ಚನ್ನಮ್ಮನ ಕಿತ್ತೂರು: ‘ಜೂಜಾಟ, ಮಟ್ಕಾ, ಪಡ್ಡೆ ಹುಡುಗರ ಕಿಡಿಗೇಡಿತನ ಹಾಗೂ ಮನೆ ಕಳ್ಳತನ ನಿಯಂತ್ರಿಸುವಲ್ಲಿ ಯಶಸ್ಸು ಕಾಣದ ಕಿತ್ತೂರು ಪೊಲೀಸರ ವರ್ತನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮಡುಗಟ್ಟಿದೆ’ ಎಂಬ ಆರೋಪಗಳು ಕೇಳಿಬರುತ್ತಿವೆ. ‘ಎತ್ತರದ ಪ್ರದೇಶ, ಹೊರವಲಯದ ಹೊಲದಲ್ಲಿರುವ ಮನೆಗಳು ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆಯಾದ ವಿಷಯ ಗುಟ್ಟಾಗೇನು ಉಳಿದಿಲ್ಲ. ಹಾಡುಹಗಲೇ ಮನೆ ಕಳ್ಳತನಗಳಾಗಿವೆ. ಕೆಲವು ಪ್ರಕರಣಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ದಾಖಲಾದ ಚಿತ್ರಗಳು ಸ್ಪಷ್ಟವಾಗಿದ್ದರೂ ಅದರಲ್ಲಿರುವ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ …
Read More »ಕೆಟ್ಟುನಿಂತ ಶುದ್ಧ ನೀರಿನ ಘಟಕಗಳು
ರಾಯಬಾಗ: ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತಿವೆ. 107 ಘಟಕಗಳಲ್ಲಿ ಸುಮಾರು 25 ಘಟಕಗಳು ವರ್ಷದ ಹಿಂದಿನಿಂದಲೂ ಬಂದ್ ಆಗಿವೆ. ಮತ್ತೆ ಕೆಲವು ನಿರ್ವಹಣೆ ಇಲ್ಲದೇ ಸೊರಗಿವೆ. ಇದರಿಂದ ತಾಲ್ಲೂಕಿನ ಜನರಿಗೆ ಶುದ್ಧ ನೀರು ಇನ್ನೂ ಕನಸಾಗಿದೆ. ಈ ಘಟಕಗಳನ್ನು ಏಜೆನ್ಸಿಗಳ ಅಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಮೋಟರ್ ದುರಸ್ತಿ, ಫಿಲ್ಟರ್ ಸಮಸ್ಯೆ, ವಿದ್ಯುತ್ ಸಮಸ್ಯೆ, ಪೈಪ್‌ಲೈನ್‌ಗಳಲ್ಲಿ ದೋಷ ಮುಂತಾದ ಕಾರಣಗಳಿಂದ ಸ್ಥಗಿತಗೊಂಡಿವೆ. ಒಮ್ಮೆ …
Read More »ಯಜಮಾನಿಯರಿಗೆ ಬಿಗ್ ಶಾಕ್ : ಈ ಮಹಿಳೆಯರಿಗೆ ಬರಲ್ಲ ಜುಲೈ ತಿಂಗಳ `ಗೃಹಲಕ್ಷ್ಮಿ’ ಹಣ!
ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ …
Read More »ಅ.1 ರಿಂದ ಏನೆಲ್ಲಾ ಬದಲಾವಣೆಯಾಗಲಿದೆ..?
ಅಕ್ಟೋಬರ್ 1 ರಿಂದ ಹಲವಾರು ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಸಣ್ಣ ಉಳಿತಾಯ ಯೋಜನೆಗಳಿಂದ ಹಿಡಿದು ಆಧಾರ್ ಕಾರ್ಡ್ಗಳಿಗೆ ಸಂಬಂಧಿಸಿದ ನವೀಕರಣಗಳವರೆಗೆ, ಪರಿಣಾಮಕಾರಿ ಬಜೆಟ್ ನಿರ್ವಹಣೆಗೆ ಈ ಬದಲಾವಣೆಗಳ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಅ.1 ರಿಂದ ಏನೆಲ್ಲಾ ಬದಲಾವಣೆಯಾಗಲಿದೆ..? ಬೋನಸ್ ಷೇರುಗಳು: ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಬೋನಸ್ ಷೇರುಗಳ ವ್ಯಾಪಾರವನ್ನು ಸುಗಮಗೊಳಿಸಲು ಹೊಸ ಚೌಕಟ್ಟನ್ನು ಜಾರಿಗೆ ತಂದಿದೆ. ಅಕ್ಟೋಬರ್ 1, 2024 ರಿಂದ …
Read More »ಬಿಜೆಪಿಯಿಂದ ಮುಂದೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಈಗ ಚುನಾವಣೆ ನಡೆದರೆ ಬಿಜೆಪಿ 140 ಸ್ಥಾನ ಗೆಲ್ಲಲಿದೆ: ಯತ್ನಾಳ
ರಾಮದುರ್ಗ: ‘ಕಾಂಗ್ರೆಸ್ ಬಗ್ಗೆ ರಾಜ್ಯದ ಜನರಲ್ಲಿ ಈಗ ಆಕ್ರೋಶ ಮಡುಗಟ್ಟಿದೆ. ಈಗಲೇ ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸಿದರೆ, ಬಿಜೆಪಿ ಸುಮಾರು 140 ಸ್ಥಾನ ಗೆಲ್ಲಲಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ತಾಲ್ಲೂಕಿನ ಬಟಕುರ್ಕಿ ಗ್ರಾಮದಲ್ಲಿ ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗ ದಳ ಶನಿವಾರ ಹಮ್ಮಿಕೊಂಡಿದ್ದ 60ನೇ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್‌ನಲ್ಲಿ ಎಲ್ಲರೂ ಸಿದ್ದರಾಮಯ್ಯ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಹಾಗಾಗಿ ಸಿ.ಎಂ ಸ್ಥಾನಕ್ಕಾಗಿ …
Read More »ನೈತಿಕ ಹೊಣೆಹೊತ್ತು ಸಿ.ಎಂ ರಾಜೀನಾಮೆ ನೀಡಲಿ: ಎನ್.ರವಿಕುಮಾರ
ಎಂ.ಕೆ.ಹುಬ್ಬಳ್ಳಿ: ‘ಮುಡಾ ಹಗರಣದಲ್ಲಿ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಹೇಳಿದರು. ಚನ್ನಮ್ಮನ ಕಿತ್ತೂರು ತಾಲೂಕಿನ ಕಾದರವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ಈ ಮುಂಚೆ ರಾಜೀನಾಮೆ ಕೇಳಿದಾಗ, ಪ್ರಕರಣ ದಾಖಲಾಗಿದೆಯಾ ಎಂದು ಪ್ರಶ್ನಿಸುತ್ತಿದ್ದರು. ಈಗ ಎಫ್‌ಐಆರ್ ದಾಖಲಾಗಿದೆ. ಈಗ್ಯಾಕೆ ರಾಜೀನಾಮೆ ಕೊಡಲು ಹಿಂಜರಿಯುತ್ತಿದ್ದೀರಾ? ತಪ್ಪು ಮಾಡದಿದ್ದರೆ, ಹೆದರುವ ಅವಶ್ಯಕತೆ ಇಲ್ಲ’ …
Read More »ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್
ಉಡುಪಿ: ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ ಎಂಬ ವಿಚಾರದಿಂದ ನನ್ನ ಜಾತಿ ಗೊತ್ತಾಯಿತು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರವಿವಾರ (ಸೆ.29) ಕುಂಜಿಬೆಟ್ಟು ಶಾರದ ಕಲ್ಯಾಣ ಮಂಟಪದಲ್ಲಿ …
Read More »ಬಿಗ್ ಮನೆಗೆ ಸೀರಿಯಲ್ ಸುಂದರಿಯರಎಂಟ್ರಿ
ಬೆಂಗಳೂರು: ಬಿಗ್ ಬಾಸ್ ಕನ್ನಡ (Big Boss Kannada-11) ಆರಂಭವಾಗಿದೆ. ಕಿಚ್ಚ ಸುದೀಪ್ (Kiccha Sudeep) ಸ್ಟೈಲಿಸ್ಟ್ ಆಗಿ ಬಿಗ್ ಬಾಸ್ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆ ಬಿಗ್ ಬಾಸ್ ಮನೆಯೊಳಗೆ ಹೋಗುವ ನಾಲ್ವರು ಸ್ಪರ್ಧಿಗಳನ್ನು ರಿವೀಲ್ ಮಾಡಲಾಗಿತ್ತು. ಇಂದು ಬಿಗ್ ಬಾಸ್ ಗೆ ಹೋಗುವ ಮೊದಲ ಸ್ಪರ್ಧಿ ತಮ್ಮದೇ ಸ್ಟೈಲ್ ನಲ್ಲಿ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿರುವ ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸಿದ್ದಾರೆ. …
Read More »ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ
ವೈದ್ಯಶಾಸ್ತ್ರ ಪರಿಣತಿ ಹೊಂದಿದವರಿಂದಲೇ ವೈದ್ಯಕೀಯ ಚಿಕಿತ್ಸೆಗಳನ್ನು ಮಾಡಿಸಿಕೊಳ್ಳುತ್ತೇವೆ. ಅಡುಗೆ ಬಲ್ಲವರಿಂದಲೇ ಅಡುಗೆ ಮಾಡಿಸಿಕೊಳ್ಳುತ್ತೇವೆ. ಅದರಂತೆಯೇ ಧಾರ್ಮಿಕ ವಿಧಿ ವಿಧಾನಗಳನ್ನು ಬಲ್ಲವರ ಮುಖೇನವೇ ಮಾಡಿಸಬೇಕು. ಲೆಕ್ಕಪರಿಶೋಧನೆಯನ್ನು ಬೇರೆ ಯಾವುದೋ ಹುದ್ದೆಯವರು ಮಾಡಲು ಸಾಧ್ಯವಿಲ್ಲ. ಲೆಕ್ಕಪರಿಶೋಧಕರೇ ಅದನ್ನು ನಿರ್ವಹಿಸಬೇಕು. ಹಾಗೆಯೇ ದೇವಸ್ಥಾನ/ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ನಿರ್ವಹಣೆಯನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ನಡೆಸಬೇಕೇ ಹೊರತು ಸರಕಾರ ಅಲ್ಲ. ಹಿಂದೂ ದೇವಸ್ಥಾನ, ಧಾರ್ಮಿಕ ಕೇಂದ್ರಗಳು ಸರಕಾರದ ಹಿಡಿತದಿಂದ ಹೊರಬರಬೇಕು ಎಂಬ ಆಂದೋಲನ ದಶಕಗಳಿಂದ …
Read More »ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ
ಮೈಸೂರು: ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 50 ಕ್ಕೂ ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂದರ್ಭದಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಾರ್ಟಿ ಮೇಲೆ ದಾಳಿ ಮಾಡಿದ್ದಾರೆ. 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಎ.ಎಸ್.ಪಿ ಪಿ.ನಾಗೇಂದ್ರ ಹಾಗೂ ಡಿವೈಎಸ್ಪಿ ಕರೀಂ …
Read More »