ವಿಜಯಪುರ: ಸಾಮಾನ್ಯವಾಗಿ ಅತ್ತೆ, ಸೊಸೆ ಅಂದ್ರೆ ಹಾವು, ಮುಂಗುಸಿ ಥರ ಅಂತಾರೆ. ಆದರೆ 9 ತಿಂಗಳಿನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸೊಸೆಗೆ ಅತ್ತೆ ಕಿಡ್ನಿ ದಾನ ಮಾಡಿ ಮಾದರಿಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೂಲತಃ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಳೂರು ಗ್ರಾಮದವರಾದ ಶಾಂತಾಬಾಯಿ, ಮಗ ಪ್ರಕಾಶನ ಹೆಂಡತಿ ಬಸಮ್ಮಗೆ ತಮ್ಮ ಒಂದು ಕಿಡ್ನಿ ನೀಡಿದ್ದಾರೆ. ಸೊಸೆ ಬಸಮ್ಮ ಎರಡೂ ಕಿಡ್ನಿ ಫೇಲ್ ಆಗಿ ಕಳೆದ 9 ತಿಂಗಳಿಂದ ಬಳಲುತ್ತಿದ್ದರು. …
Read More »ಸತೀಶ್ ಜಾರಕಿಹೋಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್
ಬೆಂಗಳೂರು: ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಆದರೆ ಸಚಿವ ಸ್ಥಾನ ಕೊಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ತಿಳಿಸಿದ್ದಾರೆ. ಮೊದಲ ಬಾರಿ ಗೆದ್ದ ಕಾಂಗ್ರೆಸ್ ಶಾಸಕರು ಮಂತ್ರಿ ಸ್ಥಾನಕ್ಕಾಗಿ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೊದಲ ಬಾರಿ ಗೆದ್ದಿರೋರು ಮಂತ್ರಿ ಸ್ಥಾನ ಕೇಳೋದು ತಪ್ಪೇನು ಅಲ್ಲ. ಇದರಲ್ಲಿ ಯಾವುದೇ ಗೊಂದಲ, ಬಂಡಾಯ ಇಲ್ಲ. ಎಲ್ಲರಿಗೂ …
Read More »ಬಾರದ ಅನುದಾನ; ಸಂಸದರ ರಾಜೀನಾಮೆಗೆ ಒತ್ತಾಯ
ಚಿತ್ರದುರ್ಗ: ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ₹ 5,300 ಕೋಟಿ ಅನುದಾನ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಲ್ಲೆಯ ಸಂಸದ ಗೋವಿಂದ ಕಾರಜೋಳ ಅವರು ಕೂಡ ಅನುದಾನ ತರುವಲ್ಲಿ ಸೋತಿದ್ದಾರೆ. ಹೀಗಾಗಿ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಸದಸ್ಯರು ಸೋಮವಾರ ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಆರೂ ತಾಲ್ಲೂಕುಗಳಿಂದ ಬಂದಿದ್ದ …
Read More »ಶಿವಮೊಗ್ಗದಲ್ಲಿ ‘SSLC ‘ವಿದ್ಯಾರ್ಥಿಯ ಬರ್ಬರ ಹತ್ಯೆ : ಐವರು ಅಪ್ರಾಪ್ತರು ಪೊಲೀಸ್ ವಶಕ್ಕೆ
ಶಿವಮೊಗ್ಗ ನಗರದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಐತಿಹಾಸಿಕ ಕೋಟೆ ಮಾರಿಕಾಂಬಾ ದೇವಿಯ ಜಾತ್ರೆಯ ಸಂಭ್ರಮದ ನಡುವೆಯೇ, ನಗರದ ಹೊರವಲಯದ ಸೂಳೆಬೈಲಿನಲ್ಲಿ ಭೀಕರ ಕೊಲೆಯೊಂದು ನಡೆದಿದ್ದು ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಮೃತ ವಿದ್ಯಾರ್ಥಿ ಸಂಕೇತ್ (15) ಸೂಳೆಬೈಲು ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್ಸಿ ವ್ಯಾಸಂಗ ಮಾಡುತ್ತಿದ್ದನು. ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲಿನಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ವಿಶೇಷ ತರಗತಿ (Special Class) ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಕೇತ್ನ …
Read More »ನಕಲಿ ಬ್ಯಾಂಕ್ ಖಾತೆ ಐವರ ವಿರುದ್ಧ ಕೇಸ್
ಬೆಳಗಾವಿ: ಸೈಬರ್ ವಂಚನೆಗೆ ಅನುಕೂಲವಾಗುವಂತೆ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ನಿರ್ವಹಿಸುತ್ತಿದ್ದ ಆರೋಪದ ಮೇಲೆ ಜಿಲ್ಲೆಯ ನಿಪ್ಪಾಣಿ ನಗರದ ಐವರ ವಿರುದ್ಧ ಸೈಬರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶುಭಂ ಲಕ್ಕಣ್ಣವರ, ಅಮಿತ ಶೇಖರ ಶಿಂಧೆ, ರಾಹುಲ ಶಿವಾಜಿ ಹಂಚನಾಳೆ, ಅಕ್ಷಯ ಅನಿಲ ಪಸಾರೆ ಮತ್ತು ಗಜಾನನ ಚಂದ್ರಕಾಂತ ದರ್ಮೋಡೆ ಅವರ ವಿರುದ್ಧ ಐಟಿ ಕಾಯ್ದೆ ಮತ್ತು ಬಿಎನ್‌ಎಸ್‌ನ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಇವರು ಫೆಡರಲ್ ಬ್ಯಾಂಕಿನಲ್ಲಿ …
Read More »ಬೆಳಗಾವಿ: ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಯುವಕರ ಸಾವು
ಬೆಳಗಾವಿ: ಜಿಲ್ಲೆಯ ವಿವಿಧೆಡೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ರಾಯಬಾಗ ತಾಲ್ಲೂಕಿನ ಖೈರಕೋಡ ಗ್ರಾಮದ ಬಳಿ ಶನಿವಾರ ರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಆನಂದ ಸುರೇಶ ಪೂಜಾರಿ (22) ಮೃತರು. ರಾಯಬಾಗ ತಾಲ್ಲೂಕಿನ ಖೈರಖೋಡ ಗ್ರಾಮದ ಮಾಯಪ್ಪ ಸಾತು ಪಾಟೀಲ …
Read More »ಮೇ ತಿಂಗಳೊಳಗೆ ಹಸಿರುಮಕ್ಕಿ ಸೇತುವೆ ಉದ್ಘಾಟನೆ : ಸಚಿವ ಸತೀಶ್ ಜಾರಕಿಹೊಳಿ
ಶಿವಮೊಗ್ಗ : ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ ಅಂದಾಜು 125.67 ಕೋಟಿ ರು. ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ತಿಂಗಳೊಳಗೆ ಜನಸಂಚಾರಕ್ಕೆ ಮುಕ್ತಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ಹಸಿರುಮಕ್ಕಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಹಿನ್ನೀರಿನ ಲಾಂಚ್‌ನಲ್ಲಿ ಪ್ರಯಾಣಿಸಿ, ಕಾಮಗಾರಿಗಳನ್ನು …
Read More »ಮಗನಿಂದಲೇ ತಂದೆಯ ಬರ್ಬರ ಹತ್ಯೆ
ಲಕ್ನೋ: ಯುವಕನೊಬ್ಬ ತನ್ನ ತಂದೆಯನ್ನು ಭೀಕರವಾಗಿ ಹತ್ಯೆ ಮಾಡಿ ಬಂಧನಕ್ಕೆ ಒಳಗಾಗಿದ್ದಾನೆ. ತಂದೆಗೆ ಗುಂಡಿಕ್ಕಿ ಕೊಂದು, ತುಂಡು ಮಾಡಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಿದ್ದ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಅವರ ಮನೆಗೆ ಭೇಟಿ ನೀಡಿದ್ದ ಪೊಲೀಸರಿಗೆ ಬ್ಯಾರೆಲ್‌ನಲ್ಲಿ ವ್ಯಕ್ತಿಯ ದೇಹದ ಭಾಗಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಪುತ್ರನನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ತೀವ್ರ …
Read More »ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, …
Read More »ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ
ರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ ಪದವಿಗಳನ್ನ ಪ್ರದಾನ ಮಾಡಲಾಯಿತು. ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಹಾಗೂ ಇತರ ಗಣ್ಯರಿಗೆ ವಿವಿಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಡಾಕ್ಟರೇಟ್ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ನಟರಾದ ವಿನಯ್ ರಾಜಕುಮಾರ್, ಯುವರಾಜಕುಮಾರ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್ …
Read More »
Laxmi News 24×7