Breaking News

DK ಶಿವಕುಮಾರ್ ರನ್ನು `CM’ ಮಾಡಿ ತೋರಿಸುತ್ತೇವೆ : ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿಕೆ!

ಗದಗ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಮಹತ್ವದ ಹೇಳಿಕೆ ನೀಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಡಸಿದ್ದೇಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ. ಮುಕ್ತಿಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ಇದೇ ಜಾಗಕ್ಕೆ ಕರೆತಂದು ಪೂಜೆ …

Read More »

ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಆಸ್ತಿ ನೋಂದಣಿ ಮಸೂದೆ’ಗೆ ರಾಷ್ಟ್ರಪತಿ ಅಂಕಿತ!

ಬೆಂಗಳೂರು: ಉಪ-ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಆಸ್ತಿ ನೋಂದಣಿ ಮಾಡಬಹುದು.   ಆಸ್ತಿ ನೋಂದಣಿ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು. ಅದನ್ನು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು. ಸ್ಪಷ್ಟನೆ ದೊರೆತ …

Read More »

ಕಿಚ್ಚನಿಗೆ ಮಾತೃ ವಿಯೋಗ

ಬೆಂಗಳೂರು: ನಟ, ನಿರೂಪಕ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಅವರು ಅಸುನೀಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ (ಅ.20) ನಿಧನರಾಗಿದ್ದಾರೆ. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ …

Read More »

ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

ವಿಜಯಪುರ: ವಿಚಿತ್ರವಾದ ಆಕಳು ಕರುವೊಂದು ಜನಿಸಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ನಡೆದಿದೆ. ಈ ಕರುವಿಗೆ ಒಂದು ಮುಖ, ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳು ಇವೆ. ರೈತ ಮಹಿಳೆ ಸಾವಿತ್ರಿ ನಾಗೂರಿ ಎಂಬುವರ ತೋಟದ ಮನೆಯಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡಿದೆ. ಈ ಕರುವಿಗೆ ಎರಡು, ನಾಲಿಗೆ, ಮೂರು ಕಣ್ಣು ಇರುವುದನ್ನು ಕಂಡು ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ಆಶ್ಚರ್ಯವಾಗಿದೆ. ಇದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಹ …

Read More »

ಕೋಟೆಮಲ್ಲೂರಿನಿಂದ ಕೋಣನತಲೆವರೆಗಿನ ರಸ್ತೆ ಸರಿಪಡಿಸಲು ಮನವಿ

ಹೊನ್ನಾಳಿ: ತಾಲ್ಲೂಕಿನ ಕೋಟೆಮಲ್ಲೂರು ಗ್ರಾಮದಿಂದ ಹೊನ್ನೂರು ವಡ್ಡರಹಟ್ಟಿ, ಚಿಕ್ಕಗೋಣಿಗೆರೆ, ಹಿರೇಗೋಣಿಗೆರೆ, ಹರಗನಹಳ್ಳಿ ಹಾಗೂ ಕೋಣನತಲೆ ಗ್ರಾಮದವರೆಗಿನ 9 ಕಿ.ಮೀ ಉದ್ದದ ರಸ್ತೆ ಹಾಳಾಗಿದ್ದು, ಕೂಡಲೇ ದುರಸ್ತಿಪಡಿಸಬೇಕು ಎಂದು ಈ ಭಾಗದ ಗ್ರಾಮಸ್ಥರು ದೂರಿದ್ದಾರೆ. ‘ಕೋಟೆಮಲ್ಲೂರು ದಾಟಿದ ನಂತರ ರಸ್ತೆಯಲ್ಲಿ ವಾಹನಗಳನ್ನು ಚಲಾಯಿಸುವುದು ಕಷ್ಟವಾಗುತ್ತಿದೆ’ ಎಂದು ಬೇಲಿಮಲ್ಲೂರು ಗ್ರಾಮದ ಉಮೇಶ್, ಹಿರೇಗೋಣಿಗೆರೆ ಜಿ.ಎಚ್. ವೀರೇಶ್ ದೂರಿದ್ದಾರೆ. ‘ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಸ್ತೆಯಲ್ಲಿ ಗುಂಡಿ ಬಿದ್ದು ನೀರು ಸಂಗ್ರಹವಾಗಿದ್ದು, ಕೆಲವರು ಬೈಕ್‌ಗಳಿಂದ ಇಳಿದು …

Read More »

ದಾವಣಗೆರೆ: ವಾಲ್ಮೀಕಿ ಜಯಂತಿಗೆ ಬೈಕ್‌ ರ‍್ಯಾಲಿ

ದಾವಣಗೆರೆ: ಜಿಲ್ಲಾ ವಾಲ್ಮೀಕಿ ಯುವಕರ ಸಂಘವು ವಾಲ್ಮೀಕಿ ಜಯಂತಿಯ ಮುನ್ನಾ ದಿನವಾದ ಬುಧವಾರ ನಗರದಲ್ಲಿ ಬೈಕ್‌ ರ‍್ಯಾಲಿ ನಡೆಸಿತು. ಪ್ರಮುಖ ರಸ್ತೆಯಲ್ಲಿ ಸಂಚರಿಸಿ ವಾಲ್ಮೀಕಿ ಸಂದೇಶ ರವಾನಿಸುವ ಪ್ರಯತ್ನ ಮಾಡಿತು. ಸೋನೆ ಮಳೆಯ ನಡುವೆಯೂ ಹೊಂಡದ ವೃತ್ತದಲ್ಲಿ ಜಮಾಯಿಸಿದ ಯುವಕರು ತಲೆಗೆ ಪೇಟ ಧರಿಸಿ, ಬಾವುಟ ಹಿಡಿದ್ದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು ವೀರ ಮದಕರಿ ನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ …

Read More »

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳಿಗಿಲ್ಲ ಉದ್ಘಾಟನೆ ‘ಭಾಗ್ಯ’

ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕೂಡಿಬಂದಿಲ್ಲ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಅಂದಾಜು ₹ 35 ಕೋಟಿ ವೆಚ್ಚದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿ 2021ರಲ್ಲಿ ಆರಂಭವಾಗಿತ್ತು. ಕಾಮಗಾರಿ ಪೂರ್ಣಗೊಂಡು ಆರು ತಿಂಗಳು ಕಳೆದಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ …

Read More »

ವೈಭವಯುತ ‘ಕಿತ್ತೂರು ಉತ್ಸವ’ಕ್ಕೆ ಭರದ ಸಿದ್ಧತೆ: ಶಾಸಕ ಬಾಬಾಸಾಹೇಬ ಪಾಟೀಲ

ಬೆಳಗಾವಿ: ‘ಚನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ‘ದ್ವಿಶತಮಾನೋತ್ಸವದ ಕಾರಣಕ್ಕಾಗಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಅನುದಾನ ಘೋಷಿಸಿದೆ. ಒಂದೆರಡು ದಿನಗಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ’ ಎಂದು ಅವರು ನಗರದಲ್ಲಿ ಶನಿವಾರ …

Read More »

ಮಹಾ’ ಸೀಟು ಹಂಚಿಕೆ ಬಗ್ಗೆ ಸಿಎಂ ಶಿಂಧೆ ಮಹತ್ವದ ಮಾಹಿತಿ

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಉಭಯ ಪಕ್ಷಗಳ ತಯಾರಿ ಗರಿಗೆದರಿದೆ. ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರು ನಿನ್ನೆ ದೆಹಲಿಗೆ ತೆರಳಿ ಸೀಟು ಹಂಚಿಕೆ ಸಂಬಂಧ ಬಿಜೆಪಿ ಜೊತೆಗೆ ಮಹತ್ವದ ಚರ್ಚೆ ನಡೆಸಿ ಬಂದಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದ ಜನತೆಗೆ ಒಳ್ಳೆಯ ಸುದ್ದಿಯನ್ನೇ ಕೊಡುತ್ತೇವೆ ಎಂದು ಸುಳಿವು ನೀಡಿದ್ದಾರೆ.   ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಿದೆವು. ನಮ್ಮ ಮಹಾಯುತಿಯ …

Read More »

ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು. ಮುಳುಗಿದ ಬ್ಯಾರೇಜ್

ಮುಧೋಳ: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್‌ ಜಲಾಶಯದಿಂದ ಹೆಚ್ಚಿನ‌ ಪ್ರಮಾಣ ನೀರು ಘಟಪ್ರಭಾ ನದಿಗೆ ಹರಿದುಬರುತ್ತಿರುವ ಕಾರಣ ತಾಲೂಕಿನ ಬ್ರಿಡ್ಜ್ ಕಂ ಬ್ಯಾರೇಜ್ ಗಳು‌ ಮುಳುಗಿ ಜನಸಂಚಾರ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿವೆ. ಮಿರ್ಜಿ-ಮಹಾಲಿಂಗಪುರ ಸಂಪರ್ಕ ರಸ್ತೆಯಲ್ಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ‌ ನೀರು ಹರಿಯುತ್ತಿದ್ದು ಸದ್ಯ ವಾಹನ ಸಂಚಾರಕ್ಕೆ ಅಡಚಣೆಯಾಗಿಲ್ಲ. ಪರಿಸ್ಥಿತಿ ಇದೇರೀತಿ ಮುಂದುವರಿದರೆ ಸಂಜೆ ಅಥವಾ ನಾಳೆ ವೇಳೆಗೆ ಸಂಚಾರ ಸ್ಥಗಿತಗೊಳ್ಳುವ ಭೀತಿ‌ ಎದುರಾಗಿದೆ. ಜೀರಗಾಳ ಸಮೀಪದ ಬ್ರಿಡ್ಜ …

Read More »