ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಭಿಮನ್ಯು ಮುಂದಾಳತ್ವದಲ್ಲಿ ಜಂಬೂ ಸವಾರಿಗೆ ಆನೆಗಳು ಕೂಡ ತಯಾರಿ ಮಾಡುತ್ತಿವೆ. ಅಂಬಾರಿ ಹೊರುವ ಆನೆಗಳಿಗೆ ಇಷ್ಟು ದಿನ ಮರಳಿನ ಮೂಟೆ ಹೊರಿಸಿ ತಾಲೀಮು ನಡೆಸಲಾಗಿತ್ತು, ಇಂದಿನಿಂದ ಮರದ ಅಂಬಾರಿ ಹೊರುವ ತಾಲೀಮಿಗೆ ಚಾಲನೆ ನೀಡಲಾಗಿದೆ. ಅಭಿಮನ್ಯು 280 ಕೆಜಿ ತೂಕದ ಮರದ ಅಂಬಾರಿ ಹಾಗೂ ಗಾದಿ, ನಮ್ದ ಮತ್ತು ಮರಳಿನ ಮೂಟೆ ಸೇರಿ 750 ಕೆ.ಜಿ ಭಾರ ಹೊತ್ತು …
Read More »ರಾಜ್ಯದಲ್ಲಿ ‘ಡ್ರಗ್ಸ್’ ಹಾವಳಿ ತಡೆಗಟ್ಟಲು ಹೊಸ ಕಾನೂನು ಜಾರಿ?C.M.
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಲು ಹೊಸ ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದ್ದು, ಅಲ್ಲದೆ ಇದಕ್ಕೆ ಟಾಸ್ಕ್ ಫೋರ್ಸ್ ರಚನೆ ಕೂಡ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು …
Read More »HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ.!
ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 …
Read More »ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತ ನೆರವು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿನ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾಹಿತಿ ಬಂದ ತತ್‌ಕ್ಷಣ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಲಂಕಷವಾಗಿ …
Read More »ಮುನಿರತ್ನಂ ವಿರುದ್ಧ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಲು ಒಕ್ಕಲಿಗರ ಆಗ್ರಹ
ದೊಡ್ಡಬಳ್ಳಾಪುರ: ಒಕ್ಕಲಿಗ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಮುನಿರತ್ನಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಯುವ ಒಕ್ಕಲಿಗ ಗೆಳೆಯರ ಬಳಗ ಮತ್ತು ಕೆಂಪೇಗೌಡರ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದಿಂದ ನಗರದ ತಾಲ್ಲೂಕು ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ಒಕ್ಕಲಿಗ ಜನಾಂಗದ ಗುತ್ತಿಗೆದಾರರೊಬ್ಬರನ್ನು ಶಾಸಕ ಮುನಿರತ್ನಂ ನಾಯ್ಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ತುಚ್ಛವಾಗಿ ಮಾತನಾಡಿ ಗುತ್ತಿಗೆದಾರರನ್ನು ಹೆದರಿಸಿ, ಜೀವ …
Read More »ಅನಂತ್ ಕುಮಾರ್ ಹೆಗ್ಡೆಗೆ ಟಿಕೆಟ್ ತಪ್ಪಿಸಿದ್ದು ನಾನೆ : ಛಲವಾದಿ ನಾರಾಯಣಸ್ವಾಮಿ
ರಾಯಚೂರು : ಈ ಬಾರಿ ಲೋಕಸಭಾ ಚುನಾವಣೆಗೆ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೊಡಬೇಡಿ ಎಂದು ನಾನೇ ಹೇಳಿದ್ದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಅಮೇರಿಕಾದಲ್ಲಿ ಮೀಸಲಾತಿ ಕುರಿತು ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹಿಸಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಅನಂತ ಕುಮಾರ್ ಹೆಗಡೆಗೆ ಕಳೆದ ಲೋಕಸಭಾ …
Read More »ಮುನಿರತ್ನ ಪ್ರಕರಣ | ಕೆಟ್ಟ ಪದ ಬಳಕೆ ಸಂಸ್ಕಾರವಲ್ಲ: ಬಸವರಾಜ ಹೊರಟ್ಟಿ
ಧಾರವಾಡ: ‘ಕೆಟ್ಟದಾಗಿ ಮಾತನಾಡುವುದು ಸಂಸ್ಕಾರ ಅಲ್ಲ. ಲಕ್ಷಗಟ್ಟಲೇ ಜನರನ್ನು ಪ್ರತಿನಿಧಿಸುವವರೇ (ಶಾಸಕರು) ಕೆಟ್ಟದಾಗಿ ಮಾತನಾಡಿದರೆ ಸಮಾಜಕ್ಕೆ ಯಾವ ಸಂದೇಶ ರವಾನೆ ಆಗುತ್ತದೆ?’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದರು. ಶಾಸಕ ಮುನಿರತ್ನ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಅದು ತಮ್ಮ ಧ್ವನಿಯಲ್ಲ ಎಂದು ಅವರು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ’ ಎಂದರು. ‘ಹಣ ನೀಡಿ ಮತ ಹಾಕಿಸಿಕೊಳ್ಳುವವರು …
Read More »ಹುಬ್ಬಳ್ಳಿ | ಕನ್ನಡ ಬೆಳೆಯಲು ಪುಸ್ತಕ ಓದಿ: ಎಸ್.ಎಲ್. ಭೈರಪ್ಪ
ಹುಬ್ಬಳ್ಳಿ: ‘ಪುಸ್ತಕ ಓದದಿದ್ದರೆ ಕನ್ನಡ ಬೆಳೆಯುವುದಿಲ್ಲ. ಪುಸ್ತಕ ಖರೀದಿಸಿ ಓದಬೇಕು’ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಸಲಹೆ ನೀಡಿದರು. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆ ಮತ್ತು ಸಾಹಿತ್ಯ ಪ್ರಕಾಶನವು ಸಾಹಿತ್ಯ ಭಂಡಾರದ ಮ. ಅನಂತಮೂರ್ತಿ ಅವರ ಪುಣ್ಯತಿಥಿ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಪ್ರಕಾಶಕರಿಗೆ ಸನ್ಮಾನ, ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ನವೋದಯ ಕಾಲಘಟದಲ್ಲಿ ಹಲವಾರು ಕೃತಿಗಳು ಮೂಡಿಬಂದರೂ, ಸರಿಯಾದ ಪ್ರಕಾಶಕರು …
Read More »ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ: ಒಬ್ಬರು ವಶಕ್ಕೆ
ಧಾರವಾಡ): ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ರಾಯಣ್ಣ ಪ್ರತಿಮೆಯ ಬಲಗೈ ವಿರೂಪಗೊಳಿಸಲಾಗಿದೆ. ಗ್ರಾಮಸ್ಥರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ‘ಕೃತ್ಯಕ್ಕೆ ಸಂಬಂಧಿಸಿದಂತೆ ಅಶೋಕ ಕಾಲವಾಡ (44) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೋಲೀಸರು ತಿಳಿಸಿದ್ದಾರೆ. ಬಟ್ಟೆ ಸುತ್ತಿ ಪ್ರತಿಮೆಯನ್ನು ಮುಚ್ಚಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
Read More »ಬೆಳಗಾವಿಯಲ್ಲಿ ಗಣೇಶೋತ್ಸವ ಮೆರವಣಿಗೆಗೆ ಜನಸಾಗರ
ಬೆಳಗಾವಿಯ ಶ್ಯಾಮಪ್ರಸಾದ್ ಮುಖರ್ಜಿ (ಎಸ್‌ಪಿಎಂ) ರಸ್ತೆಯಲ್ಲಿ ಬುಧವಾರ ಸಂಜೆಯೂ ಮುಂದುವರಿದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಜನ ಸೇರಿದರು. ನಿರಂತರ 30 ತಾಸು ಮೆರವಣಿಗೆ ನಡೆಯಿತು
Read More »