Breaking News

ವಿಶೇಷ ಚೇತನರಿಗೆ ವಿಶೇಷ ಯೋಜನೆ ಪ್ರಸ್ತಾವನೆ ಸಲ್ಲಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಮುಂಬರುವ ಬಜೆಟ್‌ನಲ್ಲಿ ವಿಶೇಷ ಚೇತನರಿಗೆ ವಿಶೇಷ ಯೋಜನೆಗಳನ್ನು ನೀಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ವಿಕಲಚೇತನರ ದಿನಾಚರಣೆ’ 2025ರ ಪ್ರಯುಕ್ತ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ 2025-26 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸರ್ಕಾರ ಸಮಾಜದ ಭಾಗವಾಗಿ ವಿಕಲಚೇತನರನ್ನು ತೆಗೆದುಕೊಂಡು ಹೋಗಲಿದೆ. ಯಾರನ್ನೂ …

Read More »

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಕ್ಲೈಮ್ಯಾಕ್ಸ್‌ನತ್ತ : ಜಾರಕಿಹೊಳಿ

ನವದೆಹಲಿ : ಸದ್ದಿಲ್ಲದೆ ದೆಹಲಿಗೆ ತೆರಳಿ ಎರಡು ದಿನ ಅಲ್ಲೇ ಬೀಡು ಬಿಟ್ಟು, ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಟೀಮ್‌ಗೆ ರಾಜ್ಯದ ನಾಯಕತ್ವ ಗೊಂದಲ ಬಗೆಹರಿಸುವ ಭರವಸೆ ಹೈಕಮಾಂಡ್‌ನಿಂದ ದೊರಕಿದೆ. ಮಾಜಿ ಸಚಿವ ಕೆ.ಎನ್‌.ರಾಜಣ್ಣ ಹಾಗೂ ಪರಿಶಿಷ್ಟ ಪಂಗಡದ ಶಾಸಕರೊಂದಿಗೆ ದೆಹಲಿಗೆ ತೆರಳಿದ್ದ ಸತೀಶ್‌ ಜಾರಕಿಹೊಳಿ ತಂಡ ಶನಿವಾರ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದ …

Read More »

ಮರಾಠಾ ಅಭಿವೃದ್ಧಿ ನಿಗಮಕ್ಕೆ ಸಾವಿರ ಕೋಟಿ ರೂ.ಅನುದಾನ ನೀಡಿ: ಕಿರಣ್ ಜಾಧವ್ ಆಗ್ರಹ

ಬೆಳಗಾವಿ : ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮರಾಠಾ ಸಮಯದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ವಿಶೇಷ ಆದ್ಯತೆ ನೀಡುವ ಮೂಲಕ ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಕನಿಷ್ಠ ಸಾವಿರ ಕೋಟಿ ರೂ.ಅನುದಾನ ಮೀಸಲಿಡಬೇಕು ಎಂದು ಮರಾಠಾ ಮುಖಂಡ ಕಿರಣ್ ಜಾಧವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ನಿಗಮಕ್ಕೆ ಪ್ರಸ್ತುತ ನೀಡಲಾಗುತ್ತಿರುವ ಅನುದಾನ ಸಮುದಾಯದ ಅಗತ್ಯಗಳಿಗೆ ತಕ್ಕಂತೆ ಸಾಲುತ್ತಿಲ್ಲ. ಯಾವಾಗಲೂ …

Read More »

ಬೆಳಗಾವಿ:ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!

ಬೆಳಗಾವಿ: ಬೆಳಗಾವಿಯಲ್ಲಿ  ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಇದೀಗ ಬಯಲಾಗಿದೆ. ಪ್ರಕರಣ ಸಂಬಂಧ ಬಂಧಿತ ನಕಲಿ ಪತ್ರಕರ್ತರ ಮೊಬೈಲ್‌ಗಳನ್ನು ಪರಿಶೀಲಿಸಿದ ವೇಳೆ 100ಕ್ಕೂ ಹೆಚ್ಚು ಬೆತ್ತಲೆ ಹಾಗೂ ಖಾಸಗಿ ವಿಡಿಯೋಗಳು ಪತ್ತೆಯಾಗಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 …

Read More »

ಅನೈತಿಕ ಸಂಬಂಧ ಶಂಕೆ – ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಪತಿ

ರಾಮನಗರ: ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ  ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ. ಸಿಂಚನ(21) ಕೊಲೆಯಾದ ಮಹಿಳೆ, ಪತಿ ರೇಣುಕಯ್ಯ ಎಂಬಾತನೇ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪತ್ನಿಯ ಶೀಲ ಶಂಕಿಸಿ ಆಗಾಗೆ ರೇಣುಕಯ್ಯ ಗಲಾಟೆ ಮಾಡ್ತಿದ್ದ. ಅದರಂತೆ ಶುಕ್ರವಾರವೂ ಕೂಡ …

Read More »

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

ಕಲಬುರಗಿ: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ  ಶಿವಾಜಿ ಜಯಂತಿ  ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ  ತಾಲೂಕಿನ ರಾವೂರ್  ಗ್ರಾಮದಲ್ಲಿ ಘಟನೆ ನಡೆದಿದೆ. ರಾವೂರ್ ಗ್ರಾಮದ ಗೋಕುಲ ನಗರದ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಫೋಟೋ ಇಟ್ಟು ಶಿವಾಜಿ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಡಿಜೆ ಹಾಕಿ ಡ್ಯಾನ್ಸ್ ಮಾಡುವ ವೇಲೆ ಮತ್ತೊಂದು ಸಮುದಾಯ ಕಿರಿಕದ ಮಾಡಿದೆ. ಸೌಂಡ್ …

Read More »

ಬೆಂಗಳೂರಲ್ಲಿ ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರ ಅರೆಸ್ಟ್

‌ಬೆಂಗಳೂರು: 2023ರ ಗ್ರೆನೇಡ್‌ ಪತ್ತೆ ಕೇಸ್‌ನಲ್ಲಿ ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರನನ್ನು  ಎನ್‌ಐಎ  ಪೊಲೀಸರು ಬಂಧಿಸಿದ್ದಾರೆ. ಶಂಕಿತ ಉಗ್ರ ಅರ್ಷದ್‌ ಖಾನ್‌ ಬಂಧಿತ. ಮೋಸ್ಟ್ ವಾಂಟೆಡ್ ಶಂಕಿತ ಉಗ್ರನ ಖಾಸ ದೋಸ್ತ್ ಈತ. ಬೇಲ್ ಪಡೆದು ತಲೆಮರೆಸಿಕೊಂಡಿದ್ದ. ಈಗ ಮತ್ತೆ ಆರ್‌.ಟಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಸಿಸಿಬಿ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ ಈ ಹಿಂದೆ ಅರ್ಷದ್‌ ಖಾನ್‌ ಅರೆಸ್ಟ್‌ ಆಗಿದ್ದ. ಶಂಕೆ ಮೇರೆಗೆ ಸಿಸಿಬಿ ಬಂಧಿಸಿತ್ತು. …

Read More »

ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ – ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ

ಶಿವಮೊಗ್ಗ: ಪತಿ ಸಾವಿನ ಬಳಿಕ ಪೇದೆ ನೀಡುತ್ತಿದ್ದ ಕಿರುಕುಳ, , ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಅಪಪ್ರಚಾರ ತಾಳಲಾಗದೇ ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ  ಜಿಲ್ಲೆಯ ಭದ್ರಾವತಿ  ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ವಾಟ್ಸಪ್‌ನಲ್ಲಿ ಡೆತ್‌ನೋಟ್‌ನಲ್ಲಿ ಪತ್ತೆಯಾಗಿದ್ದು, ಪೇದೆ ಮೋಹನ್ ಕಾಟ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ. ಮೃತ ಸ್ವಾತಿ ಹಾಗೂ ಜಗದೀಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ …

Read More »

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ರನ್ನು  ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಬೈರತಿ ಬಸವರಾಜ್ ರನ್ನು ಬಂಧಿಸಿ ಏಳು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದ ಸಿಐಡಿ ಪೊಲೀಸರು, ಇಂದು 42ನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ಬೈರತಿ ಬಸವರಾಜ್‌ಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಹಾಗಾಗಿ ಸೋಮವಾರ ಜಾಮೀನು ಅರ್ಜಿ ವಿಚಾರಣೆ ಇದೆ. ಅಲ್ಲಿ ತನಕ ಜಯದೇವ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »