ಬೆಂಗಳೂರು, ಅಕ್ಟೋಬರ್ 04: ಉದ್ಯಮಿ ವಿಜಯ್ ಟಾಟಾ ನೀಡಿದ ದೂರಿನ ಮೇರೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚನ್ನಪಟ್ಟಣ ಎಲೆಕ್ಷನ್‌ಗೆ 50 ಕೋಟಿ ಹಣಕ್ಕಾಗಿ ಡಿಮ್ಯಾಂಡ್ ಇಟ್ಟು ಬೆದರಿಕೆ ಹಾಕಿದ್ರು ಅಂತಾ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದಾರೆ. A1 ರಮೇಶ್ ಗೌಡ, A2 ಹೆಚ್. ಡಿ. ಕುಮಾರಸ್ವಾಮಿಯನ್ನ ಆರೋಪಿಗಳಾಗಿ ಹೆಸರಿಸಿ ಎಫ್‌ಐಆರ್ ದಾಖಲಾಗಿದ್ದು, ಬಿಎನ್ …
Read More »“ಸ್ಥಳೀಯ’ ಚುನಾವಣೆ ನಡೆಸದಿದ್ದರೆ ಅನುದಾನಕ್ಕೆ ಕತ್ತರಿ?
ಬೆಂಗಳೂರು: ಕಾಲಮಿತಿಯೊಳಗೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯದಿದ್ದರೆ ಅವುಗಳಿಗೆ ಬರಬೇಕಾದ ಅನುದಾನವನ್ನು ತಡೆ ಹಿಡಿಯುವ ಬದಲು ರಾಜ್ಯ ಸರಕಾರಕ್ಕೆ ಬರಬೇಕಾದ ಅನುದಾನವನ್ನು ತಡೆ ಹಿಡಿಯಿರಿ…’ ಇದು ಕೇಂದ್ರ ಸರಕಾರದ 16ನೇ ಹಣಕಾಸು ಆಯೋಗದ ಮುಂದೆ ರಾಜ್ಯ 5ನೇ ಹಣಕಾಸು ಆಯೋಗ ಇಟ್ಟಿರುವ ಷರತ್ತು. ಪ್ರತಿ 5 ವರ್ಷಗಳ ಅವಧಿಗೆ ಕಾಲ-ಕಾಲಕ್ಕೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕು. ಪ್ರತಿ 5 ವರ್ಷಕ್ಕೊಮ್ಮೆ ರಾಜ್ಯ ಹಣಕಾಸು ಆಯೋಗ ರಚನೆ ಆಗಬೇಕು. ಇಲ್ಲದಿದ್ದರೆ …
Read More »ವಿಶ್ವವಿಖ್ಯಾತ ದಸರಾ 2024 : ಇಂದು ಬೈಕ್ ರ್‍ಯಾಲಿ, ರಂಗೋಲಿ ಸ್ಪರ್ಧೆ
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಗೆ ನಿನ್ನೆ ಸಾಹಿತಿ ಹಂ.ಪ ನಾಗರಾಜಯ್ಯ ವಿದ್ಯುಕ್ತವಾದಂತ ಚಾಲನೆ ನೀಡಿದ್ದರು. ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಿದ್ದರು. ಇಂದು ಈ ಒಂದು ದಸರಾ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದಿನ ವಿಶ್ವ ವಿಖ್ಯಾತ ಮೈಸೂರು ದಸರಾದ ಎರಡನೇ ದಿನದ ಕಾರ್ಯಕ್ರಮದಲ್ಲಿ ಜಾವಾ ಬೈಕ್ ರ್‍ಯಾಲಿ ಆಯೋಜನೆ ಮಾಡಲಾಗಿದೆ. ಕೆಲವೇ ಹೊತ್ತಿನಲ್ಲಿ …
Read More »ಮುಖೇಶ್ ಅಂಬಾನಿಗೆ ಶಾಕ್: ಒಂದೇ ದಿನದಲ್ಲಿ 77606 ಕೋಟಿ ರೂ. ಲಾಸ್
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಒಂದೇ ದಿನದಲ್ಲಿ ಸಂಘಟಿತ ಸಂಸ್ಥೆಯು 77,606 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದೆ. ವರದಿಗಳ ಪ್ರಕಾರ, ತೈಲ, ನೈಸರ್ಗಿಕ ಅನಿಲ, ಎಫ್‌ಎಂಸಿಜಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿರುವ ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಲ್ಲಿ ಗುರುವಾರ ಕುಸಿತ ಕಂಡಿದೆ. ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಸುಮಾರು 4 ಪ್ರತಿಶತದಷ್ಟು ಕುಸಿದಿದೆ, ಕಂಪನಿಯ ಮಾರುಕಟ್ಟೆ ಮೌಲ್ಯದಿಂದ 77,606.98 ಕೋಟಿ ರೂ.ಗಳ ಇಳಿಕೆ ಆಗಿದ್ದು, …
Read More »ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ
ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ 14ರ ವರೆಗೆ 5 ದಿನಗಳ ಕಾಲ ನಡೆಯಲಿದೆ. ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್., ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ದೇಶ ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸಲಿವೆ. ಯುದ್ಧವಿಮಾನ, …
Read More »‘ಶೀಘ್ರದಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ’
ಹುಬ್ಬಳ್ಳಿ, ಅಕ್ಟೋಬರ್ 04: ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ ಸನ್ನಿಹಿತವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿರುವ ಭ್ರಷ್ಟ ಸರ್ಕಾರವನ್ನು ತೊಲಗಿಸಲು ನಮ್ಮ ಹೋರಾಟ ಮುಂದುವರಿಯಲಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲೂ ಹೋರಾಟ ನಡೆಸುತ್ತೇವೆ. ಸರ್ಕಾರದ ತಪ್ಪುಗಳನ್ನು ಜನರಿಗೆ ತಿಳಿಸುವುದು ವಿರೋಧ ಪಕ್ಷದ ಕರ್ತವ್ಯವಾಗಿದೆ. ಆ ಕೆಲಸ ನಿರಂತರವಾಗಿ ಇರಲಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ …
Read More »ಇಂದಿನಿಂದ ಸಿಎಂ ಸಿದ್ದರಾಮಯ್ಯ 2 ದಿನ ರಾಯಚೂರು ಪ್ರವಾಸ : 1,635 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ
ರಾಯಚೂರು : ಮುಡಾ ಹಗರಣದ ಮಧ್ಯೆಯು ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದಾದ ಬಳಿಕ ಇಂದಿನಿಂದ ಎರಡು ದಿನಗಳ ಕಾಲ ಅವರು ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ಹೌದು ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ರಾಯಚೂರು ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ರಾಯಚೂರು, ಸಿಂಧನೂರು, ಮಾನ್ವಿಯಲ್ಲಿ …
Read More »ಜೈಲಲ್ಲಿ ರಾಜಾತಿಥ್ಯ ಪ್ರಕರಣ : ರೌಡಿಗಳಿಗೆ ದುಬಾರಿ ಮದ್ಯ ಪೂರೈಕೆ : ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗ!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಈ ವೇಳೆ ಅವರಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಎರಡು FIR ದಾಖಲಾಗಿತ್ತು. ಈ ಒಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಅಲ್ಲಿನ ವ್ಯವಸ್ಥೆ ನೋಡಿ ದಂಗಾಗಿದ್ದಾರೆ. ಹೌದು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು, ಜೈಲಿನಲ್ಲಿ ನಟ ದರ್ಶನ್ ಒಂದು ಕೈಯಲ್ಲಿ ಕಾಫಿ ಕುಡಿಯುತ್ತಾ, ಮತ್ತೊಂದು ಕೈಯಲ್ಲಿ …
Read More »ಡಿಸೆಂಬರ್‌ನಲ್ಲಿ ಬೆಳಗಾವಿಗೆ ಬರಾಕ್ ಒಬಾಮಾ?
ಬೆಂಗಳೂರು: ಬರುವ ಡಿಸೆಂಬರ್ 24ಕ್ಕೆ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಿಸಲಿದೆ. ಇದನ್ನು ಐತಿಹಾಸಿಕ ದಿನವನ್ನಾಗಿ ಆಚರಿಸಲು ಮುಂದಾಗಿರುವ ಕಾಂಗ್ರೆಸ್, ಅದೇ ದಿನ ಕುಂದಾನಗರಿಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೆಲ್ಲರೂ ಆಗಮಿಸಿ ಕಾಂಗ್ರೆಸ್ ಸಭೆ ನಡೆಸಲಿದ್ದಾರೆ. ಈ ಕ್ಷಣಗಳಿಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರೂ ಸಾಕ್ಷಿಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ “ಗಾಂಧಿ ಭಾರತ’ ಕಾರ್ಯಕ್ರಮದಲ್ಲಿ …
Read More »ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೋ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ.
ಬೆಳಗಾವಿ: ಭ್ರಷ್ಟಾಚಾರದ ಆರೋಪಗಳನ್ನು ಹೊತ್ತ ಜನಪ್ರತಿನಿಧಿಗಳು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆಯಾಗಿದೆ. ಯಾರೂ ಈ ರೀತಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುತ್ತಿಲ್ಲ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ”ಈ ಹಿಂದೆ ಇದೇ ರೀತಿ ಆಪಾದನೆಗಳು ಬಂದಾಗ ಜನಪ್ರತಿನಿಧಿಗಳು ತತ್ ಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು. ಈಗ ಅಂತಹ ನೈತಿಕತೆ ಕಾಣುತ್ತಿಲ್ಲ. …
Read More »