ಬೆಂಗಳೂರು: ಕೆಪಿಎಸ್‌ಸಿ ಹಗರಣದ ಪರೀಕ್ಷಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಆದ ಆನ್ಯಾಯ ಖಂಡಿಸಿ ಮುಖ್ಯಮಂತ್ರಿ ಅವರ ಅಧಿಕೃತ ಗೃಹ ಕಚೇರಿ ‘ಕೃಷ್ಣಾ’ಗೆ ಮುತ್ತಿಗೆ ಹಾಕಲು ಎಬಿವಿಪಿ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಯತ್ನಿಸಿದ್ದಾರೆ. 2 ತಂಡಗಳಲ್ಲಿ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ‘ಕೃಷ್ಣಾ’ ಕಚೇರಿ ಮುಂಭಾಗಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ತಡೆದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ಕೆಲಕಾಲ ಗಲಿಬಿಲಿ ವಾತಾವರಣ …
Read More »ಕೆಪಿಎಸ್‌ಸಿ ಹಗರಣ – 329 ಅಭ್ಯರ್ಥಿಗಳಿಗೆ ಸಿಐಡಿ ಶಾಕ್, ಇಂದೇ ವಿಚಾರಣೆಗೆ ಹಾಜರಾಗಲು ನೋಟಿಸ್!
ಬೆಂಗಳೂರು: ರ್ನಾಟಕ ಲೋಕಸೇವಾ ಆಯೋಗ ನಡೆಸಿರು ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಅಪರಾಧ ತನಿಖಾ ಇಲಾಖೆ ಅಧಿಕಾರಿಗಳು 329 ಅಭ್ಯರ್ಥಿಗಳಿಗೆ ಏಕಾಏಕಿ ನೋಟಿಸ್ ಜಾರಿ ಮಾಡಿದ್ದಾರೆ. ಜಾರಿ ನಿರ್ದೇಶನಾಲಯದ ಮುಂದೆ ಕೆಲವರು ಅಕ್ರಮ ನಡೆಸಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಸಿಐಡಿ ಈ ಮಹತ್ವದ ಕ್ರಮ ಕೈಗೊಂಡಿದೆ. ನೋಟಿಸ್ ಪಡೆದಿರುವ ಎಲ್ಲಾ 329 ಅಭ್ಯರ್ಥಿಗಳು ಇಂದೇ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. …
Read More »ಸಿಗ್ನಲ್‌ನಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿಹೊಡೆದ ಕಾರು – 50 ಅಡಿ ಹಾರಿಬಿದ್ದು ಬೈಕ್ ಸವಾರ ಸಾವು
ಬೆಂಗಳೂರು: ವೇಗವಾಗಿ ಬಂದ ಕಾರೊಂದು ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ನಡೆದಿದೆ. ನವೀನ್ (33) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ನವೀನ್ ವಿಜ್ಞಾನ ನಗರದ ಸಿಗ್ನಲ್‌ನಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ 50 …
Read More »ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ – ಕರಾವಳಿ, ಮಲೆನಾಡಿನ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದೆ. ಅಲ್ಲದೇ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ …
Read More »ಸರಗಳ್ಳತನ ಮಾಡುವಾಗ ಜನರಿಂದ ಪೆಟ್ಟು ತಿಂದು ಪರಾರಿಯಾಗಿದ್ದ ರೌಡಿಶೀಟರ್ ಶವವಾಗಿ ಪತ್ತೆ
ಬೆಂಗಳೂರು: ಸರಗಳ್ಳತನ ಮಾಡುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದು, ಹಿಗ್ಗಾಮುಗ್ಗಾ ಗೂಸ ತಿಂದಿದ್ದ ರೌಡಿಶೀಟರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ತಾಲೂಕಿನ ದೊಡ್ಡೇರಿ ಗ್ರಾಮದ ಕೆರೆಯಲ್ಲಿ ಆತನ ಶವ ಪತ್ತೆಯಾಗಿದೆ. ಬ್ಯಾಟರಿ ಜಯಂತ್ ಸಾವನ್ನಪ್ಪಿದ ರೌಡಿಶೀಟರ್. ನೆಲಮಂಗಲದ ಕುಲುವನಹಳ್ಳಿ ಗೇಟ್ ಬಳಿ ಬ್ಯಾಟರಿ ಜಯಂತ್ ಹಾಗೂ ಯತೀಶ್ ಸೇರಿ ವೃದ್ಧೆಯೊಬ್ಬಳ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದ್ದರು. ಈ ವೇಳೆ ಸಿಕ್ಕಿಬಿದ್ದು, ಸಾರ್ವಜನಿಕರ ಬಳಿ ಪೆಟ್ಟು ತಿಂದು ಪ್ರಜ್ಞೆ ತಪ್ಪಿದ್ದರು. ಇಬ್ಬರನ್ನೂ 108 …
Read More »ಕೊಡಗಿನಲ್ಲಿ ವರುಣನ ಅಬ್ಬರ – ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮಡಿಕೇರಿ: ರಾಜ್ಯದಲ್ಲಿ ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕಾವೇರಿಯ ತವರು ಕೊಡಗು ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾಗಮಂಡಲ ಹಾಗೂ ಬ್ರಹ್ಮಗಿರಿ ತಪ್ಪಲಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮವಾಗಿ ಪವಿತ್ರ ತ್ರಿವೇಣಿ ಸಂಗಮ ಹಾಗೂ ಸಮೀಪದ ಉದ್ಯಾನವನ …
Read More »ಟಿಪ್ಪು ಕಟೌಟ್‌ಗೆ ಪಾಕ್ ಸೇನೆ ಹಾಡಿನ ರೀಲ್ಸ್ – ಆರೋಪಿಗೆ 14 ದಿನ ನ್ಯಾಯಾಂಗ ಬಂಧನ
ಚಿಕ್ಕಮಗಳೂರು: ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಸೇನೆಯ ಹಾಡು ಬಳಸಿ ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಯುವಕನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಟಿಪ್ಪು ನಗರದ ನಿವಾಸಿ ಆಫ್ರಿದ್‌ನನ್ನು (23) ಪೊಲೀಸರು ಬಂಧಿತ ಆರೋಪಿ. ಈತ ಕಾರು ಶೋರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಇನ್ಸ್ಟಾಗ್ರಾಮ್‌ನ್ನು ಈತ ಬಳಸುತ್ತಿದ್ದ. ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಯುವಕರು …
Read More »ಮದ್ವೆ ಗ್ಯಾರಂಟಿ ಇಲ್ಲ, ಆದ್ರೆ ತಾಯಿ ಆಗ್ತೀನಿ – ಸೀಕ್ರೆಟ್ ರಿವೀಲ್ ಮಾಡಿದ ಉರ್ಫಿ
ಫ್ಯಾಷನ್ ಕ್ವೀನ್, ವೈರಲ್ ಬೆಡಗಿ ಎಂದೇ ಖ್ಯಾತರಾಗಿರುವ ನಟಿ ಉರ್ಫಿ ಜಾವೇದ್ ಸದ್ಯ ಸಿಂಗಲ್ ಆಗಿದ್ದಾರೆ. ಅವರು ಇದುವರೆಗೆ ಮದುವೆಯಾಗಿಲ್ಲ. ಮದ್ವೆ ಆಗ್ತೀನಿ ಅನ್ನೋ ಗ್ಯಾಂಟಿನೂ ಇಲ್ಲ, ಆದರೆ ಭವಿಷ್ಯದಲ್ಲಿ ತಾಯಿಯಾಗುವ ಆಸೆ ವ್ಯಕ್ತಪಡಿಸಿದ್ದಾರೆ. ಸದ್ಯ ಉರ್ಫಿ ತಮ್ಮ ವೃತ್ತಿಜೀವನದ ಮೇಲೆ ಗಮನ ಹರಿಸುತ್ತಿದ್ದಾರೆ. ಇದರೊಟ್ಟಿಗೆ ತಮ್ಮ ಬಯಾಲಾಜಿಕಲ್ ಕ್ಲಾಕ್ ಬಗ್ಗೆಯೂ ಅವರಿಗೆ ಚಿಂತೆ ಇದೆ. ಭವಿಷ್ಯದಲ್ಲಿ ತಾಯಿ ಆಗುವ ಆಸೆ ಹೊಂದಿರುವ ಉರ್ಫಿ ಅದಕ್ಕಾಗಿ ತಮ್ಮ ಮೊಟ್ಟೆಗಳನ್ನು (ಅಂಡಾಣುಗಳನ್ನು) …
Read More »ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಇಂದು ಸುಮಾರು ಒಂದೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ …
Read More »ಬಿಡದಿ ಟೌನ್‌ಶಿಪ್| ಕೋರ್ಟ್ ಅನುಮತಿ ಇಲ್ಲದೆ ಒಂದು ಇಟ್ಟಿಗೆಯೂ ಅಲುಗಾಡುವಂತಿಲ್ಲ, ಮರ ಕಡಿಯುವಂತಿಲ್ಲ: ಹೈಕೋರ್ಟ್
ಬೆಂಗಳೂರು: ನ್ಯಾಯಾಲಯದ ಅನುಮತಿಯಿಲ್ಲದೆ ಬಿಡದಿ ಟೌನ್‌ಶಿಪ್ ಯೋಜನಾ ಪ್ರದೇಶದಲ್ಲಿ ಒಂದು ಇಟ್ಟಿಗೆಯನ್ನೂ ಅಲುಗಾಡಿಸುವಂತಿಲ್ಲ ಹಾಗೂ ಒಂದೇ ಒಂದು ಮರವನ್ನೂ ಕಡಿಯುವಂತಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್‌ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬಿಡದಿ ಸ್ಮಾರ್ಟ್ ಸಿಟಿಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸಿ ನಾಲ್ವರು ರೈತರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠದಲ್ಲಿ ನಡೆಯಿತು. ಸರ್ಕಾರ ಪರಿಹಾರ ಮೊತ್ತವನ್ನು ನಿಗದಿಪಡಿಸಿದ ತಕ್ಷಣವೇ ಬುಲ್ಡೋಜರ್ ತೆಗೆದುಕೊಂಡು ಹೋದರೆ ಹೇಗೆ? ರಾತ್ರೋರಾತ್ರಿ …
Read More »
Laxmi News 24×7