ಬೆಂಗಳೂರು: ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಸಲೀಂ ಆದೇಶ ಹೊರಡಿಸಿದ್ದಾರೆ. 4 ಎಫ್‌ಐಆರ್‌ಗಳನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ರಾಮಪುರ ಠಾಣೆಯಲ್ಲಿ ದಾಖಲಾದ ಅರಣ್ಯಾಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣ. ಹನೂರು ಠಾಣೆಯಲ್ಲಿ ದಾಖಲಾದ ಮೂವರು ಬೇಟೆಗಾರರ ಎನ್‌ಕೌಂಟರ್ ಪ್ರಕರಣ, ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಗೆ ಸೇರಿದ ವಸ್ತುಗಳಿಗೆ ಹಾನಿ, ಶಿಬಿರಗಳನ್ನು ನಾಶ ಮಾಡಿದ ಪ್ರಕರಣ, ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅರಣ್ಯಾಧಿಕಾರಿಗಳ …
Read More »ಅಕ್ಕಿಯನ್ನು ಎಥೆನಾಲ್ ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದೇಕೆ?- ಪ್ರಿಯಾಂಕ್ ಖರ್ಗೆ
ಬೆಂಗಳೂರು: ಆಹಾರ ಭದ್ರತೆಗಾಗಿ ತೆರಿಗೆದಾರರ ಹಣದಲ್ಲಿ ಭತ್ತವನ್ನು ಖರೀದಿಸಿ, ಅದನ್ನು ಸಂಗ್ರಹಿಸಿ, ಸಾಗಣೆ ವೆಚ್ಚ ಭರಿಸಿ, ಬಳಿಕ ಭಾರತೀಯ ಆಹಾರ ನಿಗಮ ಮೂಲಕ ಎಥೆನಾಲ್ ಉತ್ಪಾದಕರಿಗೆ ಅದರ ಸ್ವಾಧೀನ ವೆಚ್ಚಕ್ಕಿಂತ ಸುಮಾರು ಶೇ.40ರಷ್ಟು ಕಡಿಮೆ ದರದಲ್ಲಿ ಅಕ್ಕಿಯನ್ನು ಮಾರಾಟ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಭಾರತದ ಎಥೆನಾಲ್ ಗಣಿತವೇ ಸರಿಯಾಗಿ ಹೊಂದಿಕೆಯಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಆಹಾರ …
Read More »ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ
ಉಡುಪಿ: ಮೀನುಗಾರ ಕಾರ್ಮಿಕನಿಗೆ ಚೂರಿ ಇರಿದು ಹತ್ಯೆ ಮಾಡಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಅಭಿಷೇಕ್ (24) ಕೊಲೆಯಾದ ದುರ್ದೈವಿ. ರಾಯಚೂರು ಮೂಲದ ಗೋಂವಿಂದ ರಾಜು ಕೊಲೆ ಆರೋಪಿಯಾಗಿದ್ದಾನೆ. ಮುಂಜಾನೆ ಮಲ್ಪೆ ಬಂದರಿನಲ್ಲಿ ಯುವಕನಿಗೆ ಆರೋಪಿ ಚಾಕು ಇರಿದು ಪರಾರಿಯಾಗಿದ್ದ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ, ಕುಡಿದ ಮತ್ತಿನಲ್ಲಿ ಆರೋಪಿ ಚೂರಿ ಇರಿದಿರುವುದು ಗೊತ್ತಾಗಿದೆ. ಅಭಿಷೇಕ್ ಶ್ರೀ ಮಹಾಕಾಳಿ ಬೋಟ್‌ನಲ್ಲಿ ಕಾರ್ಮಿಕನಾಗಿ ಕೆಲಸ …
Read More »“ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೊಂಡಿರು”- ಪತ್ನಿಗೆ ಪತಿ ಆದೇಶಿಸುವಂತಿಲ್ಲ
ಬೆಂಗಳೂರು: ಪತಿ ಸೇರಿದಂತೆ ಯಾರೂ ಮಹಿಳೆಗೆ ಮನೆಗೆಲಸ ಹಾಗೂ ಪೋಷಕರನ್ನು ನೋಡಿಕೊಳ್ಳುವಂತೆ ಬಲವಂತ ಮಾಡುವಂತಿಲ್ಲ ಕರ್ನಾಟಕ ಹೈಕೋರ್ಟ್ (ಮಹತ್ವದ ತೀರ್ಪು ನೀಡಿದೆ. ಪತ್ನಿಮತ್ತು ಮಗಳಿಗೆ ಮಾಸಿಕ 9 ಸಾವಿರ ರೂ. ಜೀವನಾಂಶ ನೀಡಬೇಕೆಂಬ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಚಿಲ್ಲಾಕೂರ್ ಸುಮಲತಾ ಅವರಿದ್ದ ಏಕಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದೆ ಪತ್ನಿಯಾದವಳು ಕೇವಲ ಮನೆಗೆಲಸ ಮಾಡಿಕೊಂಡೇ ಇರಬೇಕು ಎಂದು ನಿರೀಕ್ಷಿಸುವಂತಿಲ್ಲ. ವೃದ್ಧ …
Read More »ಭ್ರಷ್ಟಾಚಾರ ಆರೋಪಿಗೆ ರಾಜಾತಿಥ್ಯ – ನ್ಯಾಯಾಧೀಶರ ದಿಢೀರ್ ರೇಡ್‌ನಲ್ಲಿ ಅಕ್ರಮ ಬಯಲು
ಮಂಡ್ಯ: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಧಿಕಾರಿಯೊಬ್ಬನಿಗೆ ಜೈಲಿನ ಬದಲು ಆಸ್ಪತ್ರೆಯಲ್ಲಿ ರಾಜಾತಿಥ್ಯ ಕಲ್ಪಿಸುತ್ತಿದ್ದ ಆಘಾತಕಾರಿ ಘಟನೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಬಯಲಾಗಿದೆ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ. ಚಂದ್ರಶೇಖರ್ ನೇತೃತ್ವದ ತಂಡ ನಡೆಸಿದ ದಿಢೀರ್ ದಾಳಿಯಲ್ಲಿ ಜೈಲಾಧಿಕಾರಿಗಳು ಹಾಗೂ ವೈದ್ಯರ ಶಾಮೀಲಾತಿ ಸಾಕ್ಷಿ ಸಮೇತ ಸಿಕ್ಕಿಬಿದ್ದಿದೆ. ಅಕ್ರಮ ಖಾತೆ ಸೃಷ್ಟಿ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಶ್ರೀರಂಗಪಟ್ಟಣದ ಎಡಿಎಲ್‌ಆರ್ ಮಹಮದ್ ಹುಸೇನ್, ನ್ಯಾಯಾಂಗ ಬಂಧನದಲ್ಲಿ ಜೈಲಿನಲ್ಲಿರಬೇಕಿತ್ತು. ಆದರೆ ಜೈಲಾಧಿಕಾರಿಗಳು …
Read More »ವಿಷಕಾರಿ ದತ್ತೂರ ಬೀಜಗಳ ಮಾರಾಟ – ಮೂರು ಇ ಕಾಮರ್ಸ್ ಜಾಲತಾಣಗಳ ಆಹಾರ ಪರವಾನಗಿ ಅಮಾನತು
ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು ಆಹಾರ ಉತ್ಪನ್ನಗಳಾಗಿ ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್ ಜಾಲತಾಣಗಳ ಆಹಾರ ಪರವಾನಗಿ ಅಮಾನತು ಮಾಡಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆದೇಶ ಮಾಡಿದೆ. Amazon, Swiggy Instamart, ಜಾಲತಾಣಗಳ ಆಹಾರ ಪರವಾನಗಿ ಅಮಾನತು ಮಾಡಲಾಗಿದೆ. ಬೀಜಗಳ ಮಾರಾಟ, ವಿತರಣೆ, ಪ್ರಚಾರವನ್ನು ಮಾಡಿದ್ದಕ್ಕೆ ಈ ಕ್ರಮಕೈಗೊಳ್ಳಲಾಗಿದೆ. ಹೊಕೋಟೆಯ ಇ-ಕಾಮರ್ಸ್ ವೇರ್ ಹೌಸ್‌ಗಳಲ್ಲಿ ಪರಿಶೀಲನೆ ನಡೆಸಿದಾಗ ದತ್ತೂರ ಬೀಜಗಳು ಪತ್ತೆಯಾಗಿದ್ದವು. ಇದರಿಂದ ಎಚ್ಚೆತ್ತ ಇಲಾಖೆ ಆಹಾರ …
Read More »ನೈಸ್ ಯೋಜನೆ ಸರ್ಕಾರ ವಶಪಡಿಸಿಕೊಳ್ಳಬೇಕು – ಜೆಡಿಎಸ್ ನಿಯೋಗದಿಂದ ಸಿಎಸ್‌ಗೆ ಮನವಿ ಸಲ್ಲಿಕೆ
ಬೆಂಗಳೂರು: ನೈಸ್ ಯೋಜನೆ ಸರ್ಕಾರ ಕೂಡಲೇ ವಶಪಡಿಸಿಕೊಳ್ಳಬೇಕು. ಟೋಲ್ ಸಂಗ್ರಹ ನಿಲ್ಲಿಸಬೇಕು ಅಂತ ಜೆಡಿಎಸ್ ನಿಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಕೆ ಮಾಡಿದೆ. ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ನೇತೃತ್ವದ ಶಾಸಕರ ನಿಯೋಗ ಸಿಎಸ್‌ಗೆ ಮನವಿ ಸಲ್ಲಿಸಿದ್ರು ಮನವಿ ಸಲ್ಲಿಕೆ ಬಳಿಕ ಮಾತನಾಡಿದ ಸುರೇಶ್ ಬಾಬು, ನೈಸ್ ಯೋಜನೆಯಲ್ಲಿ ಹಗಲು ದರೋಡೆ ಆಗ್ತಿದೆ. ಯಾರು ಇವರ ರಕ್ಷಣೆ ಮಾಡ್ತಾ ಇದ್ದಾರೆ. ಹೈಕೋರ್ಟ್ ಕೂಡಾ …
Read More »ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಜಿಗಿದ ಮಹಿಳೆ; ತಾಯಿ, ಮಗು ರಕ್ಷಣೆ – ಇಬ್ಬರು ಬಾಲಕಿಯರು ಕಣ್ಮರೆ
ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂರು ಮಕ್ಕಳೊಂದಿಗೆ ಮಹಿಳೆಯೊಬ್ಬಳು ನಗರದಲ್ಲಿ ಹರಿಯುವ ತುಂಗಾ ನದಿಗೆ ಹಾರಿದ್ದು, ಅಲ್ಲೇ ಇದ್ದ ಯುವಕರು ಮಹಿಳೆ ಹಾಗೂ ಆಕೆಯ ಮಗನನ್ನು ರಕ್ಷಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗ ಮೂಲದ ಮಹಿಳೆ ನದಿಗೆ ಹಾರಿದ್ದರು. ಅದೃಷ್ಟವಶಾತ್ ಮಹಿಳೆ ಹಾಗೂ ಆಕೆಯ 11 ತಿಂಗಳ ಮಗನನ್ನು ಜನ ಬಚಾವ್ ಮಾಡಿದ್ದಾರೆ. ಆದರೆ ಇನ್ನಿಬ್ಬರು ಮಕ್ಕಳಾದ ಸಾನ್ವಿಕಾ (6), ತನ್ವಿಕಾ (4) ತುಂಗಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. …
Read More »ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಯಶ್ – ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪೂಜೆ
ʻಟಾಕ್ಸಿಕ್ʼ ಸಿನಿಮಾ ನಾಳೆ (ಆ.26) ವಿಶ್ವದಾದ್ಯಂತ ತೆರೆ ಕಾಣುತ್ತಿದೆ. ಈ ಬೆನ್ನಲ್ಲೇ ನಟ ಯಶ್ ಅವರು ಇಂದು (ಆ.25) ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ನಟ ಯಶ್, ಬಳಿಕ ಧರ್ಮಸ್ಥಳ ಶ್ರೀಕ್ಷೇತ್ರಕ್ಕೆ ತೆರಳಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು, ಗರ್ಭಗುಡಿಯ ಸಮೀಪ ನಿಂತು ಸುಮಾರು 10 ನಿಮಿಷಗಳ ಕಾಲ …
Read More »ಕುಮಾರಸ್ವಾಮಿ ಈವರೆಗೂ ಹೇಳಿದ ಯಾವುದೇ ದಾಖಲಾತಿ ಬಿಡುಗಡೆ ಮಾಡಿಲ್ಲ: ಚಲುವರಾಯಸ್ವಾಮಿ
ಬೆಂಗಳೂರು: ನೈಸ್ ಯೋಜನೆ ಕುರಿತು ಸಿಎಂ ವಿರುದ್ಧ ಕುಮಾರಸ್ವಾಮಿ ಏನು ದಾಖಲಾತಿ ಬಿಡುಗಡೆ ಮಾಡುತ್ತಾರೋ ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಸವಾಲ್ ಹಾಕಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಲಿ. ಅವರು ಇದುವರೆಗೂ ಬಿಡುಗಡೆ ಮಾಡ್ತೀನಿ ಅಂದರು ಯಾವುದೇ ದಾಖಲಾತಿ ಬಿಡುಗಡೆ ಮಾಡಿಲ್ಲ. ಕಳೆದ 3 ವರ್ಷದಲ್ಲಿ ಯಾವುದಾದರೂ ದಾಖಲೆ ಬಿಡುಗಡೆ ಮಾಡಿದ್ರಾ? ಯಾವುದು ಬಿಡುಗಡೆ ಮಾಡಿಲ್ಲ. ಕುಮಾರಸ್ವಾಮಿ ಅವರನ್ನ ಯಾಕೆ ಬಿಡುಗಡೆ ಮಾಡಲ್ಲ ಕೇಳಿ ಎಂದು …
Read More »
Laxmi News 24×7