Breaking News

15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಸುಮಾರು 15 ವರ್ಷಗಳ ಬಳಿಕ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಯನ್ನು ಯಶಸ್ವಿಯಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಜಾತ್ರಾ ಕಮೀಟಿಯ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಪ್ರಮುಖ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಮಾರಿಹಾಳ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆಯು ಹಲವು ವರ್ಷಗಳ …

Read More »

ಮೃತ ವ್ಯಕ್ತಿಯ ನಕಲಿ ಸಹಿ ಬಳಸಿ ಆಸ್ತಿ ಮಾರಾಟ: 67 ವರ್ಷದ ಆರೋಪಿ ಬಂಧನ

 ಬೆಳಗಾವಿ: ಮಾಲೀಕರ ಮರಣದ ನಂತರವೂ ಅವರೇ ಮಾಲೀಕರಾಗಿದ್ದಾರೆಂದು ಬಿಂಬಿಸಿ, ಮೃತ ವ್ಯಕ್ತಿಯ ನಕಲಿ ಸಹಿ ಬಳಸಿ ಆಸ್ತಿಯನ್ನು ಮಾರಾಟ ಮಾಡಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆ ಪೊಲೀಸರು 67 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ.ಕುರುಬರ ಗಲ್ಲಿ, ಹೊನ್ನಿಹಾಳ ನಿವಾಸಿ ಬಸಯ್ಯಾ ಬಾಳಯ್ಯ ಪೂಜೇರಿ ಅವರು 25 ಆಗಸ್ಟ್ 2025ರಂದು ಮಾರ್ಕೆಟ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಖ್ಯೆ …

Read More »

CEIR ಪೋರ್ಟಲ್ ಬಳಸಿ 123 ಕಳುವಾದ ಮೊಬೈಲ್ ಪತ್ತೆ

ಬೆಳಗಾವಿ ನಗರ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಸಾರ್ವಜನಿಕರು ತಮ್ಮ ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡಿರುವ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹಲವು ದೂರುಗಳನ್ನು ದಾಖಲಿಸಿದ್ದರು. ಈ ದೂರುಗಳ ಆಧಾರದ ಮೇಲೆ ಪೊಲೀಸರು ಸೆಂಟ್ರಲ್ ಎಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್  ಪೋರ್ಟಲ್ ಬಳಸಿ ಕಾರ್ಯಾಚರಣೆ ನಡೆಸಿದರು.2026ರ ಜನವರಿ 1ರಿಂದ ಆಗಸ್ಟ್ 22ರವರೆಗೆ CEIR ಪೋರ್ಟಲ್ ಮೂಲಕ ವಿವಿಧ ಕಂಪನಿಗಳ ಒಟ್ಟು 123 ಮೊಬೈಲ್ ಫೋನ್‌ಗಳನ್ನು …

Read More »

ಡಿ.ವೈ. ಪಾಟೀಲ ಮನೆಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಕೊಲ್ಹಾಪುರ: ಮಹಾರಾಷ್ಟ್ರದ ಹಿರಿಯ ನಾಯಕರು, ಮಾಜಿ ರಾಜ್ಯಪಾಲರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ. ಡಿ.ವೈ. ಪಾಟೀಲ ಅವರ ನಿಧನದ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಕೊಲ್ಹಾಪುರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು. ನಂತರ ಡಾ. ಡಿ.ವೈ. ಪಾಟೀಲ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸತೇಜ್ (ಬಂಟಿ) ಪಾಟೀಲ ಮತ್ತು ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. …

Read More »

ಅಪಘಾತದಲ್ಲಿ ಗಾಯಗೊಂಡ ಯುವಕನ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್ ನೆರವು

ಬೆಳಗಾವಿ: ಕಂಗ್ರಾಳಿ ಕೆ.ಎಚ್. ಗ್ರಾಮದ ಯುವಕ ಬಸವಂತ ಅಶೋಕ ಚೌಗುಲೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತುರ್ತು ಆರ್ಥಿಕ ನೆರವು ನೀಡಿದರು. ಬಸವಂತ ಅವರ ತಾಯಿ ಕಮಲ್ ಅಶೋಕ್ ಚೌಗುಲೆ ಅವರು ಇಂದು ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾಗಿ, ತಮ್ಮ ಕುಟುಂಬದ ದುಸ್ಥಿತಿ ಹಾಗೂ ಮಗನ ಚಿಕಿತ್ಸೆಗೆ ಎದುರಾಗಿರುವ ಆರ್ಥಿಕ ಸಮಸ್ಯೆಗಳನ್ನು ವಿವರಿಸಿದರು. ಬಡ ಕುಟುಂಬಕ್ಕೆ …

Read More »

ಮಂಡ್ಯದಲ್ಲಿ ಭಿಕ್ಷುಕಿ ನಿಧನ – ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ

ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು  ಮೃತಪಟ್ಟಿದ್ದು, ಅವರ ಮನೆಯಲ್ಲಿ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾಗಿರುವ ಘಟನೆ ಮಂಡ್ಯ ನಗರದ  ಗುತ್ತಲು ಬಡಾವಣೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಆಸರೆ ಇಲ್ಲದೇ ಹಲವು ವರ್ಷಗಳಿಂದ ನಗರದ ವಿವಿಧೆಡೆ ಭಿಕ್ಷಾಟನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇವರು, ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾಗಿದ್ದಾರೆ. ವೃದ್ಧೆಯ ನಿಧನದ ಬಳಿಕ ಸಂಬಂಧಿಕರು ಹಾಗೂ ಸ್ಥಳೀಯರು …

Read More »

ಎಸ್‌ಐಆರ್‌ನಲ್ಲಿ ಮ್ಯಾಪಿಂಗ್ ಆಗದೇ ಇರುವವರಿಗೆ ಜಾರಿಯಾಗಲಿದೆ ನೋಟಿಸ್

ಬೆಂಗಳೂರು: ಕರ್ನಾಟಕದಲ್ಲಿ ಎಸ್‌ಐಆರ್  ಮೊದಲ ಹಂತ ಮುಕ್ತಾಯ ಆಗಿದ್ದು ಈಗ ಮತ್ತೊಂದು ಹಂತದ ಪ್ರಕ್ರಿಯೆಗೆ ಮುಂದಾಗಿದೆ. ಮ್ಯಾಪಿಂಗ್  ಆಗದೆ ಗೊಂದಲಮಯವಾಗಿರುವ ಮತದಾರರಿಗೆ ನೋಟಿಸ್ ನೀಡಲಿದ್ದಾರೆ. 43.84 ಲಕ್ಷ ಮತದಾರರಿಗೆ ನೋಟಿಸ್ ಬರಲಿದೆ. ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ 23 ಲಕ್ಷ ಮತದಾರರಿಗೆ ನೋಟಿಸ್ ಬರಲಿದೆ. ನೋಟಿಸ್ ಪಡೆದ ಮತದಾರರು ನೋಟಿಸ್‌ಗೆ ಪ್ರತಿಕ್ರಿಯೆ ನೀಡಿ ಸೂಕ್ತ ದಾಖಲೆಗಳನ್ನು ಸಲ್ಲಿಕೆ ಮಾಡಬೇಕಾಗಿದೆ. ನೋಟಿಸ್ ಪಡೆದು ಪ್ರತಿಕ್ರಿಯೆ ನೀಡುವಾಗ ನಾವು ಮತದಾರರು ಅಂತಾ ಪ್ರೂವ್ ಮಾಡಬೇಕಿದೆ. …

Read More »

ಹಳೆಯಂಗಡಿಯಲ್ಲಿ ಪಾಳುಬಿದ್ದ ಬಸ್ ತಂಗುದಾಣಕ್ಕೆ ‘ಮೀಡಿಯಾ ಮನಸುಗಳು’ ತಂಡದಿಂದ ಕಾಯಕಲ್ಪ

ಮಂಗಳೂರು: ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಾಳುಬಿದ್ದಿದ್ದ ಪ್ರಮುಖ ಬಸ್ ತಂಗುದಾಣಕ್ಕೆ ‘ಮೀಡಿಯಾ ಮನಸುಗಳು’ ಸಂಘಟನೆಯ ಸದಸ್ಯರು ಸ್ವಚ್ಛತಾ ಕಾರ್ಯ ನಡೆಸಿ ಹೊಸ ಕಳೆ ತಂದಿದ್ದಾರೆ. ಶ್ರಮದಾನದ ಮೂಲಕ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿ, ಪ್ರಯಾಣಿಕರ ಬಳಕೆಗೆ ಮತ್ತೆ ಯೋಗ್ಯವಾಗಿಸಿದ್ದಾರೆ. ಹಳೆಯಂಗಡಿಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿರುವ ಈ ಬಸ್ ತಂಗುದಾಣ ಕಳೆದ ಒಂದು ವರ್ಷದಿಂದ ಅವ್ಯವಸ್ಥೆಯಿಂದ ಕೂಡಿತ್ತು. ಕಟೀಲು ದೇಗುಲ ಹಾಗೂ ಕಿನ್ನಿಗೋಳಿ ಕಡೆಗೆ ನಿತ್ಯ ಸಂಚರಿಸುವ ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ …

Read More »

ಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವು

ಹಾಸನ: ರೈಲು ಹತ್ತುವಾಗ ಕಾಲು ಜಾರಿ ವ್ಯಕ್ತಿಯೊಬ್ಬರು ಹಳಿ ಮೇಲೆ ಬಿದ್ದಿದ್ದು, ಆತನ ಮೇಲೆಯೇ ರೈಲು ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ  ಹೊಳೆನರಸೀಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ ಕೆ.ಮುದ್ದನಹಳ್ಳಿ ಗ್ರಾಮದ ನಾಗರಾಜು (48) ಮೃತ ವ್ಯಕ್ತಿ. ಬೆಂಗಳೂರಿಗೆ ತೆರಳಲು ನಾಗರಾಜು ಹೊಳೆನರಸೀಪುರ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ. ಈ ವೇಳೆ ರೈಲು ಹೊರಡಲು ಆರಂಭಿಸಿದ್ದು, ನಿಧಾನವಾಗಿ ಚಲಿಸುತ್ತಿದ್ದ ರೈಲನ್ನು ಹತ್ತಲು ನಾಗರಾಜು ಪ್ರಯತ್ನಿಸಿದ್ದಾನೆ. ಆದರೆ, …

Read More »

ಪಾಗಲ್‌ ಪ್ರೇಮಿಯಿಂದ ಟಾರ್ಚರ್‌ – ಕೆರೆಗೆ ಹಾರಿ ಸಾಗರದ ಯುವತಿ ಆತ್ಮಹತ್ಯೆ

 ಶಿವಮೊಗ್ಗ: ಪಾಗಲ್‌ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಸಾಗರ  ತಾಲೂಕಿನ ಬೆಳಮಕ್ಕಿ ಗ್ರಾಮದ ಯುವತಿಯೊಬ್ಬಳು ಬೆಂಗಳೂರಲ್ಲಿ  ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಾಣಿ (22 )ಆತ್ಮಹತ್ಯೆಗೆ ಶರಣಾದ ಯುವತಿ. ಹೆಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಅಗರ ಕೆರೆಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾಳೆ. ಅದರಲ್ಲಿ ಕ್ಲಾಸ್‌ಮೇಟ್‌ ಅಭಿಷೇಕ್ ಎಂಬಾತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ತಿಳಿಸಿದ್ದಾಳೆ. ಅಭಿಷೇಕ್‌, ಯುವತಿಗೆ ವಾಟ್ಸಪ್‌ನಲ್ಲಿ ವಿಡಿಯೋ, ಫೋಟೋಸ್ ಕಳುಹಿಸಿ ಬ್ಲಾಕ್‌ಮೇಲ್‌ ಮಾಡುತಿದ್ದ. ಕರೆದಾಗಲೆಲ್ಲ …

Read More »