Breaking News

ಎಂಇಎಸ್​ಗೆ ಸಿಎಂ ಖಡಕ್​ ಎಚ್ಚರಿಕೆ

ಬೆಳಗಾವಿ, ಡಿಸೆಂಬರ್​ 09: ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಆಗಬೇಕೆಂಬ ಆದಿತ್ಯ ಠಾಕ್ರೆ ಹೇಳಿಕೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಆದಿತ್ಯ ಠಾಕ್ರೆ ಬಾಲಿಶತನದ ಹೇಳಿಕೆ ನೀಡಿದ್ದಾರೆ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡೋಕಾಗುತ್ತಾ? ಮಹಾಜನ್ ವರದಿಯನ್ನ ಒಪ್ಪಿಕೊಳ್ಳಬೇಕು. ಎಂಇಎಸ್ ಹೋರಾಟ ವಿಚಾರವಾಗಿ ಮಾತನಾಡಿದ್ದು, ಎಂಇಎಸ್ ಹೋರಾಟ ಮಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

Read More »

ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

  ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್​​ಎಂ ಕೃಷ್ಣ ಬೆಂಗಳೂರಿನಲ್ಲಿ ನಿಧನರಾದರು. ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ರಾಜಕೀಯ ಜೀವನದ ಇಣುಕುನೋಟ ಇಲ್ಲಿದೆ. ಬೆಂಗಳೂರು, ಡಿಸೆಂಬರ್​ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ …

Read More »

ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಶ್ರಾಂತ ಆಶ್ರಮಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿಭೇಟಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿಯ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಶ್ರಾಂತ ಆಶ್ರಮಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರೊಂದಿಗೆ ಭೇಟಿ ನೀಡಲಾಯಿತು. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ಬಹಳ ಆಳವಾಗಿ ಅಧ್ಯಯನ, ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭವಿಗಳಾಗಿದ್ದರು. ಪರಿಸರದ ಬಗ್ಗೆ ಅವರಿಗಿದ್ದ ಕಾಳಜಿ ಅಪಾರ ಮತ್ತು ಆಧ್ಯಾತ್ಮಿಕವಾಗಿ ಸಾಕಷ್ಟು ಜ್ಞಾನ ಹೊಂದಿದ್ದ ಶ್ರೀಗಳು ಜನಮಾನಸದಲ್ಲಿ ಅಜರಾಮರ. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಆಶ್ರಮದ ಸದಸ್ಯರು …

Read More »

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ

ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಹಾಗೂ ವಿಶ್ವದ ಮೊದಲ ಸಂಸತ್ತು ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರವನ್ನು ಅನಾವರಣಗೊಳಿಸಿದರು. 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ ಎಂದು ಕರೆಯಲಾಗಿದೆ. ಸುವರ್ಣ‌ಸೌಧದಲ್ಲಿ ಅನುಭವ …

Read More »

ಕಾಂಗ್ರೆಸ್ ಸರ್ಕಾರ ಕಳೆದ 18 ತಿಂಗಳಿನಿಂದ ಅವ್ಯವಸ್ಥೆ ಭ್ರಷ್ಟಾಚಾರದಿಂದ ಸರ್ಕಾರ ನಡೆಸುತ್ತಿದೆ;ಅಶ್ವಥ್ ನಾರಾಯಣ್

ಕಾಂಗ್ರೆಸ್ ಸರ್ಕಾರ ಕಳೆದ 18 ತಿಂಗಳಿನಿಂದ ಅವ್ಯವಸ್ಥೆ ಭ್ರಷ್ಟಾಚಾರದಿಂದ ಸರ್ಕಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದರು. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಬಯಲಿಗೆಳೆಯುತ್ತದೆ. ಇರುವುದು 9 ದಿನ ಅಧಿವೇಶನ ಅದರಲ್ಲಿ ಕೇವಲ ಎರಡು ದಿನ ಮಾತ್ರ ಉತ್ತರ ಕರ್ನಾಟದ ಬಗ್ಗೆ ಚರ್ಚೆಗೆ ಅವಕಾಶ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Read More »

ಸಿದ್ದೇಶ್ವರ ಶ್ರೀಗಳ ದರ್ಶನ, ನಮ್ಮನಿಮ್ಮೆಲ್ಲರನ್ನೂ ಪಾವನವಾಗಿಸಿದೆ; ಮಹೇಶನಾಂದ ಶ್ರೀಗಳು

ಸಿದ್ದೇಶ್ವರ ಶ್ರೀಗಳ ದರ್ಶನ, ನಮ್ಮನಿಮ್ಮೆಲ್ಲರನ್ನೂ ಪಾವನವಾಗಿಸಿದೆ: ಮಹೇಶನಾಂದ ಶ್ರೀಗಳು. ಜಗತ್ತಿನಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ದೇವರಗಿಂತ ಗುರು ದೊಡ್ಡವನಾಗಿದ್ದಾನೆ. ಅಂತಹ ಗುರುಶ್ರೇಷ್ಠರು, ದಾರ್ಶನಿಕರು, ಯುಗಪುರುಷರು, ಮಹಾನ ತ್ಯಾಗಿಗಳು ಹಾಗೂ ನಡೆದಾಡುವ ದೇವರೆಂದು ಖ್ಯಾತಿ ಪಡೆದ ಜ್ಞಾನಯೋಗಾಶ್ರಮದ ಪ.ಪೂ. ಶ್ರೀ ಸಿದ್ದೇಶ್ವರ ಶ್ರೀಗಳು ನಮ್ಮ ನಿಮ್ಮ ಜೊತೆ ಇದ್ದದ್ದೇ ನಮ್ಮೆಲ್ಲರ ಪುಣ್ಯವೆಂದು ಹಂಚಿನಾಳ ಭಕ್ತಿಯೋಗಾಶ್ರಮದ ಪ.ಪೂ. ಶ್ರೀ ಮಹೇಶಾನಂದ ಮಹಾಸ್ವಾಮಿಗಳು ಹೇಳಿದ್ದಾರೆ.

Read More »

ದಾಸನಿಗೆ ತಾತ್ಕಾಲಿಕ ರಿಲೀಫ್

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್​ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್​ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಎ2 ಆಗಿರುವ ನಟ ದರ್ಶನ್​ ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. …

Read More »

ಸ್ಫೀಕರ್ ಪೀಠದ ವಿಶೇಷತೆ, ಮಹತ್ವ ಬಿಚ್ಚಿಟ್ಟ ಖಾದರ್

ಬೆಳಗಾವಿ, (ಡಿಸೆಂಬರ್ 09): ಬೆಳಗಾವಿಯ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಹೊಸ ಸಭಾಧ್ಯಕ್ಷರ ಪೀಠವನ್ನು ಅಳವಡಿಸಲಾಗಿದೆ. ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಸುಮಾರು 45 ಲಕ್ಷ ರೂ. ಖರ್ಚು ಮಾಡಿ ಈ ಸ್ಪೀಕರ್​ ಪೀಠವನ್ನು ಸಿದ್ಧಪಡಿಪಡಿಸಲಾಗಿದೆ. ಮೊದಲು ಸಾಮಾನ್ಯ ಮರದಿಂದ ಮಾಡಲಾಗಿದ್ದ ಪೀಠ ಇತ್ತು. ಇದೀಗ ವಿಲಾಸಿ, ರೋಸ್ ವುಡ್​​ನಿಂದ ಪೀಠವನ್ನು ತಯಾರಿಸಲಾಗಿದೆ. ಪೀಠದಲ್ಲಿ ಗಂಡ ಬೇರುಂಡ, ಊಳುವ ರೈತ, ಚರಕ ಸೇರಿ ವಿವಿಧ ಕುಸುರಿಗಳೊಂದಿಗೆ ಅದ್ಧೂರಿ ಟಚ್ ಕೊಡಲಾಗಿದೆ. ಇನ್ನು …

Read More »

ಪಂಚಮಸಾಲಿ ಹೋರಾಟದಲ್ಲಿ ಯಾವುದೇ ಗೊಂದಲವಿಲ್ಲ: ಮೊಹಮ್ಮದ್ ರೋಷನ್

ಬೆಳಗಾವಿ, ಡಿಸೆಂಬರ್​​ 09: ಡಿ. 10 ರಂದು ಶಕ್ತಿಸೌಧಕ್ಕೆ ಟ್ರ್ಯಾಕ್ಟರ್​ ಮೂಲಕ ಮುತ್ತಿಗೆ ಹಾಕಲು ಪಂಚಮಸಾಲಿ (Panchmasali) ಸಮುದಾಯ ಸಿದ್ಧವಾಗಿದ್ದಾಗಲೇ ಸರ್ಕಾರ ಹೋರಾಟದ ವಾಹನಗಳು ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿತ್ತು. ಈ ವಿಚಾರ ಅಧಿವೇಶನದ ಒಳಗೂ ಮತ್ತು ಹೊರಗೂ ಸದ್ದು ಮಾಡಿದೆ. ಬಿಜೆಪಿ ನಾಯಕರು ಸದನದ ಬಾವಿಗೆ ಇಳಿದು ಗುಡುಗಿದರೆ, ಇತ್ತ ಬಸವಜಯ ಮೃತ್ಯುಂಜಯ ಸ್ವಾಮೀಜಿ ಡಿಸಿ, ಪೊಲೀಸ್ ಕಮಿಷನರ್ ಜೊತೆಗೆ ಸಭೆ ಮಾಡಿ ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ನಾಳೆಯ ಹೋರಾಟಕ್ಕೆ ಸಂಪೂರ್ಣ ಬೆಂಬಲ …

Read More »

ಹಿರಿಯ ನಾಗರಿಕರ ಮನೋರಂಜನಾ ಕೇಂದ್ರವನ್ನು ಲೋಕಾರ್ಪಣೆ;ಅಭಯ್ ಪಾಟೀಲ್

ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರ ಕನಸಿನ ಯೋಜನೆ ಹಿರಿಯ ನಾಗರಿಕರ ಮನೋರಂಜನಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಲಾಯಿತು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬರುವ ನಿಸರ್ಗರಮ್ಯ ಬ್ಯಾಕ್ಸಿನ್ ಡಿಪೋ ದ ಆರೋಗ್ಯ ಇಲಾಖೆ ಕಾರ್ಯಾಲಯದ ಹಿಂದುಗಡೆ ಶಾಸಕ ಅಭಯ ಪಾಟೀಲ್ ಅವರ ಕನಸಿನ ಯೋಜನೆ ಹಿರಿಯ ನಾಗರಿಕರ ಮನೋರಂಜನ ಕೇಂದ್ರವನ್ನ ಇಂದು ಉದ್ಘಾಟನೆಗೊಳಿಸಲಾಯಿತು. ಈ ವೇಳೆ ಮಾತನಾಡಿದ ಉಪಮಹಾಪೌರ ಆನಂದ್ ಚೌಹಾಣ್ ಅವರ ಮಾತನಾಡಿ ಶಾಸಕ ಅಭಯ್ ಪಾಟೀಲ್ ಅವರ ಕಾರ್ಯಕ್ಕೆ …

Read More »