ಬೆಂಗಳೂರು, ಅಕ್ಟೋಬರ್ 01: ಸಿಎಂ ತಮ್ಮ ಸ್ಥಾನದಿಂದ ಇಳಿಯುವುದನ್ನೇ ಕಾಂಗ್ರೆಸ್ ಪಕ್ಷದ ಕೆಲವರು ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತರಾದ ಮಹದೇವಪ್ಪ ಅವರು ಹೇಳಿದ್ದಾರೆ. ಅದಕ್ಕೂ ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ‘ ಸಿದ್ದರಾಮಯ್ಯನವರು ಇವತ್ತು ಇರ್ತಾರೆ, ನಾಳೆ ಹೋಗ್ತಾರೆ’ ಎಂದಿದ್ದಾರೆ. ಇದು ನಿರ್ಗಮನದ ಮುನ್ಸೂಚನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, …
Read More »ಸಿದ್ದರಾಮಯ್ಯ ಜೊತೆ ಉಂಡು ತಿಂದವರೇ ಬೆನ್ನಿಗೆ ಚೂರಿ ಹಾಕಿದ್ರು : ಸಿಎಂ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾಗೆ 14 ನಿವೇಶನಗಳನ್ನ ಹಿಂತಿರುಗಿಸಿದ್ದು, ಈ ಒಂದು ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು ಎಂದು ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಎಲ್ಲಾ ಭಾಗ್ಯಗಳನ್ನು ಕೊಟ್ಟವರು. 40 ವರ್ಷದಿಂದ ಯಾವುದೇ ಕಳಂಕ ಇರಲಿಲ್ಲ. ಸೈಟ್ ವಿಚಾರ ನಮಗೆ …
Read More »ಗೋವಾದಿಂದ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಮದ್ಯ ಜಪ್ತಿ.
ಒಂದು ಕಂಟೇನರ್ …ಎರಡು ಕಾಂಪಾರ್ಟ್ಮೆಂಟ್ … ಇದು ಖದೀಮರ ಕೈಚಳಕ !!! ಗೋವಾದಿಂದ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಮದ್ಯ ಜಪ್ತಿ. ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿಗಳ ಭರ್ಜರಿ ಕಾರ್ಯಾಚರಣೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಮದ್ಯ ಜಪ್ತಿ. ಪುಷ್ಪಾ ಸಿನೆಮಾ ಮಾದರಿಯಲ್ಲಿ ಕಂಟೇನರ್ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯ. ಕಂಟೇನರ್ ವಾಹನದಲ್ಲಿ ಕಂಪಾರ್ಟ್ಮೆಂಟ್ ಮಾಡಿದ್ದ ಕಿರಾತಕರು. ಡ್ರೈವರ್ ಹಿಂಬದಿಯಲ್ಲಿ ಕಂಪಾರ್ಟ್ಮೆಂಟ್ ಮಾಡಿ ಮದ್ಯದ ಬಾಕ್ಸ್ ಗಳನ್ನಿಟ್ಟು ಸಾಗಾಟ. ಹೊರಗಡೆ ಭಾಗದಲ್ಲಿ …
Read More »ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ; ಸಶಕ್ತರು. ಹಿರಿಯರನ್ನು ಗೌರವಿಸುವುದು; ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …
Read More »ಸರಣಿ ಕಳ್ಳತನ ಪ್ರಕರಣ. ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ
ದಾಂಡೇಲಿ: ನಗರದ ಲಿಂಕ್ ರಸ್ತೆಯಲ್ಲಿ ಸರಣಿ ಕಳ್ಳತನ ಮಾಡಿದ್ದ ಆರೋಪಿಗಳಾದ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ ಘಟನೆ ಸೋಮವಾರ(ಸೆ. 30) ನಡೆದಿದೆ. ಇದೇ ಸೆ: 19 ರಂದು ನಗರದ ಲಿಂಕ್ ರಸ್ತೆಯಲ್ಲಿರುವ ಅಭಿಷೇಕ್ ಕಾಳೆ ಮಾಲಕತ್ವದ ಮೆಡಿಕಲ್ ಅಂಗಡಿಯೊಳಗಿದ್ದ ನಗದು 4 ಲಕ್ಷ ರೂಪಾಯಿ ಮತ್ತು ಚಿನ್ನದ ಆಭರಣಗಳು, ಇದೇ ಕಟ್ಟಡದಲ್ಲಿರುವ ಪಕ್ಕದ ಶರಣ್.ಸಿ.ಅರಳಿಯವರ ಕಿರಾಣಿ ಅಂಗಡಿಯಿಂದ 5 ರಿಂದ 50 ಸಾವಿರ ರೂಪಾಯಿ ನಗದು, ಅಲ್ಲೇ ಹತ್ತಿರದಲ್ಲಿರುವ ವಿಷ್ಣು …
Read More »ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರೀ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು
ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರೀ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಬ್ರಹನ್ಮಠ ಶ್ರೀ ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಮಹಾಸ್ವಾಮಿಗಳು, ಪ್ರಾಂಶುಪಾಲರಾದ ಶ್ರೀ ಎಮ್.ಎಮ್. ಮಗದುಮ್ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಈ …
Read More »ನಿರ್ಮಲಾ, ನಡ್ಡಾ, ಬಿವೈವಿ, ನಳಿನ್ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ
ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್, ಇ.ಡಿ. ಅಧಿಕಾರಿಗಳು ಸೇರಿ ಹಲವರ ವಿರುದ್ಧ ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಬೆಂಗಳೂರಿನ ತಿಲಕ್ ನಗರ ಠಾಣೆಗೆ ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ …
Read More »ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಕೂಡಲೇ ಪಾಲಿಕೆಯನ್ನು ರಾಜ್ಯ ಸರ್ಕಾರ ಸೂಪರ್ ಸೀಡ್ ಮಾಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ(ಸೆ30) ಪ್ರತಿಭಟನೆ ನಡೆಸಲಾಯಿತು. ನಗರದ ಸದಾರ‍್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀರಾಮ ಸೇನಾ ಹಿಂದೂಸ್ಥಾನ, ಮಹಾರಾಷ್ಟç ಏಕೀಕರಣ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಎಸ್‌ಪಿಎಂ …
Read More »ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್
ಬೆಳಗಾವಿ: ನಗರದ ಹೊಟೇಲ್‌ನಲ್ಲಿ ಬಿಲ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ನಡುವಿನ ಗಲಾಟೆಯಲ್ಲಿ ಬಿಎಸ್‌ಎಫ್ ಯೋಧನೋರ್ವ ಯುವಕನಿಗೆ ಚಾಕು ಇರಿದ ಘಟನೆ ನಗರದ ಎಪಿಎಂಸಿ ರಸ್ತೆಯ ಆಯಿ ಹೊಟೇಲ್‌ನಲ್ಲಿ ಸೋಮವಾರ(ಸೆ30) ನಡೆದಿದೆ. ಬಿಎಸ್‌ಎಫ್ ಯೋಧ ರುಕ್ಮಿಣಿ ನಗರದ ಪರುಶರಾಮ ರಾಮಗೊಂಡನವರ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಗ್ಯಾಂಗ್‌ವಾಡಿಯ ಅಲ್ತಾಫ್ ಚೌಗಲಾ ಎಂಬ ಯುವಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ. ಆಯಿ ಹೊಟೇಲ್‌ನಲ್ಲಿ ಊಟಕ್ಕೆಬಂದಿದ್ದ ನಾಲ್ವರು ಗ್ಯಾಂಗ್‌ವಾಡಿಯ ಯುವಕರು ಹೊಟೇಲ್ …
Read More »ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು
ಬೈಲಹೊಂಗಲ: ಕ್ಷುಲ್ಲಕ ಕಾರಣಕ್ಕೆ ಸಹೋದರಿಯರಿಬ್ಬರ ನಡುವೆ ಮಾತಿನ ಚಕಮಕಿಗೊಂಡು, ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲೂಕಿನ ಅಮಟೂರ ಬೇವಿನಕೊಪ್ಪ ರಸ್ತೆ ಮಧ್ಯೆದಲ್ಲಿ ಸೋಮವಾರ (ಸೆ.30) ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಅಮಟೂರ ಗ್ರಾಮದ ಕೇದಾರಿ ಯಲ್ಲಪ್ಪ ಅಂಗಡಿ (42) ಎಂದು ಗುರುತಿಸಲಾಗಿದೆ. ತಮ್ಮ ಜಮೀನಿನಲ್ಲಿ ಬೇರೆಯವರಿಗೆ ದಾಟಲು ಅನುವು ಮಾಡಿಕೊಟ್ಟಿದ್ದಕ್ಕೆ ಚಾಕುವಿನಿಂದ ಇರಿದ ಪರಿಣಾಮವಾಗಿ ತೀವ್ರವಾಗಿ ರಕ್ತಸ್ರಾವಗೊಂಡಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಆರೋಪಿಗಳಾದ ಬಾಳಪ್ಪ ಶಿವಾನಂದ ಅಂಗಡಿ …
Read More »