Breaking News

ಚಂದ್ರ ಬಾಬು ನಾಯಡು ಹೇಳಿಕೆಯಿಂದ ನಂದಿನಿ ತುಪ್ಪಕ್ಕೆ ಭಾರಿ ಡಿಮಾಂಡ್.:ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ -ತಿರುಪತಿ ಲಡ್ಡು ಬಗ್ಗೆ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡುವ ಮೂಲಕ ದೇಶದಲ್ಲೇ ನಂದಿನಿ ತುಪ್ಪಕ್ಕೆ ಬಾರೀ ಬೇಡಿಕೆ ಬಂದಿದೆ ಎಂದು ಕೆಎಂಎಫ್‌ ಮಾಜಿ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಧಿಕಾರವಧಿಯಲ್ಲಿ 4 ವರ್ಷದ ಹಿಂದೆ ಕೆಎಂಎಫ್‌ನ ನಂದಿನಿ ತುಪ್ಪ ದೇಶದ ದೊಡ್ಡ ದೇವಸ್ಥಾನ ತಿರುಪತಿ ಬಾಲಾಜಿ ಮಂದಿರದ ಲಡ್ಡು ಪ್ರಸಾದಕ್ಕೆ ಪೂರೈಕೆಯಾಗುತ್ತಿತ್ತು. ತಿರುಪತಿ ಬಾಲಾಜಿ ಮಂದಿರದ …

Read More »

ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್

ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್ ಬೆಳಗಾವಿ: ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನರ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ತಿಳಿಸಿದ ಅವರು, ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ 74.86 ಕೋಟಿ ಅವ್ಯವಹಾರ ನಡೆದಿರುವ …

Read More »

ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಹುಬ್ಬಳ್ಳಿ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ಮಹಜರಿಗೆ ಕರೆದೊಯ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದವನ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದ ಘಟನೆ ಸೋಮವಾರ (ಸೆ.23) ನಗರದ ಹೊರವಲಯದ ತಾರಿಹಾಳ ಸೇತುವೆ ಬಳಿ ನಡೆದಿದೆ. ಸುಲಿಗೆಕೋರ ವಿನೋದ ಎಂಬಾತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳ ಮಹಜರಿಗೆ ಕರೆದೊಯ್ದಾಗ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ.‌ ಆಗ ಪಿಎಸ್ ಐ ಜಯಶ್ರೀ ಚಲವಾದಿ ಕಾಲಿಗೆ …

Read More »

ಬೆಳಗಾವಿಯಲ್ಲಿ ಮೇಗಾ ಡೇರಿ ಸ್ಥಾಪನೆ- ಬೆಮೂಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ:ಬೆಳಗಾವಿಯಲ್ಲಿ ಅತ್ಯುನ್ನತ ತಂತ್ರಜ್ಞಾನವುಳ್ಳ ಮೇಗಾ ಡೇರಿ ನಿರ್ಮಿಸುವ ಮೂಲಕ ಜಿಲ್ಲೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಕೆಪಿಟಿಸಿಎಲ್‌ ಸಭಾಭವನದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅ‍ವರು ಮಾತನಾಡಿದರು. ಬೆಳಗಾವಿ ಹಾಲು ಒಕ್ಕೂಟ ಸುಧಾರಣೆಗೆ ಸಂಕಲ್ಪ ಮಾಡಿದ್ದೇನೆ. ಎಲ್ಲರೂ ಕೂಡಿ ಇದನ್ನು …

Read More »

ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ

ಕಲಬುರಗಿ: ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ. ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ ಮಾತುಕತೆಗೆಂದು ಹೋಗಿದ್ದಾರೆ.‌ ಈ ಸಂದರ್ಭದಲ್ಲಿ ಮಾತಿಗೆ …

Read More »

ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

ಚಿಕ್ಕಮಗಳೂರು : ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆ ಕೂಡ ಬರಬೇಕು ಎಂದು ಆದೇಶ ನೀಡಿದ ಇಲಾಖೆಯ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಬಿಜೆಪಿ ಕಿಡಿ ಕಾರಿದೆ. ಮೂಡಿಗೆರೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇಮಕಾತಿ ಆದೇಶ ಹೊರಡಿಸಿದ್ದು ಈ ಆದೇಶದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ಕಿಡಿ ಕಾರಿದ್ದು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಅಲ್ಪಸಂಖ್ಯಾತರನ್ನೇ ನೇಮಕ ಮಾಡಲು ಉರ್ದು …

Read More »

ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ

ಕಾರವಾರ: ತಾಲೂಕಿನ ಹಣಕೋಣ ಗ್ರಾಮದಲ್ಲಿ ರವಿವಾರ ಸೆ.22) ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ದಂಪತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಪುಣೆಯಲ್ಲಿ ಕೈಗಾರಿಕೆ ಸ್ಥಾಪಿಸಿರುವ ಉದ್ಯಮಿ ವಿನಾಯಕ ನಾಯ್ಕ (56) ಮನೆಯ ಕೋಣೆಯೊಂದರಲ್ಲಿ ಹತ್ಯೆಯಾಗಿದ್ದಾರೆ. ಅವರ ಪತ್ನಿ ವೈಶಾಲಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಅವರನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ವಿನಾಯಕ ನಾಯ್ಕ ಹಾಗೂ ವೈಶಾಲಿ ದಂಪತಿ ಹಣಕೋಣ ಮೂಲದವರಾಗಿದ್ದು, ಪುಣೆ ನಗರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಪುಣೆಯಿಂದ ಸಾತೇರಿ …

Read More »

ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಖುರ್ಚಿ ಮೇಲೆ ಎಲ್ಲರೂ ಕಣ್ಣಿಟ್ಟಿದ್ದಾರೆ. ಆದರೂ, ಅವರ ಖುರ್ಚಿ ಅಲುಗಾಡುತ್ತಿಲ್ಲ ಎನ್ನುತ್ತಾ ಎಲ್ಲರೂ ಮೇಲ್ನೋಟಕ್ಕೆ ಬೆಂಬಲ ಕೊಡುತ್ತಿದ್ದಾರೆ. ಎಂ.ಬಿ.ಪಾಟೀಲ್ ಸೇರಿದಂತೆ ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕು ಹಂಬಲ ಇದೆ. ಅಷ್ಟಕ್ಕೂ ಸಿದ್ದರಾಮಯ್ಯ ಪರಿಸ್ಥಿತಿ ಏನಾಗುತ್ತೋ ಗೊತ್ತಿಲ್ಲ. ರಾಜೀನಾಮೆ ಕೊಡುತ್ತಾರೋ, ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕುರ್ಚಿ ಗಟ್ಟಿಯಿಲ್ಲ ಎನ್ನುವ …

Read More »

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

ಬಳ್ಳಾರಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿಚಾರ ಹೊರಬಂದ ಬಳಿಕ ಇದೀಗ ಮತ್ತೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಆಂಧ್ರ ಪ್ರದೇಶದಿಂದ ಭಾರೀ ಬೇಡಿಕೆ ಬರುತ್ತಿದೆ. ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಬಂದಿದೆ ಎಂದು ಹೊಸಪೇಟೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.   ತಿರುಪತಿಯಿಂದ ನಂದಿನಿ ತುಪ್ಪ ಕಳಿಸುವಂತೆ ಇ-ಮೇಲ್ ಮೂಲಕ ಬೇಡಿಕೆ ಬಂದಿದೆ. ಹೀಗಾಗಿ ನಾವು ನಂದಿನಿ ತುಪ್ಪ ಕಳುಹಿಸುತ್ತಿದ್ದೇವೆ. ಈಗಾಗಲೇ 15 ದಿನಗಳಿಂದ 350 …

Read More »

ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

ವಿಜಯಪುರ: ಆಡಳಿತದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡಬಾರದು. ಎಲ್ಲರೂ ಹೋಗಿ ರಾಜ್ಯಪಾಲರಿಗೆ ದೂರು ಕೊಡುವುದು, ಅವರು ಅದನ್ನು ಪರಿಗಣಿಸುವುದು ಆಗಬಾರದು ಎಂದು ಸಚಿವ ಎಂ.ಬಿ.ಪಾಟೀಲ್‌ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಇದು ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಿನ ಸಂಘರ್ಷವಲ್ಲ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿದೆ, ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಹಾದಿಯಲ್ಲಿ ಹೋಗುವವರು ಬಂದು ಸಿಕ್ಕ ಸಿಕ್ಕವರ ಮೇಲೆ ಅರ್ಜಿ ಹಾಕಿದರೆ ಹೇಗೆ ಎಂದರು. ಆಡಳಿತದಲ್ಲಿ ರಾಜ್ಯಪಾಲರ …

Read More »