ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಈಗಾಗಲೇ ಸಂಯೋಜಿಸಲಾಗಿರುವ ಇ- ಆಸ್ತಿ ತಂತ್ರಾಂಶವನ್ನು ಇತರ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿರುತ್ತದೆ ಹಾಗೂ ಜಮೀನಿನ ಸರ್ವೆ ನಕ್ಷೆ (ಸ್ಕೆಚ್) – ನಮೂನೆ-11ಇ ಇರುವ ಮೋಜಿಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಯೇತ್ತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು …
Read More »ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ನಾಳೆಯಿಂದ ವಾರದ ‘6 ದಿನ ಮೊಟ್ಟೆ’ ವಿತರಣೆ
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಾರಕ್ಕೆ 6 ದಿನ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ 1 ರಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆಅವರಲ್ಲಿರುವ ಅಪೌಷ್ಟಿಕತೆ ನಿವಾರಿಸಲು, ರಕ್ತ ಹೀನತೆ ತಡೆಗಟ್ಟಲು, ಬಹು …
Read More »ಸಿದ್ದರಾಮಯ್ಯ ರಾಜೀನಾಮೆಗೆ ಕೇಂದ್ರ ಸಚಿವರ ಆಗ್ರಹ
ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ರಿಟ್ ಅರ್ಜಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದರು. ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಒತ್ತಾಯ ಮಾಡಿದರು. ಕಾಂಗ್ರೆಸ್ ಪಕ್ಷದ ಡಿಎನ್‌ಎಯಲ್ಲೇ ಭ್ರಷ್ಟಾಚಾರ ಇದೆ. ಸಿದ್ದರಾಮಯ್ಯ ಅವರು ಇದಕ್ಕೆ ಹೊರತಾಗಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಅವರು ಅಧಿಕಾರ ದುರುಪಯೋಗ ಮಾಡಿದ್ದಾರೆ. ಇಡೀ ದೇಶಕ್ಕೆ ರಾಹುಲ್ …
Read More »ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ ತಮ ಅಭಿಪ್ರಾಯ ಹಂಚಿಕೊಂಡಿರುವ ಮುಖ್ಯಮಂತ್ರಿ
ಬೆಂಗಳೂರು,ಸೆ.24- ಮುಡಾ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ ತಮ ಅಭಿಪ್ರಾಯ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದಿದ್ದಾರೆ. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ …
Read More »ಮಳೆ: ರಸ್ತೆ ಮೇಲೆ ಹರಿದ ಚರಂಡಿ ನೀರು
ರಾಮದುರ್ಗ: ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಸುಮಾರು 30 ನಿಮಿಷಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸುರಿಯಿತು. ರಭಸದಿಂದ ಸುರಿದ ಮಳೆಯಿಂದಾಗಿ ಪಟ್ಟಣದ ಇಕ್ಕೆಲಗಳಲ್ಲಿ ನೀರು ಹರಿದು ಸ್ವಚ್ಛಗೊಂಡಿತು. ರಸ್ತೆ, ಚರಂಡಿಗಳಲ್ಲಿ ನೀರು ತುಂಬಿ ಹರಿದು ಕೆಲಕಾಲ ರಸ್ತೆ ಸಂಚಾರ ನಿಂತಿತ್ತು. ಪಟ್ಟಣದಲ್ಲಿ ಹಾಯ್ದು ಹೋಗಿರುವ ಕೆಶಿಫ್ ರಸ್ತೆ ಮಗ್ಗುಲಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ರಸ್ತೆಯನ್ನೆಲ್ಲ ಆವರಿಸಿತ್ತು. ಪಕ್ಕದ ಅಂಬೇಡ್ಕರ್ ಕಾಲೊನಿಯಲ್ಲಿಯೂ ನೀರು …
Read More »ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ
ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ ಪಶು ಚಿಕಿತ್ಸಾಲಯ ಮೊರಬ ಇವರ ವ್ಯಾಪ್ತಿಯಲ್ಲಿ ಬರುವ ಬೆಕ್ಕೇರಿಯಲ್ಲಿ 185 ಸಾಕು ನಾಯಿಗಳಿಗೆ ಲಸಿಕೆಯನ್ನು ಹಾಕಿ ಲಸಿಕಾ ಅಭಿಯಾನ ಯಶಸ್ವಿಗೊಳಿಸಲಾಯಿತು. ಬಳಿಕ ಮುಖ್ಯ ಪಶುವೈದ್ಯಾಧಿಕಾರಿಗಳು ಡಾ.ಎಂ.ಬಿ. ಪಾಟೀಲ ಮಾತನಾಡಿ, ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಸುಲಭವಾಗಿ ಹರಡುವ ಸೋಂಕುಗಳನ್ನು ಝೂನೋಟಿಕ್ ಕಾಯಿಲೆಗಳು ಎಂದು ಕರೆಯಲಾಗುತ್ತದೆ. ಇವುಗಳಲ್ಲಿ ರೇಬೀಸ್ (ನಾಯಿಗಳಿಂದ), ಆಂಥ್ರಾಕ್ಸ್ (ಕುರಿ ಮತ್ತು …
Read More »ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವಂತೆ ಆಗ್ರಹ: ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಬೆಳಗಾವಿ: ಸರ್ಕಾರಿ ಮಾರ್ಗಸೂಚಿ ಪ್ರಕಾರ, 100 ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ, ಸಫಾಯಿ ಕರ್ಮಚಾರಿ ಕಾವಲು ಸಮಿತಿ-ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪೌರ ಕಾರ್ಮಿಕರು ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಪೌರ ಕಾರ್ಮಿಕರ ದಿನಾಚರಣೆ ಬಹಿಷ್ಕರಿಸಿದ ಅವರು, ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಸರ್ಕಾರ ಪೌರ ಕಾರ್ಮಿಕರ ದಿನವನ್ನು ಅದ್ದೂರಿಯಾಗಿ …
Read More »ಅಪ್ರಾಪ್ತೆಯರ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ
ಬೆಳಗಾವಿ: ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳಿಗೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೋಕ್ಸೊ ನ್ಯಾಯಾಲಯ, 20 ವರ್ಷ ಕಠಿಣ ಶಿಕ್ಷೆ ಮತ್ತು ತಲಾ ₹10 ಸಾವಿರ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ. ರಾಯಬಾಗದ ನಿವಾಸಿಗಳಾದ ಆಶೀಷ್ ಧರ್ಮರಾಜ ಕಾಂಬಳೆ(25), ಅರ್ಬಾಜ್ ರಸೂಲ್ ನಾಲಬಂದ ಶಿಕ್ಷೆಗೆ ಒಳಗಾದವರು. 2016ರ ಡಿ.29ರಂದು ಬಾಲಕಿ ಅಪಹರಿಸಿದ್ದ ಆಶೀಷ್, ಮಹಾರಾಷ್ಟ್ರದ ಗಣೇಶವಾಡಿಗೆ ಬೈಕ್‌ನಲ್ಲಿ ಕರೆದೊಯ್ದು ಮನೆಯೊಂದರಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಚಿಕ್ಕೋಡಿ ತಾಲ್ಲೂಕಿನ ಅಂಕಲಿಯವರೆಗೆ …
Read More »ಅರಣ್ಯಾಧಿಕಾರಿ ಕಚೇರಿಯಲ್ಲೇ ಮರಗಳನ್ನು ಬುಡಸಮೇತ ಕತ್ತರಿಸಲಾಗಿದೆ.
ಬೆಳಗಾವಿ: ಇಲ್ಲಿನ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಕಚೇರಿ ಎದುರಿದ್ದ ಕೆಲ ಮರಗಳನ್ನು ಬುಡಸಮೇತ ಕತ್ತರಿಸಲಾಗಿದೆ. ಹಳೆ ಉದ್ಯಾನ, ಕಾಂಪೌಂಡ್ ಕೂಡ ತೆರವು ಮಾಡಲಾಗಿದೆ. ಅದೇ ಜಾಗದಲ್ಲಿ ಸೌಂದರ್ಯೀಕರಣಕ್ಕೆ ₹10 ಲಕ್ಷ ಮೊತ್ತದ ಯೋಜನೆ ರೂಪಿಸಲಾಗಿದೆ. ಒಂದೇ ಆವರಣದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್), ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಚೇರಿಗಳಿವೆ. ಡಿಸಿಎಫ್ ಮರಿಯಾ ಕ್ರಿಸ್ಟೊ ರಾಜಾ ಡಿ ಅವರು ತಮ್ಮ ಕಚೇರಿ …
Read More »ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ರಾಜ್ಯ ಸರ್ಕಾರ ಆದೇಶ..!
ಬೆಂಗಳೂರು : ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಂದಿನಿ ಬ್ರ್ಯಾಂಡ್ ಹೊರತುಪಡಿಸಿ ಎಲ್ಲ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ …
Read More »