ಹುಬ್ಬಳ್ಳಿ: ದರೋಡೆಗೆ ಯತ್ನಿಸಿದ ತಂಡದ ಮೇಲೆ ಪೊಲೀಸರು ಗುಂಡಿನ ದಾಳಿ ನಡಸಿದ್ದು, ಒಬ್ಬ ದರೋಡಕೋರನ ಕಾಲಿಗೆ ಗುಂಡು ತಗುಲಿದ ಘಟನೆ ರೇವಡಿಹಾಳ ಸೇತುವೆ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ. ಸೋಮವಾರ ಬೆಳಗಿನ ಜಾವ 3:00 ಗಂಟೆ ಸುಮಾರಿಗೆ ಗೋಕುಲ ಗ್ರಾಮದಲ್ಲಿ 5-6 ಜನರ ತಂಡವು ರಜನಿಕಾಂತ ದೊಡ್ಡಮನಿ ಎಂಬುವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದೆ. ಈ ವೇಳೆ ಮನೆಯವರು ಎಚ್ಚರಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಗೋಕುಲ …
Read More »ದರ್ಶನ್ ಭೇಟಿಗೆಂದು ಬಳ್ಳಾರಿ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ
ಬಳ್ಳಾರಿ: ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ (Darshan) ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಸೋಮವಾರ (ಅ.07) ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಜತೆಗೆ ಆಪ್ತರಾದ ಅನುಷಾ ಶೆಟ್ಟಿ ಸೇರಿ ಮೂವರು ಮಹಿಳೆಯರು ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಮಧ್ಯಾಹ್ನ 12.12ಕ್ಕೆ ಜೈಲಿಗೆ ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಭೇಟಿ ನೀಡುತ್ತಿರುವುದು ಇದು ಎಂಟನೇ ಬಾರಿ. ವಿಜಯಲಕ್ಷ್ಮಿ ಅವರೊಂದಿಗೆ ಸುಶಾಂತ ನಾಯ್ಡು ಸೇರಿದಂತೆ ಒಟ್ಟು ಐವರು ಆಗಮಿಸಿದ್ದಾರೆ. ಬ್ಯಾಗ್ ನಲ್ಲಿ ಬೇಕರಿ ತಿನಿಸು, ಡ್ರೈಫ್ರೂಟ್, …
Read More »ಕಾರು ಅಪಘಾತ. ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ
ಮುಧೋಳ : ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಹೊಸಕೋಟಿಯವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಭಾನುವಾರ(ಅ.6) ರಾತ್ರಿ ಮುಧೋಳ ಮಾರ್ಗದಿಂದ ಮಹಾಲಿಂಗಪುರದ ಕಡೆಗೆ ತೆರಳುವಾಗ ಎದುರಿನಿಂದ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯಲ್ಲಿನ ಬಂಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಹೊಸಕೋಟಿ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ …
Read More »ವ್ಯಾಜ್ಯಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ
ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ವತಿಯಿಂದ ವ್ಯಾಜ್ಯಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ 4 ಗ್ರಾಮಗಳನ್ನು ದತ್ತು ಪಡೆದುಕೊಂಡು ಕಾನೂನು ನೆರವನ್ನು ನೀಡಲಾಗುತ್ತಿದೆ ಎಂದು ಎಚ್.ಸಿ.ಇ.ಎಸ್ ಕಾನೂನು ಮಹಾವಿದ್ಯಾಲಯದ ಅಧ್ಯಕ್ಷ ಎಸ್.ಕೆ. ಪಾಟೀಲ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ಗ್ರಾಮಗಳಲ್ಲಿ, ಹೈಕೋರ್ಟ್, ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ 35 ಲಕ್ಷ ಪ್ರಕರಣಗಳು ಚಾಲ್ತಿಯಲ್ಲಿವೆ. ರಾಜಿ …
Read More »ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬೊಮ್ಮಾಯಿ
ಗದಗ: ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ರಾಜಿನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡಿದರೆ …
Read More »ಮುರುಘಾ ಶರಣರಿಗೆ ಜಾಮೀನು ಮಂಜೂರು
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘರಾಜೇಂದ್ರ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಮಂಜೂರರಾಗಿದೆ. ಜೈಲಿನಿಂದ ಮುರುಘಾ ಶ್ರೀ ಬಿಡುಗಡೆಗೆ ಕೋರ್ಟ್ ಆದೇಶ ನೀಡಿದ್ದು, ಜೈಲಿನಿಂದ ಬಿಡುಗಡೆ ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಲಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಬಾಲಕಿಯರ ವಿಚಾರಣೆ ಬಳಿಕ ಜಾಮೀನು ನೀಡಲು ಈ ಹಿಂದೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಸೋಮವಾರ (ಅ.07) ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ …
Read More »ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ
ಕುಂದಾಪುರ: ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿ ಹಾಗೂ ಹೈದರಾಬಾದ್‌ಗೆ ಕಾರವಾರದಿಂದ ಕುಂದಾಪುರ -ಉಡುಪಿ- ಮಂಗಳೂರು ಮೂಲಕ ರೈಲು ಸಂಪರ್ಕ ಆರಂಭಿಸಬೇಕು ಎನ್ನುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ಸಚಿವ ವಿ. ಸೋಮಣ್ಣಗೆ ಮನವಿ ಸಲ್ಲಿಸಿದ್ದಾರೆ. ಕಳೆದೊಂದು ದಶಕದಿಂದ ತಿರುಪತಿಗೆ ರೈಲು ಸಂಪರ್ಕ ಬೇಕೆನ್ನುವ ಬೇಡಿಕೆಯನ್ನು ಕರಾವಳಿಯ ಎಲ್ಲ ಊರುಗಳ ಜನರು ಇಡುತ್ತಿದ್ದು, ಈ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ …
Read More »ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ
ಬೆಳಗಾವಿ: ಹಳೆ ದ್ವೇಷ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಮತೀರ್ಥ ನಗರ ನಿವಾಸಿ ನಿತೇಶಕುಮಾರ ಚವ್ಹಾಣ ಎಂಬ ವಿಚಾರಣಾಧೀನ ಕೈದಿ ಮೇಲೆ ಹಳೆ ದ್ವೇಷದಿಂದಾಗಿ ಶುಕ್ರವಾರ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ನಿತೇಶ್ ಕುಮಾರ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತ್ಯಾನಟ್ಟಿಯ ವಿಚಾರಣಾದೀನ ಕೈದಿಗಳಾದ ಬಸವರಾಜ ಹೊಳೆಪ್ಪ ದಡ್ಡಿ, ಬಸವಣ್ಣಿ ಸಿದ್ದಪ್ಪ …
Read More »ಆರ್. ಅಶೋಕ ಅವರ ಪ್ರಕರಣಕ್ಕೂ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸ:ಶೆಟ್ಟರ್
ಧಾರವಾಡ: ‘ವಿಪಕ್ಷ ನಾಯಕ ಆರ್. ಅಶೋಕ ಅವರ ಪ್ರಕರಣಕ್ಕೂ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸವಿದ್ದು, ಈ ಎರಡೂ ಪ್ರಕರಣವನ್ನು ಪರಸ್ಪರ ಹೋಲಿಕೆ ಮಾಡುವುದು ಸರಿಯಲ್ಲ’ ಎಂದು ಮಾಜಿ ಸಿಎಂ, ಬೆಳಗಾವಿಯ ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ರವಿವಾರ(ಅ6) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ಈಗಾಗಲೇ ಭೂ ವಂಚನೆ ಪ್ರಕರಣವು ಕೋರ್ಟ್‌ನಿಂದ ಎಲ್ಲವೂ ಬಗೆಹರಿದಿದೆ ಎಂಬುದಾಗಿ ಆರ್.ಅಶೋಕ ಅವರೇ ಸ್ಪಷ್ಟಪಡಿಸಿದ್ದಾರೆ. ಆದರೆ ಈಗ ಸಿದ್ದರಾಮಯ್ಯನವರು ತಮ್ಮ ಪ್ರಕರಣದ ಜತೆ ಇನ್ನೊಬ್ಬರ …
Read More »ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್ ನೋಂದಣಿ ಕಡ್ಡಾಯ
ತಿರುವನಂತಪುರ: ಈ ಬಾರಿ ಶಬರಿಮಲೆಗೆ ಅಯ್ಯಪ್ಪನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳು ಆನ್‌ಲೈನ್ ಮೂಲಕವೇ ಬುಕ್ಕಿಂಗ್ ಮಾಡಿಕೊ ಳ್ಳುವುದು ಕಡ್ಡಾಯವಾಗಿದೆ. ಪ್ರತೀ ದಿನ 80,000 ಭಕ್ತರಿಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗು ತ್ತದೆ. ಭಕ್ತರು ಶಬರಿಮಲೆ ದೇಗು ಲದ ವೆಬ್‌ಸೈಟ್‌ನಲ್ಲಿ ವರ್ಚುವಲ್ ಬುಕಿಂಗ್ ಮಾಡ ಬೇಕಾಗುತ್ತದೆ. ಈ ವೇಳೆ ಯಾತ್ರಾರ್ಥಿ ಗಳು ಸಾಗುವ ಮಾರ್ಗವನ್ನೂ ಆಯ್ದು ಕೊ ಳ್ಳ ಬಹು ದಾಗಿದೆ. ಕಡಿಮೆ ಜನಸಂದಣಿ ಇರುವ ಮಾರ್ಗಗಳೂ ಲಭ್ಯವಿದೆ. ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ.
Read More »