ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಹಾಗೂ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ …
Read More »H1N1 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಇಲಾಖೆ ಹೈ ಅಲರ್ಟ್, ಆಸ್ಪತ್ರೆಗಳು ಸಂಪೂರ್ಣ ಸನ್ನದ್ಧ
ಬೆಂಗಳೂರು: ರಾಜ್ಯದಲ್ಲಿ H1N1 (ಹಂದಿ ಜ್ವರ) ಸೋಂಕು ದಿನೇ ದಿನೇ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಈ ವರ್ಷದ ಕೇವಲ 8 ತಿಂಗಳಲ್ಲಿ ರಾಜ್ಯಾದ್ಯಂತ ಬರೋಬ್ಬರಿ 4,212 ಪ್ರಕರಣಗಳು ವರದಿಯಾಗಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಆರೋಗ್ಯ ಸಚಿವ ಯುಟಿ ಖಾದರ್ ಅಧ್ಯಕ್ಷತೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ …
Read More »SIR ಮೊದಲ ಮತದಾರರ ಕರಡು ಪಟ್ಟಿ ರಿಲೀಸ್; 1,07,96,339 ಮತದಾರರ ಹೆಸರು ಡಿಲೀಟ್
ಬೆಂಗಳೂರು: ಕರ್ನಾಟಕದಲ್ಲಿ ನಡೆಸಿದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದಾರೆ. 1,07,96,339 ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಎಸ್‌ಐಆರ್‌ಗೆ 15,17,042 ಮಂದಿ ಗೈರಾಗಿದ್ದಾರೆ. 65,45,679 ಮತದಾರರು ಶಾಶ್ವತವಾಗಿ ಶಿಫ್ಟ್ ಆಗಿದ್ದಾರೆ. 16,39,864 ಮಂದಿ ಮೃತಪಟ್ಟಿದ್ದಾರೆ. 7,09,870 ಮಂದಿ ಒಂದಕ್ಕಿಂತ ಹೆಚ್ಚು ಮತದಾನ ಮಾಡಿದವರಾಗಿದ್ದಾರೆ. …
Read More »ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ
ನವದೆಹಲಿ: ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಆಘಾತ ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ವರೆಗೆ 9,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ. ಇಂದು ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ತಮಿಳುನಾಡಿಗೆ ಮತ್ತೆ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಲಾಗಿದೆ. 12 ಸಾವಿರ ಬದಲಿಗೆ ಈಗ 9 ಸಾವಿರ ಕ್ಯೂಸೆಕ್ ನೀರು ಬಿಡಲು ತಿಳಿಸಲಾಗಿದೆ. ಮೊದಲ ಬಾರಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶಿಸಲಾಗಿತ್ತು. ಎರಡನೇ ಬಾರಿಗೆ 12 ಸಾವಿರ, ಈಗ …
Read More »ಸಮುದ್ರಕ್ಕೆ ಉರುಳಿದ ಕಾರು – ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿ ಸಾವು
ವಾಷಿಂಗ್ಟನ್: ಅಮೆರಿಕದಲ್ಲಿ ಸಾಂತಾ ಕ್ರೂಜ್‌ನ ಸ್ಟೀಮರ್ ಲೇನ್ ಬಳಿ ಕಾರು ಸಾಗರಕ್ಕೆ ಉರುಳಿ ಭಾರತೀಯ ಮೂಲದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಲಿ ರೆನೀ ಸಿಂಗ್ (19) ಮೃತ ಯುವತಿ. ಈಕೆ ಸಾಂತಾ ಕ್ರೂಜ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಮನೋವಿಜ್ಞಾನ ವಿಭಾಗದಲ್ಲಿ ಪದವಿ ಪಡೆದಿದ್ದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ತುರ್ತು ರಕ್ಷಣಾ ತಂಡವು ಸಿಂಗ್ ಅವರ ಕಾರು ಕರಾವಳಿಯಲ್ಲಿ ಮುಳುಗಿ ಹೋಗಿರುವುದನ್ನು ಪತ್ತೆ ಮಾಡಿತ್ತು. ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪಾರಾಗಿದ್ದಾನೆ …
Read More »ಬಿಜೆಪಿಗೆ ಸತ್ಯಶೋಧನಾ ಸಮಿತಿ ವರದಿ ಸಲ್ಲಿಕೆ; ಕೆಲವು ಮಹತ್ವದ ದಾಖಲೆ ಕೊಡ್ತೇವೆಂದ ಸಮಿತಿ ಸದಸ್ಯ ವೆಂಕಟೇಶ್
ಚಾಮರಾಜನಗರ: ಕಾವೇರಿ ವನ್ಯಧಾಮದ ಮರಿಮಂಗಲ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡೇಟು ಪ್ರಕರಣದಲ್ಲಿ ಮೂವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾ ಓಬಿಸಿ ಘಟಕದ ಜಿಲ್ಲಾಧ್ಯಕ್ಷ ವೆಂಕಟೇಶ್ ಅವರು ಮಹತ್ವದ ದಾಖಲೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಹನೂರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ತಂಡದಿಂದ ಮಾಹಿತಿ ಸಂಗ್ರಹಿಸಿದ ವೇಳೆ ಹಲವು ಮಹತ್ವದ ಅಂಶಗಳು ಹಾಗೂ ಸೂಕ್ಷ್ಮ …
Read More »ಮಂತ್ರಾಲಯದಲ್ಲಿ ಆ.27ರಿಂದ ರಾಯರ 355ನೇ ಆರಾಧನಾ ಮಹೋತ್ಸವ
ರಾಯಚೂರು: ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ 7 ದಿನಕಾಲ ಗುರು ರಾಯರ 355ನೇ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ ಅಂತ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ. ಮಂತ್ರಾಲಯದಲ್ಲಿ ಮಾತನಾಡಿದ ಸುಬುಧೇಂದ್ರ ತೀರ್ಥ ಸ್ವಾಮಿಗಳು ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿವೆ ಎಂದರು. ಆಗಸ್ಟ್ 29, 30, 31ರಂದು ಪರಿಮಳ ತೀರ್ಥ ಪುಷ್ಕರಣಿಯಲ್ಲಿ ಮೂರು ದಿನ ರಾತ್ರಿ ವೇಳೆ ತೆಪ್ಪೋತ್ಸವ ನಡೆಯಲಿದೆ. ಆಗಸ್ಟ್ 29ರಂದು ರಾಯರ …
Read More »ಐಫೋನ್ EMI ವಿಚಾರಕ್ಕೆ ಕುಟುಂಬ ದುರಂತ ಅಂತ್ಯ?: ಮೃತ ಮಹಿಳೆಯ ಸಹೋದರಿ ಹೇಳಿದ್ದೇನು?
ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಐಫೋನ್ ಇಎಂಐ ವಿಚಾರವಾಗಿ ಜಗಳವಾಗಿ ಒಂದೇ ಕುಟುಂಬದ ಮೂವರು ದುರಂತ ಅಂತ್ಯ ಕಂಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, ಈ ವಿಚಾರದ ಬಗ್ಗೆ ಕುಟುಂಬಸ್ಥರೊಬ್ಬರು ಇದೀಗ ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಗಸ್ಟ್ 21ರಂದು ಈ ಘಟನೆ ನಡೆದಿತ್ತು. 19 ವರ್ಷದ ಕುನಾಲ್ ತಾನು ಖರೀದಿಸಿದ್ದ ಐಫೋನ್‌ನ ಇಎಂಐ ಪಾವತಿಸಲು ಸಾಧ್ಯವಾಗದೆ, ಮನೆಯವರ ಬಳಿ ಹಣದ ಸಹಾಯ …
Read More »ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗವಕಾಶ; 20 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ ಇಲ್ಲಿದೆ. ಖಾಲಿ ಇರುವ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ನ್ಯಾಯಾಂಗ ಕ್ಷೇತ್ರದಲ್ಲಿ ಸರ್ಕಾರಿ ನೌಕರಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹುದ್ದೆಯ ವಿವರಗಳು ಮತ್ತು ಶೈಕ್ಷಣಿಕ ಅರ್ಹತೆ: ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 20 ದ್ವಿತೀಯ ದರ್ಜೆ …
Read More »ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ
ಬಾಗಲಕೋಟೆ: ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು. ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 …
Read More »
Laxmi News 24×7