹೋದಾಗ, ಪರವಾನಗಿ ನವೀಕರಣಕ್ಕೆ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ …
Read More »