Breaking News

ವಾಹನ ಸವಾರರೇ ನ.20 ರೊಳಗೆ ತಪ್ಪದೇ ‘HSRP’ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಿ! ಇಲ್ಲದಿದ್ದರೆ ದಂಡ ಫಿಕ್ಸ್!

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ.   ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ …

Read More »

ಮುಡಾ ಹಗರಣ : ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ನೋಟಿಸ್‌‍

ಬೆಂಗಳೂರು,ಅ.2- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್‌‍ ನೀಡಿದ್ದಾರೆ. ಮೊದಲ ಬಾರಿಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದ ಸಾಕ್ಷ್ಯಾಧಾರ ಮತ್ತು ದಾಖಲೆ ಸಲ್ಲಿಸುವಂತೆ ಇ.ಡಿ ಸಮನ್‌್ಸ ನೀಡಿದೆ. ಈ ಮೂಲಕ ಇ.ಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ನಿರ್ದೇಶನಾಲಯದ ಕಚೇರಿಗೆ …

Read More »

ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ

ಮೈಸೂರು,ಅ.2- ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ …

Read More »

ʼಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಾದ್ರೂ ರಾಜೀನಾಮೆʼ

ಬೆಂಗಳೂರು, ಅಕ್ಟೋಬರ್‌ 02: ಅಧಿಕಾರಕ್ಕಾಗಿ ತೊಡೆ ತಟ್ಟುವ ಸ್ವಪಕ್ಷೀಯರನ್ನು ಸುಮ್ಮನಾಗಿಸಲು ಸೈಟ್ ಹಿಂತಿರುಗಿಸುವ ಈ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿಗಳು ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು. ಇದು ಕೆಲವೇ ಗಂಟೆಗಳಲ್ಲಿ ಆದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.   ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ …

Read More »

ಕಿತ್ತೂರು ಉತ್ಸವ-2024′ ಕ್ಕೆ CM ಸಿದ್ದರಾಮಯ್ಯ ಚಾಲನೆ!

ಬೆಂಗಳೂರು : ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ …

Read More »

ಬಿಗ್ ಬಾಸ್ ಮನೆಯಿಂದ ಫೈರ್ ಬ್ರ್ಯಾಂಡ್ ‘ಚೈತ್ರಾ ಕುಂದಾಪುರ’ ಔಟ್ ..?

ಬೆಂಗಳೂರು : ಕಳೆದ ಭಾನುವಾರದಿಂದ ಬಿಗ್ ಬಾಸ್ ಸೀಸನ್ 11 ಆರಂಭವಾಗಿದ್ದು , ಸ್ಪರ್ಧಿಗಳ ಅಸಲಿ ಆಟ ಶುರುವಾಗಿದೆ. ಮೊದಲ ವಾರವೇ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಔಟ್ ಆಗಲಿದ್ದಾರಾ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಹೌದು. ಚೈತ್ರಾ ಕುಂದಾಪುರ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸುವಂತೆ ಕಲರ್ಸ್ ಕನ್ನಡ ಚಾನಲ್ ಗೆ ನೊಟೀಸ್ ನೀಡಲಾಗಿದೆ.     ವರ್ಷದ ಹಿಂದಷ್ಟೇ ಖ್ಯಾತ ಉದ್ಯಮಿ ಗೋವಿಂದಬಾಬು ಪೂಜಾರಿ …

Read More »

ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದಾಖಲಾಗಿತ್ತು ದೂರು: ಕೇಸ್ ಕೊಟ್ಟು ಹಿಂದೆ ಸರಿದಿದ್ದ ದೂರುದಾರೆ!

ಅತ್ಯಾಚಾರ ಪ್ರಕರಣದಲ್ಲಿ ಎಸ್​ಐಟಿ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನರನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆದರೆ, ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದೂರು ದಾಖಲಾಗಿದ್ದರೂ ಎಫ್​ಐಆರ್ ದಾಖಲಾಗಿರಲಿಲ್ಲ ಎನ್ನಲಾಗಿದೆ. ಅಷ್ಟಲ್ಲದೇ, ದಾರುದಾರೆ ಕೂಡ ವಿಚಾರಣೆಗೆ ಹಾಜರಾಗಿರಲಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ   ಬೆಂಗಳೂರು, ಅಕ್ಟೋಬರ್ 2: ಒಂದಲ್ಲ ಎರಡಲ್ಲ, ಮೂರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಆರ್​ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಈಗ ಎಸ್​ಐಟಿ ಕಸ್ಟಡಿಯಲ್ಲಿದ್ದಾರೆ. ಅತ್ಯಾಚಾರ ಪ್ರಕರಣ …

Read More »

ರಾಯಚೂರು, ಮಹಾರಾಷ್ಟ್ರ ಪೊಲೀಸರ ಜಂಟಿ ಕಾರ್ಯಾಚರಣೆ; ಇಬ್ಬರು ಕಿಡ್ನಾಪರ್ಸ್ ವಶಕ್ಕೆ, ನಾಲ್ವರು ಯುವಕರ ರಕ್ಷಣೆ

ಮಹಾರಾಷ್ಟ್ರದ ಪುಣೆಯಿಂದ ಏಳು ಜನ ಯುವಕರನ್ನು ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳ ತಂಡ, ಬಳಿಕ ಸಿಂಧನೂರು ತಾಲ್ಲೂಕಿನ ಕುನ್ನಟಗಿ ಗ್ರಾಮದ ಮನೆಯಲ್ಲಿಟ್ಟು ಹಣಕ್ಕೆ ಬೇಡಿಕೆಯಿಟ್ಟಿದ್ದರು. ಈ ಹಿನ್ನಲೆ ರಾಯಚೂರು ಹಾಗೂ ಮಹಾರಾಷ್ಟ್ರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಕಿಡ್ನಾಪರ್ಸ್​ಗಳನ್ನು ವಶಕ್ಕೆ ಪಡೆದು ನಾಲ್ವರು ಯುವಕರನ್ನ ರಕ್ಷಣೆ ಮಾಡಿದ್ದಾರೆ. ರಾಯಚೂರು, ಅ.01: ರಾಯಚೂರು ಹಾಗೂ ಮಹಾರಾಷ್ಟ್ರಪೊಲೀಸರು ಜಂಟಿ ಕಾರ್ಯಾಚರಣೆನಡೆಸಿ ಇಬ್ಬರು ಕಿಡ್ನಾಪರ್ಸ್​ಗಳನ್ನು ವಶಕ್ಕೆ ಪಡೆದು ನಾಲ್ವರು ಯುವಕರನ್ನ ರಕ್ಷಣೆ ಮಾಡಿದ್ದಾರೆ. ಜಿಲ್ಲೆಯ ಸಿಂಧನೂರು …

Read More »

ಕಾರ್ಮಿಕ ಇಲಾಖೆಯ 101 ಲ್ಯಾಪ್ ಟಾಪ್ ಕಳ್ಳತನ ಪ್ರಕರಣ; 26 ಮಂದಿ ಅರೆಸ್ಟ್​

ಹುಬ್ಬಳ್ಳಿ, ಸೆ.28: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್‌ಟಾಪ್​ಗಳು (laptops) ಕಾರ್ಮಿಕ ಇಲಾಖೆ ಕಚೇರಿಯಿಂದಲೇಕಳ್ಳತನಆಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇದಕ್ಕೆ ಕಿಡಿಕಾರಿದ್ದ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಫೆಡರೇಶನ್, ‘ಕಾರ್ಮಿಕ ಇಲಾಖೆಯ ಅಧಿಕಾರಿಗಳ ಅಪ್ರಾಮಾಣಿಕತೆ ಮತ್ತು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಆರೋಪಿಸಿತ್ತು. ಇದೀಗ ಘಟನೆಗೆ ಸಂಬಂಧಪಟ್ಟಂತೆ 26 ಜನ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೊತೆಗೆ ಕಳ್ಳತನವಾಗಿದ್ದ ಲ್ಯಾಪ್ …

Read More »

ಗಾಂಜಾ ಗುಂಗಲ್ಲಿದ್ದವರ ನಶೆ ಇಳಿಸಿದ ಹುಬ್ಬಳ್ಳಿ ಪೊಲೀಸರು ​

ಹುಬ್ಬಳ್ಳಿ-ಧಾರವಾಡ ಪೊಲೀಸರು ಗಾಂಜಾ ಮಾರಾಟ ಮತ್ತು ವ್ಯಸನಿಗಳ ವಿರುದ್ಧ ಸಮರ ಸಾರಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸರು 518 ಗಾಂಜಾ ವ್ಯಸನಿಗಳನ್ನು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆ ನಡೆಸಿದರು. 34 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.ಹುಬ್ಬಳ್ಳಿ, ಸೆಪ್ಟೆಂಬರ್​ 29: ಹುಬ್ಬಳ್ಳಿ-ಧಾರವಾಡ ಪೊಲೀಸರು ( Hubballi-Dharwad Police) ಗಾಂಜಾ ( Ganja ) ಮಾರಾಟ ಮತ್ತು ವ್ಯಸನಿಗಳ ವಿರುದ್ಧ ಸಮರ ಸಾರಿದ್ದಾರೆ. ಇತ್ತೀಚಿಗೆ ಅವಳಿನಗರದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಟೊಂಕ ಕಟ್ಟಿ ನಿಂತ ಪೊಲೀಸರು ಮೇಲಿಂದ …

Read More »