Breaking News

247 PDO ಹುದ್ದೆ’ಗಳ ನೇಮಕಕ್ಕೆ ಮತ್ತೆ ಅರ್ಜಿ ಆಹ್ವಾನ | PDO Recruitment

ಬೆಂಗಳೂರು: ಸರ್ಕಾರದ ಎಲ್ಲಾ ಪ್ರವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಸಿರುವ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ 247 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಕೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕೆಪಿಎಸ್ಸಿ ಕಲ್ಪಿಸಿದೆ. ಈ ಮೂಲಕ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ. ಅಂದಹಾಗೆ 247 …

Read More »

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 12ನೇ ತರಗತಿ ಪಾಸ್‌ ಆಗಿದ್ರೆ ಸಾಕು!

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ 1,94,007 ಅರ್ಜಿಗಳು ಬಂದಿವೆ. 2022-23ರಲ್ಲಿ ಕೊನೆಯ ಬಾರಿಗೆ ನೇಮಕಾತಿ ನಡೆದಿತ್ತು. ಹಿರಿಯ ಅರಣ್ಯ ಅಧಿಕಾರಿಯ ಪ್ರಕಾರ, 10 ನೇ ತರಗತಿ ಉತ್ತೀರ್ಣರಾದ ಎಲ್ಲರೂ ಹುದ್ದೆಗೆ ಅರ್ಜಿ ಸಲ್ಲಿಸಬಹುದು ನಂತರ ಅವರು ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಅರ್ಜಿದಾರರ ಸಂಖ್ಯೆ ಹೆಚ್ಚಿರುವಾಗ, ಈ ವರ್ಗದಲ್ಲಿ ಅರ್ಜಿದಾರರ ಸಂಖ್ಯೆ ಕಡಿಮೆ ಇರುವುದರಿಂದ ಆದಿವಾಸಿಗಳು ಮತ್ತು ಅರಣ್ಯವಾಸಿಗಳನ್ನು ನೇಮಿಸಿಕೊಳ್ಳಲು …

Read More »

ಮಹಾಲಿಂಗಪುರ | ಮಹಾಲಿಂಗೇಶ್ವರ ಜಾತ್ರೆಗೆ ಅದ್ದೂರಿ ಚಾಲನೆ

ಮಹಾಲಿಂಗಪುರ: ಪಟ್ಟಣದ ಚನ್ನಗಿರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಾರ್ವಜನಿಕ ಜಟೋತ್ಸವ ಆಯೋಜನೆಯೊಂದಿಗೆ ಪವಾಡ ಪುರುಷ ಮಹಾಲಿಂಗೇಶ್ವರ ಜಾತ್ರೆಗೆ ಅದ್ದೂರಿ ಚಾಲನೆ ನೀಡಲಾಯಿತು. ಶಿವಭಕ್ತೆ ಸಿದ್ದಾಯಿ ತಾಯಿಗೆ ಮಹಾಲಿಂಗೇಶ್ವರರು ನೀಡಿದ ಪವಿತ್ರ ಜಡೆಯನ್ನು ಹೂವುಗಳಿಂದ ಅಲಂಕೃತವಾದ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದಿಂದ ಚನ್ನಗಿರೇಶ್ವರ ದೇವಸ್ಥಾನಕ್ಕೆ ತರಲಾಯಿತು. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವಕ್ಕೆ ಹಾಗೂ ಜನಪದ ಕಲಾತಂಡಗಳ ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ಚಾಲನೆ …

Read More »

ವಿನಾಯಕನಿಗೆ ವಿದಾಯ

ಬೆಳಗಾವಿ: ನಗರದಲ್ಲಿ ಮಂಗಳವಾರ ರಾತ್ರಿ ಜನವೋ ಜನ. 11 ದಿನಗಳ ಕಾಲ ಪೂಜೆಗೊಂಡ ವಿನಾಯಕನಿಗೆ ವಿದಾಯ ಹೇಳುವ ಮೆರವಣಿಗೆಯಲ್ಲಿ ಲಕ್ಷಾಂತರ ಜನಸೇರಿದರು. ಎತ್ತ ನೋಡಿದರೂ ಸಂಭ್ರಮ, ಎಲ್ಲಿ ನೋಡಿದರೂ ವೈಭವ, ಭಕ್ತಿಯ ಮಳೆ, ಉನ್ಮಾದದ ಹೊಳೆ..! ಹೆಜ್ಜೆಹೆಜ್ಜೆಗೂ ಬೃಹತ್‌ ಮೂರ್ತಿಗಳ ಆಡಂಬರ. ಝಗಮಗಿಸುವ ವಿದ್ಯುದ್ದೀಪಗಳ ವೈಭೋಗ, ಹಾಡು, ಕುಣಿತ, ಸಂಗೀತ ವಾದಕರು ಸಡಗರ, ಯುವ ಹೃದಯಗಳ ಹುಮ್ಮಸ್ಸು ಮೆರವಣಿಗೆಗೆ ಇನ್ನಿಲ್ಲದ ಕಳೆ ತಂದಿತು. ಇಳಿಸಂಜೆಯ ಹೊತ್ತಿಗೆ ಒಂದೊಂದೇ ಯುವಕ ಮಂಡಳ …

Read More »

ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪಟಾಕಿ ಸಿಡಿದು ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ: ತಾಲ್ಲೂಕಿನ ಮುಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿತತದಿಂದ ಬಾಲಕ ಸೇರಿ ಇಬ್ಬರು‌ ಗಾಯಗೊಂಡಿದ್ದಾರೆ. ಮುಚಂಡಿ ಗ್ರಾಮದ ಸಂತೋಷ ವಟಾರ್( 34)‌ ಹಾಗೂ 10 ವರ್ಷದ ಬಾಲಕ ಗಾಯಗೊಂಡಿದ್ದಾರೆ. ನಗರದ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯ ಮುಖ, ತೊಡೆ ಕಣ್ಣು ಹಾಗೂ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿವೆ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.

Read More »

ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ವಿಕಾಸಕ್ಕೆ ನಮ್ಮ ಸರ್ಕಾರ ಬದ್ಧತೆ ಮುಂದುವರಿಸಿದೆ. ಅದಕ್ಕಾಗಿಯೇ ಪ್ರತಿ ವರ್ಷ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟು ರಸ್ತೆ, ನೀರಾವರಿ, ಆರೋಗ್ಯ, ಶಿಕ್ಷಣದ ವಿಕಾಸಕ್ಕೆ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.   ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಮಂಗಳವಾರ 371(ಜೆ) ಕಲಂ ದಶಮಾನೋತ್ಸವ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಹಿಂದಿನ ಸರ್ಕಾರದ ಅಶಿಸ್ತು, ಭ್ರಷ್ಟಾಚಾರದಿಂದ ರಾಜ್ಯ ಅಧಃಪತನದತ್ತ …

Read More »

ಡಿಸಿಎಂ ‘ಡಿ.ಕೆ ಶಿವಕುಮಾರ್’ಗೆ ಬಿಗ್ ಶಾಕ್: ಆದಾಯ ಮೀರಿ ಆಸ್ತಿ ಗಳಿಕೆ ಕೇಸಲ್ಲಿ ‘ಸುಪ್ರೀಂ ಕೋರ್ಟ್’ನಿಂದ ನೋಟಿಸ್

ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್, ಕರ್ನಾಟಕ ಸರ್ಕಾರ ಹಾಗೂ ಲೋಕಾಯುಕ್ತರಿಗೆ ಸುಪ್ರೀಂ ಕೋರ್ಟ್ ಮಂಗಳವಾರದಂದು ನೋಟಿಸ್ ಜಾರಿಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ …

Read More »

ಬಿಜೆಪಿ ಶಾಸಕ ಮುನಿರತ್ನ ಜೈಲು:ಇಂದು ‘ಜಾಮೀನು ಅರ್ಜಿ’ ವಿಚಾರಣೆ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಎರಡು ದಿನಗಳ ಪೊಲೀಸ್ ಕಸ್ಟಡಿ ಮುಗಿದ ನಂತರ ಬೆಂಗಳೂರಿನ ಆರ್.ಆರ್.ನಗರದ ಶಾಸಕರನ್ನು ಶಾಸಕರು / ಸಂಸದರ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್ -82) ಹಾಜರುಪಡಿಸಲಾಯಿತು.   ಏತನ್ಮಧ್ಯೆ, ಮುನಿರತ್ನ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಬುಧವಾರ …

Read More »

ಮೋದಿ ಹುಟ್ಟುಹಬ್ಬದಂದೇ ಕಾರ್ಯಕರ್ತನಿಗೆ ಕಪಾಳಮೋಕ್ಷ! ಕೇಂದ್ರ ಸಚಿವರ ಮುಂದೆ ಬಿಜೆಪಿ ಭಿನ್ನಮತ ಸ್ಫೋಟ

ತುಮಕೂರು: ಪ್ರಧಾನಿ ನರೇಂದ್ರ ಮೋದಿ (Narendra Modi Birthday) ಅವರ ಜನ್ಮದಿನದಂದೇ ಬಿಜೆಪಿ ಹಿರಿಯ ಮುಖಂಡರೊಬ್ಬರು ಬಿಜೆಪಿ ಕಾರ್ಯಕರ್ತನಿಗೆ ಕಪಾಳಮೋಕ್ಷ (BJP Member Slaps) ಮಾಡಿದ ಘಟನೆ ತುಮಕೂರಿನಲ್ಲಿ (Tumkur) ನಡೆದಿದೆ. ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣರ ಅವರ ಮುಂದೆಯೇ ಬಿಜೆಪಿ ಪಕ್ಷದೊಳಗೆ ಕಿತ್ತಾಟ ನಡೆದಿದ್ದು, ಮಾಜಿ ಸಚಿವ ಸೊಗಡು ಶಿವಣ್ಣರನ್ನು ತಳ್ಳಿದ್ದಕ್ಕೆ ಗಲಾಟೆ ಆರಂಭವಾಗಿದೆ. ನಂತರ ಮಾತಿಗೆ ಮಾತು ಬೆಳೆದು ಸೊಗಡು ಶಿವಣ್ಣ, …

Read More »

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೋತ್ಸವಕ್ಕೆ ಚಾಲನೆ.

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೋತ್ಸವಕ್ಕೆ ಚಾಲನೆ. ಶಾಸಕರಾದ ಅಭಯ್ ಪಾಟೀಲ್,ಆಸೀಪ್‌ಸೇಠ್ ರಿಂದ ಚಾಲನೆ. ಗಣೇಶ ಮೂರ್ತಿಗಳಿಗೆ ಪೂಜೆ ಸಲ್ಲಿಸುವುದರ ಮೂಲಕ ಚಾಲನೆ. ಬೆಳಗಾವಿಯ ಹುತಾತ್ಮಚೌಕನಲ್ಲಿ ಪೂಜೆ ಸಲ್ಲಿಸಿದ ಗಣ್ಯರು. ಶಾಸಕರಿಗೆ ಡಿಸಿ ಮೊಹ್ಮದ್ ರೋಷನ್ ಜಿಪಂ ಸಿಇಒ ರಾಹುಲ್ ಶಿಂಧೆ,ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸಾಥ್. ಕಳೆದ ವರ್ಷ ನಿರಂತರ 34 ಗಂಟೆಗಳ ಕಾಲ ನಡೆದಿದ್ದ ವಿಸರ್ಜನ ಮಹೋತ್ಸವ. ಈ ಬಾರಿಯೂ ಹಲವು ಆತಂಕಗಳ ನಡುವೆ ವಿಸರ್ಜನ ಮಹೋತ್ಸವಕ್ಕೆ ಚಾಲನೆ. …

Read More »