ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಎಫ್ ಐ ಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ಕೋರ್ಟ್ ಸೂಚನೆ ನೀಡಿದೆ. ಇಂದೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸುವ ಸಾಧ್ಯತೆಯಿದೆ. ಒಂದು ವೇಳೆ ಎಫ್ ಐ ಆರ್ ದಾಖಲಾದ್ರೆ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಎ 2 ಆರೋಪಿಗಳಾಗಲಿದ್ದಾರೆ. ಈ ಕುರಿತಂತೆ ಸ್ನೇಹಮಯಿ ಕೃಷ್ಣ ಅವರು ಈಗಾಗಲೇ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಸ್ನೇಹಮಯಿ ಕೃಷ್ಣ …
Read More »ದರ್ಶನ್ ಆತಿಥ್ಯಕ್ಕೆ ಜೈಲಾಧಿಕಾರಿಗಳಿಗೆ 8 ಲಕ್ಷ ಡೀಲ್?
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಮತ್ತು ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಹಾಗೂ ಇತರರಿಗೆ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯೇ ಲಕ್ಷಾಂತರ ರೂ. ಆಸೆಗೆ ವಿಶೇಷ ಆತಿಥ್ಯ ನೀಡಿರುವುದು ಆಗ್ನೇಯ ವಿಭಾಗದ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಸುಮಾರು 6-8 ಲಕ್ಷ ರೂ.ಗೆ ಡೀಲ್ ನಡೆದಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ಈಗಾಗಲೇ ಆಗ್ನೇಯ ವಿಭಾಗದ ಪೊಲೀಸರು ವರದಿ ಸಿದ್ಧಪಡಿಸಿದ್ದು, ಒಂದೆರಡು ದಿನಗಳಲ್ಲೇ …
Read More »ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು
ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ತಿಕೋಟಾದ ಬಾಬಾನಗರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಣ್ಣ ರಾಜಕುಮಾರ ವಿಜಾಪುರ ಹಾಗೂ ತಮ್ಮ ಶ್ರೀಕಾಂತ್ ವಿಜಾಪುರ ಮೃತ ಸಹೋದರರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಬ್ಬಿಣದ ಆಂಗಲ್ ಗೆ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
Read More »ಭ್ರಷ್ಟಾಚಾರದ ಆರೋಪಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ
ಬೆಂಗಳೂರು, ಸೆಪ್ಟೆಂಬರ್ 26: ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ …
Read More »ಅಪಘಾತಗಳ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ
ಅಪಘಾತಗಳ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಬೆಳಗಾವಿ: ‘ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಅಪಘಾತ ಸಂಭವಿಸುವ ಸ್ಥಳ ಗುರುತಿಸಿ, ಅಪಘಾತಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಮೂರು ವರ್ಷಗಳಲ್ಲಿ ಆಗಿರುವ ಅಪಘಾತಗಳು, ಅದರಲ್ಲಿ …
Read More »ದೀನದಯಾಳ ಉಪಾಧ್ಯಾಯ ಜಯಂತಿ ಆಚರಣೆ
ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ವತಿಯಿಂದ ಬುಧವಾರ ಪಂಡಿತ ದೀನದಯಾಳ ಉಪಾಧ್ಯಾಯ ಅವರ 108ನೇ ಜಯಂತಿ ಆಚರಿಸಲಾಯಿತು. ಚಲನಚಿತ್ರ ಕಲಾವಿದ ಸುಚೇಂದ್ರಪ್ರಸಾದ, ‘ಪ್ರತಿಯೊಬ್ಬರೂ ನಾಡಿಗೆ ತಮ್ಮದೇಯಾದ ಕೊಡುಗೆ ಸಮರ್ಪಿಸಬೇಕು. ಉತ್ತಮ ನಡೆ-ನುಡಿ ಬೆಳಸಿಕೊಳ್ಳಬೇಕು’ ಎಂದರು. ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ‘ಇಂದು ಯುವಶಕ್ತಿಗೆ ಆರ್ಥಿಕ ಚೈತನ್ಯ ತುಂಬುವ ಕೆಲಸವಾಗಬೇಕಿದೆ. ಶಿಕ್ಷಣವು ಮಾನವತೆಯ ನಿರ್ಮಾಣದೊಂದಿಗೆ, ಬದುಕು ಸೃಷ್ಟಿಸುವ ಶಕ್ತಿಯಾಗಬೇಕು. ಸರ್ವರ ಪಾಲಿನ ಭಾಗ್ಯವಾಗಬೇಕು. ಜತೆಗೆ, ಸರ್ವರಿಗೂ …
Read More »ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಿ- ಕಡಾಡಿ
ಬೆಳಗಾವಿ: ‘ಇಂದಿನ ಮಕ್ಕಳು ಮತ್ತು ಯುವಜನರು ವಿದ್ಯಾರ್ಥಿ ಹಂತದಿಂದಲೇ ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನ ನಡೆಯಲಿರುವ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ‘ನರೇಂದ್ರ ಮೋದಿ ಪ್ರಧಾನಿಯಾದ ನಂತರ, ದೇಶದಲ್ಲಿ ಕ್ರೀಡಾ ರಂಗಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಅವಕಾಶ ಕಲ್ಪಿಸಲಾಗುತ್ತಿದೆ. …
Read More »ಉಚಿತ ಹೊಲಿಗೆ ಯಂತ್ರ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!
ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಸೆ.30 ರವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ …
Read More »ಸಿದ್ದರಾಮಯ್ಯಗೆ ಎದುರಾಯ್ತು ಮುಡಾ ಸಂಕಷ್ಟ; ʼಕೇವಲ ಶೇ 25ರಷ್ಟು ಲೋಕಾಯುಕ್ತ ತನಿಖೆ ಬಾಕಿʼ
ಬೆಂಗಳೂರು, ಸೆಪ್ಟೆಂಬರ್ 26: ಮೈಸೂರಿನ ಮುಡಾದಿಂದ ಎರಡು ಸೈಟ್ ಪಡೆಯಬೇಕಾದ ಜಾಗದಲ್ಲಿ ನೀವು (ಮುಖ್ಯಮಂತ್ರಿಗಳ ಕುಟುಂಬ) 14 ಸೈಟ್ ಪಡೆದುದೇಕೆ ಎಂದು ಹೈಕೋರ್ಟ್ ಪ್ರಸ್ತಾಪಿಸಿದೆ. ಹೀಗಾಗಿ ಗವರ್ನರ್ ಅವರು ತನಿಖೆಗೆ ಕೊಟ್ಟ ಆದೇಶ ಸರಿ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಾಧ್ಯಮಗಳ ಜೊತೆಗೆ ಬುಧವಾರ ಮಾತನಾಡಿ, ಹೈಕೋರ್ಟ್ ಆದೇಶವನ್ನು ಗಮನಿಸಿದ್ದೇವೆ. ಗವರ್ನರ್ ಅವರ ಆದೇಶವನ್ನು ಕೋರ್ಟ್ ಎತ್ತಿಹಿಡಿದಿದೆ ಎಂದರು. ಮಾನ್ಯ ಮುಖ್ಯಮಂತ್ರಿಗಳೂ …
Read More »ತಿರುಮಲ ಲಡ್ಡು ವಿವಾದ: ಚಂದ್ರಬಾಬು ನಾಯ್ಡು ಪಾಪವನ್ನು ಶುದ್ಧೀಕರಿಸಲು ರಾಜ್ಯವ್ಯಾಪಿ ಪೂಜೆಗೆ ಜಗನ್ ರೆಡ್ಡಿ ಕರೆ
ಹೈದರಾಬಾದ್: ಸೆಪ್ಟೆಂಬರ್ 28 ರ ಶನಿವಾರದಂದು ಆಂಧ್ರಪ್ರದೇಶದಾದ್ಯಂತ ವಿಶೇಷ ಪೂಜೆಯಲ್ಲಿ ಭಾಗವಹಿಸುವಂತೆ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್ಸಿಪಿ) ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಭಕ್ತರಿಗೆ ಕರೆ ನೀಡಿದ್ದಾರೆ. ಈ ಪೂಜೆಯು “ಪಾಪಕ್ಕೆ ಪ್ರಾಯಶ್ಚಿತ್ತ” ಮತ್ತು ತಿರುಮಲ ತಿರುಪತಿ ದೇವಾಲಯದ ಪಾವಿತ್ರ್ಯವನ್ನು ಪುನಃಸ್ಥಾಪಿಸುವ ಉದ್ದೇಶವನ್ನು ಹೊಂದಿದೆ, ಪವಿತ್ರ ಸ್ಥಳದಲ್ಲಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಆರೋಪಗಳಿಂದ ಕಳಂಕಿತವಾಗಿದೆ ಎಂದು …
Read More »